ತುಳುನಾಡಿಗೆ ಬಂದು ಕೊರಗಜ್ಜ ದೈವದ ಹರಕೆ ತೀರಿಸಿದ ಬಾಲಿವುಡ್ ನಟಿ ಕತ್ರಿನಾ ಕೈಫ್! ಫೋಟೋ ವೈರಲ್ : ಇದೇ ಸಂದರ್ಭದಲ್ಲಿ ಫೋಟೋವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದು, ಮಂಗಳೂರಿನ ಪ್ರಖ್ಯಾತ ಕೊರಗಜ್ಜ ಕಟ್ಟೆಗೆ ಭೇಟಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. : ಬಾಲಿವುಡ್ ನಟಿ ಕತ್ರಿನಾ ಕೈಫ್ ಕಳೆದ ಕೆಲ ಸಮಯದಿಂದ ಪಾಪರಾಜಿಗಳ ಕ್ಯಾಮರಾ ಕಣ್ಣಿನಿಂದ ದೂರ ಉಳಿದಿದ್ದಾರೆ. ಆದರೆ ಇತ್ತೀಚಿಗೆ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆಯಲ್ಲಿ ಕಾಣಿಸಿಕೊಂಡಿದ್ದರು. ಪತಿ ವಿಕ್ಕಿ ಕೌಶಲ್ ಜೊತೆ ಮದುವೆಯಲ್ಲಿ ಭಾಗವಹಿಸಿದ್ದರು. ಆದರೆ ಇದೇ ಸಂದರ್ಭದಲ್ಲಿ ಫೋಟೋವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದು, ಮಂಗಳೂರಿನ ಪ್ರಖ್ಯಾತ ಕೊರಗಜ್ಜ ಕಟ್ಟೆಗೆ ಭೇಟಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಜುಲೈ 16 ರಂದು ಕತ್ರಿನಾ ಕೈಫ್ ಹುಟ್ಟುಹಬ್ಬ. ಹೀಗಿರುವಾಗ ಈ ವಿಶೇಷ ದಿನಕ್ಕೂ ಮುನ್ನ ಕೊರಗಜ್ಜ ಸ್ವಾಮಿಯ ಆಶೀರ್ವಾದ ಪಡೆಯಲು ನಟಿ ಬಂದಿದ್ದಾರೆ ಎನ್ನಲಾಗುತ್ತಿದೆ. ಕತ್ರಿನಾ ಫೋಟೋ ವೈರಲ್ ಕತ್ರಿನಾ ಕೈಫ್ ಅವರ ಫೋಟೋವನ್ನು ಶೇರ್ ಮಾಡಿಕೊಂಡಿರುವ ಫ್ಯಾನ್ ಪೇಜ್, ನಟಿ ಇತ್ತೀಚೆಗೆ ತೊಂದರೆಯಲ್ಲಿದ್ದಾರೆ. ಇದೇ ಕಾರಣಕ್ಕೆ ಸ್ವಾಮಿ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿ ಹರಕೆ ತೀರಿಸಿ ಆಶೀರ್ವಾದ ಪಡೆದಿದ್ದಾರೆ ಎಂದು ಹೇಳಿಕೊಂಡಿದೆ. ಇದನ್ನೂ ಓದಿ: ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆಯಲ್ಲಿ ಕತ್ರಿನಾ ಕೈಫ್ ಗಮನ ಸೆಳೆದಿದ್ದರು. ನಟಿಯ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ಅಂಬಾನಿ ಕುಟುಂಬದ ಅದ್ಧೂರಿ ಮದುವೆಗೆ ಕತ್ರಿನಾ ಕೈಫ್ ಸುಂದರವಾದ ಕೆಂಪು ಸೀರೆಯನ್ನು ಧರಿಸಿ ಆಗಮಿಸಿದ್ದರು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... |