NLP_Assignment_1 / zeenewskannada /data1_url7_1_to_200_104.txt
CoolCoder44's picture
Upload folder using huggingface_hub
3138743 verified
ಮಳೆ ಅನಾಹುತ ಮತ್ತು‌ ಪ್ರವಾಹದಿಂದ ಆದ ಜೀವಹಾನಿಗೆ ತುರ್ತಾಗಿ ಪರಿಹಾರ ಕೊಡಬೇಕು-ಸಿಎಂ ಸಿದ್ದರಾಮಯ್ಯ ಸೂಚನೆ ಇಲ್ಲಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಪ್ರವಾಹ ಪೀಡಿತ ಪ್ರದೇಶಗಳ ಪರಿಹಾರ ಕಾರ್ಯದ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಕೆಲವು ಪ್ರಮುಖ ಸೂಚನೆಗಳನ್ನು ನೀಡಿದರು. ಕಾರವಾರ:ಇಲ್ಲಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಪ್ರವಾಹ ಪೀಡಿತ ಪ್ರದೇಶಗಳ ಪರಿಹಾರ ಕಾರ್ಯದ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಕೆಲವು ಪ್ರಮುಖ ಸೂಚನೆಗಳನ್ನು ನೀಡಿದರು. ಇದನ್ನೂ ಓದಿ: ಮಳೆಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ನಿಯಮದ ಪ್ರಕಾರ ಪರಿಹಾರ ಒಗದಿಸಲು ತಕ್ಷಣ ಹಾನಿಯ ವರದಿ ಸಲ್ಲಿಸಿ.ಕದ್ರಾ ಅಣೆಕಟ್ಟೆಯಿಂದ ಹೊರಬಿಡುವ ನೀರಿನಿಂದ ತೊಂದರೆಗೊಳಗಾಗುವ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಒದಗಿಸುವ ಬಗ್ಗೆ ಅಂತಿಮ ತೀರ್ಮಾನ ಮಾಡಿ ಎಂದು ಸಲಹೆ ನೀಡಿದರು. ಮಳೆ ಅನಾಹುತ ಮತ್ತು‌ ಪ್ರವಾಹದಿಂದ ಆದ ಜೀವಹಾನಿಗೆ ತುರ್ತಾಗಿ ಪರಿಹಾರ ಕೊಡಬೇಕು. ಕೋಸ್ಟಲ್ ಲೈನ್ ನಲ್ಲಿ ವಿದ್ಯುತ್ ಕಂಬಗಳ ಅಳವಡಿಕೆ, ಅಗತ್ಯ ಇರುವ ಕಡೆ ವೈರ್ ಗಳ ದುರಸ್ತಿ ಮತ್ತು ಬದಲಾವಣೆಗೆ ಮಾಡಬೇಕು ಎಂದು ಸೂಚಿಸಿದರು. ಇದನ್ನೂ ಓದಿ: ಜಿಲ್ಲೆಯಲ್ಲಿ ರಾಷ್ಟ್ರಿಯ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸದೆ ಐ.ಆರ್.ಬಿ ಕಂಪನಿಯವರು ಟೋಲ್ ಏಕೆ ಸಂಗ್ರಹಿಸುತ್ತಿದ್ದೀರಿ? ಇದು ಸರಿಯಿಲ್ಲ. 2016ಕ್ಕೆ ಕಾಮಗಾರಿ ಮುಕ್ತಾಯಗೊಳಿಸಬೇಕಿದ್ದರೂ ಸಹ ಇದುವರೆಗೆ ಮುಕ್ತಾಯಗೊಳಿಸದೇ ಈ ಕಾಮಗಾರಿ ಬಗ್ಗೆ ಕೇಂದ್ರ ಸಚಿವರಿಗೂ ದಾರಿತಪ್ಪಿಸುವುದಲ್ಲದೆ ರಾಜ್ಯ ಸರ್ಕಾರಕ್ಕೂ ತಪ್ಪು ಮಾಹಿತಿ ನೀಡುತ್ತಿದ್ದೀರಿ. ಈ ಬಗ್ಗೆ ಕೇಂದ್ರ ಹೆದ್ದಾರಿ ಸಚಿವರಿಗೆ ತೀಕ್ಷ್ಣವಾಗಿ ಪತ್ರ ಬರೆಯುತ್ತೇನೆ ಎಂದು ಹೇಳಿದರು. ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಕೂಡ ಮಳೆಯಾಗುವ ಸಾಧ್ಯತೆಗಳಿದ್ದು ಈ ರೀತಿಯಾಗಿ ಗುಡ್ಡ ಕುಸಿತ ಸೇರಿದಂತೆ ಯಾವುದೇ ರೀತಿಯ ಅಪಾಯವಾಗದಂತೆ ಜಿಲ್ಲಾಡಳಿತದಿಂದ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲೆಯಲ್ಲಿರುವ ಅಪಾಯಕಾರಿ ಪ್ರದೇಶಗಳಲ್ಲಿನ ಗ್ರಾಮಗಳಲ್ಲಿ ಗ್ರಾಮಮಟ್ಟದ ಟಾಸ್ಕ್ ಫೋರ್ಸ್ ಸಮಿತಿಗಳನ್ನು ರಚಿಸಿಕೊಂಡು ಅಲ್ಲಿನ ಪರಿಸ್ಥಿತಿಯ ಕುರಿತು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು.ಜಿಲ್ಲೆಯ ಎಲ್ಲಾ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಮೂಲಕ ಜನರಿಗೆ ಅಧಿಕಾರಿಗಳ ಮೇಲೆ ವಿಶ್ವಾಸ ಮೂಡುವಂತೆ ಕೆಲಸ ನಿರ್ವಹಿಸಬೇಕು ಎಂದು ಅವರು ಆಗ್ರಹಿಸಿದರು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...