NLP_Assignment_1 / eesanje /url_46_103_12.txt
CoolCoder44's picture
efe37858b586a9a048bc0ecc57a15bf9f7189f016b8fcfa2006a47467850c382
c188c15 verified
raw
history blame
1.65 kB
ಪೆಟೋಲ್‌‍-ಡೀಸೆಲ್‌ ಬೆಲೆ ಏರಿಕೆ ಭಂಡತನದ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು : ಬಿವೈವಿ
ಬೆಂಗಳೂರು,ಜೂ.20-ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿಗಳು ಪೆಟೋಲ್‌‍-ಡೀಸೆಲ್‌ ಬೆಲೆ ಏರಿಕೆಯ ಭಂಡತನದ ನಿರ್ಧಾರವನ್ನು ಕೈಬಿಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಒತ್ತಾಯಿಸಿದರು.
ಜಗನ್ನಾಥ ಭವನದಿಂದ ವಿಧಾನಸೌಧಕ್ಕೆ ತೆರಳುವ ಸೈಕಲ್‌ ಜಾಥಾದ ಆರಂಭದ ಸಂದರ್ಭದಲ್ಲಿ ಮಾತನಾಡಿದ ಅವರು, ಜನರಿಗೆ ಹೊರೆ ಆಗುವ ಈ ನಿರ್ಧಾರವನ್ನು ತಕ್ಷಣ ಕೈಬಿಡಬೇಕು. ಅಲ್ಲಿಯವರೆಗೆ ಬಿಜೆಪಿ ಹೋರಾಟ ಮುಂದುವರೆಯಲಿದೆ ಎಂದು ಅವರು ಎಚ್ಚರಿಸಿದರು.
ಬಿಜೆಪಿ ಸರ್ಕಾರದ ನಿರ್ಧಾರದ ವಿರುದ್ಧ ರಾಜ್ಯದಾದ್ಯಂತ ಹೋರಾಟ ಮಾಡುತ್ತಿದೆ. ಮುಖ್ಯಮಂತ್ರಿಗಳು ತಮ ನಿರ್ಧಾರದಿಂದ ಹಿಂದೆ ಸರಿಯುವವರೆಗೆ ಈ ಹೋರಾಟದಿಂದ ವಿಮುಖರಾಗುವುದಿಲ್ಲ ಎಂದೂ ಅವರು ತಿಳಿಸಿದರು.