NLP_Assignment_1 / zeenewskannada /data1_url7_1_to_200_128.txt
CoolCoder44's picture
Upload folder using huggingface_hub
3138743 verified
ಜಮ್ಮು ಕಾಶ್ಮೀರದಲ್ಲಿ ಬಸ್ ಕಂದಕಕ್ಕೆ ಬಿದ್ದು 2 ಸಾವು, 25 ಜನರಿಗೆ ಗಾಯ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಶನಿವಾರ ಬಸ್ಸೊಂದು ರಸ್ತೆಯಿಂದ ಸ್ಕಿಡ್ ಆಗಿ 200 ಅಡಿ ಆಳದ ಕಮರಿಗೆ ಉರುಳಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು 25 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನವದೆಹಲಿ:ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಶನಿವಾರ ಬಸ್ಸೊಂದು ರಸ್ತೆಯಿಂದ ಸ್ಕಿಡ್ ಆಗಿ 200 ಅಡಿ ಆಳದ ಕಮರಿಗೆ ಉರುಳಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು 25 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಖಾಸಗಿ ಮಿನಿ ಬಸ್ ಭಾಲೆಸ್ಸಾದಿಂದ ಥಾತ್ರಿಗೆ ತೆರಳುತ್ತಿದ್ದಾಗ ಬೆಳಿಗ್ಗೆ 10.25 ರ ಸುಮಾರಿಗೆ ಭತ್ಯಾಸ್ ಬಳಿ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ರಕ್ಷಕರು ಸ್ಥಳದಲ್ಲೇ ಒಬ್ಬ ಮಹಿಳೆ ಮೃತಪಟ್ಟಿದ್ದು, ಮತ್ತೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು.ಗಾಯಗೊಂಡ ಇತರ ಒಂಬತ್ತು ವ್ಯಕ್ತಿಗಳ ಸ್ಥಿತಿ ಗಂಭೀರವಾಗಿದ್ದು, ಅವರನ್ನು ದೋಡಾದ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...