NLP_Assignment_1 / zeenewskannada /data1_url7_1_to_200_102.txt
CoolCoder44's picture
Upload folder using huggingface_hub
3138743 verified
2024: ಪದವಿ ಪಾಸಾದವರಿಗೆ SBIನಲ್ಲಿ 1,040 ಹುದ್ದೆಗಳಿಗೆ ಅರ್ಜಿ ಆಹ್ವಾನ 2024: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ()ದಲ್ಲಿ ಖಾಲಿ ಇರುವ 1,040 ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 2024:ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 1,040 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪದವತಿ ಪಾಸಾದ ಅಭ್ಯರ್ಥಿಳು ಈ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 2024ರ ಅಧಿಕೃತ ಅಧಿಸೂಚನೆಯ ಮೂಲಕ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಆಗಸ್ಟ್ 8ರೊಳಗೆ ಅರ್ಜಿ ಸಲ್ಲಿಸಬಹುದು. ಈ ಹುದ್ದೆಯ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ... ಹುದ್ದೆಯ ವಿವರ:ದಲ್ಲಿ ಖಾಲಿ ಇರುವ 1,040 ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಹತೆ:ಸೆಂಟ್ರಲ್ ರಿಸರ್ಚ್ ಟೀಮ್(ಪ್ರಾಡಕ್ಟ್ ಲೀಡ್)ಗೆ ಎಂಬಿಎ, ಪಿಜಿಡಿಎಂ, ಪಿಜಿಡಿಬಿಎಂ, ಸೆಂಟ್ರಲ್ ರಿಸರ್ಚ್ ಟೀಮ್(ಬೆಂಬಲ)ಗೆ ಪದವಿ, ಸ್ನಾತಕೋತ್ತರ ಪದವಿ, ಪ್ರಾಜೆಕ್ಟ್ ಡೆವಲಪ್ಮೆಂಟ್ ಮ್ಯಾನೇಜರ್(ಟೆಕ್ನಾಲಜಿ)ಗೆ ಎಂಬಿಎ, ಎಂಎಂಎಸ್, ಎಂಇ ಅಥವಾ ., ಬಿಇ ಅಥವಾ ., ಪ್ರಾಜೆಕ್ಟ್ ಡೆವಲಪ್ಮೆಂಟ್ ಮ್ಯಾನೇಜರ್(ವ್ಯವಹಾರ)ಗೆ ಎಂಬಿಎ, ಪಿಜಿಡಿಎಂ, ಪಿಜಿಡಿಬಿಎಂ, ರಿಲೇಶನ್ಶಿಪ್ ಮ್ಯಾನೇಜರ್‌ಗೆ ಪದವಿ & ಇನ್ವೆಸ್ಟ್ಮೆಂಟ್ ಸ್ಪೆಷಲಿಸ್ಟ್‌ಗೆ ಎಂಬಿಎ, ಪಿಜಿಡಿಎಂ, ಪಿಜಿಡಿಬಿಎಂ ಪದವಿ ಪೂರ್ಣಗೊಳಿಸಿರಬೇಕು. ಇದನ್ನೂ ಓದಿ: ಉದ್ಯೋಗ ಸ್ಥಳ:ಆಯ್ಕೆಯಾದ ಅಭ್ಯರ್ಥಿಗಳು ವಾಣಿಜ್ಯ ನಗರಿ ಮುಂಬೈನಲ್ಲಿ ಕಾರ್ಯನಿರ್ವಹಿಸಬೇಕು. ವೇತನ:ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 2,50,000 ರಿಂದ 5,08,333 ರೂ. ವೇತನ ನೀಡಲಾಗುತ್ತದೆ. ಅರ್ಜಿ ಶುಲ್ಕ:/// ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಸಾಮಾನ್ಯ/ಇಡಬ್ಲ್ಯೂಎಸ್ ಅಭ್ಯರ್ಥಿಗಳು 750 ರೂ. ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕು. ಆಯ್ಕೆ ಪ್ರಕ್ರಿಯೆ:ಶಾರ್ಟ್ ಲಿಸ್ಟಿಂಗ್, ಸಂವಾದ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವುದು ಹೇಗೆ?:ಮೊದಲನೆಯದಾಗಿಯ ಅಧಿಸೂಚನೆಯನ್ನು ಪರಿಶೀಲಿಸಿ. ಒಂದು ವೇಳೆ ನೀವು ಅರ್ಹ ಅಭ್ಯರ್ಥಿಯಾಗಿದ್ದಲ್ಲಿ SBIನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್‌ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡಬೇಕು. ಅರ್ಜಿ ಸಲ್ಲಿಸುವ ಮೊದಲು ಸರಿಯಾದ ಇ-ಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ನೀಡಬೇಕು. ಐಡಿ ಪ್ರೂಫ್, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್ ಮುಂತಾದ ದಾಖಲೆಗಳನ್ನು ಅಪ್‌ಲೋಡ್‌ ಮಾಡಬೇಕು. ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...