| ಕಥುವಾದಲ್ಲಿ ಭಾರತೀಯ ಸೇನಾ ವಾಹನದ ಮೇಲೆ ಉಗ್ರ ದಾಳಿ, ಹೊಣೆಹೊತ್ತ ಕಾಶ್ಮೀರ್ ಟೈಗರ್ಸ್ : ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಮತ್ತೊಮ್ಮೆ ಭಯೋತ್ಪಾದಕರು ಭಾರತೀಯ ಸೇನೆಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ. ಕಾಶ್ಮೀರ ಟೈಗರ್ಸ್ ಎಂಬ ಉಗ್ರಗಾಮಿ ಸಂಘಟನೆ ಈ ದಾಳಿಯ ಹೊಣೆ ಹೊತ್ತುಕೊಂಡಿದೆ. :ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಮಚೇಡಿ ಪ್ರದೇಶದಲ್ಲಿ ಸೋಮವಾರ (ಜೂನ್ 8) ಭಾರತೀಯ ಸೇನಾ ಬೆಂಗಾವಲು ವಾಹನವನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಐವರು ಸೇನಾ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ. ( ) ಮಚೇಡಿ-ಕಿಂಡ್ಲಿ-ಮಲ್ಹಾರ್ ರಸ್ತೆಯಲ್ಲಿ ನಿತ್ಯ ಗಸ್ತು ತಿರುಗುತ್ತಿದ್ದವು. ಇದನ್ನೇ ಗುರಿಯಾಗಿಸಿಕೊಂಡಿರುವ ಭಯೋತ್ಪಾದಕ () ಸಂಘಟನೆ ಕಥುವಾದಿಂದ ಸುಮಾರು 150 ಕಿ.ಮೀ ದೂರದಲ್ಲಿ ಈ ದಾಳಿ ನಡೆಸಿದೆ. ಇದನ್ನೂ ಓದಿ- ಈ ದಾಳಿಗೆ ಪ್ರತ್ಯುತ್ತರ ನೀಡಿರುವ ಸೇನೆಯೂ ಕ್ರಮ ಕೈಗೊಂಡಿದ್ದು, ನಂತರನಿರಂತರ ಎನ್‌ಕೌಂಟರ್ ನಡೆಯುತ್ತಿದೆ. ಏತನ್ಮಧ್ಯೆ, ಕಾಶ್ಮೀರದ ಭಯೋತ್ಪಾದಕ ಸಂಘಟನೆಯು ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿದ್ದು, ಜೂನ್ 26 ರಂದು ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಹತರಾದ ಮೂವರು ಭಯೋತ್ಪಾದಕರ ಸಾವಿಗೆ ಪ್ರತೀಕಾರವಾಗಿ ಈ ದಾಳಿ ನಡೆಸಿರುವುದಾಗಿ ಹೇಳಿಕೊಂಡಿದೆ. ಇದನ್ನೂ ಓದಿ- ಕಥುವಾ ಜಿಲ್ಲೆಯಲ್ಲಿ ನಡೆದ ದಾಳಿಯ ಬಳಿಕ ಭಾರತೀಯ ಸೇನೆ ( ) ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್ ಮುಂದುವರಿದಿದೆ. ವಿವಿಧೆಡೆ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ದಾಳಿಯ ಬಗ್ಗೆ ಮಾಹಿತಿ ನೀಡಿದ ಅಧಿಕಾರಿಗಳು, ಆರಂಭದಲ್ಲಿ ಭಯೋತ್ಪಾದಕರು ಸೇನಾ ವಾಹನದತ್ತ ಗ್ರೆನೇಡ್ ಎಸೆದರು, ನಂತರ ಅವರು ಗುಂಡಿನ ದಾಳಿ ಆರಂಭಿಸಿದರು. ದಾಳಿಗೆ ಸೇನಾ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದಾಗ, ಭಯೋತ್ಪಾದಕರು ಅರಣ್ಯದ ಕಡೆಗೆ ಪಲಾಯನ ಮಾಡಿದರು ಎಂದು ತಿಳಿಸಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... |