NLP_Assignment_1 / zeenewskannada /data1_url7_1_to_200_139.txt
CoolCoder44's picture
Upload folder using huggingface_hub
3138743 verified
: HIVಗೆ 47 ವಿದ್ಯಾರ್ಥಿಗಳು ಬಲಿ, 828ಕ್ಕೂ ಹೆಚ್ಚು ಮಂದಿಗೆ ಪಾಸಿಟಿವ್‌! ರಾಜ್ಯದಲ್ಲಿ ಇದುವರೆಗೆ ಒಟ್ಟು 828 ವಿದ್ಯಾರ್ಥಿಗಳು ಸೋಂಕಿಗೆ ತುತ್ತಾಗಿದ್ದಾರೆ. ಈ ಪೈಕಿ 572 ವಿದ್ಯಾರ್ಥಿಗಳು ಬದುಕಿದ್ದು, 47 ವಿದ್ಯಾರ್ಥಿಗಳು ಏಡ್ಸ್‌ ವೈರಸ್‌ಗೆ ಸಾವನ್ನಪ್ಪಿದ್ದಾರೆ ಎಂದು ತ್ರಿಪುರಾ ರಾಜ್ಯದ ಏಡ್ಸ್ ನಿಯಂತ್ರಣ ಸೊಸೈಟಿಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 828 :ಇಡೀ ದೇಶವೇ ಬೆಚ್ಚಿ ಬೀಳುವಂತಹ ಆಘಾತಕಾರಿ ಘಟನೆಯೊಂದು ತ್ರಿಪುರಾದಲ್ಲಿ ನಡೆದಿದೆ. ರಾಜ್ಯದ 800ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದ್ದು, ಈ ಪೈಕಿ 47 ವಿದ್ಯಾರ್ಥಿಗಳು ಏಡ್ಸ್ ರೋಗಕ್ಕೆ ತುತ್ತಾಗಿ ಸಾವನ್ನಪ್ಪಿದ್ದಾರೆ. ಹೌದು, ರಾಜ್ಯದಲ್ಲಿ ಇದುವರೆಗೆ ಒಟ್ಟು 828HIV ಸೋಂಕಿಗೆ ತುತ್ತಾಗಿದ್ದಾರೆ. ಈ ಪೈಕಿ 572 ವಿದ್ಯಾರ್ಥಿಗಳು ಬದುಕಿದ್ದು, 47 ವಿದ್ಯಾರ್ಥಿಗಳು ಏಡ್ಸ್‌ ವೈರಸ್‌ಗೆ ಸಾವನ್ನಪ್ಪಿದ್ದಾರೆ ಎಂದು ತ್ರಿಪುರಾ ರಾಜ್ಯದ ಏಡ್ಸ್ ನಿಯಂತ್ರಣ ಸೊಸೈಟಿಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಹುತೇಕ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ದೇಶದ ಹಲವು ಪ್ರಾಂತ್ಯಗಳಲ್ಲಿರುವ ಶಿಕ್ಷಣ ಸಂಸ್ಥೆಗಳಿಗೆ ತೆರಳಿದ್ದರಂತೆ. ಇದನ್ನೂ ಓದಿ: ತ್ರಿಪುರಾ ರಾಜ್ಯದ 220 ಶಾಲೆಗಳು ಮತ್ತು 24 ಕಾಲೇಜು ಮತ್ತು ವಿವಿಗಳಲ್ಲಿ ವಿದ್ಯಾರ್ಥಿಗಳು ಇಂಜೆಕ್ಷನ್ ಮೂಲಕ ಮಾದಕ ವಸ್ತುಗಳನ್ನು ತೆಗೆದುಕೊಳ್ಳುವ ವಿಚಾರ ಬೆಳಕಿದೆ ಬಂದಿದೆ ಎಂದಿರುವ ತ್ರಿಪುರಾದ ಏಡ್ಸ್ ನಿಯಂತ್ರಣ ಸೊಸೈಟಿಯು, ಸೋಂಕು ಹರಡಲು ಇದು ಪ್ರಮುಖ ಕಾರಣವಾಗಿರಬಹುದು ಅಂತಾ ಹೇಳಲಾಗಿದೆ. ಈ ಕುರಿತು ತ್ರಿಪುರಾ ರಾಜ್ಯದಾದ್ಯಂತ ಸುಮಾರು 164 ಆರೋಗ್ಯ ಸಂಸ್ಥೆಗಳಿಂದ ಅಧಿಕಾರಿಗಳು ಮಾಹಿತಿ ಸಂಗ್ರಹಿಸಲಾಗಿದೆ. ಸಮಗ್ರ ತನಿಖೆ ಬಳಿಕ ಹೆಚ್ಚಿನ ಮಾಹಿತಿ ಹೊರ ಬೀಳಲಿದೆ. ಏಡ್ಸ್ ಸೋಂಕಿಗೆ ತುತ್ತಾಗಿರುವ ವಿದ್ಯಾರ್ಥಿಗಳ ಪೈಕಿ ಬಹುತೇಕರು ಶ್ರೀಮಂತ ಮನೆತನದ ಮಕ್ಕಳಾಗಿದ್ದು, ಈ ವಿದ್ಯಾರ್ಥಿಗಳ ಪೋಷಕರು ತುಂಬಾ ಸಿರಿವಂತರಿದ್ದಾರೆಂದು ತಿಳಿದುಬಂದಿದೆ. ಶ್ರೀಮಂತರ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿ ಡ್ರಗ್ಸ್‌ ದಾಸರಾಗಿ ಇಂತಹ ಖಾಯಿಲೆಗಳಿಗೆ ತುತ್ತಾಗಿ ತಮ್ಮ ಜೀವನವನ್ನೇ ಹಾಳುಮಾಡಿಕೊಳ್ಳುತ್ತಿದ್ದಾರೆಂಬತಿಳಿದುಬಂದಿದೆ. ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...