CoolCoder44 commited on
Commit
45bdd29
·
verified ·
1 Parent(s): fab3c59

fb4cd9ca3163da2adf5718c89fa4363572a20d1ef97b4ff14f6e812420329028

Browse files
Files changed (50) hide show
  1. eesanje/url_46_278_4.txt +6 -0
  2. eesanje/url_46_278_5.txt +16 -0
  3. eesanje/url_46_278_6.txt +7 -0
  4. eesanje/url_46_278_7.txt +6 -0
  5. eesanje/url_46_278_8.txt +6 -0
  6. eesanje/url_46_278_9.txt +11 -0
  7. eesanje/url_46_279_1.txt +14 -0
  8. eesanje/url_46_279_10.txt +6 -0
  9. eesanje/url_46_279_11.txt +5 -0
  10. eesanje/url_46_279_12.txt +6 -0
  11. eesanje/url_46_279_2.txt +11 -0
  12. eesanje/url_46_279_3.txt +13 -0
  13. eesanje/url_46_279_4.txt +6 -0
  14. eesanje/url_46_279_5.txt +7 -0
  15. eesanje/url_46_279_6.txt +14 -0
  16. eesanje/url_46_279_7.txt +9 -0
  17. eesanje/url_46_279_8.txt +7 -0
  18. eesanje/url_46_279_9.txt +8 -0
  19. eesanje/url_46_27_1.txt +8 -0
  20. eesanje/url_46_27_10.txt +8 -0
  21. eesanje/url_46_27_11.txt +9 -0
  22. eesanje/url_46_27_12.txt +10 -0
  23. eesanje/url_46_27_2.txt +8 -0
  24. eesanje/url_46_27_3.txt +10 -0
  25. eesanje/url_46_27_4.txt +14 -0
  26. eesanje/url_46_27_5.txt +14 -0
  27. eesanje/url_46_27_6.txt +10 -0
  28. eesanje/url_46_27_7.txt +17 -0
  29. eesanje/url_46_27_8.txt +6 -0
  30. eesanje/url_46_27_9.txt +8 -0
  31. eesanje/url_46_280_1.txt +5 -0
  32. eesanje/url_46_280_10.txt +7 -0
  33. eesanje/url_46_280_11.txt +6 -0
  34. eesanje/url_46_280_12.txt +11 -0
  35. eesanje/url_46_280_2.txt +16 -0
  36. eesanje/url_46_280_3.txt +5 -0
  37. eesanje/url_46_280_4.txt +13 -0
  38. eesanje/url_46_280_5.txt +9 -0
  39. eesanje/url_46_280_6.txt +11 -0
  40. eesanje/url_46_280_7.txt +6 -0
  41. eesanje/url_46_280_8.txt +5 -0
  42. eesanje/url_46_280_9.txt +13 -0
  43. eesanje/url_46_281_1.txt +8 -0
  44. eesanje/url_46_281_10.txt +8 -0
  45. eesanje/url_46_281_11.txt +7 -0
  46. eesanje/url_46_281_12.txt +6 -0
  47. eesanje/url_46_281_2.txt +12 -0
  48. eesanje/url_46_281_3.txt +9 -0
  49. eesanje/url_46_281_4.txt +12 -0
  50. eesanje/url_46_281_5.txt +11 -0
eesanje/url_46_278_4.txt ADDED
@@ -0,0 +1,6 @@
 
 
 
 
 
 
 
1
+ ತ್ರಿಪುರಾದ ಬಿಜೆಪಿ ಶಾಸಕ ನಿಧನ
2
+ ಅಗರ್ತಲಾ, ಡಿ 28 (ಪಿಟಿಐ) ತ್ರಿಪುರಾದ ಬಿಜೆಪಿ ಶಾಸಕ ಸೂರಜಿತ್ ದತ್ತಾ ದೀರ್ಘಕಾಲದ ಅನಾರೋಗ್ಯದ ನಂತರ ತಡರಾತ್ರಿ ಕೋಲ್ಕತ್ತಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಎಪ್ಪತ್ತು ವರ್ಷದ ದತ್ತಾ ಅವರು ಪತ್ನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ.
3
+ ಬಹು ಕಾಯಿಲೆಗಳಿಂದ ಬಳಲುತ್ತಿದ್ದ ರಾಮನಗರ ಶಾಸಕರು ಉಸಿರಾಟದ ತೊಂದರೆಯಿಂದ ಅಗರ್ತಲಾ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಅವರನ್ನು ಉತ್ತಮ ಚಿಕಿತ್ಸೆಗಾಗಿ ಕೋಲ್ಕತ್ತಾಗೆ ವರ್ಗಾಯಿಸಲಾಯಿತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.
4
+ ಕೋವಿಡ್ ಹಗರಣದ ಪಾಲು ಕೇಂದ್ರಕ್ಕೆ ಹೋಗಿದೆಯೇ..? : ಸಚಿವ ಪ್ರಿಯಾಂಕ್ ಖರ್ಗೆ
5
+ ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ ಅವರು ತಮ್ಮ ಫೇಸ್‍ಬುಕ್ ಪೋಸ್ಟ್‍ನಲ್ಲಿ ತಮ್ಮ ದುಃಖವನ್ನು ವ್ಯಕ್ತಪಡಿಸಿದ್ದಾರೆ, ಹಿರಿಯ ರಾಜಕಾರಣಿ ಮತ್ತು ಹಾಲಿ ಬಿಜೆಪಿ ಶಾಸಕ ಸೂರಜಿತ್ ದತ್ತಾ ರಾಜ್ಯದ ಹೊರಗಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಸಮಯದಲ್ಲಿ ನಿಧನದಿಂದ ನನಗೆ ದುಃಖ ಮತ್ತು ನೋವಾಗಿದೆ ಎಂದು ಹೇಳಿದ್ದಾರೆ. ತ್ರಿಪುರಾ ಸರ್ಕಾರ ಇಂದು ಒಂದು ದಿನದ ಶೋಕಾಚರಣೆಯನ್ನು ಘೋಷಿಸಿತು.
6
+ ದತ್ತಾ ಮೊದಲು 1988 ರಲ್ಲಿ ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ಸ್ರ್ಪಧಿಸಿ ಗೆದ್ದರು, ಸುೀಧಿರ್ ರಂಜನ್ ಮಜುಂದಾರ್ ನೇತೃತ್ವದ ಕಾಂಗ್ರೆಸ್-ಟಿಯುಜೆಎಸ್ ಸರ್ಕಾರದಲ್ಲಿ ಸಚಿವರಾಗಿದ್ದರು.
eesanje/url_46_278_5.txt ADDED
@@ -0,0 +1,16 @@
 
 
 
 
 
 
 
 
 
 
 
 
 
 
 
 
 
1
+ ವಿಕಸಿತ ಭಾರತ ಸಂಕಲ್ಪ ಯಾತ್ರೆ ಯಶಸ್ವಿಗೆ ವಿಜಯೇಂದ್ರ ಕರೆ
2
+ ಬೆಂಗಳೂರು, ಡಿ.27- ಬರಲಿರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ವಿಕಸಿತ ಭಾರತ ಸಂಕಲ್ಪ ಯಾತ್ರೆಯನ್ನು ರಾಜ್ಯದಲ್ಲಿ ಯಶಸ್ವಿಯಾಗಿ ನಡೆಸುವ ಬಗ್ಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಪದಾಧಿಕಾರಿಗಳ ಸಭೆ ನಡೆಸಿದರು.
3
+ ಮೂರು ದಿನಗಳ ಹಿಂದೆಯಷ್ಟೇ ಪಕ್ಷಕ್ಕೆ ನೂತನವಾಗಿ ಪದಾಕಾರಿಗಳ ಸಭೆ ನಡೆಸಿದ ಬೆನ್ನಲ್ಲೇ ಮೊದಲ ಬಾರಿಗೆ ವಿಜಯೇಂದ್ರರವರು ನಡೆಸಿದ ಈ ಸಭೆಯಲ್ಲಿ ಕೆಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು. ಪಕ್ಷದ ಉಪಾಧ್ಯಕ್ಷರಾದ ಮುರುಗೇಶ್ ನಿರಾಣಿ, ಹರತಾಳ್ ಹಾಲಪ್ಪ, ಭೈರತಿ ಬಸವರಾಜು, ರಾಜುಗೌಡ ನಾಯಕ್, ಎನ್.ಮಹೇಶ್, ಮಾಳವಿಕ ಅವಿನಾಶ್, ಎಂ.ರಾಜೇಂದ್ರ, ಪ್ರಧಾನ ಕಾರ್ಯದರ್ಶಿಗಳಾದ ವಿ.ಸುನಿಲ್‍ಕುಮಾರ್, ಪ್ರೀತಂಗೌಡ, ನಂದೀಶ್‍ರೆಡ್ಡಿ ಸೇರಿದಂತೆ ಹೊಸ ಪದಾಕಾರಿಗಳು ಭಾಗವಹಿಸಿದ್ದರು.
4
+ ಈ ಹಿಂದೆ ನಿಕಟಪೂರ್ವ ಅಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಅವಧಿಯಲ್ಲಿ ನೇಮಕಗೊಂಡಿದ್ದ ಜಿಲ್ಲಾಧ್ಯಕ್ಷರನ್ನು ಬದಲಾವಣೆ ಮಾಡಬೇಕೆಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ. ಸಂಘಟನೆ ಹಾಗೂ ಕಾರ್ಯಕರ್ತರ ಜೊತೆ ಹೆಚ್ಚು ಒಡನಾಟ ಹೊಂದಿರುವವರನ್ನೇ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡುವಂತೆ ನೂತನ ಪದಾಧಿಕಾರಿಗಳು ಸಲಹೆ ಮಾಡಿದ್ದಾರೆ.
5
+ ಆ ಬಣ, ಈ ಬಣ ಎನ್ನದೇ ಪಕ್ಷನಿಷ್ಠರು ಮತ್ತು ಕಾರ್ಯಕರ್ತರ ಜೊತೆ ಹೊಂದಿಕೊಂಡು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವವರನ್ನೇ ನೇಮಿಸಬೇಕೆಂದು ಮನವಿ ಮಾಡಲಾಗಿದೆ. ಇನ್ನು ಪದಾಧಿಕಾರಿಗಳ ಸಭೆಯಲ್ಲಿ ಲೋಕಸಭೆ ಚುನಾವಣೆಗೆ ಪಕ್ಷವನ್ನು ಮತ್ತಷ್ಟು ಗಟ್ಟಿಗೊಳಿಸುವ ಕುರಿತು ಚರ್ಚೆ ನಡೆಸಲಾಯಿತು.
6
+ ಆಡಳಿತಾರೂಢ ಕಾಂಗ್ರೆಸ್ ತನ್ನ ಪಂಚಗ್ಯಾರಂಟಿ ಯೋಜನೆಗಳನ್ನೇ ಚುನಾವಣೆ ಅಸ್ತ್ರ ಮಾಡಿಕೊಳ್ಳಲಿದೆ. ಇದಕ್ಕೆ ಪರ್ಯಾಯವಾಗಿ ನಾವು ರಾಜ್ಯದ ಜನತೆಗೆ ಮೋದಿ ಗ್ಯಾರಂಟಿಯನ್ನೇ ಹೆಚ್ಚು ಬಿಂಬಿಸಬೇಕೆಂಬ ಅಭಿಪ್ರಾಯ ವ್ಯಕ್ತವಾಗಿದೆ.
7
+ ದಟ್ಟ ಮಂಜು ತಂದ ಆಪತ್ತು, 25ಕ್ಕೂ ಹೆಚ್ಚು ಮಂದಿಗೆ ಗಾಯ
8
+ ಇತ್ತೀಚೆಗೆ ನಡೆದ 5 ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು 3 ರಾಜ್ಯಗಳನ್ನು ಗೆದ್ದಿರುವುದು ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ತಂದಿದೆ. ಕಾಂಗ್ರೆಸ್ ಈ ರಾಜ್ಯಗಳಲ್ಲೂ ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದರೂ ಮತದಾರ ಕೈಹಿಡಿಯಲಿಲ್ಲ. ಬದಲಿಗೆ ಮೋದಿ ಗ್ಯಾರಂಟಿಗೆ ಜೈ ಅಂದಿದ್ದಾರೆ. ಕರ್ನಾಟಕದಲ್ಲೂ ಮೋದಿ ಗ್ಯಾರಂಟಿಯನ್ನೇ ನಾವು ಮುಂಚೂಣಿಗೆ ತರೋಣ. ಇದರಿಂದ ಪಕ್ಷಕ್ಕೆ ಅನುಕೂಲವಾಗಲಿದೆ ಎಂಬ ಅಭಿಪ್ರಾಯ ಕೇಳಿಬಂದಿದೆ.
9
+ ವಿಧಾನಸಭೆ ಚುನಾವಣೆ ಫಲಿತಾಂಶದ ನಂತರ ಬಿಜೆಪಿ ಸೋಲು ಕಾರ್ಯಕರ್ತರಿಗೆ ತೀವ್ರ ನಿರಾಸೆ ತಂದಿತ್ತು. ಈಗ ನಿಧಾನವಾಗಿ ಚೇತರಿಕೆ ಕಾಣುತ್ತಿದ್ದು, ಸಂಘಟನೆಯನ್ನು ಗ್ರಾಪಂನಿಂದ ಜಿಲ್ಲಾಮಟ್ಟದವರೆಗೂ ಸಂಘಟ��ಸಬೇಕೆಂದು ಕೆಲ ಹಿರಿಯರು ಬಿ.ವೈ.ವಿಜಯೇಂದ್ರರವರಿಗೆ ಸಲಹೆ ಮಾಡಿದ್ದಾರೆ.
10
+ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಯಾಗಿದ್ದು, ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಉಂಟಾಗದಂತೆ ವಿಶ್ವಾಸದ ಮೂಲಕವೇ ಮೈತ್ರಿ ಮುನ್ನಡೆಸಬೇಕೆಂದು ಪದಾಕಾರಿಗಳು ಸಲಹೆ ಕೊಟ್ಟಿದ್ದಾರೆ.
11
+ ಯಶಸ್ವಿ ಯಾತ್ರೆ :ಪ್ರಧಾನಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಗ್ರಾಮೀಣ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಅಭಿಯಾನವನ್ನು ರಾಜ್ಯದಲ್ಲಿ ಯಶಸ್ವಿಯಾಗಿ ನಡೆಸಲು ತೀರ್ಮಾನಿಸಲಾಗಿದೆ. ದೇಶದ ಬಡಜನರು, ಸಾಮಾನ್ಯ ಜನರು, ರೈತರು ಸೇರಿದಂತೆ ಅನೇಕ ವರ್ಗದ ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ, ಪ್ರಧಾನಿ ಮೋದಿ ಅವರು ಅನೇಕ ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಪಿಎಂ ಕೃಷಿ ಸಮ್ಮನ್ ಯೋಜನೆ, ಪಿಎಂ ಜೀವನ್ ಜ್ಯೋತಿ, ಪ್ರಧಾನ ಮಂತ್ರಿ ಸುರಕ್ಷ ಭೀಮ ಯೋಜನೆ, ಆಟಲ್ ಪಿಂಚಣಿ ಯೋಜನೆ, ಪ್ರಧಾನಮಂತ್ರಿ ಉಜ್ವಲ ಯೋಜನೆ, ಪ್ರಧಾನಮಂತ್ರಿ ಮುದ್ರಾ ಯೋಜನೆ,
12
+ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ, ಸ್ವಸಹಾಯ ಗುಂಪುಗಳಿಗೆ ಸಾಲ ಯೋಜನೆ, ಪಿಎಂ ವಿದ್ಯಾರ್ಥಿ ವೇತನ, ಆಯುಷ್ ಮಾನ್ ಕಾರ್ಡ್ ವಿತರಣೆ, ಜಲ್ ಜೀವನ್ ಮಿಷನ್ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿ ಮಾಡಿದೆ. ಆದರೆ, ಈ ಯೋಜನೆಗಳ ಬಗ್ಗೆ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಅದೇಷ್ಟೋ ಜನಸಾಮಾನ್ಯರಿಗೆ ಮಾಹಿತಿ ಇಲ್ಲ. ಯೋಜನೆಗಳನ್ನ ಸದುಪಯೋಗ ಕೂಡ ಪಡಿಸಿಕೊಳ್ಳುತ್ತಿಲ್ಲ. ಇದರ ಬಗ್ಗೆ ಜನತೆಗೆ ಕಾರ್ಯಕರ್ತರು ಮನವರಿಕೆ ಮಾಡಿಕೊಡಬೇಕು ಎಂದು ವಿಜಯೇಂದ್ರ ಸೂಚಿಸಿದ್ದಾರೆ.
13
+ ರಾಜ್ಯದ ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಕಾರ್ಯಕ್ರಮಗಳನ್ನ ಆಯೋಜನೆ ಮಾಡಲಾಗುತ್ತಿದೆ. ಗ್ರಾಮ ಪಂಚಾಯಿತಿಗಳ ಬಳಿ ಎರಡು ವಾಹನಗಳಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಹೇಗೆ ಯೋಜನೆಗಳನ್ನು ಪಡೆಯಬಹುದು ಎನ್ನುವುದನ್ನು ತಿಳಿಸಿಕೊಡಲಾಗುತ್ತಿದೆ.
14
+ ದರ್ಶನ್‍ಗಾಗಿ ಮತ್ತೆ ಸ್ಯಾಂಡಲ್‍ವುಡ್‍ಗೆ ಮೆಗಾಸ್ಟಾರ್ ರೀಎಂಟ್ರಿ..?
15
+ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಮೂಲ ಉದ್ದೇಶ, ಪ್ರಧಾನಿ ಮೋದಿ ಅವರ ಕಾರ್ಯಕ್ರಮಗಳನ್ನ ಜನರಿಗೆ ತಿಳಿಸುವುದಾಗಿದೆ. ಸರ್ಕಾರ ಬಡವರ ಕಲ್ಯಾಣಕ್ಕಾಗಿ ಕೈಗೊಂಡಿರುವ ಕಾರ್ಯಕ್ರಮ ಪ್ರಚಾರ ಮಾಡಲಾಗಿದೆ. ಯೋಜನೆಗಳ ಬಗ್ಗೆ ಜನರಿಗೆ ತಿಳಿಸಲಾಗುತ್ತಿದೆ. ದೇಶದಲ್ಲಿ ಮೋದಿ ಗ್ಯಾರಂಟಿ ಗಾಡಿ ಓಡುತ್ತಿದೆ. ಜನವರಿ 25 ರವರೆಗೆ ಪ್ರತಿ ಗ್ರಾಮ, ಪಟ್ಟಣದಲ್ಲಿ ಸಂಚರಿಸಿ ಯೋಜನೆಗಳ ಪ್ರಚಾರ ಕೈಗೊಳ್ಳಲಿದೆ.
16
+ ರಾಜ್ಯದಲ್ಲಿ ಇದನ್ನು ಯಶಸ್ವಿಯಾಗಿ ನಡೆಸುವ ಮೂಲಕ ಮೋದಿಯವರನ್ನೇ ಮತ್ತೊಮ್ಮೆ ಕೇಂದ್ರದಲ್ಲಿ ಅಧಿಕಾರಕ್ಕೆ ತರಲು ಮತದಾರರಿಗೆ ಮನವರಿಕೆ ಮಾಡಿಕೊಡುವ ಕೆಲಸವನ್ನು ಕಾರ್ಯಕರ್ತರು ಮಾಡಿಕೊಡಬೇಕೆಂಬ ಅಭಿಪ್ರಾಯ ವ್ಯಕ್ತವಾಗಿದೆ.
eesanje/url_46_278_6.txt ADDED
@@ -0,0 +1,7 @@
 
 
 
 
 
 
 
 
1
+ ಗೃಹಲಕ್ಷ್ಮಿ ಯೋಜನೆ ತಾಂತ್ರಿಕ ಸಮಸ್ಯೆ ನಿವಾರಣೆಗೆ ವಿಶೇಷ ಅಭಿಯಾನ
2
+ ಬೆಂಗಳೂರು, ಡಿ.27- ಗೃಹಲಕ್ಷ್ಮಿ ಯೋಜನೆಯಲ್ಲಿ ಕಂಡುಬರುವ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಿ ಹೆಚ್ಚು ಜನರಿಗೆ ಸೌಲಭ್ಯ ತಲುಪಿಸುವ ನಿಟ್ಟಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
3
+ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಎಲ್ಲಾ ಗ್ರಾಮಪಂಚಾಯಿತಿಗಳಲ್ಲಿ ಅಭಿಯಾನ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆವರೆಗೂ ಚಾಲ್ತಿಯಲ್ಲಿರಲಿದೆ. ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳು, ಬಾಪೂಜಿ ಸೇವಾಕೇಂದ್ರದ ಗಣಕಯಂತ್ರ ನಿರ್ವಾಹಕರು, ಅಂಗನವಾಡಿ ಕಾರ್ಯಕರ್ತರು, ಎಲಕ್ಟ್ರಾನಿಕ್ ಡೆಲಿವರಿ ಆಫ್ ಸಿಟಿಜನ್ ಸರ್ವೀಸ್ ತಂಡಗಳು ಅಭಿಯಾನದಲ್ಲಿ ಭಾಗವಹಿಸಲಿವೆ.
4
+ ಗೃಹಲಕ್ಷ್ಮಿ ಯೋಜನೆಯಡಿ ನೊಂದಾಯಿಸಿಕೊಂಡ ಬಹಳಷ್ಟು ಮಂದಿ ಬ್ಯಾಂಕ್ ಖಾತೆ ನೀಡುವಾಗ ಪತಿ ಅಥವಾ ಸಂಬಂಧಿಕರ ಖಾತೆಗಳ ಮಾಹಿತಿಯನ್ನು ಒದಗಿಸಿದ್ದಾರೆ. ಇದು ನೊಂದಾಯಿತ ಆಧಾರ್ ಸಂಖ್ಯೆ ಮತ್ತು ಮೊಬೈಲ್ ನಂಬರ್‍ಗೆ ಹೊಂದಾಣಿಕೆ ಆಗುತ್ತಿಲ್ಲ. ಹೀಗಾಗಿ ಶೇ.30ರಷ್ಟು ಮಂದಿಗೆ ಗೃಹಲಕ್ಷ್ಮಿ ಯೋಜನೆಯ ಮಾಸಿಕ 2,000 ರೂ.ಗಳು ತಲುಪುತ್ತಿಲ್ಲ. ಈ ತಾಂತ್ರಿಕ ಸಮಸ್ಯೆಯನ್ನು ಒಂದೇ ಕಂತಿನಲ್ಲಿ ಬಗೆಹರಿಸಲು ಅಭಿಯಾನ ಆಯೋಜಿಸಲಾಗಿದೆ.
5
+ ರೊಚ್ಚಿಗೆದ್ದ ರಕ್ಷಣಾ ವೇದಿಕೆ, ಇಂಗ್ಲೀಷ್ ನಾಮಫಲಕಗಳ ಧ್ವಂಸ
6
+ ಆಧಾರ್ ಜೋಡಣೆ ಮಾಡುವುದು, ಗ್ರಾಹಕರ ವ್ಯಕ್ತಿಗತ ಮಾಹಿತಿ ಸಲ್ಲಿಕೆ, ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸ್ಥಿತಿಗತಿ ಪರಿಶೀಲನೆ, ಬ್ಯಾಂಕ್ ಖಾತೆಗಳಲ್ಲಿ ತಾಂತ್ರಿಕ ಸಮಸ್ಯೆಯಿದ್ದರೆ ಹೊಸ ಖಾತೆ ಸ್ಥಾಪನೆ ಸೇರಿದಂತೆ ಎಲ್ಲಾ ಸೇವೆಗಳನ್ನೂ ಒದಗಿಸಲಾಗುತ್ತಿದೆ.
7
+ ಬ್ಯಾಂಕ್ ಅಧಿಕಾರಿಗಳು ಸ್ಥಳದಲ್ಲೇ ಇರುವುದರಿಂದ ಗೊಂದಲಗಳ ನಿವಾರಣೆಗೆ ಸಹಕಾರಿಯಾಗಲಿದೆ ಎಂದು ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ತಿಳಿಸಿದೆ. ಗೃಹಲಕ್ಷ್ಮಿ ಯೋಜನೆಯಡಿ ನೊಂದಾಯಿಸಿಕೊಂಡು ಸೌಲಭ್ಯ ಪಡೆಯದೇ ಇರುವವವರು ಗ್ರಾಮ ಪಂಚಾಯಿತಿ ಅಥವಾ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ.
eesanje/url_46_278_7.txt ADDED
@@ -0,0 +1,6 @@
 
 
 
 
 
 
 
1
+ ಕಲ್ಲಡ್ಕ ಪ್ರಭಾಕರ್ ಬಂಧನಕ್ಕೆ ಬಿ.ಕೆ.ಹರಿಪ್ರಸಾದ್ ಆಗ್ರಹ
2
+ ಬೆಂಗಳೂರು, ಡಿ.27- ಮುಸ್ಲಿಂ ಸಮುದಾಯದ ಹೆಣ್ಣುಮಕ್ಕಳ ಗೌರವಕ್ಕೆ ಧಕ್ಕೆಯಾಗುವಂತಹ ಹೇಳಿಕೆ ನೀಡಿರುವ ಸಂಘ ಪರಿವಾರದ ಮುಖಂಡ ಕಲ್ಲಡ್ಕ ಪ್ರಭಾಕರ್ ಅವರನ್ನು ಕೂಡಲೇ ಬಂಧಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಹಿರಿಯ ಕಾಂಗ್ರೆಸಿಗ ಬಿ.ಕೆ.ಹರಿಪ್ರಸಾದ್ ಒತ್ತಾಯಿಸಿದ್ದಾರೆ.
3
+ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮತ್ತು ಸಂಘ ಪರಿವಾರದ ನಾಯಕರು ಸಂಸ್ಕøತಿ ರಕ್ಷಣೆ ಬಗ್ಗೆ ದೊಡ್ಡ ದೊಡ್ಡ ಮಾತುಗಳಲ್ಲಿ ಭಾಷಣ ಬಿಗಿಯುತ್ತಾರೆ. ಆದರೆ ಕಲ್ಲಡ್ಕ ಪ್ರಭಾಕರ್ ಮೈಸೂರು ಮತ್ತು ಶ್ರೀರಂಗಪಟ್ಟಣದಲ್ಲಿ ನೀಡಿರುವ ಹೇಳಿಕೆ ಕೀಳು ಅಭಿವ್ಯಕ್ತಿಯಿಂದ ಕೂಡಿದ್ದಾಗಿದೆ. ಸರ್ಕಾರ ತಕ್ಷಣವೇ ಅವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಬೇಕಿತ್ತು ಎಂದು ಹೇಳಿದರು.
4
+ ಸಮುದಾಯದವರು ಒಟ್ಟಾಗಿ ದೂರು ನೀಡುವ ಮೂಲಕ ಎಫ್‍ಐಆರ್ ದಾಖಲಿಸಲಾಗಿದೆ. ಇದರ ಆಧಾರದ ಮೇಲೆ ಕೂಡಲೇ ಕಲ್ಲಡ್ಕ ಪ್ರಭಾಕರ್ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು. ಕಾಂಗ್ರೆಸ್ ಪಕ್ಷ ಸರ್ವಜನಾಂಗದ ಶಾಂತಿಯ ತೋಟ ಎಂಬ ಶೀರ್ಷಿಕೆಯ ಪ್ರಣಾಳಿಕೆಯನ್ನು ಜನರ ಮುಂದಿಟ್ಟು, ಮತ ಪಡೆದು ಅಧಿಕಾರಕ್ಕೆ ಬಂದಿದೆ. ಅದರಂತೆ ಕೋಮು ದ್ವೇಷ ಹರಡುವ, ಶಾಂತಿ ಕದಡುವ ವಿಚ್ಛಿದ್ರಾಕಾರಿ ಶಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕಿದೆ ಎಂದು ಪ್ರತಿಪಾದಿಸಿದರು.
5
+ ಜ.14 ರಿಂದ ರಾಹುಲ್ ಗಾಂಧಿ ಭಾರತ್ ನ್ಯಾಯ ಯಾತ್ರೆ
6
+ ಕರ್ನಾಟಕ ರಾಜ್ಯದಲ್ಲಿ ಕನ್ನಡದಲ್ಲೇ ನಾಮಫಲಕ ಇರಬೇಕೆಂಬುದು ಸ್ವಾಗತಾರ್ಹ. ಆದರೆ ಈ ಹಂತದಲ್ಲಿ ಹೋರಾಟ ಮಾಡುವಾಗ ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ಮನವಿ ಮಾಡಿದರು. ಕನ್ನಡ ಹೋರಾಟಗಾರರ ಮೇಲೆ ಬಹಳಷ್ಟು ಪ್ರಕರಣಗಳು ಬಾಕಿ ಇವೆ. ನೆಲ, ಜಲ, ಭಾಷೆ ವಿಷಯವಾಗಿ ಪ್ರತಿಭಟನೆ ನಡೆಸಿ ಕಾನೂನಿನ ಇಕ್ಕಟ್ಟಿಗೆ ಸಿಲುಕಿದವರ ಮೇಲಿನ ಪ್ರಕರಣಗಳನ್ನು ಹಿಂಪಡೆಯಬೇಕು ಎಂದರು.
eesanje/url_46_278_8.txt ADDED
@@ -0,0 +1,6 @@
 
 
 
 
 
 
 
1
+ ದಟ್ಟ ಮಂಜು ತಂದ ಆಪತ್ತು, 25ಕ್ಕೂ ಹೆಚ್ಚು ಮಂದಿಗೆ ಗಾಯ
2
+ ಬೆಂಗಳೂರು, ಡಿ.27- ದಟ್ಟ ಮಂಜಿನಿಂದ ಕೂಡಿದ ವಾತಾವರಣದಿಂದಾಗಿ ಇಂದು ಮುಂಜಾನೆ ಮುಂದೆ ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ಖಾಸಗಿ ಬಸ್ ಡಿಕ್ಕಿ ಹೊಡೆದಾಗ, ಇದರ ಹಿಂದೆ ಬರುತ್ತಿದ್ದ ಮತ್ತೆರಡು ಖಾಸಗಿ ಬಸ್‍ಗಳು ಅಪ್ಪಳಿಸಿ ಸಂಭವಿಸಿದ ಸರಣಿ ಅಪಘಾತದಲ್ಲಿ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
3
+ ತುಮಕೂರು- ಬೆಂಗಳೂರು ರಸ್ತೆಯ ರಾಷ್ಟ್ರೀಯ ಹೆದ್ದಾರಿ ತೊಣಚಿ ಗುಪ್ಪೆ ಬಳಿ ಇಂದು ಮುಂಜಾನೆ 6.15ರ ಸುಮಾರಿನಲ್ಲಿ ಮುಂದೆ ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ಖಾಸಗಿ ಬಸ್ ಡಿಕ್ಕಿ ಹೊಡೆಯುತ್ತಿದ್ದಂತೆ ಈ ಬಸ್ ಹಿಂಬಾಗ ಬರುತ್ತಿದ್ದ ಮತ್ತೆರಡು ಖಾಸಗಿ ಬಸ್‍ಗಳು ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ.
4
+ ಜ.14 ರಿಂದ ರಾಹುಲ್ ಗಾಂಧಿ ಭಾರತ್ ನ್ಯಾಯ ಯಾತ್ರೆ
5
+ ಘಟನೆಯಿಂದಾಗಿ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರೆಲ್ಲರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು, ಅದೃಷ್ಟವಶಾತ್ ಪ್ರಾಣ ಹಾನಿ ಸಂಭವಿಸಿಲ್ಲ. ಮುಂಜಾನೆ ಅಪಘಾತ ಸಂಭವಿಸಿದ್ದರಿಂದ ಈ ಮಾರ್ಗದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸುದ್ದಿ ತಿಳಿದು ನೆಲಮಂಗಲ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿ ಜೆಸಿಬಿಯಿಂದ ವಾಹನಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
6
+ ಮುಂಜಾನೆ ಮಂಜು ಕವಿದ ವಾತಾವರಣದಿಂದಾಗಿ ರಸ್ತೆಯಲ್ಲಿ ಹೋಗುತ್ತಿದ್ದ ವಾಹನಗಳು ಸರಿಯಾಗಿ ಕಾಣಿಸದೆ ಅಪಘಾತ ನಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಈ ಬಗ್ಗೆ ನೆಲಮಂಗಲ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
eesanje/url_46_278_9.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ರೊಚ್ಚಿಗೆದ್ದ ರಕ್ಷಣಾ ವೇದಿಕೆ, ಇಂಗ್ಲೀಷ್ ನಾಮಫಲಕಗಳ ಧ್ವಂಸ
2
+ ಬೆಂಗಳೂರು, ಡಿ.27- ಆಂಗ್ಲಭಾಷೆಯ ನಾಮಫಲಕಗಳ ವಿರುದ್ಧ ಸಮರ ಸಾರಿರುವ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಕಾರ್ಯಕರ್ತರು ಇಂದು ಹಲವು ವಾಣಿಜ್ಯ ಸಂಸ್ಥೆಗಳ ಎದುರು ಪ್ರತಿಭಟನೆ ನಡೆಸಿದ್ದಾರೆ. ಬೃಹತ್ ವಾಣಿಜ್ಯ ಸಂಸ್ಥೆಗಳಿಗೆ ತೆರಳಿ ಅಲ್ಲಿ ವಿಜೃಂಭಿಸುತ್ತಿದ್ದ ಆಂಗ್ಲ ಭಾಷೆಯ ನಾಮಫಲಕಗಳನ್ನು ಧ್ವಂಸಗೊಳಿಸಿದ್ದಾರೆ. ಈ ವೇಳೆ ಪೊಲೀಸರೊಂದಿಗೆ ಸಂಘರ್ಷವೂ ನಡೆದಿದೆ.
3
+ ಕೆಲವು ಸಂಸ್ಥೆಗಳು ಕರವೇಯ ಪ್ರತಿಭಟನೆಗೆ ಮಣಿದು ನಾಮಫಲಕದಲ್ಲಿ ಶೇ.60 ರಷ್ಟು ಕನ್ನಡ ಭಾಷೆಗೆ ಆದ್ಯತೆ ನೀಡಿವೆ. ಮಾಲ್ ಏಷ್ಯಾ ಸೇರಿದಂತೆ ಅನೇಕ ಬೃಹತ್ ವಾಣಿಜ್ಯ ಮಳಿಗೆಗಳು ಕನ್ನಡ ಭಾಷೆಯ ನಾಮಫಲಕ ಹಾಕಲು ತಿರಸ್ಕಾರ ಧೋರಣೆ ಅನುಸರಿಸಿದ್ದವು. ಕಳೆದ ವಾರದಿಂದ ಬೃಹತ್ ಪ್ರತಿಭಟನೆ ಉಗ್ರ ಸ್ವರೂಪ ಪಡೆಯುತ್ತಿದ್ದಂತೆ ಮಾಲ್ ಏಷ್ಯಾ ನಾಮಫಲಕವನ್ನು ಬದಲಿಸಿದೆ.
4
+ ಈ ಹಿಂದೆ ಕಾವೇರಿ ನದಿವಿವಾದ ತೀವ್ರವಾಗಿದ್ದ ಸಂದರ್ಭದಲ್ಲೇ ನಾರಾಯಣಗೌಡರು ಮುಂದಿನ ಡಿಸೆಂಬರ್‍ನಲ್ಲಿ ಆಂಗ್ಲಭಾಷೆಗಳ ನಾಮಫಲಕಗಳ ವಿರುದ್ಧ ಬೃಹತ್ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು.ಕನ್ನಡವನ್ನು ಕಡೆಗಣಿಸುವ ವಾಣಿಜ್ಯ ಮಳಿಗೆಗಳು ಹಾಗೂ ಉದ್ಯಮಗಳ ವಿರುದ್ಧ ಉಗ್ರ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದರು. ಅದರ ಹೊರತಾಗಿಯೂ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಂಡಿರಲಿಲ್ಲ. ಮಾಲ್ ಏಷ್ಯಾದಲ್ಲಿ ಕನ್ನಡ ನಾಮಫಲಕವನ್ನು ಹಾಕುವಂತೆ ನಾರಾಯಣಗೌಡರು ಲಿಖಿತ ರೂಪದಲ್ಲಿ ಮನವಿ ನೀಡಿದ್ದರು. ಅದರ ವಿರುದ್ಧ ದೂರು ನೀಡಿದ್ದ ಮಾಲ್ ಏಷ್ಯಾದವರು ನಾರಾಯಣಗೌಡರ ವಿರುದ್ಧವೇ ಪ್ರಕರಣ ದಾಖಲಿಸಿದ್ದರು. ಅದರ ಬಳಿಕ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.
5
+ ಕರವೇ ಕಾರ್ಯಕರ್ತರು ನಗರಾದ್ಯಂತ ಪ್ರತಿಭಟನೆ ಗಳನ್ನು ನಡೆಸುತ್ತಿದ್ದಾರೆ. ಶಾಂತಿಯುತ ಪ್ರತಿಭಟನೆಗೆ ಜಗ್ಗದೇ ಇದ್ದ ವಾಣಿಜ್ಯಸಂಸ್ಥೆಗಳ ಮುಂಭಾಗದಲ್ಲಿರುವ ಫಲಕಗಳನ್ನು ಸ್ವಯಂ ಕಿತ್ತುಹಾಕುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.ಇಂದು ವಿಮಾನನಿಲ್ದಾಣ ರಸ್ತೆಯ ಸಾದಹಳ್ಳಿ ಗೇಟ್ ಬಳಿ ಕರವೇ ಕಾರ್ಯಕರ್ತರು ಬೃಹತ್ ಪ್ರಮಾಣದಲ್ಲಿ ಜಮಾಯಿಸಿದರು. ಸಾದಹಳ್ಳಿಯ ಟೋಲ್‍ನಲ್ಲಿರುವ ಇಂಗ್ಲಿಷ್ ನಾಮಫಲಕವನ್ನು ಧ್ವಂಸಗೊಳಿಸಿದ್ದರು. ಅಲ್ಲಿಂದ ನಗರದತ್ತ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗಿದೆ.
6
+ ರಸ್ತೆಯುದ್ದಕ್ಕೂ ಕನ್ನಡ ಸಂಘಟನೆಯ ಕಾರ್ಯಕರ್ತರ ಕಲರವ ಕಂಡುಬಂದಿತು. ಅಲ್ಲಲ್ಲಿ ರಸ್ತೆತಡೆಗಳು ನಡೆದವು. ವಿಮಾನನಿಲ್ದಾಣದ ಸಂಚಾರ ವ್ಯವಸ್ಥೆ ಅಸ್ತವ್ಯಸ್ಥಗೊಂಡಿತ್ತು. ಜೊತೆಗೆ ಇತರ ಪ್ರಮುಖ ರಸ್ತೆಗಳಲ್ಲೂ ಇದೇ ರೀತಿಯ ಪ್ರತಿಭಟನೆಗಳು ನಡೆದಿವೆ. ದಾರಿ ಮಧ್ಯೆ ಅಳವಡಿಸಲಾಗಿದ್ದ ಇಂಗ್ಲಿಷ್ ಭಾಷೆಯ ಬ��ಹತ್ ಫ್ಲೆಕ್ಸ್ ಬ್ಯಾನರ್‍ಗಳನ್ನು ಕರವೇ ಕಾರ್ಯಕರ್ತರು ಹರಿದು ಹಾಕಿದ್ದಾರೆ.
7
+ ಜ.14 ರಿಂದ ರಾಹುಲ್ ಗಾಂಧಿ ಭಾರತ್ ನ್ಯಾಯ ಯಾತ್ರೆ
8
+ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಮೇಕ್ರಿ ವೃತ್ತದ ಬಳಿಕ ಕರವೇ ಕಾರ್ಯಕರ್ತರನ್ನು ತಡೆದು ವಶಕ್ಕೆ ಪಡೆದುಕೊಂಡರು. ಆದರೆ ಬೇರೆ ಬೇರೆ ಪ್ರದೇಶಗಳಲ್ಲಿ ಸಂಘಟಿತರಾಗಿದ್ದ ಕಾರ್ಯಕರ್ತರು ಇಂಗ್ಲಿಷ್ ನಾಮಫಲಕಗಳ ವಿರುದ್ಧ ಸಮರ ಮುಂದುವರೆಸಿದ್ದಾರೆ. ರಾಜ್ಯಸರ್ಕಾರ ಫೆಬ್ರವರಿ 28 ರೊಳಗೆ ನಿಯಮಾನುಸಾರ ನಾಮಫಲಕದಲ್ಲಿ ಕನ್ನಡಕ್ಕೆ ಶೇ. 60 ರಷ್ಟು ಮಾನ್ಯತೆ ನೀಡಬೇಕು. ಇಲ್ಲವಾದರೆ ನಿಯಮ ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ. ಅದರ ನಡುವೆ ಕರವೇಯ ಪ್ರತಿಭಟನೆ ಇಂಗ್ಲಿಷ್ ವ್ಯಾಮೋಹಿಗಳಿಗೆ ಬಿಸಿ ಮುಟ್ಟಿಸಿದೆ.
9
+ ಸುದ್ದಿಗಾರರೊಂದಿಗೆ ಮಾತನಾಡಿದ ಕರವೇ ಅಧ್ಯಕ್ಷ ನಾರಾಯಣಗೌಡ, ಬೆಂಗಳೂರು ಕನ್ನಡಮಯವಾಗಬೇಕು. ಇಲ್ಲವಾದರೆ ಭವಿಷ್ಯದಲ್ಲಿ ಕನ್ನಡಿಗರಿಗೆ ಉಳಿಗಾಲ ಇಲ್ಲದಂತಾಗುತ್ತದೆ. ವಾಣಿಜ್ಯ ಸಂಸ್ಥೆಗಳು, ಮಾಲ್‍ಗಳು ಕೇವಲ ಹೊರಗಿನ ನಾಮಫಲಕಗಳಲ್ಲಿ ಕನ್ನಡ ಬಳಸಿದರೆ ಸಾಲದು, ಒಳಗೂ ಕನ್ನಡ ಇರಬೇಕು ಎಂದು ಆಗ್ರಹಿಸಿದ್ದಾರೆ.
10
+ ಲೋಕಸಭೆ ಚುನಾವಣೆ ಘೋಷಣೆ ಮುನ್ನವೇ ಅಭ್ಯರ್ಥಿಗಳ ಲಿಸ್ಟ್ ಪ್ರಕಟಿಸಲು ಮುಂದಾದ ಬಿಜೆಪಿ
11
+ ಇಂದು ಕರವೇಯ ಪ್ರತಿಭಟನೆಗೆ ಅವಕಾಶ ಮಾಡಿಕೊಡುವಂತೆ ಮನವಿ ಮಾಡಿಕೊಂಡಿದ್ದೇವೆ. ಒಂದು ವೇಳೆ ಬಲವಂತವಾಗಿ ಪ್ರತಿಭಟನೆಯನ್ನು ಹತ್ತಿಕ್ಕಲು ಯತ್ನಿಸಿದರೆ ಕಾರ್ಯಕರ್ತರು ಹೋರಾಟವನ್ನು ಮುಂದುವರೆಸಲಿದ್ದಾರೆ ಎಂದು ಎಚ್ಚರಿಸಿದರು. ಸರ್ಕಾರ ನಮ್ಮ ಬೇಡಿಕೆಗೆ ಸ್ಪಂದಿಸಿ 28 ರವರೆಗೆ ಗಡುವು ನಿಗದಿ ಮಾಡಿದೆ. ಆನಂತರವೂ ಕನ್ನಡೀಕರಣವಾಗದೇ ಇದ್ದರೆ, ಮುಂದಿನ ದಿನಗಳಲ್ಲಿನ ಅನಾಹುತಕ್ಕೆ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ. ಈ ಹೋರಾಟ ಬೆಂಗಳೂರಿಗಷ್ಟೇ ಅಲ್ಲ ರಾಜ್ಯಾದ್ಯಂತ ನಡೆಯುತ್ತದೆ ಎಂದು ಹೇಳಿದ್ದಾರೆ.
eesanje/url_46_279_1.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ ಭತ್ಯೆಯ ಜೊತೆಗೆ ನಿರುದ್ಯೋಗ ನಿವಾರಣೆಗೆ ಕೌಶಲ್ಯ ತರಬೇತಿ: ಸಿಎಂ
2
+ ಬೆಂಗಳೂರು,ಡಿ.26-ಯುವ ನಿಧಿ ಯೋಜನೆಯಡಿ ನೋಂದಾಯಿತ ಪದವಿ ಹಾಗೂ ಡಿಫ್ಲೋಮೊದಾರರಿಗೆ ನಿರುದ್ಯೋಗ ಭತ್ಯೆಯ ಜೊತೆಗೆ ಕೌಶಲ್ಯ ತರಬೇತಿಯನ್ನೂ ಕೊಟ್ಟು ಉದ್ಯೋಗ ದೊರಕಿಸಿಕೊಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
3
+ ವಿಧಾನಸೌಧದ ಬಾಂಕ್ವೆಟ್ ಹಾಲ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದರು. ರಾಜ್ಯದಲ್ಲಿ 5.29 ಲಕ್ಷ ಪದವಿಧರರು ಇದ್ದಾರೆ. ಅವರಲ್ಲಿ 4.20 ಲಕ್ಷ ಪದವೀಧರರು ಇದ್ದರೆ, 48 ಸಾವಿರ ಡಿಫ್ಲೋಮೊ ಪದವಿ ಪಡೆದವರಿದ್ದಾರೆ. ಅಷ್ಟೂ ಮಂದಿಗೆ ನಿರುದ್ಯೋಗ ಭತ್ಯೆ ನೀಡಲು ಮಾರ್ಚ್‍ವರೆಗೂ 250 ಕೋಟಿ ರೂ.ಗಳ ಹಣ ಅಗತ್ಯವಿದ್ದು, ಅಷ್ಟನ್ನು ಒದಗಿಸಲಾಗಿದೆ ಎಂದರು.
4
+ ರಾಜ್ಯ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಂಡಿದೆ. ಪಂಚಖಾತ್ರಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಇದಕ್ಕಾಗಿ ಈ ವರ್ಷಕ್ಕೆ 39000 ಕೋಟಿ ರೂ.ಗಳನ್ನ ತಾವು ಮಂಡಿಸಿದ ಬಜೆಟ್‍ನಲ್ಲಿ ಕಾಯ್ದಿರಿಸಿದ್ದಾಗಿ ತಿಳಿಸಿದರು.
5
+ ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಸುಧಾರಣೆಯಾಗಲಿದೆ : ಸಿದ್ದರಾಮಯ್ಯ
6
+ ಮೋದಿ ಆರ್ಥಿಕ ತಜ್ಞರೇ?:ತಮ್ಮ ಭಾಷಣದಲ್ಲಿ ಪ್ರಧಾನಿ ನರೇಂದ್ರಮೋದಿ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡು ಸಿದ್ದರಾಮಯ್ಯನವರು, ಕಾಂಗ್ರೆಸ್‍ನ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು ಸಾಧ್ಯವಿಲ್ಲ. ಒಂದು ವೇಳೆ ಜಾರಿಯಾದರೆ ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಮೋದಿಯವರು ರಾಜಸ್ಥಾನದ ಚುನಾವಣಾ ಪ್ರಚಾರದ ವೇಳೆ ಟೀಕೆ ಮಾಡಿದ್ದರು. ಅವರೇನು ಆರ್ಥಿಕ ತಜ್ಞರೇ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ನಾವು 5 ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದೇವೆ. ಅದರ ನಂತರವು ರಾಜ್ಯ ಆರ್ಥಿಕವಾಗಿ ಸದೃಢವಾಗಿದೆ ಎಂದು ಹೇಳಿದರು.
7
+ ನಮ್ಮ ಪಕ್ಷದ ಗ್ಯಾರಂಟಿಗಳನ್ನು ಟೀಕಿಸುತ್ತಿದ್ದ ಪ್ರಧಾನಿಯವರು, ಇತ್ತೀಚೆಗೆ ನಡೆದ ಪಂಚರಾಜ್ಯ ಚುನಾವಣೆಯಲ್ಲಿ ಮಧ್ಯಪ್ರದೇಶ, ಛತ್ತೀಸ್‍ಘಡ, ತೆಲಂಗಾಣ ಸೇರಿದಂತೆ ಎಲ್ಲ ಕಡೆಯೂ ಗ್ಯಾರಂಟಿಗಳನ್ನು ಘೋಷಣೆ ಮಾಡಿದರು. ನಾವು ಜನರಿಗೆ ಭರವಸೆಗಳನ್ನು ನೀಡಿದರೆ ಟೀಕೆ ಮಾಡುತ್ತಾರೆ. ಆದರೆ ಅವರು ನೀಡಿದಾಗ ಆರ್ಥಿಕ ದಿವಾಳಿಯಾಗುವುದಿಲ್ಲವೇ ಎಂದು ಪ್ರಶ್ನಿಸಿದರು.
8
+ ಪಂಚಖಾತ್ರಿಗಳ ಯೋಜನೆ ಜಾರಿಯಲ್ಲಿ ವಿಳಂಬವಾಗಿದೆ ಎಂದು ವಿರೋಧ ಪಕ್ಷಗಳು ಟೀಕೆ ಮಾಡುತ್ತವೆ. ಮೊದಲ ಸಂಪುಟದಲ್ಲೇ 5 ಖಾತ್ರಿಗಳನ್ನು ಜಾರಿಗೊಳಿಸುವ ನಿರ್ಣಯ ಕೈಗೊಳ್ಳಲಾಗಿತ್ತು. ಶಕ್ತಿ, ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳನ್ನು ಈಗಾಗಲೇ ಜಾರಿಗೊಳಿಸಲಾಗಿದೆ.
9
+ ಯುವ ನಿಧಿ ಯೋಜನೆ 2022-23ನೇ ಸಾಲಿನಲ್ಲಿ ಉತ್ತೀರ್ಣರಾಗಿ ಆರು ತಿಂಗಳು ಉದ್ಯೋಗ ದೊರೆಯದೆ ಇರುವವರಿಗೆ ನಿರುದ್ಯೋಗ ಭತ್ಯೆ ನೀಡುವ ಯೋಜನೆಯಾಗಿದ್ದು, ಈಗ ಆರು ತಿಂಗಳ ಕಾಲಾವಧಿ ಮುಗಿದಿದ್ದು, ಸಕಾಲದಲ್ಲಿ ಯುವನಿಧಿ ಯೋಜನೆ ಜಾರಿಯಾಗುತ್ತಿದೆ. ಯಾವುದೇ ವಿಳಂಬವಾಗಿಲ್ಲ. ಎರಡು ವರ್ಷಗಳವರೆಗೂ ಪದವೀಧರರಿಗೆ ನಿರುದ್ಯೋಗ ಭತ್ಯೆ ನೀಡಿ ಅವರನ್ನು ಸ್ವಾವಲಂಬಿಗಳಾಗಿ ಮಾಡಲಾಗುವುದು ಎಂದು ಹೇಳಿದರು.ಮೋದಿಯವರು ಚುನಾವಣೆಗೂ ಮುನ್ನ ಸಾಕಷ್ಟು ಭರವಸೆಗಳನ್ನು ನೀಡಿದ್ದರು. ಯುವಕರಿಗೆ ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ತಿಳಿಸಿದರು. ಅದರ ಪ್ರಕಾರ 10 ವರ್ಷದಲ್ಲಿ 20 ಕೋಟಿ ಉದ್ಯೋಗ ಸೃಷ್ಟಿಯಾಗಬೇಕಿತ್ತು. ಎಲ್ಲಿವೆ ಆ ಉದ್ಯೋಗಗಳು ಎಂದು ಸಿಎಂ ಪ್ರಶ್ನಿಸಿದರು.
10
+ ವಿದೇಶದಲ್ಲಿರುವ ಕಪ್ಪು ಹಣ ತಂದು ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ಹಾಕುವುದಾಗಿ ಹೇಳಿದ್ದರು. ಮೋದಿಯವರು ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸದೆ ಮಾತು ತಪ್ಪಿದ್ದಾರೆ. ಸ್ವತಂತ್ರ ನಂತರ ದೇಶ ಕಂಡ ಹೆಚ್ಚು ಸುಳ್ಳು ಹೇಳುವ ಪ್ರಧಾನಿ ನರೇಂದ್ರ ಮೋದಿ ಎಂದು ವಾಗ್ದಾಳಿ ನಡೆಸಿದರು.
11
+ ವೈದ್ಯಕೀಯ ಮತ್ತು ಕೌಶಲ್ಯಾಭಿವೃದ್ದಿ ಸಚಿವ ಶರಣಪ್ರಕಾಶ್ ಪಾಟೀಲ್ ಮಾತನಾಡಿ, ರಾಜ್ಯ ಸರ್ಕಾರ ಹೆಚ್ಚು ಷರತ್ತುಗಳನ್ನು ವಿಸದೆ ಯುವ ನಿ ಯೋಜನೆಯನ್ನು ಜಾರಿಗೊಳಿಸುತ್ತಿದೆ. ನಮಗೆ ಯುವಕರ ಮೇಲೆ ನಂಬಿಕೆ ಇದೆ. ಉದ್ಯೋಗ ಇಲ್ಲ ಎಂದು ಸ್ವಯಂ ಘೋಷಣೆ ಮಾಡಿಕೊಂಡರೆ ಸಾಕು ನಿರುದ್ಯೋಗ ಭತ್ಯೆ ದೊರೆಯುತ್ತದೆ.ನಿಗದಿತ ಕಾಲಾವಧಿಯಲ್ಲಿ ಯೋಜನೆ ಜಾರಿಗೆ ತಂದಿದ್ದೇವೆ. ಯುವಕರ ಭವಿಷ್ಯದ ಬಗ್ಗೆ ನಮಗೆ ಹೆಚ್ಚು ಕಾಳಜಿ ಇದೆ. ನಿರುದ್ಯೋಗ ಭತ್ಯೆ ಜೊತೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುವುದು. ಖಾಸಗಿ ಸಂಸ್ಥೆಗಳಿಗೆ ಅಗತ್ಯವಿರುವ ಕೌಶಲ್ಯಗಳನ್ನು ವಿದ್ಯಾರ್ಥಿಗಳಿಗೆ ಕಲಿಸಲು ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಕಾರ್ಯ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
12
+ ಹೊಸ ವರ್ಷಾಚರಣೆಗೆ : ಎಂಜಿ ರಸ್ತೆ, ಬ್ರಿಗೇಡ್ ರಸ್ತೆಗಳಲ್ಲಿ ಡ್ರೋಣ್ ಕಣ್ಗಾವಲು
13
+ ಕಾರ್ಯಕ್ರಮವನ್ನು ಸಾಂಕೇತಿಕವಾಗಿ ಯುವಕ-ಯುವತಿಯರಿಂದಲೇ ಉದ್ಘಾಟನೆ ಮಾಡಿಸಲಾಯಿತು. ಮೊದಲು ನೋಂದಣಿ ಮಾಡಿಕೊಂಡ ಮೇನಕ ಎಂಬ ಪದವೀಧದರರಿಗೆ ಮುಖ್ಯಮಂತ್ರಿ ನೋಂದಣಿ ಪತ್ರವನ್ನು ವಿತರಿಸಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಾರ್ಯಕ್ರಮದ ಪೋಸ್ಟರ್ ಮತ್ತು ಲಾಂಛನವನ್ನು ಅನಾವರಣಗೊಳಿಸಿದರು.
14
+ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾಗೇಂದ್ರ, ವಿಧಾನ ಪರಿಷತ್ ಸದಸ್ಯ ಯು.ಬಿ.ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹ್ಮದ್ ಉಪಸ್ಥಿತರಿದ್ದರು.
eesanje/url_46_279_10.txt ADDED
@@ -0,0 +1,6 @@
 
 
 
 
 
 
 
1
+ ಲೋಕಸಭೆ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ : ಜೋಶಿ
2
+ ಹುಬ್ಬಳ್ಳಿ,ಡಿ.25-ಮುಂದಿನ 2024 ಲೋಕಸಭೆ ಚುನಾವಣೆಯಲ್ಲಿ ನಾನು ಧಾರವಾಡ ಲೋಕಸಭೆ ಕ್ಷೇತ್ರದಿಂದಲ್ಲೇ ಸ್ಪರ್ದಿಸುತ್ತೇನೆ ಎಂದು ಕೇಂದ್ರ ಸಂಸದೀಯ ವ್ಯವಹಾರ ಹಗು ಗಣಿ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲ್ಲಿನ ನನ್ನ ಜನರಿ ಹಿಂದೆ ಆಶೀರ್ವಾದ ಮಾಡಿದ್ದಾರೆ. ಮುಂದೆಯೂ ಆಶೀರ್ವಾದ ಮಾಡ್ತಾರೆ. ನಾನು ಈ ಬಗ್ಗೆ ಪದೇ ಪದೇ ಹೇಳಲ್ಲ ಎಂದರು.
3
+ ಧಾರವಾಡ ಕ್ಷೇತ್ರದಿಂದ ಲಿಂಗಾಯತರಿಗೆ ಕೊಡಬೇಕೆಂಬ ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಜೋಶಿ ಅವರು ಇಲ್ಲಿನ ಸಂಸದನಾಗಿ ಜನಕಲ್ಯಾಣಕ್ಕೆ ದುಡಿದಿದ್ದೇನೆ ದೇಶಮಟ್ಟದಲ್ಲಿ ನಿಸ್ವಾರ್ಥ ಕಾಯಕ ಮಾಡುತ್ತಿದ್ದೇನೆ ಜನರ ನಂಬಿಕೆ ಉಳಿಸಿಕೊಂಡಿದ್ದಾನೆ ಎಂದರು.
4
+ ಬಿಜೆಪಿ ರಾಜ್ಯ ಪದಾ„ಕಾರಿಗಳ ವಿಚಾರದಲ್ಲಿ ಅಪಸ್ವರ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಯಾರನ್ನು ನೇಮಕ ಮಾಡಿದ್ದಾರೆ ನನಗೆ ಮಾಹಿತಿ ಇಲ್ಲ. ರಾಜ್ಯಾದ್ಯಕ್ಷರು ಮತ್ತು ಇತರ ನಾಯಕರು ಸೇರಿ ಪಟ್ಟಿ ರೆಡಿ ಮಾಡಿದ್ದಾರೆ. ಎಲ್ಲ ಜಿಲ್ಲೆಗಳಿಗೂ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಪದಾ„ಕಾರಿಗಳ ಆಯ್ಕೆಯಾಗಿದೆ. ಬೇರೆ ಬೇರೆ ಕಾರಣದಿಂದಾಗಿ ಧಾರವಾಡಕ್ಕೆ ಪ್ರಾತಿನಿಧ್ಯತೆ ಸಿಕ್ಕಿರಲಿಕ್ಕಿಲ್ಲ ಎಂದರು.
5
+ ಸಾಗರ ತೀರದಲ್ಲಿ ಈರುಳ್ಳಿಯಲ್ಲಿ ಮೂಡಿಬಂದ ಸಾಂತಾಕ್ಲಾಸ್
6
+ ವಿಧಾನ ಪರಿಷತ್ ಸದಸ್ಯ ಹರಿಪ್ರಸಾದ್ ಹೇಳಿಕೆಗೆ ತಿರುಗೇಟು ನೀಡಿ ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್ ರನ್ನ ಬೂಟ್ ಕ್ಕಿಂತ ಕಡೆ ಮಾಡಿದ್ದಾರೆಂದು ಲೇವಡಿ ಐ.ಎನ್.ಡಿ.ಯ ಮೈತ್ರಿಯಲ್ಲಿ ಗೊಂದಲವಿದೆ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಮಂತ್ರಿ ಅಭ್ಯರ್ಥಿಯಾಗಲು ಇನ್ನು ಒಪ್ಪಿಲ್ಲ. ರಾಹುಲ್ ಗಾಂ„ ಅವರೇ ಒಪ್ಪಿಲ್ಲ ಎಂದರು.ನಿತೀಶ್,ಲಾಲು,ಅಕಿಲೇಶ್ ಮತ್ತಿತರರು ವಿಬಿನ್ನ ಹೇಳಿಕೆ ನೀಡುತ್ತಿದ್ದರೆ ಇನ್ನು ಮುಂದೆಯೂ ಹೊಸ ನಾಟಕ ನೋಡಬಹುದು ಎಂದು ಟೀಕಿಸಿದರು.
eesanje/url_46_279_11.txt ADDED
@@ -0,0 +1,5 @@
 
 
 
 
 
 
1
+ ಏಕಾಏಕಿ ಏರ್ ಇಂಡಿಯಾ ವಿಮಾನ ರದ್ದು, ಪ್ರಯಾಣಿಕರ ಆಕ್ರೋಶ
2
+ ಮಂಗಳೂರು, ಡಿ.24- ಬೆಂಗಳೂರಿಗೆ ಹೊರಡಬೇಕಾಗಿದ್ದ ವಿಮಾನ ಏಕಾಏಕಿ ರದ್ದಾದ ಹಿನ್ನೆಲೆಯಲ್ಲಿ ಏರ್‍ಇಂಡಿಯಾ ಸಿಬ್ಬಂದಿಯನ್ನು ಪ್ರಯಾಣಿಕರು ತರಾಟೆಗೆ ತೆಗೆದುಕೊಂಡು ಆಕ್ರೋಶ ಹೊರ ಹಾಕಿದ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ.
3
+ ಕಳೆದ ರಾತ್ರಿ 8.30ಕ್ಕೆ ಇಲ್ಲಿಂದ ಬೆಂಗಳೂರಿಗೆ ಹೊರಡಬೇಕಾಗಿದ್ದ ವಿಮಾನವನ್ನು ತಾಂತ್ರಿಕ ಕಾರಣವೊಡ್ಡಿ ರದ್ದು ಮಾಡಲಾಗಿತ್ತು. ಇದರಿಂದ ಪ್ರಯಾಣಿಕರು ಏರ್ ಇಂಡಿಯಾ ಸಿಬ್ಬಂದಿಗಳನ್ನು ಕೇಳಿದಾಗ ಪರಿಶೀಲಿಸುವುದಾಗಿ ತಿಳಿಸಿದರು. ಆದರೆ ಸ್ಪಂದಿಸದ ಕಾರಣ ಸ್ವಲ್ಪ ಹೊತ್ತು ಕಾದು ನಂತರ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡರು.
4
+ ಕುಮಾರಸ್ವಾಮಿಯವರನ್ನು ನಿಂದಿಸುವುದು ಕಾಂಗ್ರೆಸ್‍ಗೆ ಅಂಟಿದ ಬೇನೆ : ಜೆಡಿಎಸ್
5
+ ಈ ವೇಳೆ ವಾಗ್ವಾದಗಳು ನಡೆದು ಮುಂಜಾನೆ 2.15ಕ್ಕೆ ಬೇರೊಂದು ವಿಮಾನದ ಮೂಲಕ ಪ್ರಯಾಣಿಕರನ್ನು ಬೆಂಗಳೂರಿಗೆ ಕಳಿಸಿಕೊಡಲಾಯಿತು. ದಟ್ಟ ಮಂಜು ಹಾಗೂ ವಿಪರೀತ ಚಳಿಯಿಂದಾಗಿ ವಿಮಾನ ಹಾರಾಟಕ್ಕೆ ಸ್ವಲ್ಪ ಅಡಚಣೆಯಾಗಿದೆಯೆಂದು ವಿಮಾನಯಾನದ ಮೂಲಗಳು ತಿಳಿಸಿವೆ.
eesanje/url_46_279_12.txt ADDED
@@ -0,0 +1,6 @@
 
 
 
 
 
 
 
1
+ ತವರಿಗೆ ಕಳಿಸಲು ಒಪ್ಪದ ಪತಿ, ನೊಂದ ಪತ್ನಿ ಆತ್ಮಹತ್ಯೆ
2
+ ನೆಲಮಂಗಲ ಡಿ.24- ತವರು ಮನೆಗೆ ಹೋಗಲು ಪತಿ ಅವಕಾಶ ನೀಡದಿದ್ದ ಹಿನ್ನೆಲೆಯಲ್ಲಿ ನೊಂದ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪವಿತ್ರ (28) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿಯಾಗಿದ್ದಾಳೆ. ಮೂಲತಃ ತುಮಕೂರಿನ ಹುಳಿಯಾರು ಪಟ್ಟಣದ ಪವಿತ್ರ ಅವರು ಕಳೆದ ಎರಡೂವರೆ ವರ್ಷಗಳ ಹಿಂದೆ ಹಿರಿಯೂರು ಮೂಲದ ಚೇತನ್ ಎಂಬುವವರನ್ನು ಮದುವೆಯಾಗಿದ್ದರು. ಅವರಿಗೀಗ 11 ತಿಂಗಳ ಗಂಡು ಮಗು ಇದೆ.
3
+ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಚೇತನ್‍ಗೆ ಕೆಲಸದ ಒತ್ತಡದ ಹಿನ್ನೆಲೆಯಲ್ಲಿ ರಜೆ ಸಿಕ್ಕಿರಲಿಲ್ಲ. ಈ ನಡುವೆ ತನ್ನ ಸಂಬಂಧಿಕರ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಪವಿತ್ರ ತವರು ಮನೆಗೆ ಹೋಗೋಣ ಎಂದು ಹೇಳಿದ್ದಳು.
4
+ ಬಿಜೆಪಿಯಲ್ಲಿ ಭಿನ್ನಮತ ಸೃಷ್ಟಿಸಿದ ನೂತನ ಪದಾಧಿಕಾರಿಗಳ ಪಟ್ಟಿ
5
+ ವಾರಾಂತ್ಯದಲ್ಲಿ ರಜೆ ಇರುವ ಕಾರಣ ತವರಿಗೆ ಹೋಗೋಣ ವೆಂದು ಪಟ್ಟು ಹಿಡಿದಾಗ ಜಗಳ ನಡೆದು, ಇದು ತಾರಕ್ಕಕ್ಕೇರಿತ್ತು. ಇದರಿಂದ ಚೇತನ್ ಮಗುವನ್ನು ಎತ್ತಿಕೊಂಡು ಮನೆಯಿಂದ ಹೊರಗೆ ಹೋಗಿದ್ದರು. ಇದರಿಂದ ಆಕ್ರೋಶಗೊಂಡ ಪವಿತ್ರ ತನ್ನ ಕೋಣೆಗೆ ತೆರಳಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಡರಾತ್ರಿ ಮನೆಗೆ ಬಂದಾಗ ಪತ್ನಿ ನೇಣು ಹಾಕಿಕೊಂಡಿದ್ದನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
6
+ ನೆಲಮಂಗಲ ಟೌನ್ ಪೊಲೀಸರು ಸ್ಥಳಕ್ಕೆ ಬಂದು ಶವವನ್ನು ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿಯನ್ನು ವಿಚಾರಣೆ ನಡೆಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
eesanje/url_46_279_2.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಸುಧಾರಣೆಯಾಗಲಿದೆ : ಸಿದ್ದರಾಮಯ್ಯ
2
+ ಬೆಂಗಳೂರು, ಡಿ.26- ಪಂಚ ಗ್ಯಾರಂಟಿ ಯೋಜನೆಯಿಂದ ಜನರ ಹಣ ಉಳಿತಾಯವಾಗಿದೆ. ಆರ್ಥಿಕ ಚಟುವಟಿಕೆಗಳು ಸುಧಾರಿಸಿವೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದರು. ವಿಧಾನಸೌಧ ಮುಂಭಾಗ ಇಂದು ಬಿಎಂಟಿಸಿ ವತಿಯಿಂದ 100 ಎಲೆಕ್ಟ್ರಿಕ್ ಬಸ್‍ಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
3
+ ಬೆಂಗಳೂರು ನಗರದಲ್ಲಿ ಜನರ ಪ್ರಯಾಣಕ್ಕೆ ಅನೂಕೂಲ ಮಾಡಿಕೊಳ್ಳಲು ಹೊಸದಾಗಿ ನೂರು ಎಲೆಕ್ಟ್ರಾನಿಕ್ ಬಸ್ ಗಳ ಸಂಚಾರ ಆರಂಭಿಸಲಾಗುತ್ತಿದೆ. ಮುಂದಿನ ವರ್ಷದ ಏಪ್ರಿಲ್ ವೇಳೆಗೆ 1600 ಬಸ್ ಗಳು ಸಂಚರಿಸಲಿವೆ, ಈ ಎಲ್ಲ ಬಸ್‍ಗಳು ಹುಬ್ಬಳಿಯ ಕೈಗಾರಿಕಾ ಘಟಕದಲ್ಲಿ ತಯಾರುಗೊಳ್ಳುತ್ತವೆ ಎಂದರು.
4
+ ಪ್ರತಿದಿನ ಬೆಂಗಳೂರಿನಲ್ಲಿ ನಲವತ್ತು ಲಕ್ಷಕ್ಕೂ ಹೆಚ್ಚು ಮಂದಿ ಬಿಎಂಟಿಸಿ ಬಸ್‍ಗಳಲ್ಲಿ ಸಂಚರಿಸುತ್ತಿದ್ದಾರೆ. ನಮ್ಮ ಸರ್ಕಾರ ಜಾರಿಗೆ ತಂದ ಶಕ್ತಿ ಯೋಜನೆಯಲ್ಲಿ ಯಾವ ಜಾತಿ, ಧರ್ಮ ಬೇಧವಿಲ್ಲದೆ ಜನರು ಉಚಿತ ಪ್ರಯಾಣ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಶಕ್ತಿ ಯೋಜನೆಯನ್ನು ವಿರೋಧ ಪಕ್ಷಗಳು ಟೀಕೆ ಮಾಡುತ್ತಾರೆ, ಟೀಕೆ ಮಾಡುವುದು ಸುಲಭ, ಅದಕ್ಕೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಉತ್ತರ ನೀಡಬೇಕು ಎಂದು ಜನತೆಗೆ ಕರೆ ನೀಡಿದರು.
5
+ ಶಕ್ತಿ ಯೋಜನೆಯಿಂದ ಸಾರಿಗೆ ಸಂಸ್ಥೆಗಳಿಗೆ ಲಾಭವಾಗಿದೆ, ಈ ಸಂಸ್ಥೆಗಳ ಉದ್ದೇಶ ಲಾಭ ಮಾಡುವುದಲ್ಲ, ಹಾಗೆಂದು ನಷ್ಟವಾಗಬಾರದು ಎಂದರು. ಶಕ್ತಿ ಯೋಜನೆಯಿಂದ ಪ್ರತಿ ತಿಂಗಳು ನಾಲ್ಕರಿಂದ ಐದು ಸಾವಿರ ರೂಪಾಯಿ ಉಳಿತಾಯವಾಗುತ್ತಿದೆ. ರಾಜ್ಯದ ಏಳುಕೋಟಿ ಜನರಲ್ಲಿ ನಾಲ್ಕು ಕೋಟಿ, ಮೂವತ್ತು ಲಕ್ಷ ಜನ ಪಂಚಖಾತ್ರಿ ಸೌಲಭ್ಯ ಪಡೆಯುತ್ತಿದ್ದಾರೆ. ಆರ್ಥಿಕವಾಗಿ ಹಿಂದುಳಿದವರು ಮುಖ್ಯವಾಹಿನಿಗೆ ಬರಲು ಸಾಧ್ಯವಾಗಿದೆ. ಸಮಾಜದಲ್ಲಿ ಶಕ್ತಿಯಾಗಿ ಬೆಳೆಯಲು ಸಾಧ್ಯವಾಗಿದೆ ಎಂದರು. ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ 148 ಬಸ್ ಗಳು ಸಂಚರಿಸುತ್ತಿವೆ. ಬೆಂಗಳೂರಿನ ಎಲ್ಲಾ ಭಾಗಕ್ಕೂ ಬಸ್ ಗಳನ್ನು ಸಂಚರಿಸುವುದು ನಮ್ಮ ಆದ್ಯತೆ ಎಂದರು.
6
+ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ರಾಜ್ಯದಲ್ಲಿ ಎಲೆಕ್ಟ್ರಿಕ್ ನೀತಿ ರೂಪಿಸಿದ ಮೊದಲ ರಾಜ್ಯ ನಮ್ಮದಾಗಿದೆ, ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆ ದೇಶದಲ್ಲೆ ಜಾರಿಯಾಗಬೇಕು ಎಂದರು. ದುಡ್ಡು ಬ್ಲಡ್ ಸಂಚರಿಸಬೇಕು, ಹಣ ಒಂದು ಕಡೆ ಇದ್ದರೆ ಐಟಿ, ಇಡಿ, ಕಳ್ಳರು ಕಣ್ಣು ಹಾಕುತ್ತಾರೆ, ರಕ್ತವೂ ಹರಿಯದಿದ್ದರೆ ಆರೋಗ್ಯ ಕೆಡುತ್ತದೆ ಎಂದರು. ಕಾಂಗ್ರೆಸ್ ಗ್ಯಾರಂಟಿ ದೇಶಕ್ಕೆ ಮಾದರಿಯಾಗಿವೆ. ನಮ್ಮ ಗ್ಯಾರಂಟಿ ಟೀಕೆ ಮಾಡುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಕೂಡ ಈಗ ಮೋದಿ ಗ್ಯಾರಂಟಿ ಆರಂಭಿಸಿದ್ದಾರೆ. ನಮ್ಮನ್ನು ಅನುಸರಿಸಿದ್ದಕ್ಕೆ ಪ್ರಧಾನಿಯವರಿಗೆ ಅಭಿನಂದನೆ ಎಂದರು.
7
+ ರಾಜ್ಯ ಬಿಜೆಪಿಯಲ್ಲಿ ಮತ್ತೆ ಪಾರುಪತ್ಯ ಸಾಧಿಸಿದ ಬಿಎಸ್‍ವೈ
8
+ ಸಾರಿಗೆ ಸಚಿವ ರಾಮಲಿಂಗ���ರೆಡ್ಡಿ ಮಾತನಾಡಿ, ಜಿಜಿಸಿ ಮಾದರಿಯಲ್ಲಿ ಪ್ರತಿ ಕಿಲೋಮಿಟರ್ ಗೆ 41 ದರದಲ್ಲಿ ದಿನಕ್ಕೆ ಗರಿಷ್ಠ 200 ಕಿಲೋ ಮೀಟರ್ ದೂರ ಸಂಚಾರಕ್ಕೆ ಬಸ್ ಗಳನ್ನು ಲೋಕಾರ್ಪಣೆಗೊಳಿಸಲಾಗುತ್ತಿದೆ. ಮಾರ್ಚ್ ಕೊನೆಗೆ 925 ಬಸ್‍ಗಳು ಬರಲಿವೆ. ಈಗಾಗಲೇ ಹನ್ನೆರಡು ಮೀಟರ್ ನ ಮೂನ್ನೂರು ಬಸ್ ಓಡುತ್ತಿವೆ. ಮಾರ್ಚ್, ಏಪ್ರಿಲ್ ವೇಳೆಗೆ ವಿವಿಧ ಮಾದರಿಯ ಒಟ್ಟು 1751 ಬಸ್ ಗಳು ಸಾರಿಗೆ ಸಂಸ್ಥೆಗೆ ಸೇರ್ಪಡೆಯಾಗಲಿವೆ. ಎಲೆಕ್ಟ್ರಿಕಲ್ ಬಸ್‍ಗಳು ನವಯುಗದ ಸಾರಿಗೆ ಮಾಧ್ಯಮಗಳಾಗಲಿವೆ, ಹೈಡ್ರೋ ಬಸ್‍ಗಳ ಇಂಜಿನ್ ತಯಾರಾಗುತ್ತಿದೆ. ಮುಂದಿನ ಇಪ್ಪತ್ತು ಮೂವತ್ತು ವರ್ಷಗಳಲ್ಲಿ ಡಿಸೇಲ್ ಬಸ್‍ಗಳು ಇರುವುದಿಲ್ಲ. ಸದ್ಯಕ್ಕೆ 800 ಡಿಸೇಲ್ ಬಸ್ ಗಳನ್ನು ಖರೀದಿಸಲಾಗುತ್ತಿದೆ ಎಂದರು.
9
+ ಜನಸಂಖ್ಯೆಗೆ ಅನುಗುಣವಾಗಿ ಹತ್ತು ಸಾವಿರ ಬಸ್‍ಗಳ ಅಗತ್ಯವಿದೆ. ಪ್ರತಿ ದಿನ ಬಿಎಂಟಿಸಿಯಲ್ಲಿ ನಲವತ್ತು ಲಕ್ಷ ಜನ ಸಂಚರಿಸುತ್ತಾರೆ, ಸಾವಿರಾರು ಕೋಟಿ ರೂಪಾಯಿ ಖರ್ಚು ಮಾಡಿರುವ ಮೆಟ್ರೋದಲ್ಲಿ ಆರು ಲಕ್ಷ ಜನ ಮಾತ್ರ ಸಂಚರಿಸುತ್ತಾರೆ ಎಂದರು. ಈವರೆಗೆ ಶಕ್ತಿ ಯೋಜನೆಯಡಿ 120.80 ಕೋಟಿ ಜನ ಪ್ರಯಾಣಿಸಿದ್ದು, 2860 ಕೋಟಿ ರೂಪಾಯಿ ಆಗಿದೆ. ಜೊತೆಗೆ ಒಂಬತ್ತು ಸಾವಿರ ಹುದ್ದೆಗಳ ನೇಮಕಾತಿಗೆ ಮುಖ್ಯಮಂತ್ರಿ ಅನುಮತಿ ನೀಡಿದ್ದಾರೆ, ಫೆಬ್ರವರಿ ಮಾರ್ಚ್ ವೇಳೆಗೆ ಸಾರಿಗೆ ಸೇವೆ ಉತ್ತಮಗೊಳ್ಳಲಿದೆ. ಕೋವಿಡ್ ಗೂ ಮೊದಲೆ ರದ್ದಾಗಿದ್ದ 3900 ಷ್ಯಡ್ಯೂಲ್ ಗಳನ್ನು ಪುನರ್ ಆರಂಭಿಸಲಾಗುವುದು ಎಂದರು.
10
+ ಯುಪಿಯಲ್ಲಿ ಹಸಿರು ಹೈಡ್ರೋಜನ್ ನೀತಿ ಜಾರಿಗೆ ಯೋಗಿ ಸೂಚನೆ
11
+ ವೈದ್ಯಕೀಯ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಸಚಿವ ಪ್ರಿಯಾಂಕ್ ಖರ್ಗೆ, ಯುವಜನಸೇವೆ ಮತ್ತು ಕ್ರೀಡಾ ಸಚಿವ ಬಿ.ನಾಗೇಂದ್ರ, ಉನ್ನತಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಶಾಸಕರಾದ ವಿನಯ್ ಕುಲಕರ್ಣಿ, ಮಧುಮಾದೆಗೌಡ, ಯು.ಬಿ.ವೆಂಕಟೇಶ್, ಟಿ.ಎ.ಶರವಣ, ಗೋವಿಂದರಾಜು, ನಸೀರ್ ಅಹಮದ್, ಯೋಜನಾ ಆಯೋಗದ ಉಪಾಧ್ಯಕ್ಷ ರಾಜೀವ್ ಗೌಡ, ಟಾಟಾ ಸಂಸ್ಥೆ ಸಿಇಒ ಆಖೀಲ್ ಮುಖ್ಯೋಪಾದ್ಯಾಯ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
eesanje/url_46_279_3.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಕಾಂಗ್ರೆಸ್ ಸರ್ಕಾರ ಕನ್ನಡಿಗರ ಮೇಲೆ ಚಪ್ಪಡಿ ಕಲ್ಲು ಹಾಕಿದೆ : ಸಿಎಂಗೆ ಅಶೋಕ್ ತಿರುಗೇಟು
2
+ ಬೆಂಗಳೂರು, ಡಿ.26- ತಮ್ಮ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಕನ್ನಡಿಗರ ತಲೆ ಮೇಲೆ ಬರೀ ಕಲ್ಲಲ್ಲ, ಚಪ್ಪಡಿ ಕಲ್ಲು ಹಾಕುತ್ತಿರುವುದು ಕಟು ಸತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನರಿಗೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್ ಅಶೋಕ್ ತಿರುಗೇಟು ನೀಡಿದ್ದಾರೆ.
3
+ ಅಶೋಕ್ ಆರೋಪಕ್ಕೆ ಅಂಕಿಅಂಶಗಳ ಮೂಲಕ ನಿನ್ನೆ ಸಿದ್ದರಾಮಯ್ಯನವರು ಮಾರುತ್ತರ ನೀಡಿದ್ದರು. ಇದಕ್ಕೆ ಅಷ್ಟೇ ತೀಕ್ಷ್ಣವಾಗಿಯೇ ತಮ್ಮ ಅಕೃತ ಸಾಮಾಜಿಕ ಜಾಣತಾಣ ದಲ್ಲಿ ಸಾಲು ಸಾಲು ಪೋಸ್ಟ್ ಮಾಡಿರುವ ಅಶೋಕ್ ,ಒಂದು ಸುಳ್ಳನ್ನು ನೂರು ಬಾರಿ ಹೇಳಿ ಅದನ್ನು ಸತ್ಯ ಮಾಡುವ ಕಲೆ ತಮಗೆ ಚೆನ್ನಾಗಿ ಕರಗತವಾಗಿದೆ. ಎಷ್ಟಾದರೂ ಸುಳ್ಳೇ ಕಾಂಗ್ರೆಸ್ ಪಕ್ಷದ ಮನೆ ದೇವರಲ್ಲವೇ? ಎಂದು ಕುಹಕವಾಡಿದ್ದಾರೆ.
4
+ 15ನೇ ಹಣಕಾಸು ಆಯೋಗ ತನ್ನ 2020-21ರ ಮಧ್ಯಂತರ ವರದಿಯಲ್ಲಿ ಕರ್ನಾಟಕಕ್ಕೆ 5495 ಕೋಟಿ ರೂ. ಶಿಫಾರಸು ಮಾಡಿದ್ದುದು ನಿಜ. ಆದರೆ 2021-22 ರಿಂದ 2025-26ರವರೆಗಿನ ತನ್ನ ಅಂತಿಮ ವರದಿಯಲ್ಲಿ ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯಕ್ಕೆ ವಿಶೇಷ ಅನುದಾನವನ್ನು ಶಿಫಾರಸು ಮಾಡಿಲ್ಲ. ಇದು ಸತ್ಯಾಂಶ. ತಾವು ಹೇಳಿರುವುದು ಅರ್ಧ ಸತ್ಯವೆಂದು ತಮಗೂ ಗೊತ್ತು. ಅಲ್ಲವೇ? ಎಂದು ಪ್ರಶ್ನೆ ಮಾಡಿದ್ದಾರೆ.
5
+ ಕೋವಿಡ್-19 ಸಾಂಕ್ರಾಮಿಕದ ನಂತರದ ಪರಿಸ್ಥಿತಿಯಲ್ಲಿ ಆರ್ಥಿಕ ಪುನಶ್ಚೇತನಕ್ಕಾಗಿ 2020-21ನೇ ಹಣಕಾಸು ವರ್ಷದಿಂದ ಈವರೆಗೆ ಕರ್ನಾಟಕಕ್ಕೆ 6561.91 ಕೋಟಿ ರೂ. ಮೊತ್ತವನ್ನು 50 ವರ್ಷಗಳ ಬಡ್ಡಿ ರಹಿತ ಸಾಲವಾಗಿ ನೀಡಲಾಗಿದೆ. ಇದಕ್ಕೆ ಕೇಂದ್ರ ಸರ್ಕಾರವೇ ಬಡ್ಡಿ ಭರಿಸುತ್ತದೆ. ಇದು ಸತ್ಯವಲ್ಲವೇ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
6
+ 3 ಹೊಸ ಕ್ರಿಮಿನಲ್ ನ್ಯಾಯ ಮಸೂದೆಗಳಿಗೆ ರಾಷ್ಟ್ರಪತಿ ಅಂಕಿತ
7
+ ಇನ್ನು ತೆರಿಗೆ ಹಂಚಿಕೆ ವಿಷಯಕ್ಕೆ ಬಂದರೆ, 2004-14ರ ನಡುವಿನ ಯುಪಿಎ ಸರ್ಕಾರದ ಅವಧಿಯಲ್ಲಿ ಕರ್ನಾಟಕಕ್ಕೆ 81,795 ಕೋಟಿ ರೂ. ತೆರಿಗೆ ಹಂಚಿಕೆಯಾಗಿತ್ತು. ಎನ್‍ಡಿಎ ಸರ್ಕಾರದ ಅವಧಿಯಲ್ಲಿ 2014-24 (2023, ನವೆಂಬರ್ 17 ರವರೆಗೆ) 2.77 ಲಕ್ಷ ಕೋಟಿ ರೂ.ಗೂ ಹೆಚ್ಚು ಬಿಡುಗಡೆಯಾಗಿದೆ. ಅಂದರೆ ಯುಪಿಎ ಅವಗೆ ಹೋಲಿಸಿದರೆ 239% ಅಥವಾ 3.4 ಪಟ್ಟು ಹೆಚ್ಚಳವಾಗಿದೆ ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ.
8
+ ಅನುದಾನದ ವಿಷಯಕ್ಕೆ ಬಂದರೆ, 2004-14ರ ನಡುವಿನ ಯುಪಿಎ ಸರ್ಕಾರದ ಅವಧಿಯಲ್ಲಿ ಕರ್ನಾಟಕವು 60,779 ಕೋಟಿ ರೂ. ಅನುದಾನವನ್ನು ಪಡೆದಿದ್ದರೆ, ಎನ್‍ಡಿಎ ಸರ್ಕಾರದ ಅವಧಿಯಲ್ಲಿ 2014-24ರ ನಡುವೆ (ಆರ್ಥಿಕ ವರ್ಷ 2022-23 ರವರೆಗೆ) 2.08 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಅನುದಾನ ಪಡೆದಿದೆ. ಅಂದರೆ … ಅವಧಿಗೆ ಹೋಲಿಸಿದರೆ ಕರ್ನಾಟಕಕ್ಕೆ ಸಿಕ್ಕ ಕೇಂದ್ರ ಅನುದಾನ 243% ಅಥವಾ 3.4 ಪಟ್ಟು ಹೆಚ್ಚಳವಾಗಿದೆ ಎಂದು ಅಶೋಕ್ ಹೇಳಿದ್ದಾರೆ.
9
+ 2009ರಿಂದ 2014ರ ಅವಯಲ್ಲಿ ಕರ್ನಾಟಕದವರೇ ಇಬ್ಬರು ರೈಲ್ವೆ ಖಾತೆ ಸಚಿವರಾಗಿದ್ದರೂ ಸಹ ಕರ್ನಾಟಕಕ್ಕೆ ಕೇವಲ 835 ಕೋಟಿ ದೊರೆತಿತ್ತು. ಅದೇ .. ಸರ್ಕಾರ ಬಂದ ಮೇಲೆ 2014-22ರ ಅವಧಿಯಲ್ಲಿ ಒಟ್ಟು 3,424 ಕೋಟಿ ಹಾಗೂ 2023-24 ಒಂದೇ ವರ್ಷದಲ್ಲಿ 7,561 ಕೋಟಿ ಅನುದಾನ ದೊರೆತಿದೆ ಎಂದು ಮಾಹಿತಿ ನೀಡಿದ್ದಾರೆ.
10
+ ಸಾಲ ಮನ್ನಾ ಆಸೆಗಾಗಿ ಬರ ಬರಲಿ ಎಂದು ರೈತರು ಆಸೆ ಪಡುತ್ತಾರೆ ಎಂದು ಉಡಾಫೆ ಮಾತಾಡುವ ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ರೈತರಿಗೆ ಬರ ಪರಿಹಾರದ ವಿಷಯದ ಬಗ್ಗೆ ಮಾತನಾಡುವ ನೈತಿಕತೆಯೇ ಉಳಿದಿಲ್ಲ. ಕೇಂದ್ರ ಸರ್ಕಾರದ ಪ್ರಕ್ರಿಯೆ ಮುಗಿದ ಕೂಡಲೇ ರಾಜ್ಯ ಪಾಲಿನ ಪರಿಹಾರ ತಾನಾಗಿಯೇ ಬಂದೇ ಬರುತ್ತದೆ. ಆದರೆ ರಾಜ್ಯ ಸರ್ಕಾರ ಘೋಷಣೆ ಮಾಡಿರುವ 2000 ರೂಪಾಯಿ ಇನ್ನು ಯಾಕೆ ರೈತರನ್ನು ತಲುಪಿಲ್ಲ? ಉತ್ತರ ಕೊಡಿ ಸಿದ್ದರಾಮಯ್ಯನವರೇ ಎಂದು ತಪರಾಕಿ ಕೊಟ್ಟಿದ್ದಾರೆ.
11
+ ಬಂದೂಕು ತೋರಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ
12
+ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿಗಳಾಗಿ 12 ವರ್ಷಗಳ ಕಾಲ ಒಂದು ರಾಜ್ಯವನ್ನ ಯಶಸ್ವಿಯಾಗಿ ಮುನ್ನಡೆಸಿರುವ ಅನುಭವ ಇದೆ. ರಾಜ್ಯ ಸರ್ಕಾರಗಳ ಹಣಕಾಸಿನ ಇತಿಮಿತಿ, ಅಗತ್ಯತೆಗಳ ಬಗ್ಗೆ ಸಂಪೂರ್ಣ ಅರಿವಿದೆ, ಸಂವೇದನೆಯೂ ಇದೆ. ಒಕ್ಕೂಟ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟಿರುವ ಪ್ರಧಾನಿ ಮೋದಿ ಅವರಿಂದ ಕರ್ನಾಟಕ ಸೇರಿದಂತೆ ಯಾವ ರಾಜ್ಯಕ್ಕೂ ಎಂದಿಗೂ ಅನ್ಯಾಯವಾಗುವುದಿಲ್ಲ ಎಂದು ಅಶೋಕ್ ತಿಳಿಸಿದ್ದಾರೆ.
13
+ ಮುಖ್ಯಮಂತ್ರಿಯಂತಹ ಜವಾಬ್ದಾರಿಯುತ ಸ್ಥಾನದಲ್ಲಿರುವವರು, 14 ಬಾರಿ ಬಜೆಟ್ ಮಂಡಿಸಿರುವ ಅನುಭವ ಇರುವ ತಾವು ಆಂಕಿ-ಅಂಶಗಳನ್ನು ಅಧ್ಯಯನ ಮಾಡಿ, ವಾಸ್ತವಾಂಶ ಅರಿತು ಮಾತನಾಡಬೇಕು ಸಿದ್ದರಾಮಯ್ಯನವರೇ. ಎಲ್ಲವನ್ನೂ ರಾಜಕೀಯ ದೃಷ್ಟಿಯಿಂದ ನೋಡಿ ಜನರನ್ನು ದಿಕ್ಕು ತಪ್ಪಿಸುವ ಪ್ರಯತ್ನ ತಮಗೆ ಶೋಭೆ ತರುವುದಿಲ್ಲ ಎಂದು ಕಿಡಿಕಾರಿದ್ದಾರೆ.
eesanje/url_46_279_4.txt ADDED
@@ -0,0 +1,6 @@
 
 
 
 
 
 
 
1
+ ರಾಜ್ಯದಲ್ಲಿ ಪ್ರತಿ ದಿನ 5 ಸಾವಿರ ಕೊರೊನಾ ಟೆಸ್ಟ್
2
+ ಬೆಂಗಳೂರು, ಡಿ.26- ರಾಜ್ಯದಲ್ಲಿ ಕೊರೋನಾ ಟೆಸ್ಟಿಂಗ್ ಸಂಖ್ಯೆಯನ್ನು 5 ಸಾವಿರಕ್ಕೆ ನಾಳೆಯಿಂದ ಹೆಚ್ಚಳ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ಹೊಸತಳಿ ಜೆಎನ್-1 ಪತ್ತೆಯಾಗಿದ್ದು, ಅದನ್ನು ನಿಯಂತ್ರಿಸುವ ಬಗ್ಗೆ ತಜ್ಞರ ಸಲಹೆ ಪಡೆದು ಮುಂದಿನ ನಿರ್ಧಾರ ತೆಗೆದುಕೊಳ್ಳ ಲಾವುದು ಎಂದು ತಿಳಿಸಿದರು.
3
+ ರಾಜ್ಯದಲ್ಲಿ 34 ಪಾಸಿಟೀವ್ ಕೇಸ್ ಬಂದಿರುವ ಬಗ್ಗೆ ಮಾಹಿತಿ ಇದೆ. ತಜ್ಞರ ಸಭೆಯಲ್ಲಿ ಸಲಹೆ ಪಡೆದು ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು. ನಾವು ಕೊರೊನಾ ಟೆಸ್ಟ್ ಹೆಚ್ಚಳ ಮಾಡುತ್ತಿದ್ದೇವೆ. ನಿನ್ನೆ 3500 ಪರೀಕ್ಷೆ ಮಾಡಿದ್ದೇವೆ ಎಂದರು. ಕೊರೊನಾ ಲಸಿಕೆ ನೀಡುವ ಬಗ್ಗೆ ಚರ್ಚೆ ಮಾಡಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು. ಮಾಸ್ಕ ಧರಿಸಿದ್ದರೆ ಒಳ್ಳೆಯದು ಎಂದು ಹೇಳಿದ್ದೇವೆ. ಆದರೆ, ಮಾಸ್ಕ ಕಡ್ಡಾಯ ಮಾಡಿಲ್ಲ. ಕೊರೋನಾ ಮಾರ್ಗಸೂಚಿಯಲ್ಲಿ ಮಾರ್ಪಡು ಮಾಡುವ ಸಾಧ್ಯತೆ ಇದ್ದರೆ ಚರ್ಚೆ ಮಾಡಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು.
4
+ 3 ಹೊಸ ಕ್ರಿಮಿನಲ್ ನ್ಯಾಯ ಮಸೂದೆಗಳಿಗೆ ರಾಷ್ಟ್ರಪತಿ ಅಂಕಿತ
5
+ ಬೆಂಗಳೂರಿನಲ್ಲಿ ಮೂರು ಕಡೆ ಜೆನೋಮಿಕ್ ಸಿಕ್ವೇನ್ಸ್ ಲ್ಯಾಬ್‍ಗಳು ಇವೆ. ಒಂದು ಬಾರಿಗೆ 99 ಟೆಸ್ಟ್ ಮಾಡಬೇಕಾಗುತ್ತದೆ. ಇದಕ್ಕೆ ಒಮ್ಮೆಗೆ 15 ಲಕ್ಷ ರೂ. ಖರ್ಚು ಆಗಲಿದೆ. ಕೊರೊನಾ ಟೆಸ್ಟ್ïಗೆ ಅಗತ್ಯವಿರುವ ಕಿಟ್‍ಗಳು ಲಭ್ಯ ಇವೆ. ಸದ್ಯಕ್ಕೆ ಟೆಸ್ಟ್ ಪ್ರಮಾಣ ಹೆಚ್ಚಳ ಮಾಡಲಾಗುವುದು ಎಂದರು.
6
+ ರಾಜ್ಯದ ಜನರು ಕೋವಿಡ್ ಸಂಬಂಧ ಆತಂಕ ಪಡುವ ಅಗತ್ಯವಿಲ್ಲ. ಈ ಉಪತಳಿ ಅಪಾಯಕಾರಿ ಅಲ್ಲ ಎಂಬುದನ್ನು ತಜ್ಞರು ಈಗಾಗಲೇ ಹೇಳಿದ್ದಾರೆ. ಸೋಂಕು ಹೆಚ್ಚಿನ ಸಂಖ್ಯೆಯಲ್ಲಿ ಹರಡದಂತೆ ನಾವು ಎಚ್ಚರಿಕೆ ವಹಿಸಬೇಕಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಸ್ವಲ್ಪ ಮುನ್ನೆಚ್ಚರಿಕೆ ವಹಿಸಬೇಕು. ಆರೋಗ್ಯ ಇಲಾಖೆಯಿಂದ ಕೂಡ ಈಗಾಗಲೇ ಎಲ್ಲ ರೀತಿಯ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ. ಕೋವಿಡ್ ಎದುರಿಸಲು ಸನ್ನದ್ದರಾಗುವಂತೆ ಎರಡು ಮೂರು ಬಾರಿ ಸಭೆ ನಡೆಸಿ ಆಸ್ಪತ್ರೆಗಳಿಗೆ ಹಾಗೂ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ಹೇಳಿದರು.
eesanje/url_46_279_5.txt ADDED
@@ -0,0 +1,7 @@
 
 
 
 
 
 
 
 
1
+ ಹಿಜಾಬ್ ನಿಷೇಧ ವಾಪಸಾತಿ ಬಗ್ಗೆ ಡಿಕೆಶಿ ವ್ಯತಿರಿಕ್ತ ಹೇಳಿಕೆ
2
+ ಬೆಂಗಳೂರು, ಡಿ.25- ಇನ್ನೂ ಮುಂದೆ ಹಿಜಾಬ್ ಇರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವ್ಯತಿರಿಕ್ತವಾಗಿ ಪ್ರತಿಕ್ರಿಯಿಸಿದ್ದು, ಆ ಬಗ್ಗೆ ನಾವಿನ್ನೂ ಯೋಚನೆ ಮಾಡಿಲ್ಲ ಎಂದಿದ್ದಾರೆ.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಹಿಜಾಬ್ ವಿಷಯವನ್ನು ಅನಗತ್ಯವಾಗಿ ದೊಡ್ಡದು ಮಾಡಲಾಗಿದೆ. ಆ ಕುರಿತಂತೆ ನಾವಿನ್ನೂ ಯೋಜನೆಯನ್ನೇ ಮಾಡಿಲ್ಲ. ಮುಖ್ಯಮಂತ್ರಿಯವರು ಅದಿನ್ನೂ ಚರ್ಚೆಗೆ ಬರುತ್ತಿದೆ, ಚರ್ಚೆ ಮಾಡಿದ್ದಾರೆ ಎಂದಿದ್ದಾರೆ. ಅದು ಇನ್ನೂ ಎಲ್ಲಿದೆ ಎಂದು ಗೋತ್ತಿಲ್ಲ ಎಂದು ತೊಡವರಿಸಿದರು.
3
+ ಕೃಷಿ ಸಚಿವ ಶಿವಾನಂದ ಪಾಟೀಲ್ ಅವರ ವಿವಾದಿತ ಹೇಳಿಕೆ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ, ಅವರನ್ನೇ ಕೇಳಿ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.ಬೆಂಗಳೂರು ನಗರಕ್ಕೆ ಸಂಬಂಧ ಪಟ್ಟಂತೆ ಗುತ್ತಿಗೆ ಆಧಾರಿತ ಶಿಕ್ಷಕರು ಇಂದು ಬೆಳಗ್ಗೆ ತಮ್ಮನ್ನು ಭೇಟಿ ಮಾಡಿ, ಸೇವೆಯಲ್ಲಿ ಮುಂದುವರೆಸುವಂತೆ ಮನವಿ ಮಾಡಿದ್ದಾರೆ. ಬಿಬಿಎಂಪಿ ವ್ಯಾಪ್ತಿಯ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಕುಸಿದಿದೆ. ಅದನ್ನು ಸುಧಾರಿಸಲು ಶಿಕ್ಷಣ ಇಲಾಖೆ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಹೇಳಿದ್ದೇನೆ.
4
+ ತರಬೇತಿ ಪಡೆದ ಶಿಕ್ಷಕರನ್ನು ನೇಮಿಸಿಕೊಳ್ಳಬೇಕು. ಚೆನ್ನಾಗಿ ಪಾಠ ಮಾಡುವವರನ್ನು ಪರಿಶೀಲಿಸಿ ಅವಕಾಶ ಮಾಡಿಕೊಡುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದ್ದು, ಬಡವರ ಮಕ್ಕಳು ಓದುವ ಸರ್ಕಾರಿ ಶಾಲೆಯಲ್ಲಿ ಉತ್ತಮ ಶಿಕ್ಷಣ ಸಿಗಬೇಕಿದೆ, ಗುಣಮಟ್ಟ ಕಾಯ್ದುಕೊಳ್ಳಬೇಕು. ಅದಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಹೊರಗುತ್ತಿಗೆ ಆಧಾರದಲ್ಲಿ ಶಿಕ್ಷಕರನ್ನು ನಿಯೋಜಿಸುವ ಜವಾಬ್ದಾರಿಯನ್ನು ಸೆಕ್ಯೂರಿಟಿ ಏಜೆನ್ಸಿಗೆ ಹೊರ ಗುತ್ತಿಗೆ ನೀಡಬಾರದು ಎಂದು ಹೇಳಿರುವುದಾಗಿ ತಿಳಿಸಿದರು.
5
+ ಕನ್ನಡೇತರ ಭಾಷಾ ನಾಮಫಲಕಗಳನ್ನು ತೆರವು ಮಾಡುವ ಸಂಬಂಧ ಕನ್ನಡ ಪರ ಸಂಘಟನೆಗಳು ಹೋರಾಟ ಮಾಡುವುದು ತಪ್ಪಲ್ಲ. ಆದರೆ ಈ ಸಂದರ್ಭದಲ್ಲಿ ಕಾನೂನು ಪಾಲನೆ ಮಾಡಬೇಕು. ದಾಳಿ ಮಾಡಲು ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ ಎಂದರು.ರಾಜ್ಯದಲ್ಲಿ ಉದ್ಯಮ ನಡೆಸುವವರಾಗಲಿ, ವ್ಯಾಪಾರ ಮಾಡುವವರಾಗಲಿ ಶೇ.60ರಷ್ಟು ಆದ್ಯತೆಯನ್ನು ಕನ್ನಡ ನಾಮಫಲಕಗಳಿಗೆ ನೀಡಬೇಕು ಎಂಬ ನಿಯಮ ಇದೆ. ಎಷ್ಟೇ ದೊಡ್ಡವರಾದರೂ ಅದನ್ನು ಪಾಲನೆ ಮಾಡಲೇಬೇಕು. ಮಾಧ್ಯಮದವರು ಕೂಡ ಕನ್ನಡ ಬಳಕೆಗೆ ಒತ್ತು ನೀಡಬೇಕು ಎಂದು ತಿಳಿಸಿದರು.
6
+ ಕಿರಿಕ್ ಪಾರ್ಟಿ : ಕಲ್ಲಿನಿಂದ ಜಜ್ಜಿ ಸ್ನೇಹಿತನ ಕೊಲೆ
7
+ ರಾಷ್ಟ್ರ ರಾಜಕಾರಣದಲ್ಲಿ ಇಂಡಿಯಾ ಮೈತ್ರಿ ಕೂಟದಲ್ಲಿ ಒಡಕು ಮೂಡುತ್ತಿದೆ ಎಂದು ಬಿಜೆಪಿಯವರು ಹೇಳುತ್ತಿರುವುದು ಆಧಾರ ರಹಿತ, ಎನ್ಡಿಎ ಮೈತ್ರಿಕೂಟದಲ್ಲೇ ಒಡಕು ಮೂಡಲಿದೆ, ಕಾ���ು ನೋಡಿ ಎಂದರು. ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸಚಿವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ. ಸಚಿವ ಸಂಪುಟ ಸಭೆಯ ಬಳಿಕ ಈ ಬಗ್ಗೆ ನಾನು ಮತ್ತು ಮುಖ್ಯಮಂತ್ರಿಯವರು ಸಚಿವರ ಜೊತೆ ಚರ್ಚೆ ಮಾಡಿದ್ದೇವೆ. ಎಲ್ಲರಿಗೂ ಕಾಲಮಿತಿ ನಿಗದಿ ಮಾಡಿದ್ದೇವೆ. ಕೆಲವರು ಈಗಾಗಲೇ ವರದಿ ನೀಡಿದ್ದಾರೆ, ಇನ್ನೂ ಕೆಲವರು ವರದಿ ನೀಡಬೇಕಿದೆ. ಸಚಿವರ ವರದಿ ಆಧರಿಸಿ ಮುಂದಿನ ಕ್ರಮ ಜರುಗಿಸುತ್ತೇವೆ ಎಂದರು.
eesanje/url_46_279_6.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ ಆಳವಾಗಿ ಪರಿಶೀಲಿಸಿದ ನಂತರ ಹಿಜಾಬ್ ನಿಷೇಧ ವಾಪಸ್ ಕುರಿತು ನಿರ್ಧಾರ : ಜಿ.ಪರಮೇಶ್ವರ್
2
+ ಬೆಂಗಳೂರು,ಡಿ.25- ರಾಜ್ಯದ್ಯಾಂತ ಭಾರೀ ವಿವಾದದ ಕಿಡಿ ಹೊತ್ತಿಸಿರುವ ಹಿಜಾಬ್ ನಿಷೇಧ ಹಿಂಪಡೆಯುವ ಕುರಿತು ನಾವು ಆಳವಾಗಿ ಪರಿಶೀಲಿಸಿದ ನಂತರ ನಿರ್ಬಂಧಗಳನ್ನು ತೆಗೆದುಹಾಕುವ ಬಗ್ಗೆ ಸರ್ಕಾರ ನಿರ್ಧರಿಸುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಎರಡು ದಿನಗಳ ಹಿಂದೆ ಶಾಲಾ – ಕಾಲೇಜುಗಳಲ್ಲಿ ಹಿಜಾಬ್ ಧರಿಸುವ ನಿಷೇಧವನ್ನು ಹಿಂಪಡೆಯುವುದಾಗಿ ಹೇಳಿದ್ದು, ಭಾರೀ ವಿವಾದವನ್ನೇ ಸೃಷ್ಟಿಸಿದೆ.
3
+ ಇದೀಗ ಹಿಜಾಬ್ ನಿಷೇಧದ ಕುರಿತು ನಡೆಯುತ್ತಿರುವ ಚರ್ಚೆಯ ನಡುವೆ, ಎಎನ್ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿರುವ ಅವರು, ನಾವು ಹಿಜಾಬ್ ಬಗ್ಗೆ ಯಾವುದೇ ಆದೇಶ ನೀಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹೇಳಿದ್ದರು. ನಾವು ಎಲ್ಲಾ ಆಯಮಗಳಲ್ಲಿ ಪರಿಶೀಲಿಸುತ್ತೇವೆ. ಇದನ್ನು ಆಳವಾಗಿ ಪರಿಶೀಲಿಸಿದ ನಂತರ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದ್ದಾರೆ.
4
+ ಲೋಕಸಭೆ ಚುನಾವಣೆ ವೇಳೆ ಬಿಜೆಪಿ ಈ ವಿಷಯಗಳನ್ನು ಅಸ್ತ್ರವಾಗಿ ಬಳಸಿಕೊಳ್ಳಲು ಯತ್ನಿಸುತ್ತಿದೆ. ಆದರೆ ಅದು ಕೆಲಸ ಮಾಡುವುದಿಲ್ಲ ಎಂದಿದ್ದಾರೆ. ರಾಜ್ಯದಲ್ಲಿ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿಷೇಸುವ ಆದೇಶವನ್ನು ತಮ್ಮ ಸರ್ಕಾರ ಹಿಂಪಡೆಯಲಿದೆ ಎಂದು ಸಿದ್ದರಾಮಯ್ಯ ಹೇಳಿದ ನಂತರ ಕರ್ನಾಟಕದಲ್ಲಿ ರಾಜಕೀಯ ಸಂಘರ್ಷವೇ ಎದ್ದಿದೆ.
5
+ ಬಟ್ಟೆಯ ಆಯ್ಕೆ ಒಬ್ಬರ ಸ್ವಂತ ಹಕ್ಕು. ಹಿಜಾಬ್ ನಿಷೇಧವನ್ನು ಹಿಂತೆಗೆದುಕೊಳ್ಳಲು ನಾನು ನಿರ್ದೇಶನ ನೀಡಿದ್ದೇನೆ. ಪ್ರಧಾನಿ ಮೋದಿಯವರ ¿ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಬೋಗಸ್. ಬಿಜೆಪಿಯು ಬಟ್ಟೆ, ಉಡುಗೆ ಮತ್ತು ಜಾತಿಯ ಆಧಾರದ ಮೇಲೆ ಜನರು ಮತ್ತು ಸಮಾಜವನ್ನು ವಿಭಜಿಸುತ್ತಿದೆ ಎಂದು ಮೈಸೂರು ಜಿಲ್ಲೆ ನಂಜನಗೂಡಿನ ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿಗಳು ಹೇಳಿದ್ದರು.
6
+ ಸಿದ್ದರಾಮಯ್ಯನವರ ಹೇಳಿಕೆಗೆ ಬಿಜೆಪಿಯಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಸಿದ್ದರಾಮಯ್ಯ ಅವರು ತಮ್ಮ ಸರ್ಕಾರದ ವೈಫಲ್ಯಗಳನ್ನು ಮರೆಮಾಚುವ ಜತೆಗೆ ಕೇವಲ ರಾಜಕೀಯ ಲಾಭಕ್ಕಾಗಿ ಈ ವಿಷಯ ಪ್ರಸ್ತಾಪಿಸುತ್ತಿದ್ದಾರೆ ಎಂದು ಬಿಜೆಪಿ ಮುಖಂಡ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದರು.
7
+ ವಿಧಾನಪರಿಷತ್‍ ವಿಪಕ್ಷ ನಾಯಕ-ಉಪನಾಯಕರನ್ನು ನೇಮಿಸಿದ ಬಿಜೆಪಿ, ಯತ್ನಾಳ್‌ಗೆ ಮತ್ತೆ ಹಿನ್ನಡೆ
8
+ ರಾಜ್ಯದಾದ್ಯಂತ ಹಿಜಾಬ್ ಅನ್ನು ನಿಷೇಸಲಾಗಿಲ್ಲ ಆದರೆ ಡ್ರೆಸ್ ಕೋಡ್ ಇರುವಲ್ಲಿ ಅನುಮತಿಸುವುದಿಲ್ಲ. ಮುಸ್ಲಿಂ ಮಹಿಳೆಯರಿಗೆ ಎಲ್ಲೆಡೆ ಹಿಜಾಬ್ ಧರಿಸಲು ಅನುಮತಿ ಇದೆ.ಹಿಜಾಬ್ ಅನ್ನು ನಿಷೇಸದಿರುವಾಗ ನಿಷೇಧವನ್ನು ತೆಗೆದುಹಾಕುವ ಪ್ರಶ್ನೆ ಎಲ್ಲಿದೆ ಎಂದು ಪ್ರಶ್ನಿಸಿದ್ದರು.
9
+ ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆಯುವ ಬಗ್ಗೆ ಸಿಎಂ ಘೋಷಣೆ ಮಾಡಿದ ಬೆನ್ನಲ್ಲೇ ರಾಜ���ಯದಲ್ಲಿ ಹೊಸ ಧರ್ಮ ದಂಗಲ್ ಶುರುವಾಗುವ ಆತಂಕ ಎದುರಾಗಿದೆ. ಈ ಬೆಳವಣಿಗೆಯಿಂದ ಸದ್ಯಕ್ಕೆ ವಿವಾದವನ್ನು ತಣ್ಣಗಾಗಿಸಲು ಸಿದ್ದರಾಮಯ್ಯನವರ ಮೇಲೆ ಒತ್ತಡ ಹೇರಲಾಗುತ್ತಿದೆ ಎಂಬ ಮಾಹಿತಿಯೊಂದು ಲಭಿಸಿದೆ.
10
+ ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಸದ್ಯಕ್ಕೆ ಯಾವುದೇ ಅಕೃತ ಆದೇಶ ಬೇಡ ಎಂದು ಸಚಿವರು ಮನವಿ ಮಾಡಿದ್ದಾರೆ. ಹಿಜಾಬ್ ನಿಷೇಧದ ಆದೇಶ ಹೊರಡಿಸಿದರೆ ಶಾಲೆಗಳಲ್ಲಿ ಕೇಸರಿ ಶಾಲ್ ಅಭಿಯಾನ ಜೋರಾಗಬಹುದು ಎಂದು ಸಿದ್ದರಾಮಯ್ಯ ಸಂಪುಟ ಸದಸ್ಯರು ಆತಂಕ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
11
+ ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆದರೂ ಏನೇ ಆದರೂ ನಮಗಾಗುವ ರಾಜಕೀಯ ಲಾಭ ಇಷ್ಟೆ. ಅದಕ್ಕೆ ಪರ್ಯಾಯವಾಗಿ ಆದೇಶ ಹೊರಡಿಸಿದರೆ ಬಿಜೆಪಿಗೆ ಆಗುವ ಲಾಭವೇ ಹೆಚ್ಚಾಗುತ್ತದೆ. ಹೀಗಾಗಿ ಸದ್ಯಕ್ಕೆ ಯಾವ ಆದೇಶವೂ ಬೇಡ, ಯಾವುದೇ ಘೋಷಣೆ ಬೇಡ ಎಂದು ಸಚಿವರು ಒತ್ತಡ ಹಾಕಿದ್ದಾರೆ ಎನ್ನಲಾಗಿದೆ.
12
+ ಹಿಜಬ್ ನಿಷೇಧ ಆದೇಶ ವಾಪಸ್ ಘೋಷಣೆಯನ್ನು ಸಿಎಂ ಸಿದ್ದರಾಮಯ್ಯ ಅವರು ಎರಡು ದಿನಗಳ ಹಿಂದೆ ಮೈಸೂರಿನಲ್ಲಿ ಮಾಡಿದ್ದರು. ಹೀಗಾಗಿ ಅಕೃತ ಆದೇಶ ಇದುವರೆಗೂ ಮಾಡಿಲ್ಲ, ಆದರೆ ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ಈ ರಿಸ್ಕ್ ಬೇಡ ಎಂಬ ಒತ್ತಡ ತರತೊಡಗಿದ್ದಾರೆ. ಆ ಮೂಲಕ ಸಿದ್ದರಾಮಯ್ಯ ಘೋಷಣೆ ನಂತರವೂ ಅಧಿಕೃತ ಆದೇಶಕ್ಕೆ ಸ್ವತ: ಸಂಪುಟ ಸಹುದ್ಯೋಗಿಗಳಿಂದಲೇ ವಿರೋಧ ವ್ಯಕ್ತವಾಗತೊಡಗಿದೆ ಎನ್ನಲಾಗಿದೆ.
13
+ ಫೆಬ್ರವರಿ 2022ರಲ್ಲಿ, ರಾಜ್ಯದ ಉಡುಪಿ ಜಿಲ್ಲೆಯ ಸರ್ಕಾರಿ ಕಾಲೇಜು ತರಗತಿಯೊಳಗೆ ಹಿಜಾಬ್ ಅನ್ನು ನಿಷೇಸಿತು ಮತ್ತು ಅನೇಕ ಇತರ ಸಂಸ್ಥೆಗಳು ಇದನ್ನು ಅನುಸರಿಸಿದವು. ನಂತರ ಆಗಿನ ಬಸವರಾಜ ಬೊಮ್ಮಾಯಿ ಸರ್ಕಾರವು ಕ್ಯಾಂಪಸ್ಗಳಲ್ಲಿ ಹಿಜಾಬ್ ಅನ್ನು ನಿಷೇಸುವ ಆದೇಶವನ್ನು ಹೊರಡಿಸಿತು, ಸಮಾನತೆ, ಸಮಗ್ರತೆ ಮತ್ತು ಸಾರ್ವಜನಿಕ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವ ಯಾವುದೇ ಉಡುಪುಗಳನ್ನು ಅನುಮತಿಸಲಾಗುವುದಿಲ್ಲ ಎಂದು ಹೇಳಿದೆ.
14
+ ಈ ಆದೇಶವು ಅನೇಕ ಪ್ರತಿಭಟನೆಗಳು ಮತ್ತು ಅಶಾಂತಿಗೆ ಕಾರಣವಾಯಿತು, ಇದು ರಾಜ್ಯದಲ್ಲಿ ಸಂಸ್ಥೆಗಳನ್ನು ಮುಚ್ಚಲು ಕಾರಣವಾಯಿತು. ವಿಷಯವು ಸುಪ್ರೀಂ ಕೋರ್ಟ್ಗೆ ತಲುಪಿತು, ಅದು ಕಳೆದ ವರ್ಷ ಅಕ್ಟೋಬರ್ 13ರಂದು ವಿಭಜನೆಯ ತೀರ್ಪು ಪ್ರಕಟಿಸಿತು. ವಿಭಾಗೀಯ ಪೀಠವು ಈ ವಿಷಯವನ್ನು ದೊಡ್ಡ ಪೀಠಕ್ಕೆ ಉಲ್ಲೇಖಿಸಲು ಮುಖ್ಯ ನ್ಯಾಯಮೂರ್ತಿಗೆ ಮನವಿ ಮಾಡಿತು ಮತ್ತು ಅದು ಉನ್ನತ ನ್ಯಾಯಾಲಯದ ಮುಂದೆ ಹಿಜಾಬ್ ಕೇಸು ಇನ್ನೂ ಬಾಕಿ ಉಳಿದಿದೆ.
eesanje/url_46_279_7.txt ADDED
@@ -0,0 +1,9 @@
 
 
 
 
 
 
 
 
 
 
1
+ ವಿಧಾನಪರಿಷತ್‍ ವಿಪಕ್ಷ ನಾಯಕ-ಉಪನಾಯಕರನ್ನು ನೇಮಿಸಿದ ಬಿಜೆಪಿ, ಯತ್ನಾಳ್‌ಗೆ ಮತ್ತೆ ಹಿನ್ನಡೆ
2
+ ಬೆಂಗಳೂರು: ಕಳೆದ ಹತ್ತು ತಿಂಗಳಿನಿಂದ ಖಾಲಿ ಇದ್ದ ವಿಧಾನಪರಿಷತ್‍ನ ಪ್ರತಿಪಕ್ಷದ ನಾಯಕರಾಗಿ ಮಾಜಿ ಸಚಿವ ಹಿರಿಯ ಮುಖಂಡ ಕೋಟಾ ಶ್ರೀನಿವಾಸ್ ಪೂಜಾರಿ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ ಪರಿಷತ್‍ನ ಉಪನಾಯಕರಾಗಿ ಅಚ್ಚರಿ ಎಂಬಂತೆ ಕಲ್ಬುರ್ಗಿಯ ಲಂಬಾಣಿ ಸಮುದಾಯದ ಸುನೀಲ್ ವಲ್ಲಾಪುರೆ ಅವರನ್ನು ನೇಮಿಸಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸೂಚನೆ ಮೇರೆಗೆ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸೋಮವಾರ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
3
+ ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಸ್ಥಾನದ ಮೇಲೆ ಹಲವರು ಕಣ್ಣಿಟ್ಟಿದ್ದರು. ಸದಸ್ಯರಾದ ಶಶಿಲ್ ನಮೋಶಿ, ಛಲವಾದಿ ನಾರಾಯಣಸ್ವಾಮಿ, ತೇಜಸ್ವಿನಿ ರಮೇಶ್, ನಾರಾಯಣಸ್ವಾಮಿ , ರಘುನಾಥ್ ಮಲ್ಕಾಪುರೆ ಸೇರಿದಂತೆ ಹಲವು ಹೆಸರುಗಳು ಕೇಳಿಬಂದಿದ್ದವು. ಅಂತಿಮವಾಗಿ ಸಂಘ ಪರಿವಾರದ ಹಿನ್ನಲೆ, ಕರಾವಳಿಯ ಹಿರಿಯ ನಾಯಕರಾಗಿರುವ ಕೋಟಾ ಶ್ರೀನಿವಾಸ್ ಪೂಜಾರಿ ಅವರನ್ನು ನೇಮಕ ಮಾಡಲಾಗಿದೆ. ಈ ಹಿಂದೆಯೂ ಅವರು ಪ್ರತಿಪಕ್ಷದ ನಾಯಕರಾಗಿ ಕೆಲಸ ಮಾಡಿದ ಅನುಭವವಿದೆ.
4
+ ವಾಹನ ಸವಾರರಿಗೆ ಗುಡ್ ನ್ಯೂಸ್, ಫಾಸ್ಟ್ ಟ್ಯಾಗ್ ಕಿರಿಕಿರಿಗೆ ಮುಕ್ತಿ
5
+ ವಿಶೇಷವೆಂದರೆ ಇದರ ಆಯ್ಕೆಯಲ್ಲೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಪ್ರಭಾವ ಕೆಲಸ ಮಾಡಿರುವುದು ಗೋಚರಿಸಿದೆ. ಪ್ರತಿಪಕ್ಷ ನಾಯಕ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಎನ್.ರವಿಕುಮಾರ್ ಅವರನ್ನು ಮುಖ್ಯ ಸಚೇತಕರನ್ನಾಗಿ ನೇಮಿಸಲಾಗಿದೆ. ಈ ಮೂವರು ಕೂಡ ಯಡಿಯೂರಪ್ಪನವರ ಆಪ್ತರು.
6
+ ಯತ್ನಾಳ್‍ಗೆ ಹಿನ್ನಡೆ:ಸ್ವಪಕ್ಷದವರ ವಿರುದ್ದವೇ ಗುಡುಗುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‍ಗೆ ಮತ್ತೆ ಭಾರೀ ಹಿನ್ನಡೆಯಾಗಿದೆ. ಈ ಹಿಂದೆ ವಿಧಾನಸಭೆಯ ಪ್ರತಿಪಕ್ಷದ ನಾಯಕನ ಸ್ಥಾನದ ಮೇಲೆ ಕಣ್ಣಿಟ್ಟು ನಿರಾಶೆಯಾಗಿದ್ದ ಅವರಿಗೆ ಮತ್ತೆ ಮುಖಭಂಗವಾಗಿದೆ.
7
+ ಏಕೆಂದರೆ ಯತ್ನಾಳ್ ಆಪ್ತವಲಯದಲ್ಲ ಗುರುತಿಸಿಕೊಂಡಿದ್ದ ಪಂಚಮಸಾಲಿ ಸಮುದಾಯದ ಯುವಕ ಅರವಿಂದ್ ಬೆಲ್ಲದ್ ಅವರನ್ನು ವಿಧಾನಸಭೆಯ ಉಪನಾಯಕರನ್ನಾಗಿ ಪಕ್ಷ ನೇಮಿಸಿದೆ.ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕೆಂದು ಹೋರಾಟ ನಡೆಸುತ್ತಿರುವಾಗ ಯತ್ನಾಳ್ ಜೊತೆಗೆ ಬೆಲ್ಲದ್ ಕೂಡ ಕೈ ಜೋಡಿಸಿದ್ದರು. ಇದೀಗ ಪಕ್ಷವು ಯತ್ನಾಳ್‍ಗೆ ಠಕ್ಕರ್ ಕೊಡಲೆಂದೇ ಕಿತ್ತೂರು ಕರ್ನಾಟಕಕ್ಕೆ ಸೇರಿದ ಬೆಲ್ಲದ್ ಅವರನ್ನು ಉಪನಾಯಕರನ್ನಾಗಿ ನೇಮಿಸಿದೆ.
8
+ ಇನ್ನು ಮುಖ್ಯ ಸಚೇತಕ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಶಾಸಕರಾದ ಸತೀಶ್ ರೆಡ್ಡಿ, ಎಸ್.ಆರ್.ವಿಶ್ವನಾಥ್ ಮತ್ತಿತರರಿಗೆ ತೀವ್ರ ನಿರಾಸೆಯಾಗಿದೆ. ಇಲ್ಲಿಯೂ ಕೂಡ ಅಚ್ಚರಿ ಎಂಬಂತೆ ಶಾಸಕ ದೊಡ್ಡನಗೌಡರ್ ಪಾಟಿಲ್ ಅವರನ್ನು ಮುಖ್ಯ ಸಚೇತಕರನ್ನಾಗಿ ನೇಮಿಸಲಾಗಿದೆ.
9
+ ಎರಡು ದಿನಗಳ ಹಿಂದಷ್ಟೇ ಪಕ್ಷದ ಪದಾಕಾರಿಗಳ ಆಯ್ಕೆಯಲ್ಲಿ ಮೇಲುಗೈ ಸಾಸಿದ್ದ ಯಡಿಯೂರಪ್ಪ ಇದೀಗ ಪ್ರತಿಪಕ್ಷದ ನಾಯಕ, ಉಪನಾಯಕರ ಆಯ್ಕೆಯಲ್ಲಿ ತಮ್ಮ ಹಿಡಿತವನ್ನು ಕಾಯ್ದುಕೊಂಡಿದ್ದಾರೆ. ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಯ್ಕೆಯಲ್ಲೂ ಯಡಿಯೂರಪ್ಪ ಪ್ರಭಾವ ಸ್ಪಷ್ಟವಾಗಿತ್ತು.
eesanje/url_46_279_8.txt ADDED
@@ -0,0 +1,7 @@
 
 
 
 
 
 
 
 
1
+ ಕಾಂಗ್ರೆಸ್‍ಗೆ ತೀವ್ರ ಮುಜುಗರವನ್ನುಂಟುಮಾಡಿದ ಸಚಿವ ಶಿವಾನಂದ ಪಾಟೀಲ್ ಹೇಳಿಕೆ
2
+ ಬೆಂಗಳೂರು,ಡಿ.25- ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಹೇಳಿಕೆ ಕಾಂಗ್ರೆಸ್‍ಗೆ ತೀವ್ರ ಮುಜುಗರ ಉಂಟು ಮಾಡಿದೆ. ಪ್ರತಿ ವರ್ಷ ಬರಗಾಲ ಬರಲಿ, ಸರ್ಕಾರ ಸಾಲಮನ್ನಾ ಮಾಡಲಿ ಎಂಬುದು ರೈತರ ಬಯಕೆಯಾಗಿದೆ ಎಂದು ಹೇಳಿರುವುದು ವಿರೋಧ ಪಕ್ಷದವರಷ್ಟೇ ಅಲ್ಲ ರೈತರ ಕೆಂಗಣ್ಣಿಗೂ ಗುರಿಯಾಗಿದೆ.
3
+ ಸರ್ಕಾರದ ಸೌಲಭ್ಯಗಳ ಬಗ್ಗೆ ಮಾತನಾಡುವ ಬದಲು ಉದ್ದಟತನದಿಂದ ಮಾತನಾಡುವ ಮೂಲಕ ಶಿವಾನಂದ ಪಾಟೀಲ್ ದುಡಿಯುವ ವರ್ಗವನ್ನು ಅಪಮಾನಿಸಿದ್ದಾರೆ ಎಂಬ ಆಕ್ರೋಶ ಕೇಳಿಬಂದಿದೆ. ಸ್ವಪಕ್ಷೀಯರಲ್ಲಿ ಸಚಿವರ ಹೇಳಿಕೆ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಕ್ಷೇತ್ರದಲ್ಲಿ ನಾನೇ ಹೈಕಮಾಂಡ್. ಚುನಾವಣೆ ಗೆಲ್ಲಲು ನನಗೆ ಯಾರ ನೆರವು ಬೇಕಿಲ್ಲ ಎಂದು ವಿಧಾನಸಭೆ ಚುನಾವಣೆಯ ಮೊದಲೇ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರ ಉಂಟು ಮಾಡಿದರು.
4
+ ಪ್ರತಿ ಬಾರಿಯೂ ಶಿವಾನಂದ ಪಾಟೀಲ್ ತಮ್ಮದೇ ಆದ ಶೈಲಿಯಲ್ಲಿ ಹೇಳಿಕೆಗಳನ್ನು ನೀಡಿ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸುವುದು ಕಂಡುಬರುತ್ತಲೇ ಇದೆ. ಈ ಬಾರಿ ರೈತ ಸಮುದಾಯವನ್ನು ಕೆಣಕುವಂತಹ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರಮ ಆಪ್ತನಾಗಿರುವ ಶಿವಾನಂದ ಪಾಟೀಲ್, ಪಕ್ಷದ ಸಂಘಟನೆ, ಸಭೆಸಮಾರಂಭಗಳಲ್ಲಿ ಕಾಣಿಸಿಕೊಳ್ಳುವುದು ಕಡಿಮೆ.
5
+ ಸಾಲುಸಾಲು ರಜೆ ಹಿನ್ನೆಲೆಯಲ್ಲಿ ತುಂಬಿತುಳುಕುತ್ತಿವೆ ರಾಜ್ಯದ ಪ್ರವಾಸಿ ತಾಣಗಳು
6
+ ಈ ಮೊದಲು ಸಚಿವ ಸ್ಥಾನ ಸಿಗದೆ ಇದ್ದಾಗ ಭಿನ್ನಮತೀಯ ಹೇಳಿಕೆಗಳನ್ನು ನೀಡುತ್ತಲೇ ಮುಜುಗರ ಉಂಟು ಮಾಡಿದರು. ಸಚಿವ ಸ್ಥಾನ ಸಿಕ್ಕ ಬಳಿಕವೂ ಇಲಾಖೆಯ ಕೆಲಸ ಮಾಡಿದ್ದಕ್ಕಿಂತ ಹೆಚ್ಚಾಗಿ ಮುಜುಗರದ ಸನ್ನಿವೇಶ ಸೃಷ್ಟಿಸುವುದರಲ್ಲೇ ಶಿವಾನಂದ ಪಾಟೀಲ್ ಹೆಚ್ಚು ಸುದ್ದಿಯಲ್ಲಿದ್ದಾರೆ.
7
+ ಕಾಂಗ್ರೆಸ್‍ನ ಯಾವ ನಾಯಕರ ಮಾತಿಗೂ ಕಿಮ್ಮತ್ತಿನ ಬೆಲೆ ನೀಡದೆ ತಾವು ನಡೆದಿದ್ದೇ ದಾರಿ ಎಂಬ ಧೋರಣೆಯನ್ನು ರಾಜಕೀಯ ಮಾಡಿಕೊಂಡು ಬಂದಿರುವ ಪಾಟೀಲ್‍ರನ್ನು ಸಂಪುಟದಿಂದ ಕೈಬಿಟ್ಟು ಸಕ್ರಿಯವಾಗಿ ಕೆಲಸ ಮಾಡುವವರನ್ನು ಸೇರಿಸಿಕೊಳ್ಳಬೇಕೆಂಬ ಬೇಡಿಕೆ ಹಲವು ದಿನಗಳಿಂದಲೂ ಕೇಳಿ ಬರುತ್ತಲೇ ಇದೆ. ಆದರೆ ಅವರನ್ನು ಕೈಬಿಡುವುದರಿಂದ ಲಿಂಗಾಯಿತ ಸಮುದಾಯದ ಕೆಂಗೆಣ್ಣಿಗೆ ಗುರಿಯಾಗಬೇಕಾಗುತ್ತದೆ ಎಂಬ ಕಾರಣಕ್ಕೆ ಕಾಂಗ್ರೆಸ್ ನಾಯಕರು ಅನಿವಾರ್ಯವಾಗಿ ಸಹಿಸಿಕೊಳ್ಳುವಂತಾಗಿದೆ.
eesanje/url_46_279_9.txt ADDED
@@ -0,0 +1,8 @@
 
 
 
 
 
 
 
 
 
1
+ ಸಾಲುಸಾಲು ರಜೆ ಹಿನ್ನೆಲೆಯಲ್ಲಿ ತುಂಬಿತುಳುಕುತ್ತಿವೆ ರಾಜ್ಯದ ಪ್ರವಾಸಿ ತಾಣಗಳು
2
+ ಬೆಂಗಳೂರು,ಡಿ.25- ಕ್ರಿಸ್‍ಮಸ್ ಹಾಗೂ ಹೊಸ ವರ್ಷಾಚರಣೆಯ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಪ್ರವಾಸಿ ತಾಣಗಳು ತುಂಬಿ ತುಳುಕುತ್ತಿವೆ. ಮೂರು ದಿನಗಳ ಸರಣಿ ರಜೆ ಪ್ರವಾಸಕ್ಕೆ ಪ್ರೇರೇಪಣೆ ನೀಡಿದರೆ ಸಂಭವನೀಯ ಕೋವಿಡ್ ಸೋಂಕಿನ ಆತಂಕವು ಮತ್ತೊಂದು ಕಾರಣವಾಗಿದೆ.
3
+ ಇತ್ತೀಚೆಗೆ ಜೆಎನ್1 ಉಪತಳಿ ಆಧಾರಿತ ಕೋವಿಡ್ ಸೋಂಕು ನಿಧನವಾಗಿ ಏರಿಕೆ ಕಾಣುತ್ತಿದೆ. ಸದ್ಯಕ್ಕೆ ರಾಜ್ಯ ಸರ್ಕಾರ ಯಾವುದೇ ನಿರ್ಬಂಧಗಳನ್ನು ವಿಸಿಲ್ಲವಾದರೂ ಪರಿಸ್ಥಿತಿ ಹೀಗೆ ಮುಂದುವರೆದರೆ ನಿರ್ಬಂಧಗಳು ಜಾರಿಯಾಗುವ ಸಾಧ್ಯತೆ ಇದೆ. ಅಂತಹ ಸಂದರ್ಭದಲ್ಲಿ ಪ್ರವಾಸಕ್ಕೆ ಕಡಿವಾಣ ಬೀಳಲಿದೆ ಎಂಬ ಆತಂಕ ಮನೆ ಮಾಡಿದೆ. ಹೀಗಾಗಿ ಕ್ರಿಸ್‍ಮಸ್ ಹಾಗೂ ರಜೆಯ ಅವಕಾಶಗಳನ್ನು ಬಳಸಿಕೊಂಡು ಪ್ರವಾಸಿಗರು ಪ್ರಮುಖ ತಾಣಗಳಿಗೆ ದಾಂಗುಡಿ ಇಡುತ್ತಿದ್ದಾರೆ.
4
+ ಮೈಸೂರು, ಚಿಕ್ಕಮಗಳೂರು, ಕೊಡಗು, ಕರಾವಳಿಯಂತಹ ಹಸಿರು ತಾಣಗಳು ಮತ್ತು ಆಕರ್ಷಣೀಯ ಪ್ರವಾಸಿ ಕೇಂದ್ರಗಳು ಹೆಚ್ಚು ಜನ ಆಕರ್ಷಣೀಯ ಬಿಂದುಗಳಾಗಿವೆ. ಮೈಸೂರು ಮೃಗಾಲಯಕ್ಕೆ ನಿನ್ನೆ ಒಂದೇ ದಿನ 40 ಸಾವಿರ ಪ್ರವಾಸಿಗರು ಭೇಟಿ ನೀಡುವ ಮೂಲಕ ದಾಖಲೆ ನಿರ್ಮಾಣವಾಗಿದೆ.
5
+ ಸಾಗರ ತೀರದಲ್ಲಿ ಈರುಳ್ಳಿಯಲ್ಲಿ ಮೂಡಿಬಂದ ಸಾಂತಾಕ್ಲಾಸ್
6
+ ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವು ಕಡೆ ಹೋಟೆಲ್, ರೆಸ್ಟೋರೆಂಟ್‍ಗಳು ತುಂಬಿ ತುಳುಕುತ್ತಿವೆ. ಖಾಸಗಿ ಬಸ್ ಮಾಲೀಕರು ಪ್ರಯಾಣ ದರವನ್ನು ಏರಿಕೆ ಮಾಡಿದರೂ ಕೂಡ ತಲೆ ಕೆಡಿಸಿಕೊಳ್ಳದೆ ಪ್ರವಾಸಿಗರು ಗುಳೇ ಹೋದಂತೆ ಸಾಲು ಸಾಲು ಪ್ರಯಾಣ ಮಾಡುತ್ತಿದ್ದಾರೆ. ಉತ್ತರ ಕರ್ನಾಟಕ ಭಾಗದ ಬಿಜಾಪುರ, ಉತ್ತರಕನ್ನಡ, ಬೆಳಗಾವಿ, ಕಲಬುರ್ಗಿ, ಚಿತ್ರದುರ್ಗದಂತಹ ಐತಿಹಾಸಿಕ ಪ್ರವಾಸಿ ಕೇಂದ್ರಗಳಿಗೂ ಕೂಡ ಇದರ ಭೇಟಿ ನೀಡುವ ಪ್ರಮಾಣ ಹೆಚ್ಚಾಗಿದೆ.
7
+ ಈ ಹಿಂದೆ 2019ರಿಂದ ಸುಮಾರು ಎರಡುಮೂರು ವರ್ಷಗಳ ಕಾಲ ಕೋವಿಡ್‍ನಿಂದಾಗಿ ನಿರ್ಬಂಧಗಳು ಜಾರಿಯಾಗಿ ಪ್ರವಾಸೋದ್ಯಮ ಪೆಟ್ಟು ತಿಂದಿತ್ತು. 2022ರಲ್ಲಿ ನಿರ್ಬಂಧಗಳು ಸಡಿಲವಾಗಿದ್ದವು. ಕೋವಿಡ್ ಯುಗಾಂತ್ಯವಾಯಿತು ನಿರ್ಬಂಧಗಳು ಇರುವುದಿಲ್ಲ ಎಂಬ ನಿರೀಕ್ಷೆ ಇದ್ದಾಗಲೇ ಮತ್ತೊಮ್ಮೆ ಕೊರೋನ ಸೋಂಕು ಒಕ್ಕರಿಸಿದೆ.
8
+ ರಾಜ್ಯ ಸರ್ಕಾರ ಸದ್ಯಕ್ಕೆ ಯಾವುದೇ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸುವುದಿಲ್ಲ ಎಂದು ಹೇಳುತ್ತಿದೆ. ಆದರೆ ಪರಿಸ್ಥಿತಿ ಹೀಗೆ ಮುಂದುವರೆದು ವೈದ್ಯಕೀಯ ವ್ಯವಸ್ಥೆ ಮೇಲೆ ಒತ್ತಡ ಹೆಚ್ಚಾದರೆ ಸೋಂಕು ನಿಯಂತ್ರಣಕ್ಕೆ ನಿರ್ಬಂಧ ವಿಸುವುದು ಅನಿವಾರ್ಯ ಎಂದು ಹೇಳಲಾಗುತ್ತಿದೆ. ಸಾಧ್ಯ-ಸಾಧ್ಯತೆಗಳ ಹಿನ್ನಲೆಯಲ್ಲಿ ಜನ ಸಿಕ್ಕ ಅವಕಾಶವನ್ನು ಬಳಸಿಕೊಳ್ಳಲು ಹಾತೊರೆದಂತೆ ಕಂಡುಬರುತ್ತಿದೆ.
eesanje/url_46_27_1.txt ADDED
@@ -0,0 +1,8 @@
 
 
 
 
 
 
 
 
 
1
+ ಸಿದ್ದರಾಮಯ್ಯನವರೇ ಭಂಡತನ ಬಿಟ್ಟು ರಾಜೀನಾಮೆ ನೀಡಿ : ಬಿ.ವೈವಿಜಯೇಂದ್ರ
2
+ :
3
+ ಬೆಂಗಳೂರು,ಸೆ.3-ಮುಖ್ಯಮಂತ್ರಿ ಸಿದ್ದರಾಮಯ್ಯನವರು ನ್ಯಾಯಾಲಯದ ಆದೇಶವನ್ನು ಕಾಯುವ ಅಗತ್ಯವಾದರೂ ಏನಿದೆ? ಸರ್ಕಾರವೇ ನಿಮ್ಮ ಧರ್ಮಪತ್ನಿ (ಪಾರ್ವತಿ) ಅವರು ಪಡೆದಿರುವ ನಿವೇಶನಗಳು ಅಕ್ರಮ ಹಾಗೂ ನಿಯಮ ಬಾಹಿರ ಎಂದು ಹೇಳಿರುವಾಗ ಈಗಲಾದರೂ ತಮ ಭಂಡತನವನ್ನು ಪಕ್ಕಕ್ಕೆ ಸರಿಸಿ ತಮ ಸ್ಥಾನಕ್ಕೆ ರಾಜೀನಾಮೆ ನೀಡಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸ್ಥಾನದ ಘನತೆಗೆ ಬಂದಿರುವ ಚ್ಯುತಿಯನ್ನು ಹೋಗಲಾಡಿಸಿ, ಗೌರವ ಉಳಿಸಿಕೊಳ್ಳಿ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈವಿಜಯೇಂದ್ರ ಒತ್ತಾಯಿಸಿದ್ದಾರೆ.
4
+ ಈ ಕುರಿತು ತಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಿದ್ದರಾಮಯ್ಯ ವಿರುದ್ದ ಪೋಸ್ಟ್‌ ಮಾಡಿರುವ ಅವರು, ಊರು ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದಂತೆ ಕನಿಷ್ಟ ಈಗಲಾದರೂ ಲೂಟಿಕೋರ ಅಧಿಕಾರಿಯೊಬ್ಬರನ್ನು ಅಮಾನತುಗೊಳಿಸಿದೆ. ಸರ್ಕಾರ ಈ ಕೂಡಲೇ 50:50ಅನುಪಾತದಲ್ಲಿ ಮುಡಾದಲ್ಲಿ ವಿತರಣೆಯಾಗಿರುವ ಸಾವಿರಾರು ನಿವೇಶನಗಳ ಕ್ರಯವನ್ನು ರದ್ದುಗೊಳಿಸಿ ಅಧಿಸೂಚನೆ ಹೊರಡಿಸಲಿ ಎಂದು ಆಗ್ರಹಿಸಿದ್ದಾರೆ.
5
+ ಶೇಕಡ 50:50ರ ಅನುಪಾತದಲ್ಲಿ ಪೂರ್ವಾನ್ವಯವಾಗಿ ನಿವೇಶನ ಪಡೆಯುವುದು ನಿಯಮಬಾಹಿರ ಎಂದು ನಮ ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಿಸಿದ್ದ ತಾಂತ್ರಿಕ ಸಮಿತಿ ಕಳೆದ 3-11-2023 ರಂದೇ ಕಾಂಗ್ರೆಸ್‌‍ ಸರ್ಕಾರಕ್ಕೆ ವಿಸ್ತೃತ ವರದಿ ಸಲ್ಲಿಸಿತ್ತು. ಈ ವರದಿಯಲ್ಲಿ ಮುಡಾದಲ್ಲಿ ನಡೆಯುತ್ತಿದ್ದ ಬ್ರಹಾಂಡ ಭ್ರಷ್ಟಾಚಾರಗಳ ಬಗ್ಗೆ ಪೂರ್ಣ ಮಾಹಿತಿಯನ್ನು ನೀಡಲಾಗಿತ್ತು ಎಂದು ಹೇಳಿದ್ದಾರೆ.
6
+ ಶೇಕಡ 50:50ರ ಅನುಪಾತದಲ್ಲಿ ಪೂರ್ವಾನ್ವಯವಾಗಿ ನಿವೇಶನ ಪಡೆಯುವುದು ನಿಯಮಬಾಹಿರ ಎಂದು ನಮ್ಮ ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಿಸಿದ್ದ ತಾಂತ್ರಿಕ ಸಮಿತಿ ಕಳೆದ 3-11-2023 ರಂದೇ ಕಾಂಗ್ರೆಸ್ ಸರ್ಕಾರಕ್ಕೆ ವಿಸ್ತೃತ ವರದಿ ಸಲ್ಲಿಸಿತ್ತು. ಈ ವರದಿಯಲ್ಲಿ ಮುಡಾದಲ್ಲಿ ನಡೆಯುತ್ತಿದ್ದ ಬ್ರಹ್ಮಾಂಡ ಭ್ರಷ್ಟಾಚಾರಗಳ ಬಗ್ಗೆ ಪೂರ್ಣ ಮಾಹಿತಿಯನ್ನು…../XSArP1TxXt
7
+ ಕಾಂಗ್ರೆಸ್‌‍ ಸರ್ಕಾರದ ಭ್ರಷ್ಟ ಹಗರಣಗಳ ರಕ್ಷಣೆಯ ಪ್ರತೀಕವೆಂಬಂತೆ ಧೂಳು ಹಿಡಿದು ಕುಳಿತಿದ್ದ ತಾಂತ್ರಿಕ ಸಮಿತಿಯ ತನಿಖಾ ವರದಿಯ ಪ್ರತಿಯನ್ನು ನಾವು ಬಿಡುಗಡೆ ಮಾಡಿದ ನಂತರ ಗತ್ಯಂತರವಿಲ್ಲದೆ ಕೈಗೆತ್ತಿಕೊಂಡು ಇದೀಗ ಮುಡಾ ಬ್ರಹಾಂಡ ಭ್ರಷ್ಟಾಚಾರದ ರೂವಾರಿಗಳಲ್ಲೊಬ್ಬರಾದ ಹಿಂದಿನ ಆಯುಕ್ತ ಜಿ. ಟಿ.ದಿನೇಶ್‌ ಕುಮಾರ್‌ರನ್ನು ಅಮಾನತುಗೊಳಿಸಲಾಗಿದೆ.
8
+ ಅಮಾನತ್ತಿಗೆ ನೀಡಿರುವ ಕಾರಣಗಳಲ್ಲಿ ಶೇಕಡ 50:50ರ ಅನುಪಾತದಲ್ಲಿ ನಿಯಮ ಬಾಹಿರವಾಗಿ ನಿವೇಶನಗಳನ್ನು ವಿತರಿಸಿರುವ ಅಂಶವನ್ನು ಪ್ರಮುಖವಾಗಿ ಉಲ್ಲೇಖಿಸಲಾಗಿದೆ. ಇದು ಏನು ಹೇಳುತ್ತದೆ ಎಂದರೆ ಶೇ 50:50 ರ ಅನುಪಾತದಲ್ಲಿ ಪೂರ್ವನ್ವಯವಾಗಿ ಸಿದ್ದರಾಮಯ್ಯನವರ ಪತ್ನಿಯವರಿಗೆ ಮಂಜೂರಾಗಿರುವ 14 ನಿವೇಶನಗಳು ಸಂ���ೂರ್ಣ ಅಕ್ರಮ ಹಾಗೂ ನಿಯಮಬಾಹಿರ ಎಂಬುದು ಸ್ಪಷ್ಟವಾಗಿದೆ. ವಿಚಿತ್ರವೆಂದರೆ ಮುಖ್ಯಮಂತ್ರಿಗಳ ಕುಟುಂಬಕ್ಕೆ 14 ನಿವೇಶನಗಳನ್ನು ಬಳುವಳಿ ನೀಡಿದ ಹಿಂದಿನ ಆಯುಕ್ತರೊಬ್ಬರ ವಿರುದ್ಧ ಯಾವುದೇ ಕ್ರಮ ಜರುಗಿಸದೇ ಋಣ ಸಂದಾಯ ಮಾಡಲಾಗಿದೆ ಎಂದು ವಿಜಯೇಂದ್ರ ಸಂಶಯ ವ್ಯಕ್ತಪಡಿಸಿದ್ದಾರೆ.
eesanje/url_46_27_10.txt ADDED
@@ -0,0 +1,8 @@
 
 
 
 
 
 
 
 
 
1
+ ಸಚಿವರಾದ ಎಂ.ಬಿ.ಪಾಟೀಲ್‌ ಮತ್ತು ಪ್ರಿಯಾಂಕ ಖರ್ಗೆಗೆ ಕಾನೂನಿನ ಸಂಕಷ್ಟ
2
+
3
+ ಬೆಂಗಳೂರು,ಸೆ.2-ಮುಡಾ ಅಕ್ರಮ ನಿವೇಶನ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯ ಡೋಲಾಯಮಾನವಾಗಿರುವಾಗಲೇ ಇದೀಗ ಇಬ್ಬರು ಸಚಿವರಿಗೆ ಕಾನೂನಿನ ಸಂಕಷ್ಟ ಎದುರಾಗಿದೆ.
4
+ ಕಾನೂನು ಬಾಹಿರವಾಗಿ ಕೆಐಡಿಬಿಯಿಂದ ಜಮೀನು ಪಡೆದ ಹಾಗೂ ಕಾನೂನು ಉಲ್ಲಂಘಿಸಿ ನಿವೇಶನ ಹಂಚಿಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಚಿವರಾದ ಪ್ರಿಯಾಂಕ ಖರ್ಗೆ ಹಾಗೂ ಎಂ.ಬಿ.ಪಾಟೀಲ್‌ ಅವರುಗಳ ಪ್ರಕರಣಗಳ ಕುರಿತು ವಿವರಣೆ ನೀಡುವಂತೆ ರಾಜ್ಯಪಾಲರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ.
5
+ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರು ಈ ಇಬ್ಬರು ಸಚಿವರ ಮೇಲೆ ಕೇಳಿಬಂದಿರುವ ಆರೋಪಗಳ ಕುರಿತು ಸ್ಪಷ್ಟನೆ ನೀಡಬೇಕೆಂದು ಸೂಚಿಸಿದ್ದಾರೆ.
6
+ ವಿಶೇಷವೆಂದರೆ ಈ ಹಿಂದೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಮೊದಲು ಸರ್ಕಾರದಿಂದ ರಾಜ್ಯಪಾಲರು ಉತ್ತರ ಬಯಸಿದ್ದರು.
7
+ ವಿಧಾನಪರಿಷತ್‌ನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಸಾಮಾಜಿಕ ಕಾರ್ಯಕರ್ತ ದಿನೇಶ್‌ ಕಲ್ಲಳ್ಳಿ ಎಂಬುವರು ಸಚಿವರಾದ ಪ್ರಿಯಾಂಕ ಖರ್ಗೆ ಮತ್ತು ಎಂ.ಬಿ.ಪಾಟೀಲ್‌ ವಿರುದ್ಧ ನಿಯಮ ಉಲ್ಲಂಘಿಸಿ ಕಾನೂನು ಉಲ್ಲಂಘನೆ ಮಾಡಿದ್ದಾರೆಂದು ದೂರು ನೀಡಿದ್ದಾರೆ.
8
+ ಈ ಇಬ್ಬರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1988ರ ಸೆಕ್ಷನ್‌ 17ಎ ಅಡಿ ದೂರು ದಾಖಲಿಸಲು ಮನವಿ ಮಾಡಿದ್ದಾರೆ. ಹೀಗಾಗಿ ಸರ್ಕಾರ ವಿರುದ್ಧ ಉತ್ತರ ಬಯಸುತ್ತೇನೆ ಎಂದು ರಾಜ್ಯಪಾಲರು ಪತ್ರದಲ್ಲಿ ಕೋರಿದ್ದಾರೆ.
eesanje/url_46_27_11.txt ADDED
@@ -0,0 +1,9 @@
 
 
 
 
 
 
 
 
 
 
1
+ ಗೌರಿ-ಗಣೇಶ ಹಬ್ಬಕ್ಕೆ KSRTCಯಿಂದ ವಿಶೇಷ ಬಸ್‌‍ ವ್ಯವಸ್ಥೆ
2
+ - ,
3
+ ಹುಬ್ಬಳ್ಳಿ,ಸೆ.2- ಗೌರಿ– ಗಣೇಶ ಹಬ್ಬದ ಹಿನ್ನಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಸೆ.5 ರಿಂದ 10ರವರೆಗೆ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ.
4
+ ಈ ಬಾರಿ ಗೌರಿ-ಗಣೇಶ ಹಬ್ಬ ವಾರಾಂತ್ಯದಲ್ಲಿ ಬಂದಿದ್ದು ಸಾರ್ವಜನಿಕರು ಅದರಲ್ಲೂ ಪ್ರಮುಖವಾಗಿ ನೌಕರರಿಗೆ ಸಂಭ್ರಮ ಹೆಚ್ಚಿಸಿದೆ. ಸೆಪ್ಟೆಂಬರ್‌ 6ರಂದು ಶುಕ್ರವಾರ ಗೌರಿ ಹಬ್ಬ, ಸೆ.7ರಂದು ಶನಿವಾರ ಗಣೇಶ ಚತುರ್ಥಿ ಹಾಗೂ 8ರಂದು ಭಾನುವಾರ ಸಾರ್ವಜನಿಕ ರಜೆ ಇರುತ್ತದೆ.
5
+ ಹಬ್ಬದ ಆಚರಣೆಗಾಗಿ ಬೆಂಗಳೂರು, ಮಂಗಳೂರು, ಪುಣೆ, ಮುಂಬೈ, ಗೋವಾ ಮತ್ತಿತರ ಪ್ರಮುಖ ಊರುಗಳಲ್ಲಿ ನೆಲೆಸಿರುವ ಹಲವರು ಹಬ್ಬದ ಆಚರಣೆಗಾಗಿ ಸ್ವಂತ ಊರುಗಳಿಗೆ ಆಗಮಿಸಲಿದ್ದಾರೆ. ಅವರ ಅನುಕೂಲಕ್ಕಾಗಿ ಸೆಪ್ಟೆಂಬರ್‌ 5ರಿಂದ 10ರವರೆಗೆ ಹೆಚ್ಚುವರಿ ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿದೆ.
6
+ ಅದಕ್ಕಾಗಿ ವೋಲ್ವೋ ಎಸಿ ಐರಾವತ, ಎಸಿ ಸ್ಲೀಪರ್‌, ನಾನ್‌ ಎಸಿ ಸ್ಲೀಪರ್‌, ರಾಜಹಂಸ ಹಾಗೂ ವೇಗದೂತ ಸಾರಿಗೆಗಳು ಸೇರಿದಂತೆ ವಿವಿಧ ಮಾದರಿಯ ಬಸ್‌‍ಗಳನ್ನು ನಿಯೋಜಿಸಲಾಗಿದೆ.
7
+ ಹಬ್ಬದ ಆಚರಣೆಗಾಗಿ ಆಗಮಿಸುವವರ ಅನುಕೂಲಕ್ಕಾಗಿ ಸೆ.5 ಮತ್ತು 6ರಂದು ಬೆಂಗಳೂರು, ಮಂಗಳೂರು, ಪುಣೆ, ಗೋವಾ ಮತ್ತಿತರ ಪ್ರಮುಖ ಸ್ಥಳಗಳಿಂದ ಹುಬ್ಬಳ್ಳಿಗೆ ಹೆಚ್ಚುವರಿ ವಿಶೇಷ ಬಸ್‌‍ ವ್ಯವಸ್ಥೆ ಮಾಡಲಾಗಿದೆ.
8
+ ಅದೇ ರೀತಿ ಹಬ್ಬದ ರಜೆ ಮುಗಿಸಿಕೊಂಡು ತಮ ಕಾರ್ಯ ಕ್ಷೇತ್ರಗಳಿಗೆ ಹಿಂದಿರುಗುವವರ ಅನುಕೂಲಕ್ಕಾಗಿ ಸೆ.8ರಂದು ರವಿವಾರ ಹಾಗೂ 9ರಂದು ಹುಬ್ಬಳ್ಳಿಯಿಂದ ಬೆಂಗಳೂರು, ಪುಣೆ, ಗೋವಾ, ಮಂಗಳೂರು, ವಿಜಯಪುರ, ಬಾಗಲಕೋಟೆ ಮತ್ತಿತರ ಪ್ರಮುಖ ಸ್ಥಳಗಳಿಗೆ ಹೆಚ್ಚುವರಿ ವಿಶೇಷ ಬಸ್ಸುಗಳನ್ನು ಓಡಿಸಲಾಗುತ್ತದೆ.
9
+ ಸೆ.5ರಿಂದ 10ರವರೆಗೆ ಜಿಲ್ಲೆಯೊಳಗೆ ವಿವಿಧ ಸ್ಥಳಗಳು ಅಕ್ಕಪಕ್ಕದ ಜಿಲ್ಲೆಗಳ ಪ್ರಮುಖ ಸ್ಥಳಗಳ ನಡುವೆ ಹೆಚ್ಚಿನ ಸಂಖ್ಯೆಯಲ್ಲಿ ಜನರ ಓಡಾಟ ನಿರೀಕ್ಷಿಸಲಾಗಿದೆ. ಈ ಅವಧಿಯಲ್ಲಿ ಪ್ರಯಾಣಿಕರ ದಟ್ಟಣೆಗೆ ತಕ್ಕಂತೆ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್‌.ರಾಮನಗೌಡರ ತಿಳಿಸಿದ್ದಾರೆ.
eesanje/url_46_27_12.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಪೋಕ್ಸೋ ಪ್ರಕರಣಕ್ಕೆ ಮರುಜೀವ : ಮಾಜಿ ಸಿಎಂ ಬಿಎಸ್ವೈಗೆ ಸಂಕಷ್ಟ
2
+ '
3
+ ಬೆಂಗಳೂರು,ಆ.2-ಮಾಜಿ ಮುಖ್ಯಮಂತ್ರಿ ಬಿ.ಎಸ್‌‍ ಯಡಿಯೂರಪ್ಪ ಅವರಿಗೆ ಮತ್ತೊಮೆ ಸಂಕಷ್ಟ ಎದುರಾಗಿದೆ. ಈ ಹಿಂದೆ ಇವರ ವಿರುದ್ಧ ದಾಖಲಾಗಿದ್ದ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯದ ಪೋಕ್ಸೋ ಪ್ರಕರಣ ಮತ್ತೊಮೆ ಮರುಜೀವ ಪಡೆದಿದೆ.
4
+ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದ ಸಂತ್ರಸ್ತ ಬಾಲಕಿಯ ತಾಯಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಮಮತಾ ಸಾವಿನ ವಿಚಾರದ ಬಗ್ಗೆ ರಾಜ್ಯ ಮಹಿಳಾ ಆಯೋಗ ಅನುಮಾನ ವ್ಯಕ್ತಪಡಿಸಿದೆ. ಈ ಹಿನ್ನೆಲೆ ಈ ಸಾವಿನ ಪ್ರಕರಣದ ತನಿಖೆ ನಡೆಸುವಂತೆ ಪೊಲೀಸ್‌‍ ಇಲಾಖೆಗೆ ಮಹಿಳಾ ಆಯೋಗದ ಮುಖ್ಯಸ್ಥೆ ನಾಗಲಕ್ಷಿ ಚೌಧರಿ ಪತ್ರ ಬರೆದಿದ್ದಾರೆ.
5
+ ರಾಜ್ಯ ಪೊಲೀಸ್‌‍ ಆಯುಕ್ತರಿಗೆ ಪತ್ರ ಬರೆದು ಸೂಕ್ತ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಮುಖ್ಯಸ್ಥೆ ನಾಗಲಕ್ಷೀ ಚೌಧರಿ ಆಗ್ರಹ ಮಾಡಿದ್ದು, ಆದಷ್ಟು ಬೇಗ ತನಿಖಾ ವರದಿಯನ್ನು ಆಯೋಗಕ್ಕೆ ಸಲ್ಲಿಸುವಂತೆ ಕೋರಿಕೊಂಡಿದ್ದಾರೆ. ಈ ಸಂಬಂಧ ಹುಳಿಮಾವು ಪೊಲೀಸ್‌‍ ಠಾಣೆಯಲ್ಲಿ ಮಮತಾ ಸಾವು ಪ್ರಕರಣ ದಾಖಲಾಗಿದೆ.
6
+ ಏನಿದು ಪ್ರಕರಣ?:17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಕಳೆದ 2024ರ ಮಾರ್ಚ್‌ 15ರಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ ಐಪಿಸಿ ಸೆಕ್ಷನ್‌ 354 (ಎ)ರಡಿ ಪ್ರಕರಣ ದಾಖಲಿಸಲಾಗಿತ್ತು. ಸಂತ್ರಸ್ತೆಯ ತಾಯಿ ಸದಾಶಿವನಗರ ಪೊಲೀಸ್‌‍ ಠಾಣೆಯಲ್ಲಿ ದೂರು ದಾಖಲಿಸಿದ್ದರು.
7
+ ಆದರೆ ಅಚ್ಚರಿಯ ಸಂಗತಿ ಎಂದರೆ ಬಿಎಸ್‌‍ವೈ ವಿರುದ್ಧ ಲೈಂಗಿಕ ದೌರ್ಜನ್ಯದ ದೂರು ನೀಡಿದ್ದ ಬಾಲಕಿಯ ತಾಯಿ ಮಾರ್ಚ್‌ 27ರಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಉಸಿರಾಟದ ತೊಂದರೆಗೆ ಒಳಗಾಗಿ ಹುಳಿಮಾವು ಬಳಿಯ ನ್ಯಾನೋ ಖಾಸಗಿ ಆಸ್ಪತ್ರೆಗೆ ಮಾರ್ಚ್‌ 26ರ ರಾತ್ರಿ ದಾಖಲಾಗಿದ್ದರು. ಆಸ್ಪತ್ರೆಗೆ ದಾಖಲಾದ ಬೆನ್ನಲ್ಲೇ ಆಕೆಗೆ ಕೂಡಲೇ ವೈದ್ಯರು ತಪಾಸಣೆ ನಡೆಸಿದ್ದರು.
8
+ ತಪಾಸಣೆ ವೇಳೆ ಸ್ಯಾಚುರೇಷನ್‌ ಲೇವೆಲ್‌ ಲೋ ಆಗಿತ್ತು. ಕೂಡಲೇ ವೈದ್ಯರಿಂದ ಚಿಕಿತ್ಸೆ ಆರಂಭಿಸಲಾಗಿತ್ತು. ಅಲ್ಲದೆ ವೆಂಟಿಲೇಟರ್‌ಗೆ ಶಿಫ್‌್ಟ ಮಾಡಲು ಸಿದ್ಧತೆ ನಡೆಸಲಾಗಿತ್ತು. ಅಷ್ಟೊತ್ತಿಗೆ ಮೋಷನ್‌ ಹೋಗಬೇಕು ಎಂದು ದೂರುದಾರೆ ಮಮತ ಹೇಳಿದ್ದರು. ಆದರೆ ಕೆಲವೇ ಹೊತ್ತಿನಲ್ಲಿ ನಿತ್ರಾಣಗೊಂಡು ಸಾವನ್ನಪ್ಪಿದ್ದಾರೆ ಎಂದು ನ್ಯಾನೋ ಆಸ್ಪತ್ರೆ ಮೂಲಗಳು ತಿಳಿಸಿದ್ದವು.
9
+ ಪೋಕ್ಸೋ ಎಫ್‌ಐಆರ್‌ನಲ್ಲಿ ಏನಿದೆ?:ದೂರುದಾರರು ತಿಳಿಸಿರುವಂತೆ ತಾಯಿ ಮತ್ತು ಮಗಳು ಕಳೆದ ಫೆಬ್ರವರಿ 2ರಂದು ಯಡಿಯೂರಪ್ಪ ಅವರ ನಿವಾಸಕ್ಕೆ ಹೋಗಿದ್ದರು. ಅತ್ಯಾಚಾರ ಪ್ರಕರಣದಲ್ಲಿ ನಮಗೆ ಅನ್ಯಾಯವಾಗಿದೆ. ವಿಶೇಷ ತನಿಖಾ ತಂಡ ರಚಿಸಿ ನಮಗೆ ನ್ಯಾಯ ದೊರಕಿಸಿಕೊಡಿ ಎಂದು ಸಂತ್ರಸ್ತೆ ಹಾಗೂ ಸಂತ್ರಸ್ತೆಯ ತಾಯಿ ಮನವಿ ಮಾಡಿದ್ದರು.
10
+ ಈ ವೇಳೆ ಯಡಿಯೂರಪ್ಪ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದೂರು ನೀಡಲಾಗಿತ್ತು. ಬಳಿಕ ಯಡಿಯೂರಪ್ಪನವರು ಕ್ಷಮೆಯಾಚಿಸಿ, ಪ್ರಕರಣದಲ್ಲಿ ನಿಮಗೆ ಸಹಾಯ ಮಾಡುತ್ತೇನೆ, ಈ ಘಟನೆ ಬಗ್ಗೆ ಹೊರಗಡೆ ಎಲ್ಲೂ ಮಾತನಾಡಬಾರದು ಎಂದು ಹೇಳಿದ್ದಾರೆಂದು ಸಂತ್ರಸ್ತೆಯ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.
eesanje/url_46_27_2.txt ADDED
@@ -0,0 +1,8 @@
 
 
 
 
 
 
 
 
 
1
+ ಇನ್ನೆರಡು ದಿನದಲ್ಲಿ ರೇಣುಕಾಸ್ವಾಮಿ ಪ್ರಕರಣದ ದೋಷಾರೋಪ ಪಟ್ಟಿ ಸಲ್ಲಿಕೆ
2
+
3
+ ಬೆಂಗಳೂರು, ಸೆ.2-ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಾಕ್ಷಿಪಾಳ್ಯಠಾಣೆ ಪೊಲೀಸರು ದೋಷಾರೋಪ ಪಟ್ಟಿಯನ್ನು ನಾಳೆ ಅಥವಾ ನಾಡಿದ್ದು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ. ಈ ಪ್ರಕರಣದಲ್ಲಿ ನಟ ದರ್ಶನ್‌, ಪವಿತ್ರಗೌಡ ಸೇರಿದಂತೆ 17ಮಂದಿಯನ್ನು ಈಗಾಗಲೇ ಬಂಧಿಸಿದ್ದು, ಅವರೆಲ್ಲರೂ ಜೈಲಿನಲ್ಲಿದ್ದಾರೆ.
4
+ ಕೊಲೆ ಪ್ರಕರಣದ ತನಿಖೆ ಮುಕ್ತಾಯದ ಹಂತದಲ್ಲಿದ್ದು, ತನಿಖಾಧಿಕಾರಿಗಳು 4,500ಕ್ಕೂ ಹೆಚ್ಚು ಪುಟಗಳ ಚಾರ್ಜ್ಶೀಟನ್ನು ಸಿದ್ಧ ಮಾಡಿಕೊಂಡಿದ್ದಾರೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ವಿಜಯನಗರ ಉಪವಿಭಾಗದ ಎಸಿಪಿ ಚಂದನ್‌ ಅವರಿಗೆ ತನಿಖೆಗೆ ವಹಿಸಲಾಗಿತ್ತು. ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್‌ ಅವರ ನೇತೃತ್ವದಲ್ಲಿ ತನಿಖೆ ಮುಂದುವರೆದಿತ್ತು.
5
+ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ನಗರ ಪೊಲೀಸ್‌‍ ಆಯುಕ್ತ ದಯಾನಂದ ಅವರು ಅನ್ನಪೂರ್ಣೇಶ್ವರಿ ನಗರ ಠಾಣೆಗೆ ಎರಡು ಬಾರಿ ಭೇಟಿ ನೀಡಿ, ಯಾವ ರೀತಿ ತನಿಖೆ ಮಾಡಬೇಕು, ಯಾವ ರೀತಿ ದಾಖಲೆಗಳನ್ನು ಸಂಗ್ರಹಿಸಬೇಕು ಎಂಬ ಇತ್ಯಾದಿ ಸಲಹೆ ಸೂಚನೆಗಳನ್ನು ನೀಡಿದ್ದರು.
6
+ ರೇಣುಕಾಸ್ವಾಮಿ ಮೃತದೇಹ ಪತ್ತೆಯಾದ ಸ್ಥಳ, ಕೊಲೆಯಾದ ಸ್ಥಳ, ಅವರನ್ನು ಕರೆತಂದ ಮಾರ್ಗಗಳಲ್ಲಿನ ರಸ್ತೆಗಳಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳ ಮಾಹಿತಿ, ಕೊಲೆಗೆ ಬಳಸಿದ ವಸ್ತುಗಳು, ಆರೋಪಿಗಳ ಮೊಬೈಲ್‌ಗಳಲ್ಲಿರುವ ಮಾಹಿತಿ, ಬೆಂಗಳೂರು, ಹೈದರಾಬಾದ್‌ನ ಎಫ್‌ಎಸ್‌‍ಎಲ್‌ನಿಂದ ತರಿಸಿಕೊಂಡಿರುವ ವರದಿಗಳು, ಆರ್‌ಟಿಓ ಅಧಿಕಾರಿಗಳಿಂದ ಸಂಗ್ರಹಿಸಿರುವ ಮಾಹಿತಿಗಳನ್ನು ಹಾಗೂ ಇನ್ನಿತರ ಸಾಕ್ಷ್ಯಗಳನ್ನು ಸಹ ಚಾರ್ಜ್‌ಶೀಟ್‌ನಲ್ಲಿ ದಾಖಲಿಸಲಾಗಿದೆ.
7
+ ಈ ಪ್ರಕರಣದಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷ ಸಾಕ್ಷಿಗಳು ಸೇರಿದಂತೆ 240ಕ್ಕೂ ಅಧಿಕ ಸಾಕ್ಷಿಗಳ ಹೇಳಿಕೆಗಳನ್ನು ಪಡೆದು ಚಾರ್ಜ್‌ ಶೀಟ್‌ನಲ್ಲಿ ದಾಖಲಿಸಲಾಗಿದೆ.ಕೊಲೆ ಸಂದರ್ಭದಲ್ಲಿ ಪೊಲೀಸರಿಗೆ ದೊರೆತ ನಾಲ್ಕು ಪ್ರಮುಖ ಸಾಕ್ಷ್ಯಗಳಿಂದ ದರ್ಶನ್‌ ಅಂಡ್‌ ಗ್ಯಾಂಗ್‌ಗೆ ಸಂಕಷ್ಟ ಎದುರಾಗಿದೆ.
8
+ ಈ ನಡುವೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ ರೌಡಿ ವಿಲ್ಸನ್‌ಗಾರ್ಡನ್‌ ನಾಗನ ಜೊತೆ ಕುಳಿತು ಕಾಫಿ, ಸಿಗರೇಟ್‌ ಕೈಯಲ್ಲಿ ಹಿಡಿದುಕೊಂಡಿರುವ ಫೋಟೊ ವೈರಲ್‌ ಆಗಿ ಸಾರ್ವಜನಿಕ ವಲಯದಲ್ಲಿ ರಾಜಾತಿಥ್ಯ ನೀಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದ್ದಂತೆ ದರ್ಶನ್‌ನನ್ನುಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿದೆ.
eesanje/url_46_27_3.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಕುಂಬಳಕಾಯಿ ಕಳ್ಳ ಎಂದರೆ ಬಿಜೆಪಿಯವರೇಕೆ ಹೆಗಲು ಮುಟ್ಟಿಕೊಳ್ಳುತ್ತಿದ್ದಾರೆ..? : ಪ್ರಿಯಾಂಕ್‌ ಖರ್ಗೆ
2
+
3
+ ಬೆಂಗಳೂರು,ಸೆ.2-ಕೋವಿಡ್‌ ಕಾಲದಲ್ಲಿ ನಡೆದ ಹಗರಣಗಳ ತನಿಖೆ ನಡೆಸಿದ ನ್ಯಾಯಾಂಗ ಆಯೋಗ ಮಧ್ಯಂತರ ವರದಿ ನೀಡುತ್ತಿದ್ದಂತೆ ಬಿಜೆಪಿಯವರು ನ್ಯಾಯಾಂಗ ಹೋರಾಟ ನಡೆಸುತ್ತೇವೆ ಎಂದು ಹೇಳಿಕೆ ನೀಡಿರುವುದು ಹಗರಣ ನಡೆದಿರುವುದನ್ನು ದೃಢಪಡಿಸಿದಂತಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.
4
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಳ್ಳುವುದೇಕೆ? ಕೋವಿಡ್‌ ಹಗರಣದ ತನಿಖಾ ವರದಿ ಏನಿದೆ ಎಂದು ಗೊತ್ತಿಲ್ಲ. ವರದಿ ಸಲ್ಲಿಕೆಯಾದ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ ಕಾನೂನು ಹೋರಾಟ ಮಾಡುತ್ತೇವೆ ಎಂದಿದ್ದಾರೆ. ತಪ್ಪೇ ಮಾಡದಿದ್ದ ಮೇಲೆ ಕಾನೂನು ಹೋರಾಟ ಏಕೆ?, ಇದರರ್ಥ ಏನು?, ಒಂದು ಜೈಲಿಗೆ ಹೋಗಬೇಕು, ಇಲ್ಲವೇ ಜಾಮೀನು ಪಡೆಯಬೇಕು ಎಂದಲ್ಲವೇ! ಎಂದರು.
5
+ ಕೈಗಾರಿಕಾ ನಿವೇಶನ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಮ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಿದ್ದಾರೆ. ಅದಕ್ಕೆ ಸಚಿವ ಎಂ.ಬಿ.ಪಾಟೀಲ್‌ರವರು ಇಂಚಿಂಚೂ ಸ್ಪಷ್ಟನೆ ನೀಡಿದ್ದಾರೆ. ನಾವು ಎಲ್ಲಿಯೂ ಓಡಿ ಹೋಗಿಲ್ಲ. ಈ ವಿಚಾರ ಚರ್ಚೆ ಮಾಡಬಾರದು ಎಂಬ ತಡೆಯಾಜ್ಞೆಯನ್ನು ತಂದಿಲ್ಲ ಎಂದರು.
6
+ ಬಿಜೆಪಿಯವರು ಸಿಡಿ ಇದೆ ಎಂದರೆ ಒಂದಷ್ಟು ಮಂದಿ ತಡೆಯಾಜ್ಞೆ ತರುತ್ತಾರೆ. ಕೋವಿಡ್‌ ಹಗರಣದ ಮಧ್ಯಂತರ ವರದಿ ಬಂದಾಕ್ಷಣ ಒಂದಷ್ಟು ಜನ ಕಾನೂನು ಹೋರಾಟದ ಮಾತನಾಡುತ್ತಾರೆ. ವರದಿಯಲ್ಲಿ ಏನಿದೆ ಎಂಬುದು ತಿಳಿಯದೆ ಇವರು ಹೆಗಲು ಮುಟ್ಟಿ ನೋಡಿಕೊಳ್ಳುತ್ತಿರುವುದು ಭ್ರಷ್ಟಾಚಾರ ನಡೆದಿದೆ ಎಂಬುದನ್ನು ಸ್ಪಷ್ಟೀಕರಿಸುತ್ತಿದೆ ಎಂದು ಹೇಳಿದರು.
7
+ ವರದಿಯನ್ನು ತರಾತುರಿಯಲ್ಲಿ ಪಡೆಯಲಾಯಿತು ಎಂಬುದು ಹಾಸ್ಯಾಸ್ಪದ. ಸರ್ಕಾರ ರಚನೆಯಾಗಿ ಒಂದೂವರೆ ವರ್ಷ ಕಳೆದಿದೆ. ಈವರೆಗೂ ಒಂದು ಹಗರಣದ ವರದಿ ಪಡೆಯಲು ಸರ್ಕಾರಕ್ಕೆ ಸಾಧ್ಯವಾಗಲಿಲ್ಲ ಎಂದು ಕೆಲವರು ಟೀಕೆ ಮಾಡಿದರು. ಈಗ ವರದಿ ಪಡೆದುಕೊಂಡರೆ ತರಾತುರಿಯಲ್ಲಿ ವರದಿ ಪಡೆಯಲಾಗಿದೆ ಎಂಬ ಆರೋಪಗಳಿವೆ. ನಾವು ಏನು ಮಾಡಿದರೂ ತಪ್ಪು ಎಂದು ಭಾವಿಸುವವರಿಗೆ ಸಮರ್ಥನೆ ನೀಡಲು ಸಾಧ್ಯವಿಲ್ಲ ಎಂದರು.
8
+ ಬಿಜೆಪಿ ಅವಧಿಯಲ್ಲಿ ನಡೆದ 21 ಹಗರಣಗಳನ್ನು ವಿಧಾನಮಂಡಲದಲ್ಲಿ ಪ್ರಸ್ತಾಪಿಸಲಾಗಿದೆ. ಅವುಗಳಿಗೆ ತಾರ್ಕಿಕ ಅಂತ್ಯ ಕಾಣಿಸುವುದು ನಮ ಜವಾಬ್ದಾರಿ. ಕೋವಿಡ್‌ ಸಂದರ್ಭದಲ್ಲಿ ಚಾಮರಾಜನಗರದ ಆಮ್ಲಜನಕ ಕೊರತೆಯಿಂದಾದ ದುರಂತ, ಪಿಪಿ ಕಿಟ್‌ ಖರೀದಿ, ಕೆಎಸ್‌‍ಆರ್‌ಟಿಸಿ ಪ್ರಯಾಣ ದರ ದ್ವಿಗುಣಗೊಳಿಸುವುದು ಸೇರಿದಂತೆ ಹಲವು ವಿಚಾರಗಳು ಆಳ ಅಗಲದ ತನಿಖೆ ನಡೆಯಲಿವೆ ಎಂದರು.
9
+ ಪಿಎಸ್‌‍ಐ ನೇಮಕಾತಿ ಹಗರಣದ ವಿಚಾರಣಾ ವರದಿ ಬಂದಿದೆ. ಅದರ ಕ್ರಿಮಿನಲ್‌ ತನಿಖೆಗಾಗಿ ಎಸ್‌‍ಐಟಿ ರಚನ��� ಮಾಡಲಾಗಿದೆ. ಬಿಟ್‌ ಕಾಯಿನ್‌ ಹಗರಣದ ತನಿಖೆ ಯಾವ ಹಂತದಲ್ಲಿದೆ ಎಂದು ತಮಗೆ ಗೊತ್ತಿಲ್ಲ. ಸಂಬಂಧಪಟ್ಟ ಸಚಿವರು ಆದರ ಬಗ್ಗೆ ಪ್ರತಿಕ್ರಿಯಿಸಬೇಕು. ಈ ಹಿಂದೆ ಬಿಟ್‌ ಕಾಯಿನ್‌ ಬಗ್ಗೆ ತಾಂತ್ರಿಕ ಅಂಶಗಳನ್ನು ಜನಸಾಮಾನ್ಯರಿಗೆ ಅರ್ಥವಾಗುವಂತೆ ತಾವು ವಿವರಣೆ ನೀಡಿದ್ದರಿಂದಾಗಿ ಆ ಹಗರಣದಲ್ಲಿ ನನ್ನ ಹೇಳಿಕೆಗಳನ್ನು ಪ್ರಮುಖವಾಗಿ ಪ್ರಸ್ತಾಪಿಸಲಾಗುತ್ತಿದೆ ಎಂದು ಹೇಳಿದರು.
10
+ ಕೈಗಾರಿಕಾ ಸಿಎ ನಿವೇಶನ ಪಡೆದ ಬಗ್ಗೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ತಮಗೂ ನೋಟಿಸ್‌‍ ಕೊಟ್ಟು ವಿವರಣೆ ಕೇಳಿದ್ದಾರೆ. ಕಾಂಗ್ರೆಸಿಗರ ವಿರುದ್ಧ ಆರೋಪಗಳು ಬಂದಾಗ ಬೆಳಕಿನ ವೇಗದಲ್ಲಿ ರಾಜಭವನ ಕ್ರಮ ಕೈಗೊಳ್ಳುತ್ತದೆ. ಅದೇ ಬಿಜೆಪಿ-ಜೆಡಿಎಸ್‌‍ ವಿರುದ್ಧ ದೂರುಗಳು ಬಂದರೆ ಕಂಡೂ ಕಾಣದಂತೆ ಇರಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.
eesanje/url_46_27_4.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ ಮಲೆನಾಡಲ್ಲಿ ಒತ್ತುವರಿ ತೆರವು ವಿರೋಧಿಸಿ ರೈತರ ಹೋರಾಟಕ್ಕೆ ಶ್ರೀಗಳ ಬೆಂಬಲ
2
+ '
3
+ ಬಾಳೆಹೊನ್ನೂರು,ಸೆ.2– ಮಲೆನಾಡು ಭಾಗದಲ್ಲಿ ಅರಣ್ಯ ಒತ್ತುವರಿ ತೆರವು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಬಾಳೆಹೊನ್ನೂರಿನ ರಂಭಾಪುರ ಶ್ರೀಗಳಾದ ಶ್ರೀ ಡಾ.ವೀರಾಸೋಮೇಶ್ವರ ಜಗದ್ಗುರು ಹಾಗೂ ಆದಿಚುಂಚನಗಿರಿ ಶೃಂಗೇರಿ ಶಾಖಾ ಮಠದ ಶ್ರೀ ಗುಣನಾಥ ಸ್ವಾಮೀಜಿ ಅವರು ಬೆಂಬಲ ಘೋಷಿಸಿದರು.
4
+ ರಂಭಾಪುರಿ ಪೀಠದಲ್ಲಿ ಮಲೆನಾಡು-ಕರಾವಳಿ ಜನಪರ ಒಕ್ಕೂಟ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ರಂಭಾಪುರಿ ಸ್ವಾಮೀಜಿ, ಬಹಳಷ್ಟು ಸಣ್ಣ ಕುಟುಂಬಗಳು ಜೀವನೋಪಾಯಕ್ಕಾಗಿ ಅರಣ್ಯ ಭೂಮಿಯನ್ನು ಸಾಗುವಳಿ ಮಾಡಿಕೊಂಡು ಜೀವನ ಕಟ್ಟಿಕೊಂಡಿವೆ. ಸರ್ಕಾರ ಅದನ್ನು ಕಾನೂನಿನ ಅಡಿಯಲ್ಲಿ ಸಕ್ರಮಗೊಳಿಸುವ ಮೂಲಕ ಅನುಕೂಲ ಮಾಡಿಕೊಡಬೇಕು ಎಂದರು.
5
+ ಕಸ್ತೂರಿರಂಗನ್‌ ವರದಿ ಜಾರಿಯಿಂದ ಆಗುವ ಸಮಸ್ಯೆಗಳ ಬಗ್ಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವರಿಕೆ ಮಾಡಿಕೊಡಬೇಕು. ಅರಣ್ಯ ಸಚಿವರಿಗೆ ಮಲೆನಾಡಿನ ಸಮಸ್ಯೆಗಳ ಬಗ್ಗೆ ಸೂಕ್ಷ್ಮವಾಗಿ ತಿಳಿಸಿದ್ದೇನೆ. ಜನರ ಹಿತಕ್ಕಾಗಿ ರಂಭಾಪುರಿ ಪೀಠವೂ
6
+ ಜನಪರ ಹೋರಾಟದಲ್ಲಿ ಭಾಗವಹಿಸಲು ಸಿದ್ಧವಿದೆ ಹಾಗೂ ಹೋರಾಟಕ್ಕೆ ನಮ ಬೆಂಬಲವಿದೆ ಎಂದರು.ರೈತರ ಹಿತಕ್ಕಾಗಿ ನಾವು ದೆಹಲಿಯವರೆಗೆ ಬಂದು ಹೋರಾಟ ಮಾಡಲು ಸಿದ್ಧರಿದ್ದೇವೆ ಎಂದು ಹೇಳಿದರು.
7
+ ಸಭೆಯಲ್ಲಿ ಮಾತನಾಡಿದ ಶ್ರೀ ಗುಣನಾಥ ಸ್ವಾಮೀಜಿ, ಶತಮಾನಗಳಿಂದ ಪ್ರಕೃತಿ ವಿಕೋಪ ಆಗುತ್ತಿದೆ. ವಯನಾಡಿನಲ್ಲಿ ನಡೆದಿದ್ದು ಮೊದಲೇನೂ ಅಲ್ಲ. ನಗರೀಕರಣದಿಂದ ಕಾಡು ನಾಶವಾಗಿದೆಯೇ ಹೊರತು ರೈತರಿಂದ ಅಲ್ಲ. ಕಾಫಿ ಗಿಡ ಪರಿಸರಕ್ಕೆ ಪೂರಕವಾಗಿದೆ ಎಂದರು.
8
+ ತೋಟ ಮಾಡುವುದರಿಂದ ಗುಡ್ಡ ಕುಸಿಯುವುದಿಲ್ಲ. ರೈತರು ಎಲ್ಲೂ ಹಸಿರನ್ನು ನಾಶ ಮಾಡಿಲ್ಲ. ಎಲ್ಲೋ ಆದ ಘಟನೆಯನ್ನು ರೈತರ ತಲೆಗೆ ಕಟ್ಟುವುದು ಸರಿಯಲ್ಲ. ಎಲ್ಲರ ಬದುಕೂ ಹಸನಾಗಲಿ ಎಂದು ದುಡಿದು ಅನ್ನ ನೀಡುವ ರೈತನ ಬದುಕು ಈಗ ಬೀದಿಗೆ ಬಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.
9
+ ಕೇರಳದಲ್ಲಿ ಮೇಘಸ್ಫೋಟ ನಡೆದಿರುವುದು ಗುಡ್ಡದಲ್ಲೇ ಹೊರತು ಊರಿನಲ್ಲಿ ಅಲ್ಲ. ಮಠಗಳು ನಡೆಯುತ್ತಿರುವುದು ಅನ್ನದಾತರು ನೀಡುವ ಭಿಕ್ಷೆಯಿಂದಲೇ. ಒತ್ತುವರಿ ತೆರವು ವಿರುದ್ಧದ ಹೋರಾಟಕ್ಕೆ ಮಠದ ಸಂಪೂರ್ಣ ಬೆಂಬಲವಿದೆ ಎಂದರು.
10
+ ಮಲೆನಾಡು ರೈತರ, ಕಾರ್ಮಿಕರ ಹಿತಾಸಕ್ತಿಗಾಗಿ ನಾವು ಹೋರಾಟಕ್ಕೆ ಸದಾ ಸಿದ್ಧ ಎಂದು ಶ್ರೀಗಳು ನುಡಿದರು.ಪರಿಸರವಾದಿ ಕಲ್ಕುಳಿ ವಿಠಲ ಹೆಗ್ಡೆ ಮಾತನಾಡಿ, ಜಿಲ್ಲೆಯಲ್ಲಿನ ಕಂದಾಯ ಭೂಮಿಯನ್ನು 4(1) ನೋಟಿಫಿಕೇಷನ್‌ನಡಿ ಅರಣ್ಯ ಇಲಾಖೆಗೆ ವರ್ಗಾವಣೆ ಮಾಡುವ ಮೂಲಕ ಮಲೆನಾಡನ್ನು ಜನರಹಿತ ಪ್ರದೇಶವನ್ನಾಗಿ ಮಾಡುವ ಹುನ್ನಾರ ಅಡಗಿದೆ ಎಂದು ಆರೋಪಿಸಿದರು.
11
+ ಶಿರಸಿಯ ವಕೀಲ ಎ.ರವೀಂದ್ರ ನಾರಾಯಣ ನಾಯ್ಕ್ ಮಾತನಾಡಿ, ಜನಾಂದೋಲನದ ಮೂಲಕ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದರು. ವಕೀಲ ಸುಧೀರ್‌ಕುಮಾರ್‌ ಮುರೊಳ್ಳಿ ಮಾತನಾಡಿ ಒತ್ತುವರಿ ವಿರೊಧಿಸಿ ಶೀಘ್ರದಲ್ಲೇ ಶಿವಮೊಗ್ಗವನ್ನು ಕೇಂದ್ರವನ್ನಾಗಿಸಿ ಕೊಂಡು ನ್ಯಾಯವಾದಿಗಳ ಸಭೆ ನಡೆಸ ಲಾಗುವುದು ಎಂದು ತಿಳಿಸಿದರು.
12
+ ಶೀಘ್ರದಲ್ಲೇ ವಿವಿಧ ಸಂಘಟನೆಯ ಮುಖಂಡರು, ಶಾಸಕರು, ಅರಣ್ಯ ಸಚಿವರ ಸಭೆಯನ್ನು ಆಯೋಜಿಸಲಾಗುವುದು ಎಂದು ಶಾಸಕ ಟಿ.ಡಿ.ರಾಜೇಗೌಡ ಆಶ್ವಾಸನೆ ನೀಡಿದರು.
13
+ ಒತ್ತುವರಿ ಪ್ರಕರಣ ಈ ಸ್ವರೂಪ ತಾಳಲು ಕೇಂದ್ರ ಸರ್ಕಾರದ ಕರಾಳ ಕಾನೂನು ಕಾರಣ ಎಂದು ನರಸಿಂಹರಾಜಪುರದ ಮನೋಹರ್‌ ಅಭಿಪ್ರಾಯಪಟ್ಟರು. ಸಭೆಯಲ್ಲಿ ಸಂಘಟನೆ ಅಧ್ಯಕ್ಷ ಅನಿಲ್‌ ಹೊಸಕೊಪ್ಪ, ಪರಿಸರವಾದಿ ಕಲ್ಕುಳಿ ವಿಠಲಹೆಗ್ಡೆ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.
14
+ ಪ್ರಮುಖ ನಿರ್ಣಯಗಳು*ಸೆಕ್ಷನ್‌ 4 ಉದ್ಘೋಷಣೆ ವಾಪಸ್‌‍ ಪಡೆಯಬೇಕು.
eesanje/url_46_27_5.txt ADDED
@@ -0,0 +1,14 @@
 
 
 
 
 
 
 
 
 
 
 
 
 
 
 
1
+ ಭ್ರಷ್ಟಾಚಾರ ನಡೆಸಿಲ್ಲವೆಂದರೆ ತಂದೆ-ತಾಯಿ ಮೇಲೆ ಆಣೆ ಮಾಡಿ : ನಿರಾಣಿ ಚಾಲೆಂಜ್
2
+
3
+ ಬೆಂಗಳೂರು,ಸೆ.2– ನೀರಾವರಿ ಹಾಗೂ ಕೈಗಾರಿಕಾ ಸಚಿವರಾದ ಮೇಲೆ ನೀವು ಒಂದೇ ಒಂದೂ ಭ್ರಷ್ಟಾಚಾರವನ್ನು ಅಥವಾ ಯಾರದೋ ಆಸ್ತಿಯನ್ನು ಕಬಳಿಸಿಲ್ಲ ಎಂದು ನಿಮ ತಂದೆತಾಯಿ ಮೇಲೆ ಆಣೆ ಮಾಡುವ ತಾಕತ್ತು ನಿಮಗಿದೆಯೇ ಎಂದು ಸಚಿವ ಎಂ.ಬಿ.ಪಾಟೀಲ್‌ಗೆ ಮಾಜಿ ಸಚಿವ ಮುರುಗೇಶ್‌ ಆರ್‌.ನಿರಾಣಿ ಮತ್ತೆ ಬಹಿರಂಗ ಸವಾಲು ಎಸೆದಿದ್ದಾರೆ.
4
+ ಬಾಗಲಕೋಟೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಚಿವ ಎಂ.ಬಿ.ಪಾಟೀಲ್‌ ವಿರುದ್ಧ ಮತ್ತೆ ಬೆಂಕಿ ಉಗುಳಿದರು. ನೀವು ಈ ಹಿಂದೆ ನೀರಾವರಿ ಸಚಿವರಾಗಿದ್ದಾಗ ಹಾಗೂ ಈಗ ಕೈಗಾರಿಕಾ ಸಚಿವರಾಗಿ ಎಷ್ಟೆಷ್ಟು ಆಸ್ತಿ ಕಬಳಿಸಿದ್ದೀರಿ ಎಂಬುದನ್ನು ದಾಖಲೆಯ ಸಮೇತ ಬಿಚ್ಚಿಡುತ್ತೇನೆ. ಕಡಿಮೆ ದರದಲ್ಲಿ ಕೆಐಎಡಿಬಿ ಮೂಲಕ ಜಮೀನು ಖರೀದಿಸಿ ಅದನ್ನು ತಮಿಳುನಾಡಿಗೆ ಮಾರಾಟ ಮಾಡಿದ್ದು ಗೊತ್ತಿದೆ. ಸುಮನಿದ್ದರೆ ಒಳ್ಳೆಯದು. ಇಲ್ಲದಿದ್ದರೆ ಬಂಡವಾಳ ಬಿಚ್ಚುತ್ತೇನೆ ಎಂದು ಎಚ್ಚರಿಕೆ ಕೊಟ್ಟರು.
5
+ ನಾನು ಕೈಗಾರಿಕಾ ಸಚಿವನಾದ ಮೇಲೆ ಜಿಮ್‌ ನಡೆಸಿ ಲಕ್ಷಾಂತರ ಯುವಕರಿಗೆ ಉದ್ಯೋಗ ಕೊಡಿಸಿದ್ದೇನೆ. ರಾಜ್ಯಕ್ಕೆ ಬಂಡವಾಳ ಹರಿದುಬರುವಂತೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ನನ್ನ ಅವಧಿಯಲ್ಲಿ ಕೈಗಾರಿಕೆಗಳಿಗೆ ಎಷ್ಟು ಉತ್ತೇಜನ ನೀಡಲಾಗಿತ್ತು ಎಂಬುದಕ್ಕೆ ದಾಖಲೆಗಳಿವೆ.
6
+ ಸಚಿವರಾದ ಮೇಲೆ ನೀವು ಇಲಾಖೆಗೆ ಎಷ್ಟು ಬಂಡವಾಳ ತಂದಿದ್ದೀರಿ? ಎಷ್ಟು ಉದ್ಯೋಗ ಕೊಟ್ಟಿದ್ದೀರಿ ಶ್ವೇತಪತ್ರ ಹೊರಡಿಸಿ ಎಂದು ಒತ್ತಾಯಿಸಿದರು. ಇನ್ನೊಬ್ಬರ ಬಗ್ಗೆ ಮಾತನಾಡುವಾಗ ಎಚ್ಚರಿಕೆಯಿಂದ ಮಾತನಾಡಿದರೆ ನಿಮಗೂ ಒಳ್ಳೆಯದು, ನಿಮ ಹಿರಿತನಕ್ಕೂ ಒಳ್ಳೆಯದು.ನಿಮತರ ನಾನು ಯಾರೋ ಕಟ್ಟಿದ ಕಾಲೇಜನ್ನು ಸ್ವಂತ ಲಾಭಕ್ಕಾಗಿ ಮಾಡಿಕೊಂಡಿಲ್ಲ. ಬಂಡವಾಳ ಬಿಚ್ಚಿದರೆ ನೀವು ತಲೆ ಎತ್ತಿ ತಿರಗಬಾರದು. ನನಗೂ ಏಕವಚನದಲ್ಲಿ ಮಾತನಾಡಲು ಬರುತ್ತದೆ ಎಂಬುದನ್ನು ಎಂ.ಬಿ.ಪಾಟೀಲ್‌ ಮರೆಯಬಾರದು ಎಂದು ಎಚ್ಚರಿಸಿದರು.
7
+ 2022ರಲ್ಲಿ ಇನ್ವೆಸ್ಟ್‌ ಕರ್ನಾಟಕ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಹಮಿಕೊಳ್ಳಲಾಗಿತ್ತು. ಆಗ ಕೈಗಾರಿಕೆ ಇಲಾಖೆ ಅಧಿಕಾರಿಗಳು ಐದು ನಿಮಿಷದ ತ್ರಿಡಿ ಪೊಮೊ ವಿಡಿಯೋ ಮಾಡುವುದಕ್ಕೆ ಒಂದು ಕಂಪನಿಗೆ ಗುತ್ತಿಗೆ ನೀಡಿದ್ದರು. ಅದರ ಬಜೆಟ್‌ ನಾಲ್ಕುವರೆ ಕೋಟಿ ರೂ. ಆಗಿತ್ತು. ಇದು ನನ್ನ ಗಮನಕ್ಕೆ ಬಂದಿದ್ದೇ ತಡ ನಾನೆ ಅದನ್ನು ತಡೆದೆ.
8
+ ಐದು ನಿಮಿಷದ ವಿಡಿಯೋ ಮಾಡಿದ್ದಕ್ಕಾಗಿ ನಾಲ್ಕುವರೆ ಕೋಟಿ ರೂ. ಇದು ಬಹಳ ಹೆಚ್ಚಾಯಿತು. ಕೂಡಲೇ ರದ್ದು ಮಾಡಿ ಎಂದು ಕೈಗಾರಿಕೆ ಇಲಾಖೆ ಮುಖ್ಯ ಕಾರ್ಯದರ್ಶಿ ಹಾಗೂ ಅಪರ ಕಾರ್ಯದರ್ಶಿಗೆ ಪತ್ರ ಬರೆದು ಸೂಚನೆ ನೀಡಿದ್ದೆ ಎಂದು ತಮ ಮೇಲಿನ ಆರೋಪವನ್ನು ಅಲ್ಲಗೆಳೆದಿದ್ದಾರೆ.
9
+ ಕಾಂಗ್ರೆಸ್‌‍ನವರು ತಮ ಮೇಲಿನ ಪ್ರಕರಣವನ್ನು ವಿಷಯಾಂತರ ಮಾಡುವುದಕ್ಕೆ ನನ್ನ ��ೇಲೆ ಆರೋಪ ಮಾಡುತ್ತಿದ್ದಾರೆ. ನನ್ನ ತೇಜೋವಧೆ ಮಾಡುತ್ತಿದ್ದಾರೆ. ಇವರು ನಾಲ್ವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಕೊಡಿ ಅಂತಿದ್ದಾರೆ ಹೊರತು, ಇವರು ಯಾವ ಆರೋಪ ಮಾಡಿರುವ ತಪ್ಪು ಏನು ಅಂತಾನೆ ಹೇಳುತ್ತಿಲ್ಲ. ಇವರ ಆರೋಪದಲ್ಲಿ ಹುರುಳಿಲ್ಲ ಎಂದಿದ್ದಾರೆ.
10
+ ಅಂದು ನಾನು ಟೆಂಡರ್‌ ರದ್ದು ಮಾಡಿದ್ದಕ್ಕೆ ಜಾಹೀರಾತು ಕಂಪನಿಯವರು ನ್ಯಾಯಾಲಯದ ಮೊರೆ ಹೋಗಿದ್ದರು. ಕೋರ್ಟ್‌ ಏಕ ಸದಸ್ಯ ಪೀಠ ಅವರು ಈಗಾಗಲೇ ನಿಮ ಆದೇಶದ ಪ್ರಕಾರ ವಿಡಿಯೋ ತಯಾರಿಸಿದ್ದಾರೆ. ಅದಕ್ಕಾಗಿ ಹಣ ಪಾವಿತಿಸಿ ಅಂತ ಹೇಳಿತ್ತು.
11
+ ನಾವು ಮತ್ತೆ ಕೋರ್ಟ್‌ ದ್ವಿಸದಸ್ಯ ಪೀಠಕ್ಕೆ ಮೇಲನವಿ ಸಲ್ಲಿಸಿದೆವು. ಆಗ ದ್ವಿಸದಸ್ಯ ಪೀಠ ಸಚಿವರು ಹೇಳಿದ್ದು ಸರಿ ಇದೆ. ಐದು ನಿಮಿಷದ ವಿಡಿಯೋ ಚಿತ್ರೀಕರಣಕ್ಕೆ ನಾಲ್ಕುವರೆ ಕೋಟಿ ರೂ. ತೀರಾ ಹೆಚ್ಚಾಯಿತು ಎಂದು ನನ್ನ ಪತ್ರ ಉಲ್ಲೇಖ ಮಾಡಿ ಆದೇಶ ನೀಡಿದೆ ಎಂದು ತಿಳಿಸಿದರು.
12
+ ಹೀಗಿರುವಾಗ ಸಿಎಂ, ಡಿಸಿಎಂ, ಸಚಿವರು ನನ್ನ ಮೇಲೆ ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ಸುಮನೆ ಗಾಳಿಯಲ್ಲಿ ಗುಂಡು ಹೊಡೆಯುತ್ತಿದ್ದಾರೆ. ನನಗೆ ಇದುವರೆಗೂ ರಾಜಭವನದಿಂದ ಆಗಲಿ, ಯಾವುದೇ ತನಿಖಾ ಸಂಸ್ಥೆಗಳಿಂದಾಗಲಿ ಒಂದೇ ಒಂದು ನೊಟೀಸ್‌‍ ಬಂದಿಲ್ಲ. ಯಾರು ವಿಚಾರಣೆಗೆ ಕರೆದಿಲ್ಲ.
13
+ ನಾನು ಎಲ್ಲ ತನಿಖೆಗೂ ಸಿದ್ದನಿದ್ದೇನೆ. ಸಿಬಿಐ ತನಿಖೆಗೂ ಬೇಕಿದ್ದರೆ ಕೊಡಲಿ. ಯಾಕೆಂದರೆ ನಾನು ನಿರಪರಾಧಿ. ಸಿಎಂ, ಡಿಸಿಎಂ ಕೂಡ ಧೈರ್ಯದಿಂದ ತನಿಖೆ ಎದುರಿಸಲಿ ಎಂದು ಟಾಂಗ್‌ ನೀಡಿದರು.
14
+ ಅನೇಕರು ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಆಚೆ ಇದ್ದಾರೆ. ನಾನು ಈಗಲೂ ಯಾವುದೇ ನ್ಯಾಯಾಲಯದಿಂದ ಜಾಮೀನು ತಂದಿಲ್ಲ. ಏಕೆಂದರೆ ನಾನು ತಪ್ಪು ಮಾಡಿಲ್ಲ ಎಂಬ ಅಚಲವಾದ ನಂಬಿಕೆ ಇದೆ. ಹೀಗಾಗಿ ದೇಶದ ಕಾನೂನಿನಲ್ಲಿ ನಂಬಿಕೆ ಇಟ್ಟಿರುವುದರಿಂದ ಯಾರಿಗೂ ಹೆದರುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
eesanje/url_46_27_6.txt ADDED
@@ -0,0 +1,10 @@
 
 
 
 
 
 
 
 
 
 
 
1
+ ಪೋಕ್ಸೋ ಪ್ರಕರಣದ ಸಂತ್ರಸ್ತೆಯ ತಾಯಿ ಸಾವಿನ ಪ್ರಕರಣಕ್ಕೆ ಮರುಜೀವ
2
+ '
3
+ ಬೆಂಗಳೂರು,ಆ.2– ಮಾಜಿ ಮುಖ್ಯಮಂತ್ರಿ ಬಿ.ಎಸ್‌‍ ಯಡಿಯೂರಪ್ಪ ಅವರ ಮೇಲ್ದಿ ಪೋಕ್ಸೋ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವಾಗಲೇ ಸಂತ್ರಸ್ತೆಯ ತಾಯಿಯ ಸಾವಿನ ಪ್ರಕರಣ ಮರುಜೀವ ಪಡೆದುಕೊಂಡಿದೆ.
4
+ ಸಂತ್ರಸ್ತೆಯ ತಾಯಿ ಮಮತಾ ಸಾವಿನ ವಿಚಾರದ ಬಗ್ಗೆ ರಾಜ್ಯ ಮಹಿಳಾ ಆಯೋಗ ಅನುಮಾನ ವ್ಯಕ್ತಪಡಿಸಿದೆ. ಈ ಹಿನ್ನೆಲೆ ಈ ಸಾವಿನ ಪ್ರಕರಣದ ತನಿಖೆ ನಡೆಸುವಂತೆ ಪೊಲೀಸ್‌‍ ಇಲಾಖೆಗೆ ಆಯೋಗದ ಮುಖ್ಯಸ್ಥೆ ನಾಗಲಕ್ಷಿ ಚೌಧರಿ ಪತ್ರ ಬರೆದಿದ್ದಾರೆ.
5
+ ರಾಜ್ಯ ಪೊಲೀಸ್‌‍ ಆಯುಕ್ತರಿಗೆ ಪತ್ರ ಬರೆದು ಸೂಕ್ತ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಮುಖ್ಯಸ್ಥೆ ನಾಗಲಕ್ಷೀ ಚೌಧರಿ ಆಗ್ರಹ ಮಾಡಿದ್ದು, ಆದಷ್ಟು ಬೇಗ ತನಿಖಾ ವರದಿಯನ್ನು ಆಯೋಗಕ್ಕೆ ಸಲ್ಲಿಸುವಂತೆ ಕೋರಿಕೊಂಡಿದ್ದಾರೆ. ಈ ಸಂಬಂಧ ಹುಳಿಮಾವು ಪೊಲೀಸ್‌‍ ಠಾಣೆಯಲ್ಲಿ ಮಮತಾ ಸಾವು ಪ್ರಕರಣ ದಾಖಲಾಗಿದೆ.
6
+ ಏನಿದು ಪ್ರಕರಣ?: 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಕಳೆದ 2024ರ ಮಾರ್ಚ್‌ 15ರಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ ಐಪಿಸಿ ಸೆಕ್ಷನ್‌ 354 (ಎ)ರಡಿ ಪ್ರಕರಣ ದಾಖಲಿಸಲಾಗಿತ್ತು. ಸಂತ್ರಸ್ತೆಯ ತಾಯಿ ಸದಾಶಿವನಗರ ಪೊಲೀಸ್‌‍ ಠಾಣೆಯಲ್ಲಿ ದೂರು ದಾಖಲಿಸಿದ್ದರು.
7
+ ಆದರೆ ಅಚ್ಚರಿಯ ಸಂಗತಿ ಎಂದರೆ ಬಿಎಸ್‌‍ವೈ ವಿರುದ್ಧ ಲೈಂಗಿಕ ದೌರ್ಜನ್ಯದ ದೂರು ನೀಡಿದ್ದ ಬಾಲಕಿಯ ತಾಯಿ ಮಾರ್ಚ್‌ 27ರಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು.ಉಸಿರಾಟದ ತೊಂದರೆಗೆ ಒಳಗಾಗಿ ಹುಳಿಮಾವು ಬಳಿಯ ನ್ಯಾನೋ ಖಾಸಗಿ ಆಸ್ಪತ್ರೆಗೆ ಮಾರ್ಚ್‌ 26ರ ರಾತ್ರಿ ದಾಖಲಾಗಿದ್ದರು. ಆಸ್ಪತ್ರೆಗೆ ದಾಖಲಾದ ಬೆನ್ನಲ್ಲೇ ಆಕೆಗೆ ಕೂಡಲೇ ವೈದ್ಯರು ತಪಾಸಣೆ ನಡೆಸಿದ್ದರು.
8
+ ತಪಾಸಣೆ ವೇಳೆ ಸ್ಯಾಚುರೇಷನ್‌ ಲೇವೆಲ್‌ ಲೋ ಆಗಿತ್ತು. ಕೂಡಲೇ ವೈದ್ಯರಿಂದ ಚಿಕಿತ್ಸೆ ಆರಂಭಿಸಲಾಗಿತ್ತು. ಅಲ್ಲದೆ ವೆಂಟಿಲೇಟರ್‌ಗೆ ಶಿಫ್‌್ಟ ಮಾಡಲು ಸಿದ್ಧತೆ ನಡೆಸಲಾಗಿತ್ತು. ಅಷ್ಟೊತ್ತಿಗೆ ಮೋಷನ್‌ ಹೋಗಬೇಕು ಎಂದು ದೂರುದಾರೆ ಮಮತ ಹೇಳಿದ್ದರು. ಆದರೆ ಕೆಲವೇ ಹೊತ್ತಿನಲ್ಲಿ ನಿತ್ರಾಣಗೊಂಡು ಸಾವನ್ನಪ್ಪಿದ್ದಾರೆ ಎಂದು ನ್ಯಾನೋ ಆಸ್ಪತ್ರೆ ಮೂಲಗಳು ತಿಳಿಸಿದ್ದವು.
9
+ ಪೋಕ್ಸೋ ಎಫ್‌ಐಆರ್‌ನಲ್ಲಿ ಏನಿದೆ?:ದೂರುದಾರರು ತಿಳಿಸಿರುವಂತೆ ತಾಯಿ ಮತ್ತು ಮಗಳು ಕಳೆದ ಫೆಬ್ರವರಿ 2ರಂದು ಯಡಿಯೂರಪ್ಪ ಅವರ ನಿವಾಸಕ್ಕೆ ಹೋಗಿದ್ದರು. ಅತ್ಯಾಚಾರ ಪ್ರಕರಣದಲ್ಲಿ ನಮಗೆ ಅನ್ಯಾಯವಾಗಿದೆ. ವಿಶೇಷ ತನಿಖಾ ತಂಡ ರಚಿಸಿ ನಮಗೆ ನ್ಯಾಯ ದೊರಕಿಸಿಕೊಡಿ ಎಂದು ಸಂತ್ರಸ್ತೆ ಹಾಗೂ ಸಂತ್ರಸ್ತೆಯ ತಾಯಿ ಮನವಿ ಮಾಡಿದ್ದರು.
10
+ ಈ ವೇಳೆ ಯಡಿಯೂರಪ್ಪ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದೂರು ನೀಡಲಾಗಿತ್ತು. ಬಳಿಕ ಯಡಿಯೂರಪ್ಪನವರು ಕ್ಷಮೆಯಾಚಿಸಿ, ಪ್ರಕರಣದಲ್ಲಿ ನಿಮಗೆ ಸಹಾಯ ಮಾಡುತ್ತೇನೆ, ಈ ಘಟನೆ ಬಗ್ಗೆ ಹೊರಗಡೆ ಎಲ್ಲೂ ಮಾತನಾಡಬಾರದು ಎಂದು ಹೇಳಿದ್ದಾರೆಂದು ಸಂತ್ರಸ್ತೆಯ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.
eesanje/url_46_27_7.txt ADDED
@@ -0,0 +1,17 @@
 
 
 
 
 
 
 
 
 
 
 
 
 
 
 
 
 
 
1
+ ಬಿಜೆಪಿ ಆಡಳಿತದ ಅವಧಿಯ ಹಗರಣಗಳಿಗೆ ತಾರ್ಕಿಕ ಅಂತ್ಯ ನೀಡುತ್ತೇವೆ : ಎಂ.ಬಿ.ಪಾಟೀಲ್‌
2
+ :
3
+ ಬೆಂಗಳೂರು,ಸೆ.2– ಬಿಜೆಪಿ ಸರ್ಕಾರದ ಅವಧಿಯಲ್ಲಿನ ಎಲ್ಲಾ ಹಗರಣಗಳನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಾಗುವುದು. ಇದರಲ್ಲಿ ಯಾವುದೇ ರಾಜಿ ಇಲ್ಲ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ.
4
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್‌ ಸಂದರ್ಭದಲ್ಲಿ ಸಾವಿನ ನಡುವೆಯೂ ಹಣ ಲೂಟಿ ಹೊಡೆದಿದ್ದಾರೆ. ಪಿಎಸ್‌‍ಐ, ಬಿಟ್‌ ಕಾಯಿನ್‌ ಹಗರಣ ಸೇರಿದಂತೆ ಎಲ್ಲವನ್ನೂ ತನಿಖೆಗೊಳಪಡಿಸಲಾಗಿದೆ. ವರದಿ ಪಡೆದು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
5
+ ಕೋವಿಡ್‌ ಸಂದರ್ಭದಲ್ಲಿನ ಹಗರಣಗಳಿಗೆ ಆಗಿನ ಸಚಿವರೇ ಹೊಣೆಗಾರರು ಎಂದ ಎಂ.ಬಿ.ಪಾಟೀಲ್‌, ವೈದ್ಯಕೀಯ ಕಾಲೇಜುಗಳ ನಿರ್ಮಾಣದಲ್ಲಿ ಏಕಾಏಕಿ ಹಲವಾರು ಪಟ್ಟು ಯೋಜನಾ ವೆಚ್ಚವನ್ನು ಹೆಚ್ಚಿಸಲಾಗಿದೆ.
6
+ ಸುಮಾರು 15-20 ಸಚಿವ ಸಂಪುಟ ಸಭೆಗಳಲ್ಲಿ ಈ ಬಗ್ಗೆ ನಿರಂತರ ಚರ್ಚೆಯಾಗಿದೆ. 300-400 ಕೋಟಿ ರೂ. ಏಕಾಏಕಿ ಹೆಚ್ಚಿಸುವ ಬಗ್ಗೆ ಸಚಿವ ಪರಮೇಶ್ವರ್‌ ಸೇರಿದಂತೆ ಹಲವರು ಆತಂಕ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.
7
+ ನಮ ಅನಿವಾರ್ಯತೆಗಳು ಹೇಗಿದ್ದವು ಎಂದರೆ, ಅವರ ಕಾಲದಲ್ಲಿ ಮಾಡಿದ್ದ ಭ್ರಷ್ಟಾಚಾರ ಕಣ್ಣೆದುರಿಗೇ ಇದ್ದರೂ ಬಾಕಿ ಉಳಿದ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡುವ ಪರಿಸ್ಥಿತಿ ಎದುರಾಗಿತ್ತು. ಇಲ್ಲವಾದರೆ ಕಾಮಗಾರಿ ಅರ್ಧಕ್ಕೇ ನಿಲ್ಲುತ್ತಿತ್ತು. ಯೋಜನೆ ವ್ಯರ್ಥವಾಗುತ್ತಿತ್ತು. ಜನರಿಗೆ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬಾಕಿ ಬಿಡುಗಡೆ ಮಾಡಿ ಕಾಮಗಾರಿ ಪೂರ್ಣಗೊಳಿಸಬೇಕಾಗಿದೆ ಎಂದರು.
8
+ ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಾಗ ಸ್ವಂತ ವಿವೇಚನೆಯಿಂದ ಕೆಲಸ ಮಾಡಿಲ್ಲ ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಅಣತಿಯಂತೆ ವರ್ತಿಸುತ್ತಿದ್ದಾರೆ.
9
+ ರಾಜಭವನ ಚಲೋ ನಡೆಸಿ ನಾವು ರಾಜ್ಯಪಾಲರನ್ನು ಭೇಟಿ ಮಾಡಿದಾಗ ಶಶಿಕಲಾ ಜೊಲ್ಲೆ ಪ್ರಕರಣವನ್ನು ಇತ್ಯರ್ಥಪಡಿಸಲಾಗಿದೆ. ಉಳಿದ ಮೂರು ಪ್ರಕರಣಗಳ ಅಭಿಯೋಜನೆಗೆ ಪೂರ್ವಾನುಮತಿ ಕೇಳಿದ್ದ ಕಡತಕ್ಕೆ ಸ್ಪಷ್ಟನೆ ಕೇಳಿ ವಾಪಸ್‌‍ ಕಳುಹಿಸಿರುವುದಾಗಿ ತಿಳಿಸಿದ್ದಾರೆ. ಒಟ್ಟಿನಲ್ಲಿ ಕಡತಗಳಿನ್ನೂ ರಾಜ್ಯಪಾಲರ ಬಳಿಯೇ ಉಳಿದುಕೊಂಡಿವೆ ಎಂದರು.
10
+ ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರ ಇಲ್ಲ. ಹೀಗಾಗಿ ನ್ಯಾಯಾಲಯದಲ್ಲಿ ಜಯ ಸಿಗುವ ವಿಶ್ವಾಸವಿದೆ. ಮತ್ತಷ್ಟು ಶಕ್ತಿಶಾಲಿಯಾಗಿ ಸಿದ್ದರಾಮಯ್ಯ ಹೊರಹೊಮುತ್ತಾರೆ.
11
+ ಆರ್‌.ವಿ.ದೇಶಪಾಂಡೆ ಸೇರಿದಂತೆ ಹಲವು ಮಂದಿ ಮುಖ್ಯಮಂತ್ರಿಯಾಗುವ ಕುರಿತು ಹೇಳಿಕೆ ನೀಡಿರುವುದು ಸಾಂದರ್ಭಿಕ ಅಷ್ಟೇ. ನಾನು ಕೂಡ ಈ ಮೊದಲು ಇಂತಹ ಹೇಳಿಕೆ ನೀಡಿದ್ದೇನೆ. ಆದರೆ ನಮಲ್ಲಿ ಯಾವುದೇ ಗೊಂದಲಗಳಿಲ್ಲ. ಪರಸ್ಪರ ಭೇಟಿಯಾಗುತ್ತಿರು���್ತೇವೆ.
12
+ ಪಕ್ಷದ ವಿಚಾರ, ಇಲಾಖೆ ಮತ್ತು ಕ್ಷೇತ್ರಕ್ಕೆ ಸಂಬಂಧಪಟ್ಟ ಚರ್ಚೆಗಳಾಗುತ್ತವೆ. ರಾಜಕೀಯದ ಬಗ್ಗೆಯೂ ಮಾತನಾಡುತ್ತೇವೆ. ಅದರಲ್ಲಿ ತಪ್ಪೇನೂ ಇಲ್ಲ ಎಂದು ಸಮರ್ಥಿಸಿಕೊಂಡರು.ಮುಖ್ಯಮಂತ್ರಿ ಬದಲಾವಣೆ ಎಂಬುದು ಹಗಲು ಕನಸು. ಅದು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
13
+ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸುದೀರ್ಘ ರಾಜಕೀಯ ಅನುಭವ ಹೊಂದಿದ್ದು, ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬುದು ಆಧಾರರಹಿತ ಎಂದರು.
14
+ ಎತ್ತಿನಹೊಳೆ ಯೋಜನೆ ರೂಪಿಸಿದಾಗ 22 ರಿಂದ 24 ಟಿಎಂಸಿ ನಿರೀಕ್ಷಿಸಲಾಗಿತ್ತು. ಈಗ 16 ಟಿಎಂಸಿ ಬರಲಿದೆ. ಮತ್ತಷ್ಟು ಸಣ್ಣಪುಟ್ಟ ತೊಂದರೆಗಳನ್ನು ಸರಿಪಡಿಸಿದರೆ ಮೂರ್ನಾಲ್ಕು ಟಿಎಂಸಿ ಹೆಚ್ಚುವರಿಯಾಗಿ ದೊರೆಯಲಿದೆ.
15
+ ಹಿಂದೆ ಭಾರತೀಯ ವಿಜ್ಞಾನ ಸಂಸ್ಥೆ ಸೇರಿದಂತೆ ಹಲವು ಕಡೆಯಿಂದ ಈ ಯೋಜನೆಗಳಿಗೆ ಟೀಕೆಗಳು ಕೇಳಿಬಂದಿದ್ದವು. ಆದರೆ ಈಗ ಯೋಜನೆ ಯಶಸ್ವಿಯಾಗಿದೆ. ನೀರು ಲಭ್ಯವಾಗುತ್ತಿದೆ. ಇದೇ 6 ರಂದು ಯೋಜನೆ ಉದ್ಘಾಟನೆಯಾಗಲಿದೆ ಎಂದು ಹೇಳಿದರು.
16
+ ಕೃಷ್ಣಾ ಮೇಲ್ದಂಡೆ ಯೋಜನೆ ನ್ಯಾಯಾಧಿಕರಣದ ತೀರ್ಪು ಅಧಿಸೂಚನೆ ಜಾರಿಯಾಗಬೇಕು. ಆಲಮಟ್ಟಿ ಅಣೆಕಟ್ಟೆಯನ್ನು 519.06 ಅಡಿಯಿಂದ 524.25 ಅಡಿ ಎತ್ತರಿಸಲು 1 ಲಕ್ಷ ಭೂಮಿ ಮುಳುಗಡೆಯಾಗಲಿದೆ. ಅಷ್ಟು ಜಮೀನಿಗೂ ಪರಿಹಾರ ನೀಡಬೇಕು. ಭಾರಿ ಪ್ರಮಾಣದ ಹಣ ಬೇಕಿದೆ. ಈವರೆಗೂ 30 ಸಾವಿರ ಎಕರೆ ಸ್ವಾಧೀನ ಪ್ರಕ್ರಿಯೆಗಳು ಚಾಲನೆಯಲ್ಲಿವೆ.
17
+ ನ್ಯಾಯಾಲಯದ ತೀರ್ಪು ಅಧಿಸೂಚನೆಯಾದ ಬಳಿಕ ಹಣಕಾಸು ಸೌಲಭ್ಯ ಒದಗಿಸಲು ಮುಖ್ಯಮಂತ್ರಿ ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದರು. ಇದನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಎಲ್ಲಾ ಅರ್ಹತೆಗಳೂ ಇವೆ. ಆದರೆ ಅಂತರಾಜ್ಯ ನದಿ ವಿವಾದ ಇರುವುದರಿಂದಾಗಿ ಅದನ್ನು ಅಧಿಸೂಚನೆ ಹೊರಡಿಸಿ ಇತ್ಯರ್ಥಪಡಿಸಲು ಸಾಧ್ಯವಿದೆ ಎಂದರು.
eesanje/url_46_27_8.txt ADDED
@@ -0,0 +1,6 @@
 
 
 
 
 
 
 
1
+ ಸಿಎಂ ಹುದ್ದೆ ಖಾಲಿ ಇಲ್ಲ : ಡಿಸಿಎಂ ಡಿಕೆಶಿ
2
+ :
3
+ ಬೆಂಗಳೂರು,ಸೆ.2-ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಸರ್ಕಾರ ಮುಂದುವರೆಯಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯಾಯಾಲಯದಲ್ಲಿ ಸಿದ್ದರಾಮಯ್ಯ ಅವರಿಗೆ ಹಿನ್ನಡೆಯಾಗಲಿದೆ ಎಂಬ ಊಹಾತ್ಮಕ ಅಂದಾಜುಗಳು ಸರಿಯಲ್ಲ ಎಂದರು.
4
+ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ನಡೆಯುತ್ತದೆ ಹಾಗೂ ಮುಂದುವರೆಯುತ್ತದೆ. ಮುಖ್ಯಮಂತ್ರಿ ಸ್ಥಾನ ಖಾಲಿ ಇದ್ದರೆ ಈ ಬಗ್ಗೆ ಮಾತನಾಡಲು ಅವಕಾಶವಿತ್ತು, ಆದರೆ ಸದ್ಯಕ್ಕಿಲ್ಲ. ಯಾರಿಗೇ ಆಸೆ ಆಕಾಂಕ್ಷೆಗಳಿದ್ದರೂ ಮಾಧ್ಯಮಗಳ ಮುಂದೆ ಚರ್ಚೆ ಮಾಡಬಾರದು ಎಂದು ಖಡಕ್ಕಾಗಿ ಎಚ್ಚರಿಕೆ ನೀಡಿದರು.
5
+ ಕೋವಿಡ್ ಹಗರಣದ ಕುರಿತು ಮಾಜಿ ಆರೋಗ್ಯ ಸಚಿವ ಡಾ.ಸುಧಾಕರ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸುಧಾಕರ್ ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿದ್ದರು.
6
+ ರಕ್ತದ ನರನಾಡಿಗಳಲ್ಲೂ ಅವರಿಗೆ ಕಾಂಗ್ರೆಸ್ ತುಂಬಿತ್ತು. ಹೀಗಾಗಿ ನಮ ಪಕ್ಷದ ಬಗ್ಗೆ ಪ್ರಮಾಣಪತ್ರ ನೀಡುವ ಮುನ್ನ ಅವರು ಆತವಿಮರ್ಶೆ ಮಾಡಿಕೊಳ್ಳಲಿ. ಐದಾರು ವರ್ಷಗಳಿಂದಷ್ಟೇ ಅವರು ಪಕ್ಷ ಬಿಟ್ಟು ಹೋಗಿದ್ದಾರೆ ಎಂದರು.
eesanje/url_46_27_9.txt ADDED
@@ -0,0 +1,8 @@
 
 
 
 
 
 
 
 
 
1
+ 2 ತಿಂಗಳೊಳಗಾಗಿ ಕೆಎಎಸ್ ಪೂರ್ವಭಾವಿ ಮರು ಪರೀಕ್ಷೆ
2
+ - 2
3
+ ಬೆಂಗಳೂರು,ಸೆ.2-ಕೆಪಿಎಸ್ಸಿ ಪರೀಕ್ಷೆ ಕುರಿತಂತೆ ಸೃಷ್ಟಿಯಾಗಿದ್ದ ತೀವ್ರ ವಿವಾದಗಳಿಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ತಿಂಗಳೊಳಗಾಗಿ ಕೆಎಎಸ್ನ ಪೂರ್ವಭಾವಿ ಮರುಪರೀಕ್ಷೆ ನಡೆಸುವುದಾಗಿ ತಿಳಿಸಿದ್ದಾರೆ.
4
+ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಅವರು, ಗೆಜೆಟೆಡ್ ಪ್ರೊಬೆಷನರ್ರಸ ಹುದ್ದೆಗಳ ನೇಮಕಾತಿಗೆ ಕೆಪಿಎಸ್ಸಿ ನಡೆಸಿದ ಪರೀಕ್ಷೆಯಲ್ಲಿನ ಪ್ರಶ್ನೆಪತ್ರಿಕೆಗಳಲ್ಲಿ ಕನ್ನಡಕ್ಕೆ ಸಂಬಂಧಪಟ್ಟಂತೆ ಅಸಮರ್ಪಕ ಭಾಷಾಂತರ ಕಂಡುಬಂದಿದೆ ಎಂದಿದ್ದಾರೆ.
5
+ ಈ ಹಿನ್ನೆಲೆಯಲ್ಲಿ ನಾನು ಕೆಪಿಎಸ್ಸಿಗೆ ಸೂಚನೆ ನೀಡಿದ್ದು, ಎರಡು ತಿಂಗಳೊಳಗಾಗಿ ಮರುಪರೀಕ್ಷೆ ನಡೆಸುವಂತೆ ಸೂಚಿಸಿದ್ದೇನೆ. ಪರೀಕ್ಷಾ ಲೋಪಗಳಿಗೆ ಕಾರಣರಾದವರನ್ನು ಕರ್ತವ್ಯದಿಂದ ಮುಕ್ತಗೊಳಿಸಲಾಗಿದೆ.
6
+ ಮುಂದಿನ ಪರೀಕ್ಷೆಯನ್ನು ಜವಾಬ್ದಾರಿಯುತವಾಗಿ ಹಾಗೂ ಹೊಣೆಗಾರಿಕೆಯೊಂದಿಗೆ ನಡೆಸಲಾಗುವುದು. ನ್ಯಾಯಸಮತ ಹಾಗೂ ಶ್ರದ್ಧಾ ಕ್ರಮಗಳನ್ನ ಅನುಸರಿಸುವಂತೆ ಸೂಚಿಸಲಾಗಿದೆ. ನೇಮಕಾತಿಯ ಸಮಗ್ರತೆಯನ್ನು ಎತ್ತಿ ಹಿಡಿಯುವ ಬದ್ಧತೆ ನಮದಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
7
+ ಕಳೆದ ತಿಂಗಳ 27 ರಂದು ನಡೆದ ಕೆಎಎಸ್ ಪರೀಕ್ಷೆಯಲ್ಲಿನ ಪ್ರಶ್ನೆಪತ್ರಿಕೆಯಲ್ಲಿ 50ಕ್ಕೂ ಹೆಚ್ಚು ಪ್ರಶ್ನೆಗಳು ಅಸಮರ್ಪಕವಾಗಿದ್ದವು. ಅದರಲ್ಲೂ ಇಂಗ್ಲಿಷ್ನಿಂದ ಕನ್ನಡಕ್ಕೆ ಪ್ರಶ್ನೆಯನ್ನು ಭಾಷಾಂತರಿಸುವಾಗ ಸಾಕಷ್ಟು ಲೋಪಗಳಾಗಿದ್ದವು ಎಂಬ ಆರೋಪಗಳಿವೆ. ಈ ಹಿನ್ನೆಲೆಯಲ್ಲಿ ಮರುಪರೀಕ್ಷೆಗಾಗಿ ತೀವ್ರ ಸ್ವರೂಪದ ಹೋರಾಟಗಳು ಆಯೋಜನೆಗೊಳ್ಳುತ್ತಿದ್ದವು.
8
+ ಕಾಂಗ್ರೆಸ್ ಪಕ್ಷದಲ್ಲೇ ಗುರುತಿಸಿಕೊಂಡಿದ್ದ ಅನೇಕರು ಮರುಪರೀಕ್ಷೆಗೆ ಪಟ್ಟು ಹಿಡಿದಿದ್ದರು. ಕೆಪಿಎಸ್ಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಕರವೇ ಅಧ್ಯಕ್ಷ ನಾರಾಯಣ ಗೌಡ ಅವರು ಈ ನಿಟ್ಟಿನಲ್ಲಿ ಹೇಳಿಕೆ ನೀಡಿ ಕೆಎಎಸ್ ಪರೀಕ್ಷೆಯಲ್ಲಿನ ಲೋಪದೋಷಗಳ ಕುರಿತು ಕಿಡಿಕಾರಿ ಮರುಪರೀಕ್ಷೆಗೆ ಒತ್ತಾಯಿಸಿದ್ದರು. ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಸರ್ಕಾರ ಕೊನೆಗೂ ಮರುಪರೀಕ್ಷೆ ನಡೆಸಲು ಮುಂದಾಗಿದೆ.
eesanje/url_46_280_1.txt ADDED
@@ -0,0 +1,5 @@
 
 
 
 
 
 
1
+ ಸಚಿವ ಬೈರತಿ ಸುರೇಶ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
2
+ ಬೆಂಗಳೂರು, ಡಿ.24- ಗದಗದಲ್ಲಿ ಕಾರ್ಯಕ್ರಮವೊಂದಕ್ಕೆ ಭಾಗಿಯಾಗಲು ನಗಾರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಪ್ರಯಾಣಿಸುತ್ತಿದ್ದ ಹೆಲಿಕ್ಯಾಪ್ಟರ್ ತಾಂತ್ರಿಕ ದೋಷ ಕಂಡು ಬಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹಾರನಕಟ್ಟೆ ಗ್ರಾಮದ ಜಮೀನೊಂದರಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
3
+ ಇಂದು ಬೆಳಿಗ್ಗೆ 10.15ಕ್ಕೆ ಬೆಂಗಳೂರಿನ ಜಕ್ಕೂರು ಏರೋಡ್ರಮ್‍ನಿಂದ ಮೇಲಾರಿದ ಹೆಲಿಕ್ಯಾಪ್ಟರ್ ಮಾರ್ಗಮಧ್ಯೆ ತಾಂತ್ರಿಕ ಸಮಸ್ಯೆ ಎದುರಾಗಿದೆ. ಕೂಡಲೇ ಪೈಲೆಟ್ 11.15ರ ಸಮಯದಲ್ಲಿ ಸಮಯೋಚಿತ ನಿರ್ಧಾರ ಕೈಗೊಂಡು ಸುರಕ್ಷಿತವಾಗಿ ತುರ್ತು ಭೂಸ್ಪರ್ಶ ಮಾಡಿದ್ದಾರೆ.
4
+ ಚಿಕ್ಕಬಳ್ಳಾಪುರದಲ್ಲಿ ವೈದ್ಯರಿಗೆ ಕೊರೊನಾ
5
+ ನಂತರ ಸಚಿವರು ರಸ್ತೆ ಮಾರ್ಗವಾಗಿ ಕಾರಿನಲ್ಲಿ ಗದಗಕ್ಕೆ ತೆರಳಿದ್ದಾರೆ. ಘಟನೆ ತಿಳಿಯುತ್ತಿದ್ದಂತೆ ಹಿರಿಯೂರು ಪೊಲೀಸರು ಸ್ಥಳಕ್ಕೆ ಧಾವಿಸಿ ಭದ್ರತೆ ನೀಡಿದ್ದಾರೆ. ಒಟ್ಟಾರೆ ಸಚಿವರ ಕಾಪ್ಟರ್ ತಾಂತ್ರಿಕ ಸಮಸ್ಯೆ ಉಂಟಾಗಿ ಸುರಕ್ಷಿತವಾಗಿ ಇಳಿದಿರುವುದರಿಂದ ಎಲ್ಲರೂ ಸಮಾಧಾನದ ನಿಟ್ಟುಸಿರು ಬಿಟ್ಟಿದ್ದಾರೆ.
eesanje/url_46_280_10.txt ADDED
@@ -0,0 +1,7 @@
 
 
 
 
 
 
 
 
1
+ ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ : 52.78 ಲಕ್ಷ ಮೌಲ್ಯದ ಮಾದಕ ವಶ
2
+ ಬೆಂಗಳೂರು,ಡಿ.23- ಹೊಸ ವರ್ಷಾಚರಣೆ ಸಂದರ್ಭದಲ್ಲಿ ಡ್ರಗ್ ಮಾರಾಟ ಮಾಡಲು ಮುಂದಾಗಿದ್ದ ಒಬ್ಬ ವಿದೇಶಿ ಮತ್ತು ಇಬ್ಬರು ಕೇರಳ ಮೂಲದ ಡ್ರಗ್ ಪೆಡ್ಲರ್‍ಗಳ ಸಿಸಿಬಿ ಪೊಲೀಸರು ಬಂಧಿಸಿ 52.78 ಲಕ್ಷ ಮೌಲ್ಯದ ನಿಷೇಧಿತ ಮಾದಕ ವಸ್ತುಗಳು ಮತ್ತು ವಾಹನ ವಶಪಡಿಸಿಕೊಂಡಿದ್ದಾರೆ.
3
+ ನಗರದ ಬೇಗೂರು ಮತ್ತು ಕೋರಮಂಗಲ ಪೊಲೀಸ್ ತಾಣಾ ವ್ಯಾಪ್ತಿಗಳಲ್ಲಿ ನಿಷೇಧಿತ ಮಾದಕವಸ್ತುಗಳನ್ನು ಸಂಗ್ರಹಿಸಿ ಮಾರಾಟ ಮಾಡಲು ಸಿದ್ಧತೆ ಮಾಡಿಕೊಂಡಿದ್ದರೆಂಬ ಬಗ್ಗೆ ನಿಖರ ಮಾಹಿತಿ ಪಡೆದ ಸಿಸಿಬಿಯ ಮಾದಕವಸ್ತು ನಿಗ್ರಹ ದಳದ ಅಧಿಕಾರಿ ಹಾಗೂ ಸಿಬ್ಬಂದಿಗಳ ತಂಡ ದಾಳಿ ನಡೆಸಿ ಒಬ್ಬ ವಿದೇಶಿ ಮತ್ತು ಇಬ್ಬರು ಕೇರಳ ಮೂಲದ ಡ್ರಗ್ ಪೆಡ್ಲರ್‍ಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ.
4
+ ಆರೋಪಿಗಳಿಂದ ನಿಷೇಧಿತ ಮಾದಕ ವಸ್ತುಗಳಾದ ಎಂಡಿಎಂಡಿ ಕ್ರಿಸ್ಟಲ್ 8639 ಗ್ರಾಂ,ಎಲ್‍ಎಸ್‍ಡಿ ಸ್ಟ್ರಿಪ್ 100 , ಎಸ್‍ಟೇಸ್‍ಟಿ ಪಿಲ್ಟ್ 253,ಕೊಕೇನ್ 2.5 ಗ್ರಾಂ, 3 ಮೊಬೈಲ್‍ಫೋನ್, ತೂಕದ ಯಂತ್ರ 1, ಹೋಂಡಾ ಆಕ್ಟೀವಾ ದ್ವಿಚಕ್ರ ವಾಹನ ಹಾಗೂ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದು, ಇವುಗಳ ಒಟ್ಟು ಮೌಲ್ಯ52,78,000ರೂ.ಗಳೆಂದು ಅಂದಾಜಿಸಲಾಗಿದೆ.
5
+ ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ : ಬಿಜೆಪಿ
6
+ ಆರೋಪಿಗಳ ವಿರುದ್ಧ ಬೇಗೂರು ಮತ್ತು ಕೋರಮಂಗಲ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಿದ್ದು ತನಿಖೆ ಮುಂದುವರೆದಿದೆ. ಬೇಗೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ದಸ್ತಗಿರಿಯಾಗಿರುವ ವಿದೇಶಿ ಪ್ರಜೆಯು ಸುಮಾರು ಒಂದು ವರ್ಷದ ಹಿಂದೆ ಬ್ಯುಸಿನೆಸ್ ವೀಸಾ ಪಡೆದು ಭಾರತಕ್ಕೆ ಬಂದಿದ್ದು, ಕಳೆದ ಮೂರು ತಿಂಗಳಿನಿಂದ ಬೆಂಗಳೂರಿನಲ್ಲಿ ವಾಸವಾಗಿದ್ದುಕೊಂಡು, ನಗರದಲ್ಲಿ ನೆಲೆಸಿರುವ ಆಫ್ರಿಕಾ ಮೂಲದ ಪ್ರಜೆಗಳಿಂದ ಕಡಿಮೆ ಬೆಲೆಗೆ ನಿಷೇತ ಮಾದಕ ವಸ್ತುಗಳನ್ನು ಖರೀದಿ ಮಾಡಿ ಅವುಗಳನ್ನು ಪರಿಚಯಸ್ಥ ಗಿರಾಕಿಗಳಿಗೆ ಖುದ್ದಾಗಿ ಸರಬರಾಜು ಮಾಡಿ ಅಕ್ರಮ ಹಣ ಸಂಪಾದನೆ ಮಾಡುತ್ತಿದ್ದನೆಂದು ವಿಚಾರಣೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
7
+ ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಶಕ್ಕೆ ಪಡೆದಿರುವ ಕೇರಳ ಮೂಲದ ಇಬ್ಬರು ಡ್ರಗ್ ಪೆಡ್ಲರ್‍ಗಳು ಸ್ಥಳೀಯ ಡ್ರಗ್ ಪೆಡ್ಲರ್‍ನಿಂದ ಕಡಿಮೆ ಬೆಲೆಗೆ ನಿಷೇತ ಮಾದಕ ವಸ್ತುಗಳನ್ನು ಖರೀದಿಸಿ, ಪರಿಚಯಸ್ಥ ಗಿರಾಕಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿದ್ದ ಬಗ್ಗೆ ಮಾಹಿತಿಯು ವಿಚಾರಣೆಯಿಂದ ತಿಳಿದುಬಂದಿದೆ.
eesanje/url_46_280_11.txt ADDED
@@ -0,0 +1,6 @@
 
 
 
 
 
 
 
1
+ ಮಕ್ಕಳಿಂದಲೇ ಶೌಚಾಲಯ ಸ್ವಚ್ಚಗೊಳಿಸಿದ್ದ ಮುಖ್ಯ ಶಿಕ್ಷಕಿ ಬಂಧನ
2
+ ಬೆಂಗಳೂರು,ಸೆ.23- ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಂದಲೇ ಶೌಚಾಲಯ ಸ್ವಚ್ಚಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯ ಶಿಕ್ಷಕಿಯನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಂದ್ರಹಳ್ಳಿ ಶಾಲೆಯ ಮುಖ್ಯ ಶಿಕ್ಷಕಿ ಲಕ್ಷ್ಮಿದೇವಮ್ಮ ಬಂತರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ಲಕ್ಷಿ ದೇವಮ್ಮ ಅವರನ್ನು ಅಮಾನತುಗೊಳಿಸಿದೆ.
3
+ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿರುವ ಅಂದ್ರಹಳ್ಳಿಯ ಶಾಲೆಯಲ್ಲಿ ಮಕ್ಕಳಿಂದಲೇ ಶಿಕ್ಷಕರು ಶಾಲೆಯ ಶೌಚಾಲಯವನ್ನು ಬ್ಲೀಚಿಂಗ್ ಪೌಡರ್ ಹಾಗೂ ಆ್ಯಸಿಡ್ ಹಾಕಿಸಿ ಸ್ವಚ್ಛಗೊಳಿಸುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಈ ಬಗ್ಗೆ ವಿಷಯ ತಿಳಿದ ಮಕ್ಕಳ ಪೋಷಕರು ಶಾಲೆ ಮುಂದೆ ಜಮಾಯಿಸಿ ಶಿಕ್ಷಕರ ವರ್ತನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗಿಳಿದರು.
4
+ “ಶಿಕ್ಷಣ ಕ್ಷೇತ್ರವನ್ನು ಕಲುಷಿತಗೊಳಿಸುವ ಕೆಲಸಕ್ಕೆ ಸ್ವತಃ ಸಿಎಂ ಅವರೇ ಕೈ ಹಾಕಿರುವುದು ದುರದೃಷ್ಟ”
5
+ ಸುದ್ದಿ ತಿಳಿಯುತ್ತಿದ್ದಂತೆ ಬಿಇಒ ಆಂಜನಪ್ಪ ಅವರು ಸ್ಥಳಕ್ಕಾಗಮಿಸಿ ಪ್ರತಿಭಟನಾಕರರ ಮನವೊಲಿಸಿ ನಂತರ ಬ್ಯಾಡರಹಳ್ಳಿ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಎಫ್‍ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಇದೀಗ ಶಾಲಾ ಮುಖ್ಯ ಶಿಕ್ಷಕಿಯನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
6
+ ಇತ್ತೀಚೆಗೆ ಕೋಲಾರದ ಮಾಲೂರಿನ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಚಗೊಳಿಸಲಾಗಿದ್ದ ಪ್ರಕರಣ ಮಾಸುವ ಮುನ್ನವೇ ಸಿಲಿಕಾನ್ ಸಿಟಿಯಲ್ಲಿ ಶಾಲಾ ಮಕ್ಕಳಿಂದಲೇ ಶೌಚಾಲಯ ಸ್ವಚ್ಚಗೊಳಿಸಿರುವುದು ಬೇಸರದ ಸಂಗತಿ.
eesanje/url_46_280_12.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಐಷಾರಾಮಿ ವಿಮಾನ ಯಾನ ವಿವಾದ ಮರೆಮಾಚಲು ‘ಹಿಜಾಬ್ ಅಸ್ತ್ರ’ ಪ್ರಯೋಗ
2
+ ಬೆಂಗಳೂರು,ಡಿ.23- ಹಿಜಾಬ್‍ಗೆ ಸಂಬಂಧಿಸಿದ ಶಿಕ್ಷಣ ಇಲಾಖೆ ಆದೇಶವನ್ನು ಹಿಂಪಡೆಯುವುದಾಗಿ ಘೋಷಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಮತ್ತು ಅದರ ಬೆಂಬಲಿಗ ಸಂಘಟನೆಗಳನ್ನು ಕೆಣಕಿದ್ದು, ಕಾಂಗ್ರೆಸ್‍ನ ಮತಬ್ಯಾಂಕ್ ಕ್ರೂಢೀಕರಣಕ್ಕೆ ಕಾರ್ಯತಂತ್ರ ರೂಪಿಸಿದ್ದಾರೆ.
3
+ ದೆಹಲಿಯ ಭೇಟಿ ಬಳಿಕ ಬೆಂಗಳೂರಿಗೆ ಮರಳುವಾಗ ಐಷಾರಾಮಿ ವಿಮಾನದಲ್ಲಿ ಸಿದ್ದರಾಮಯ್ಯ ಮತ್ತು ಸಂಪುಟದ ಕೆಲ ಸಚಿವರು ಹಾಗೂ ಬೆಂಬಲಿಗರು ಪ್ರಯಾಣ ಮಾಡಿದ್ದು, ಭಾರೀ ವಿವಾದಕ್ಕೆ ಕಾರಣವಾಗಿತ್ತು. ಬಿಜೆಪಿ ರಾಜ್ಯ ನಾಯಕರಷ್ಟೇ ಅಲ್ಲ, ರಾಷ್ಟ್ರೀಯ ನಾಯಕರೂ ಕೂಡ. ಈ ಕುರಿತಂತೆ ವಾಗ್ದಾಳಿಯನ್ನು ನಡೆಸಲಾರಂಭಿಸಿದರು. ಜನಸಾಮಾನ್ಯರಲ್ಲೂ ಕಾಂಗ್ರೆಸಿಗರ ಐಷಾರಾಮಿ ಬದುಕಿನ ಬಗ್ಗೆ ಆಕ್ಷೇಪಗಳು ಕೇಳಿಬರಲಾರಂಭಿಸಿದವು.
4
+ ವಿವಾದ ಭುಗಿಲೇಳುತ್ತಿದ್ದಂತೆ ಹಿಜಾಬ್ ವಿಷಯವನ್ನು ಪ್ರಸ್ತಾಪಿಸಿ ವಿಷಯಾಂತರ ಮಾಡುವ ಪ್ರಯತ್ನ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ. ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್‍ನಲ್ಲಿರುವ ಚುನಾವಣಾ ರಣತಂತ್ರಗಾರರು ಪ್ರತೀ ಹಂತದಲ್ಲೂ ರಾಜಕೀಯ ಬೆಳವಣಿಗೆಗಳ ಮೇಲೆ ನಿಗಾ ವಹಿಸಿದ್ದು, ಕಾಲಕಾಲಕ್ಕೆ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಅದನ್ನು ಆಧರಿಸಿ ಕಾಂಗ್ರೆಸ್ ನಾಯಕರು ಹಲವಾರು ವಿವಾದಗಳ ವಿಷಯಾಂತರ ಮಾಡುವ ಮೂಲಕ ಬಿಜೆಪಿಗೆ ಎದುರೇಟು ನೀಡುತ್ತಿದ್ದಾರೆ.
5
+ ಐಷಾರಾಮಿ ವಿಮಾನದ ಪ್ರಯಾಣವನ್ನು ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ ಸೇರಿದಂತೆ ಹಲವಾರು ಮಂದಿ ಪ್ರಸ್ತಾಪಿಸಿ ಸಿದ್ದರಾಮಯ್ಯ ಮತ್ತು ಅವರ ಬಣವನ್ನು ಅಪರಾ ಸ್ಥಾನದಲ್ಲಿ ನಿಲ್ಲಿಸುವ ಪ್ರಯತ್ನ ಮಾಡಿದರು. ಪ್ರಧಾನಿ ನರೇಂದ್ರ ಮೋದಿ ಕೂಡ ಐಷಾರಾಮಿ ವಿಮಾನದಲ್ಲಿ ಓಡಾಡುತ್ತಾರೆ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದರಾದರೂ ಅದು ಅಷ್ಟು ಪರಿಣಾಮಕಾರಿಯಾಗಿರಲಿಲ್ಲ.
6
+ “ಶಿಕ್ಷಣ ಕ್ಷೇತ್ರವನ್ನು ಕಲುಷಿತಗೊಳಿಸುವ ಕೆಲಸಕ್ಕೆ ಸ್ವತಃ ಸಿಎಂ ಅವರೇ ಕೈ ಹಾಕಿರುವುದು ದುರದೃಷ್ಟ”
7
+ ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಬೆಂಗಳೂರಿನ ಹೊರವಲಯದಲ್ಲಿರುವ ಮಾದಾವರದ ಬಳಿಯಿರುವ ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರಕ್ಕೆ ನಗರದ ಜಕ್ಕೂರಿನಿಂದ ಹೆಲಿಕಾಫ್ಟರ್‍ನಲ್ಲಿ ಪ್ರಯಾಣಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಕೆಂಗೇರಿಯಿಂದ ವಿಮಾನನಿಲ್ದಾಣಕ್ಕೆ ಹೆಲಿಕಾಫ್ಟರ್ ಬಳಕೆ ಮಾಡಿದ್ದರು ಎಂಬೆಲ್ಲಾ ಮಾಹಿತಿಗಳನ್ನು ಕಾಂಗ್ರೆಸ್ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ವರ್ಚಸ್ಸು ಹಾನಿಯನ್ನು ತಡೆಯುವ ಪ್ರಯತ್ನ ನಡೆಸಿತ್ತು. ಆದರೆ ಅದ್ಯಾವುದೂ ನಿರೀಕ್ಷಿತ ಫಲ ನೀಡಿರಲಿಲ್ಲ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಜಾಬ್ ಅಸ್ತ್ರವನ್ನು ಬಳಕೆ ಮಾಡುವ ಮೂಲಕ ಒಂದೇ ಕಲ���ಲಿನಲ್ಲಿ ಎರಡು ಹಕ್ಕಿಯನ್ನು ಹೊಡೆದಿದ್ದಾರೆ.
8
+ ಬಿಜೆಪಿ ನಾಯಕರು ಐಷಾರಾಮಿ ವಿಮಾನ ಪ್ರಯಾಣದ ವಿವಾದವನ್ನು ಬದಿಗಿರಿಸಿ ಹಿಜಾಬ್ ಅಸ್ತ್ರವನ್ನು ಕೈಗೆತ್ತಿಕೊಂಡು ಸರ್ಕಾರದ ವಿರುದ್ಧ ವಾಗ್ದಾಳಿಗೆ ಇಳಿದಿದ್ದಾರೆ. ಮತ್ತೊಂದೆಡೆ ಬಿಜೆಪಿ ನಾಯಕರ ಟೀಕೆಗಳು ಕಾಂಗ್ರೆಸ್‍ನ ಮತ ಬ್ಯಾಂಕ್ ಅನ್ನು ಮತ್ತಷ್ಟು ಗಟ್ಟಿಗೊಳಿಸುತ್ತಿವೆ. ಅಲ್ಪಸಂಖ್ಯಾತರ ಮತ ಬ್ಯಾಂಕ್ ಕಾಂಗ್ರೆಸ್ ಜೊತೆ ಗಟ್ಟಿಯಾಗಿ ನಿಲ್ಲುವಂತಹ ಓಲೈಕೆಗಳು ವ್ಯಾಪಕವಾಗಿ ನಡೆಯುತ್ತಿವೆ. ಸಿದ್ದರಾಮಯ್ಯ ಅವರ ಹೇಳಿಕೆ ಮುಸ್ಲಿಂ ಸಮುದಾಯದಲ್ಲಿ ಸೃಷ್ಟಿಸಿದ್ದ ಅಸಹನೆಗೆ ಕೊಂಚ ತಂಪೆರೆದಂತಾಗಿದೆ.
9
+ ಮುಂಬೈ ವಿವಿಯಲ್ಲಿ ದೇವಸ್ಥಾನ ನಿರ್ವಹಣೆ ಕೋರ್ಸ್ ಆರಂಭ
10
+ ಬಿಜೆಪಿ ಕೋಮು ರಾಜಕಾರಣಕ್ಕೆ ಗಾಯದ ಮೇಲೆ ಉಪ್ಪು ಸುರಿದಂತಾಗಿದೆ. ಅಲ್ಪಸಂಖ್ಯಾತರ ತುಷ್ಟೀಕರಣ ಕರ್ನಾಟಕ ಮತ್ತು ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಲಾಭ ಮಾಡಿಕೊಟ್ಟಿದೆ.ಪಂಚರಾಜ್ಯ ಚುನಾವಣೆಗಳ ಪೈಕಿ ಉಳಿದ ನಾಲ್ಕು ರಾಜ್ಯಗಳಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಷಯದಲ್ಲಿ ಹೆಚ್ಚೇನು ಆಸಕ್ತಿ ವಹಿಸಲಿಲ್ಲ. ಜೊತೆಗೆ ಅಲ್ಲಿನ ಸ್ಥಳೀಯ ಪಕ್ಷಗಳು ವೋಟ್ ಬ್ಯಾಂಕ್ ಅನ್ನು ಸಿದ್ಧಗೊಳಿಸಿ ಹಂಚಿಕೊಂಡಿದ್ದವು. ಎಲ್ಲೆಲ್ಲಿ ಅಲ್ಪಸಂಖ್ಯಾತರ, ದಲಿತರ ಮತಗಳು ವಿಭಜನೆಯಾಗದಂತಹ ರಣತಂತ್ರ ರೂಪಿಸಲಾಗಿದೆಯೋ ಅಲ್ಲೆಲ್ಲಾ ಕಾಂಗ್ರೆಸ್ ಗೆದ್ದಿರುವುದು ಸಮೀಕ್ಷೆಗಳಿಂದ ಸ್ಪಷ್ಟವಾಗಿದೆ.
11
+ ಈ ಕಾರಣಕ್ಕಾಗಿಯೇ ಸಿದ್ದರಾಮಯ್ಯ ಹಿಜಾಬ್ ಅಸ್ತ್ರವನ್ನು ಉಪಯೋಗಿಸಿ ಒಂದೆಡೆ ಬಿಜೆಪಿಯನ್ನು ಕೆಣಕಿದೆಯಲ್ಲದೆ, ಮತ್ತೊಂದೆಡೆ ಅಲ್ಪಸಂಖ್ಯಾತರ ಮತಗಳನ್ನು ಕ್ರೂಢೀಕರಿಸಿಕೊಳ್ಳುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಇದು ಎಷ್ಟರ ಮಟ್ಟಿಗೆ ಪರಿಣಾಮ ಬೀರಲಿದೆ ಎಂಬುದು ಕುತೂಹಲ ಮೂಡಿಸಿದೆ.
eesanje/url_46_280_2.txt ADDED
@@ -0,0 +1,16 @@
 
 
 
 
 
 
 
 
 
 
 
 
 
 
 
 
 
1
+ ಬಿಜೆಪಿಯಲ್ಲಿ ಭಿನ್ನಮತ ಸೃಷ್ಟಿಸಿದ ನೂತನ ಪದಾಧಿಕಾರಿಗಳ ಪಟ್ಟಿ
2
+ ಬೆಂಗಳೂರು, ಡಿ.24- ಬಹುನಿರಿಕ್ಷೀತ ಬಿಜೆಪಿ ಪದಾಧಿಕಾರಿಗಳ ಪಟ್ಟಿ ಪ್ರಕಟಗೊಂಡ ಬೆನ್ನಲ್ಲೇ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಸಿಗದಿರುವವರು ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕುತ್ತಿದ್ದು, ಮೊದಲೇ ಮನೆಯೊಂದು ಮೂರು ಬಾಗಿಲು ಎನ್ನುವಂತಾಗಿದ್ದ ಕಮಲ ಪಕ್ಷದೊಳಗೆ ಎಲ್ಲವೂ ಸರಿಯಿಲ್ಲ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
3
+ ಅದರಲ್ಲೂ ಪದಾಧಿಕಾರಿಗಳ ಪಟ್ಟಿಗೆ ಕೇಂದ್ರದ ಮಾಜಿ ಸಚಿವರಾದ ಡಿ,ವಿ,ಸದಾನಂದಾಗೌಡ ಹಾಗೂ ಬಸನಗೌಡ ಪಾಟೀಲ್ ಯಾತ್ನಾಳ್ ಅವರು ಪಕ್ಷದ ವರಿಷ್ಠರ ನಡೆಗೆ ಕೆಂಡಕಾರಿದ್ದಾರೆ. ವಿಶೇಷವೆಂದರೆ ಇಬ್ಬರೂ ನೇರವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನೇ ಗುರಿಯಾಗಿಟ್ಟುಕೊಂಡು ವಾಗ್ದಾಳಿ ನಡೆಸಿದ್ದಾರೆ. ಆದರೆ ಎಲ್ಲಿಯೂ ಕೂಡಾ ಅವರ ಹೆಸರನ್ನು ನೇರವಾಗಿ ಪ್ರಸ್ತಾಪ ಮಾಡಿಲ್ಲ. ಪಟ್ಟಿಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ 6 ಆಪ್ತರಿಗೆ ಸ್ಥಾನ ನೀಡಲಾಗಿದ್ದು, ಇದು ಇತರೆ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.
4
+ ಇನ್ನು ಬಿಜೆಪಿಯ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಯಡಿಯೂರಪ್ಪ, ಮುಂದಿನ ದಿನಗಳಲ್ಲಿ ಎಲ್ಲವೂ ಸರಿಹೋಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಪದಾಧಿಕಾರಿಗಳ ಪಟ್ಟಿಯಲ್ಲಿ ಪಕ್ಷದ ನಿಷ್ಟಾವಂತರನ್ನು ಕಡೆಗಣಿಸಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಪ್ತರಿಗೆ ಮಣೆ ಹಾಕಲಾಗಿದ್ದು ಇದರಿಂದ ಸಂಘಟನೆಗೆ ಹಿನ್ನಡೆಯಾಗುವ ಸಾಧ್ಯತೆ ಇದೆ ಎಂಬ ಆತಂಕವನ್ನು ವ್ಯಕ್ತಪಡಿಸಿದ್ದಾರೆ.
5
+ ಬಿಜೆಪಿ ಪದಾಧಿಕಾರಿಗಳ ಪಟ್ಟಿಗೆ ಯತ್ನಾಳ್ ವ್ಯಂಗ್ಯ
6
+ ಅದರಲ್ಲೂ ಯಡಿಯೂರಪ್ಪ ಅವರ ರಾಜಕೀಯ ಎದುರಾಳಿ ಬಸನಗೌಡ ಪಾಟೀಲ್ ಯತ್ನಾಳ್ ವಿರೋಧದ ನಡುವೆಯೂ ಮಾಜಿ ಸಚಿವ ಮುರುಗೇಶ್ ನಿರಾಣಿ ಅವರನ್ನು ಪಕ್ಷದ ಹಿರಿಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿರುವ ರಾಜ್ಯಾಧ್ಯಕ್ಷ ಬಿ,ವೈ ವಿಜೆಯೇಂದ್ರ ನಡೆಗೆ ಹಿಂದೂ ಪೈರ್ ಬ್ರಾಂಡ್ ಖ್ಯಾತಿಯ ಯತ್ನಾಳ್ ಬೆಂಕಿಯುಗಿಳಿದ್ದಾರೆ.
7
+ ಇದು ಕೆಜೆಪಿ ಪಟ್ಟಿ:ವಿಜಯಪುರದಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಬಿಜೆಪಿಯ ಪದಾಧಿಕಾರಿಗಳ ಆಯ್ಕೆ ನನ್ನ ಗಮನಕ್ಕೆ ಬಂದಿಲ್ಲ. ಅದು ಹೇಗೆ ನನ್ನ ಗಮನಕ್ಕೆ ಬರುತ್ತದೆ. ನಾವೇನು ಬಿಜೆಪಿ ಕಾರ್ಯಕರ್ತನೇನು? ನಾವು ದೇಶದ ಕಾರ್ಯಕರ್ತರು ಅಷ್ಟೆ. ಯಡ್ಡಿಯೂರಪ್ಪನವರದ್ದು ಕೆಜೆಪಿ 1, ಇದು ಕೆಜೆಪಿ 2, ಮೊಮ್ಮಗನದು ಕೆಜೆಪಿ 3 ಎಂದು ಹೇಳುವ ಮೂಲಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ರಾಜ್ಯ ಘಟಕದ ನೂತನ ಪಟ್ಟಿಗೆ ವ್ಯಂಗ್ಯವಾಡಿದ್ದಾರೆ.
8
+ ಸುದ್ದಿಗಾರರ ಜೊತೆ ಮತನಾಡಿದ ಅವರು, ಈ ಪಟ್ಟಿಯ ಆಯುಷ್ಯ 2024ರ ಲೋಕಸಭೆ ಚುನಾವಣೆ. 28 ಸೀಟ್ ತರುತ್ತೇನೆ ಎಂದು ಹೇಳಿದ್ದಾರೆ. 28 ರಲ್ಲಿ ಒಂದು ಕಡಿಮೆ ಬಿದ್ದರೂ ಚಿಕ್ಕಮಕ್ಕಳು ಹೇಗೆ ಸಿಗರೇಟ್ ಪ್ಯಾಕ್‍ನಲ್ಲಿ ಮನೆ ಮಾಡಿರ್ತಾರೆ ಆ ರೀತಿಯಾಗಿ ಈ ��ಟ್ಟಿ ಹಾಗೆ ಕುಸಿದು ಬಿದ್ದು ಹೋಗುತ್ತದೆ ಎಂದು ಎಚ್ಚರಿಕೆ ಕೊಟ್ಟರು.ಈಗ ಕೆಜೆಪಿ 2 ಆಗಿದೆ, ಮುಂದೆ ಅವರ ಮೊಮ್ಮಗ ಬಂದರೆ ಕೆಜೆಪಿ 3 ಆಗುತ್ತದೆ.ಈಗಲೇ ನಿವೃತ್ತಿ ಅಲ್ಲ, ಇನ್ನೊಂದು ಎಲೆಕ್ಷನ್ ಇದೆ. 2028ರ ಚುನಾವಣೆ ಬಳಿಕ ನಿರ್ಧಾರ ಮಾಡುವೆ. ಆದರೆ ಯೂ ಟರ್ನ್ ಹೊಡೆದ ಯತ್ನಾಳ್ ಎನ್ನಬೇಡಿ, ಡೈರೆಕ್ಟ್ ಟರ್ನ್ ಎಂದು ಹೇಳಿದರು.
9
+ ಈಗ ರಾಜಕೀಯದಲ್ಲಿ ಏನಾಗಿದೆ ಎಂದರೆ ಲಂಪಟರು ಬಹಳ ಇದ್ದಾರೆ. ಅವರೆಲ್ಲ ಹಲ್ಕಾ ಕೆಲಸ ಮಾಡುತ್ತಾರೆ ಎಂದು ಅವರು ಅತೃಪ್ತಿಯಿಂದ ಹೇಳಿದರು. ಇವತ್ತು ಮೌಲ್ಯಾಧಾರಿತ ರಾಜಕಾರಣ ಇಲ್ಲ. ಎಲ್ಲಾ ಕಳ್ಳರು, ಲಫಂಗರು ಹೆಚ್ಚು ಸೇರುತ್ತಿದ್ದಾರೆ. ಒಳ್ಳೆಯವರಿಗೆ ಬ್ಲ್ಯಾಕ್ಮೇಲ್ ಮಾಡುತ್ತಾರೆ. 2024 ರ ಚುನಾವಣೆಯ ನಂತರ ಮೇಜರ್ ಆಪರೇಷನ್ ಮಾಡದೇ ಇದ್ದರೆ ಮುಂದಿನ ನಿರ್ಣಯ ನಾನು ಮಾಡುತ್ತೇನೆ ಎಂದು ಹೇಳಿದರು.
10
+ ದೆಹಲಿಯಲ್ಲಿ ಕುಳಿತು ತೀರ್ಮಾನ ಮಾಡುವುದು ಸರಿಯಲ್ಲ:ಈ ಬಗ್ಗೆ ಬಿಜೆಪಿ ಸಂಸದ ಸದಾನಂದಗೌಡ ಪ್ರತಿಕ್ರಿಯಿಸಿ, ಈ ತಂಡವನ್ನು ಅಸಮರ್ಥ ತಂಡ ಎಂದು ಹೇಳಲ್ಲ. ಆದರೆ ಅಲ್ಲೋ ಇಲ್ಲೋ ಸ್ವಲ್ಪ ವ್ಯತ್ಯಾಸಗಳು ಇವೆ. ಇದನ್ನೆಲ್ಲ ಮಾಡುವ ಮುನ್ನ ಕೇಂದ್ರದ ನಾಯಕರು ಬಂದು ರಾಜ್ಯದ ಹಿರಿಯರ ಜೊತೆ ಕುಳಿತು ತಿಳಿದುಕೊಳ್ಳಬೇಕಿತ್ತು ಎಂದು ಅಸಮಾಧಾನ ಹೊರಹಾಕಿದ್ದಾರೆ.
11
+ ಈ ತಂಡ ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋದರೆ ಖಂಡಿತ ಯಶಸ್ವಿಯಾಗುತ್ತದೆ. ಮತ್ತೆ ಏನಾದರೂ ಹಳೆಯ ಚಾಳಿ ಮುಂದುವರಿಸಿದರೆ ಅದು ಪಕ್ಷದ ಮೇಲೆ ಸಮಸ್ಯೆ ಆಗುತ್ತದೆ. ದಕ್ಷಿಣ ಭಾಗಕ್ಕೆ ಹೆಚ್ಚು ಆದ್ಯತೆ ಸಿಕ್ಕಿದೆ, ಉತ್ತರ ಭಾಗಕ್ಕೆ ಸರಿಯಾಗಿ ಸಿಕ್ಕಿಲ್ಲ ಎಂಬ ಮಾತುಗಳು ಇವೆ. ಈ ತಂಡವನ್ನು ಅಸಮರ್ಥ ತಂಡ ಅಂತಾ ಹೇಳಲ್ಲ. ಆದರೆ ಅಲ್ಲೋ ಇಲ್ಲೋ ಸ್ವಲ್ಪ ವ್ಯತ್ಯಾಸಗಳು ಇವೆ. ಇದನ್ನೆಲ್ಲ ಮಾಡುವ ಮುನ್ನ ಕೇಂದ್ರದ ನಾಯಕರು ಬಂದು ರಾಜ್ಯದ ಹಿರಿಯರ ಜೊತೆ ಕುಳಿತು ತಿಳಿದುಕೊಳ್ಳಬೇಕಿತ್ತು. ಅವರಿಂದ ಹೊಸ ವಿಷಯ ತೆಗೆದುಕೊಂಡು ತಂಡವನ್ನು ಮಾಡಬೇಕಿತ್ತು ಎಂದಿದ್ದಾರೆ.
12
+ ಇವತ್ತು ಅವರನ್ನು ಕರೆದು ಮಾತಾಡಿದ್ದರೆ ಈ ಅತೃಪ್ತರ ಸಮಸ್ಯೆ ಇರುತ್ತಿರಲಿಲ್ಲ. ಇವತ್ತಿನ ತಂಡದಲ್ಲಿ ಅಧ್ಯಕ್ಷರನ್ನು ಕ್ರಿಯಾಶೀಲರನ್ನು ನೇಮಕ ಮಾಡಿದ್ದಾರೆ. ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳ ನೇಮಕ ಆಗುವಾಗ ಸಮಾನವಾಗಿ ನೇಮಕ ಆಗಬೇಕು. ಒಂದು ತಂಡ ಅಂದರೆ ಅದು ಒಂದು ಗುಂಪಿಗೆ ಸೀಮಿತ ಆಗಬಾರದು. ಈಗಲಾದರೂ ಕರ್ನಾಟಕಕ್ಕೆ ವರಿಷ್ಠರು ಬರಬೇಕು ಎಂದು ಆಗ್ರಹಿಸಿದ್ದಾರೆ.
13
+ ಬಿಜೆಪಿ ಪದಾಧಿಕಾರಿಗಳ ಪಟ್ಟಿಗೆ ಯತ್ನಾಳ್ ವ್ಯಂಗ್ಯ
14
+ ದೆಹಲಿಯಲ್ಲಿ ಕುಳಿತು ತೀರ್ಮಾನ ಮಾಡುವುದು ಸರಿಯಲ್ಲ. ಕೋರ್ ಕಮಿಟಿ ಎನ್ನುವುದು ಒಂದು ಹಿರಿಯರ ತಂಡ, ಆ ಕೋರ್ ಕಮಿಟಿ ಜೊತೆ ಚರ್ಚಿಸಿ ತೀರ್ಮಾನ ಆಗಿದ್ದರೆ, ಇನ್ನೂ ಸದೃಢವಾದ ಟೀಮ್ ಕಟ್ಟಲು ಸಾಧ್ಯವಾಗಬಹುದಿತ್ತು. ಉತ್ತರ ಕರ್ನಾಟಕ ಭಾಗಕ್ಕೆ ಮತ್ತಷ್ಟು ಒತ್ತು ಕೊಡಬೇಕಿತ್ತು. ಯಾಕೋ ಏನೋ ಗೊತ್ತಿಲ್ಲ, ಹಿರಿಯರ ವೈಫಲ್ಯದಿಂ�� ಸೋಲಾಗಿದೆ ಎಂಬ ಭಾವನೆ ವರಿಷ್ಠರಲ್ಲಿದೆ. ದಯವಿಟ್ಟು ಅದನ್ನು ಅಲ್ಲಿಗೆ ಬಿಟ್ಟು ಬಿಡಿ ಎಂದು ಹೇಳಿದ್ದಾರೆ.
15
+ ಎಲ್ಲವೂ ಸರಿ ಹೋಗಲಿದೆ:ಇನ್ನು ಈ ದಾವಣಗೆರೆಯಲ್ಲಿ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ರಾಜ್ಯ ಬಿಜೆಪಿಯ ಪದಾಧಿಕಾರಿಗಳ ಪಟ್ಟಿ ಈಗಾಗಲೇ ಬಿಡುಗಡೆ ಆಗಿದೆ. ಅಳೆದು, ತೂಗಿ ಪಟ್ಟಿ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಎರಡು ಮಾತಿಲ್ಲ. ಒಳ್ಳೆಯ ಪದಾಧಿಕಾರಿಗಳ ಆಯ್ಕೆ ಆಗಿದೆ. ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ಬಗ್ಗೆ ಏನೂ ಹೇಳಲ್ಲ ಅವರ ವಿರುದ್ಧ ಹೈಕಮಾಂಡ್‍ಗೆ ದೂರು ನೀಡುವ ಪ್ರಯತ್ನ ಸಹ ಮಾಡಲ್ಲ. ಎಲ್ಲವೂ ಸರಿ ಹೋಗುತ್ತದೆ ಎಂದು ತಿಳಿಸಿದರು..
16
+ ಹಿಜಾಬ್ ವಿಚಾರದಲ್ಲಿ ನಮ್ಮೆಲ್ಲರ ಆಕ್ರೋಶದ ಹಿನ್ನೆಲೆ ಸಿದ್ದರಾಮಯ್ಯನವರು ಹೇಳಿಕೆ ಹಿಂದೆ ಪಡೆದಿದ್ದಾರೆ. ನಾವು ಅಲ್ಪಸಂಖ್ಯಾತರ ವಿರೋಗಳಲ್ಲ. ಜಾತಿಯ ವಿಷ ಬೀಜ ಬಿತ್ತುವ ಕೆಲಸ ಸಿದ್ದರಾಮಯ್ಯ ಬಿಡಬೇಕು. ವಿಷ ಬೀಜ ಬಿತ್ತುವುದರಿಂದ ಅವರಿಗೆ ಯಾವುದೇ ಲಾಭ ಆಗಲ್ಲ ಎಂದರು. ಜಾತಿ ಗಣತಿ ವರದಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಜಾತಿ ಗಣತಿ ಬೇಡ ಎಂಬ ಭಾವನೆ ಬಹುತೇಕರಲ್ಲಿ ಬಂದಿದೆ. ಗಣತಿಯು ವೈಜ್ಞಾನಿಕವಾಗಿ ಆಗಬೇಕು ಎಂಬ ಭಾವನೆ ಇದೆ, ನಾವು ಕೂಡ ಅದನ್ನೇ ಹೇಳುತ್ತೇವೆ. ಇನ್ನೊಮ್ಮೆ ಸಮೀಕ್ಷೆ ಆಗಲಿ ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.
eesanje/url_46_280_3.txt ADDED
@@ -0,0 +1,5 @@
 
 
 
 
 
 
1
+ ಕುಮಾರಸ್ವಾಮಿಯವರನ್ನು ನಿಂದಿಸುವುದು ಕಾಂಗ್ರೆಸ್‍ಗೆ ಅಂಟಿದ ಬೇನೆ : ಜೆಡಿಎಸ್
2
+ ಬೆಂಗಳೂರು, ಡಿ.24- ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ನಿಂದನೆ ಮಾಡುವುದೇ ಕಾಂಗ್ರೆಸ್‍ಗೆ ಅಂಟಿದ ಬೇನೆ ಎಂದು ಜೆಡಿಎಸ್ ಟೀಕಿಸಿದೆ. ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಕಲುಷಿತ ಮನಸ್ಸಿನ ರಾಜ್ಯ ಕಾಂಗ್ರೆಸ್ ಕಣ್ಣಿಗೆ ಸದಾ ಕಾಮಾಲೆಯೇ ಎಂದು ಆರೋಪಿಸಿದೆ.
3
+ ದೇಶವನ್ನೇ ಒಡೆದ ಪಕ್ಷಕ್ಕೆ ಹಿಂದುತ್ವವೂ ರುಚಿಸುವುದಿಲ್ಲ, ನಮ್ಮ ಆದರ್ಶ ಪರಂಪರೆಯೂ ಆಗುವುದಿಲ್ಲ. ಅಷ್ಟೇ ಏಕೆ, ಭಾರತವೂ ಸಹ್ಯವಲ್ಲ. ಅದರ , ವಿದೇಶಿ ಜೀನ್ಸ್ ಎಂದೂ ಭಾರತೀಯತೆಯನ್ನು ಒಪ್ಪುದೇ ಇಲ್ಲ. ಇದೇನು ಹೊಸತಲ್ಲ ಎಂದು ಟೀಕಾಪ್ರಹಾರ ನಡೆಸಿದೆ. ಕಲ್ಲಡ್ಕ ಪ್ರಭಾಕರ ಭಟ್ಟರ ಶ್ರೀರಾಮ ವಿದ್ಯಾಕೇಂದ್ರಕ್ಕೆ ಕುಮಾರಸ್ವಾಮಿ ಅವರು ಮುಕ್ತ ಮನಸ್ಸಿನಿಂದ ಭೇಟಿ ನೀಡಿದ್ದರು. ಅಲ್ಲಿನ ಶೈಕ್ಷಣಿಕ ವಾತಾವರಣ, ಮಕ್ಕಳ ಶಿಸ್ತು, ದೇಶಪ್ರೇಮವನ್ನು ಕಣ್ಣಾರೆ ಕಂಡ ಅವರ ಮನಸ್ಸಿನಲ್ಲಿ ಪರಿವರ್ತನೆ ಆಗಿದ್ದರೆ, ಅದೇನು ಮಹಾ ಅಪರಾಧವೇ? ಎಂದು ಪ್ರಶ್ನಿಸಿದೆ.
4
+ ಚಿಕ್ಕಬಳ್ಳಾಪುರದಲ್ಲಿ ವೈದ್ಯರಿಗೆ ಕೊರೊನಾ
5
+ ಪರಿವರ್ತನೆಯೇ ಜಗದ ನಿಯಮ, ಪ್ರತಿಗಾಮಿತನವೇ ಮಾರಣಹೋಮ. ತುಷ್ಠೀಕರಣದ ಅಂಟುವ್ಯಾಯಿಂದ ಬಳಲುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಮಾರಣಹೋಮದಲ್ಲಿಯೇ ನಂಬಿಕೆ ಎಂದು ಟೀಕಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಜತೆ ರಾಜ್ಯದ ಅಭಿವೃದ್ಧಿಯ ಬಗ್ಗೆಯೇ ಕುಮಾರಸ್ವಾಮಿ ಅವರು ಚರ್ಚಿಸಿದ್ದಾರೆ. ಸಂಶಯ ಪಿಶಾಚಿ ಕಾಂಗ್ರೆಸ್ಸಿಗೆ ಹುಳುಕು ಹುಡುಕುವುದೇ ಚಟ. ಜಾತಿ, ಧರ್ಮಗಳನ್ನು ಒಡೆದು ದೇಶಕ್ಕೆ ಶಾಪವಾಗಿ, ಬೆದರಿಕೆಯಾಗಿರುವ ಪ್ರತಿಗಾಮಿ ಪಕ್ಷಕ್ಕೆ ಶಾಂತಿ, ಸೌಹಾರ್ದತೆ ಎಂದರೇನೇ ಅಪಥ್ಯ ಎಂದು ಜೆಡಿಎಸ್ ಆರೋಪಿಸಿದೆ.
eesanje/url_46_280_4.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಭಾರತೀಯ ಕುಸ್ತಿ ಫೆಡರೇಶನ್ ಸಂಸ್ಥೆ ಅಮಾನತು
2
+ ನವದೆಹಲಿ, ಡಿ.24- ಭಾರತೀಯ ಕುಸ್ತಿ ಫೆಡರೇಶನ್‍ನ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ನೇತೃತ್ವದ ನೂತನ ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ ಸಂಸ್ಥೆಯನ್ನು ಕ್ರೀಡಾ ಸಚಿವಾಲಯವು ಅಮಾನತುಗೊಳಿಸಿದೆ.ಕಳೆದ ಗುರುವಾರ ನಡೆದ ಚುನಾವಣೆಯಲ್ಲಿ ಬ್ರಿಜ್ ಭೂಷಣ್ ಶರಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ನೂತನ ಅಧ್ಯಕ್ಷನಾಗಿ ಆಯ್ಕೆಯಾದ ಕೆಲವೇ ಗಂಟೆಗಳಲ್ಲಿ ದೇಶದ್ಯಾಂತ ಭಾರೀ ವಿವಾದ ಸೃಷ್ಟಿಯಾಗಿತ್ತು.
3
+ ಈ ಬೆಳಗಣಿಗೆಯಿಂದ ಮನನೊಂದ ಒಲಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್ ತಾವು ಕುಸ್ತಿಯನ್ನೇ ತ್ಯಜಿಸುವ ನಿರ್ಧಾರ ಪ್ರಕಟಿಸಿದ್ದರೆ, ಮತ್ತೊರ್ವ ಕ್ರೀಡಾಪಟು ವೀರೇಂದರ್ ಸಿಂಗ್ ಕೂಡಾ ತಮಗೆ ಲಭಿಸಿದ್ದ ಪದ್ಮಶ್ರೀ ಪ್ರಶಸ್ತಿಯನ್ನು ಶನಿವಾರ ಹಿಂತಿರುಗಿಸಿದ್ದರು.
4
+ ಈ ಬೆಳವಣಿಗೆಯಿಂದ ಎಚ್ಚೆತ್ತುಕೊಂಡಿರುವ ಕೇಂದ್ರ ಕ್ರೀಡಾ ಇಲಾಖೆ ಅಸ್ತಿತ್ವದಲ್ಲಿರುವ ನಿಯಮಗಳು ಮತ್ತು ನಿಬಂಧನೆಗಳಿಗೆ ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ ಸಂಪೂರ್ಣ ನಿರ್ಲಕ್ಷ್ಯವನ್ನು ತೋರಿಸಿದೆ ಎಂದು ಉಲ್ಲೇಖಿಸಿ ಸಚಿವಾಲಯವು ತನ್ನ ನಿರ್ಧಾರವನ್ನು ಪ್ರಕಟಿಸಿದೆ. ಅಧಿಕೃತ ಪ್ರಕಟಣೆಯಲ್ಲಿ, ಕ್ರೀಡಾ ಸಚಿವಾಲಯವು ರಾಷ್ಟ್ರೀಯ ಸ್ಪರ್ಧೆಗಳ ಪ್ರಕಟಣೆಯು ತರಾತುರಿಯಲ್ಲಿತ್ತು ಮತ್ತು ಸರಿಯಾದ ಪ್ರಕ್ರಿಯೆಯನ್ನು ಅನುಸರಿಸಿಲ್ಲ. ಪಾರದರ್ಶಕತೆ ಹಾಗೂ ಇತರ ಸಮಸ್ಯೆಗಳ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ.
5
+ ಹೊಸದಾಗಿ ಆಯ್ಕೆಯಾದ ಸಂಸ್ಥೆಯ ಅಧ್ಯಕ್ಷ ಸಂಜಯ್ ಕುಮಾರ್ ಸಿಂಗ್ ಡಿಸೆಂಬರ್ 21 ರಂದು ಜೂನಿಯರ್ ರಾಷ್ಟ್ರೀಯ ಸ್ಪರ್ಧೆಗಳು ಈ ವರ್ಷಾಂತ್ಯದ ಮೊದಲು ಪ್ರಾರಂಭವಾಗಲಿದೆ ಎಂದು ಘೋಷಿಸಿದರು ಎಂದು ಸಚಿವಾಲಯ ಉಲ್ಲೇಖಿಸಿದೆ. ಇದು ನಿಯಮಗಳಿಗೆ ವಿರುದ್ಧವಾಗಿದೆ ಮತ್ತು ಕುಸ್ತಿಪಟುಗಳು ತಯಾರಾಗಲು ಕನಿಷ್ಠ 15 ದಿನಗಳ ಸೂಚನೆ ಅಗತ್ಯವಿದೆ ಎಂದು ಸಚಿವಾಲಯ ವಿವರಿಸಿದೆ.
6
+ ನಾನು ದೇಶದ್ರೋಹಿನೋ, ಪ್ರೇಮಿನೋ ಅನ್ನೋದನ್ನ ತಾಯಿ ತೀರ್ಮಾನ ಮಾಡುತ್ತಾಳೆ : ಪ್ರತಾಪ್ ಸಿಂಹ
7
+ ಲೈಂಗಿಕ ಕಿರುಕುಳ ಆರೋಪಗಳಿಗೆ ಒಳಗಾಗಿರುವ ಬಿಜೆಪಿ ಸಂಸದ ಹಾಗೂ ಭಾರತೀಯ ಕುಸ್ತಿ ಸಂಸ್ಥೆಯ (ಡಬ್ಲ್ಯೂಎಫ್‍ಐ) ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತನನ್ನೇ ಕುಸ್ತಿ ಸಂಸ್ಥೆಯ ನೂತನ ಮುಖ್ಯಸ್ಥರನ್ನಾಗಿ ಗುರುವಾರ ಆಯ್ಕೆ ಮಾಡಲಾಗಿತ್ತು. ಕಾಮನ್‍ವೆಲ್ತ್ ಗೇಮ್ಸ್‍ನಲ್ಲಿ ಚಿನ್ನದ ಪದಕ ಗೆದ್ದಿದ್ದ ಕುಸ್ತಿಪಟು ಅನಿತಾ ಶೆಯೊರಾನ್ ವಿರುದ್ಧ ಸಂಜಯ್ ಸಿಂಗ್ ಅವರು 47 ಮತಗಳ ಪೈಕಿ 40 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದರು. ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿ, ಬೀದಿಗಿಳಿದು ಬೃಹತ್ ಪ್ರತಿಭಟನೆಗಳನ್ನು ನಡೆಸಿದ್ದ ಕ್ರೀಡಾಪಟುಗಳು ಅನಿತಾ ಶೆಯೊರಾನ್ ಅವರಿಗೆ ಬೆಂಬಲ ನೀಡಿದ್ದರು.
8
+ ಸಂಜಯ್ ಸಿಂಗ್ ಅವ��ು ಈ ಹಿಂದೆ ಉತ್ತರ ಪ್ರದೇಶ ಕುಸ್ತಿ ಸಂಸ್ಥೆಯ ಉಪಾಧ್ಯಕ್ಷರಾಗಿದ್ದರು. 2019ರಿಂದ ಡಬ್ಲ್ಯೂಎಫ್‍ಐನ ಹಿಂದಿನ ಕಾರ್ಯಕಾರಿ ಮಂಡಳಿಯ ಜಂಟಿ ಕಾರ್ಯದರ್ಶಿಯಾಗಿದ್ದರು. ಉತ್ತರ ಪ್ರದೇಶದ ಕೈಸರ್‍ಗಂಜ್‍ನಿಂದ ಆರು ಬಾರಿ ಸಂಸದರಾಗಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಕಳೆದ 12 ವರ್ಷಗಳಿಂದ ಕುಸ್ತಿ ಸಂಸ್ಥೆ ಮುಖ್ಯಸ್ಥರಾಗಿದ್ದರು.
9
+ ಏನಾಗಿತ್ತು?:ಈ ಹಿಂದೆ ಕುಸ್ತಿ ಫೆಡರೇಷನ್ ಅಧ್ಯಕ್ಷರಾಗಿದ್ದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪಗಳು ಬಂದಿದ್ದರಿಂದ ದೂರು ದಾಖಲಾಗಿತ್ತು. ನಂತರ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಭಾರೀ ಪ್ರತಿಭಟನೆ ನಡೆದಿದ್ದವು. ಕುಸ್ತಿ ಪಟುಗಳಾದ ಸಾಕ್ಷಿ ಮಲಿಕ್, ವಿನೇಶ್ ಫೋಗಟ್, ಬಜರಂಗ್ ಪುನಿಯಾ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದವು.
10
+ ಕೊನೆಗೆ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಮಧ್ಯಪ್ರವೇಶಿಸಿ ಸಾಂಧಾನ ನಡೆಸಿದ ಬಳಿಕ ಕುಸ್ತಿಪಟುಗಳು ತಮ್ಮ ಪ್ರತಿಭಟನೆಯನ್ನು ವಾಪಸ್ ಪಡೆದಿದ್ದರು. ಈ ವರ್ಷಾರಂಭದಲ್ಲಿ ಬ್ರಿಜ್ ಭೂಷಣ್ ಅಧ್ಯಕ್ಷಗಿರಿಯಿಂದ ಕೆಳಗಿಳಿದಿದ್ದರು. ನಂತರ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬ್ರಿಜ್ ಭೂಷಣ್ ಆಪ್ತ ಸಂಜಯ್ ಸಿಂಗ್ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಕುಸ್ತಿಪಟುಗಳ ಅಸಮಾಧಾನಕ್ಕೆ ಕಾರಣವಾಗಿತ್ತು.
11
+ ವಾರಣಾಸಿ ಮೂಲದ ಸಂಜಯ್ ಸಿಂಗ್, ಬ್ರಿಜ್ ಭೂಷಣ್ ಅವರ ನಿಕಟ ಸಹವರ್ತಿಯಾಗಿದ್ದಾರೆ. ಸಂಜಯ್ ಸಿಂಗ್ ಅವರು ಕಾಮನ್‍ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಅನಿತಾ ಶೆರಾನ್ ಅವರ ವಿರುದ್ಧ ಒಟ್ಟು 47 ಮತಗಳ ಪೈಕಿ 40 ಮತಗಳನ್ನು ಪಡೆದು ಗೆದ್ದಿದ್ದಾರೆ.
12
+ ವಿರೋಧ:ನಾನು ಕುಸ್ತಿ ಬಿಟ್ಟಿದ್ದರೂ ಚಿಂತಿತಳಾಗಿದ್ದೇನೆ. ನನ್ನ ಕಿರಿಯ ಮಹಿಳಾ ಕುಸ್ತಿಪಟುಗಳಿಗೆ ಏನು ಹೇಳಬೇಕು ಅನ್ನೋದೇ ಗೊತ್ತಾಗುತ್ತಿಲ್ಲ ಎಂದು ಕುಸ್ತಿಪಟು ಸಾಕ್ಷಿ ಮಲಿಕ್ ಬೇಸರ ವ್ಯಕ್ತಪಡಿಸಿದ್ದರು.2024ರ ಜೂನಿಯರ್ ನಾಷನಲ್ ಗೇಮ್ಸ್ ಕುರಿತು ಸೋಶಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಸಾಕ್ಷಿ, ನಾನು ಕುಸ್ತಿಯನ್ನು ಬಿಟ್ಟಿದ್ದೇನೆ, ಆದರೂ ನಾನು ಚಿಂತಿತಳಾಗಿದ್ದೇನೆ. ಏಕೆಂದರೆ, ಏಪ್ರಿಲ್ 28 ರಿಂದ ಜೂನಿಯರ್ ನ್ಯಾಷನಲ್ ಲೆವೆಲ್ ಪಂದ್ಯಗಳು ನಡೆಯಲಿವೆ. ಉತ್ತರ ಪ್ರದೇಶದ ನಂದನಿನಗರ ಗೊಂಡಾದಲ್ಲಿ ಕುಸ್ತಿ ನಡೆಸಲು ನೂತನ ಕುಸ್ತಿ ಒಕ್ಕೂಟ ನಿರ್ಧರಿಸಿದೆ.
13
+ ಈ ಬಗ್ಗೆ ನನ್ನ ಕಿರಿಯ ಮಹಿಳಾ ಕುಸ್ತಿಪಟುಗಳು ಕರೆ ಮಾಡಿ ತಿಳಿಸಿದ್ದಾರೆ. ಅವರಿಗೆ ಏನು ಹೇಳಬೇಕು ಎನ್ನುವದೇ ತಿಳಿಯುತ್ತಿಲ್ಲ ಎಂದು ಬೇಸರ ಹೊರಹಾಕಿದ್ದರು. ಗೊಂಡಾ ಬ್ರಿಜ್‍ಭೂಷಣ್‍ನ ಭದ್ರಕೋಟೆ. ಈಗ ಜೂನಿಯರ್ ಮಹಿಳಾ ಕುಸ್ತಿಪಟುಗಳು ಯಾವ ಪರಿಸರದಲ್ಲಿ ಕುಸ್ತಿ ಮಾಡಲು ಹೋಗುತ್ತಾರೆ? ಅನ್ನೋದನ್ನ ಊಹಿಸಿ. ನಂದನಿನಗರ ಬಿಟ್ಟು ಬೇರೆಲ್ಲೂ ಆಯೋಜನೆ ಮಾಡಲು ಈ ದೇಶದಲ್ಲಿ ಜಾಗವಿಲ್ಲವೇ? ಏನು ಮಾಡಬೇಕೆಂದು ನನಗೆ ಅರ್ಥವಾಗುತ್ತಿಲ್ಲ ಎಂದು ಕಳವಳ ವ್ಯಕ್ತ��ಡಿಸಿದ್ದರು.
eesanje/url_46_280_5.txt ADDED
@@ -0,0 +1,9 @@
 
 
 
 
 
 
 
 
 
 
1
+ ಕಾಫಿ ನಾಡಿನಲ್ಲಿ ದತ್ತ ಜಯಂತಿಗೆ ಚಾಲನೆ
2
+ ಚಿಕ್ಕಮಗಳೂರು, ಡಿ.24- ಅನುಸೂಯ ಜಯಂತಿ ಆಚರಣೆಯೊಂದಿಗೆ ಇಂದಿನಿಂದ ನಡೆಯುವ ಮೂರು ದಿನಗಳ ದತ್ತ ಜಯಂತಿಗೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಚಿಕ್ಕಮಗಳೂರು ನಗರದಲ್ಲಿ ಸಂಕೀರ್ತನ ಯಾತ್ರೆ ನಡೆಯಿತು.
3
+ ನಗರದ ಬೋಳ ರಾಮೇಶ್ವರ ದೇವಾಲಯದ ಆವರಣದಿಂದ ಆರಂಭವಾದ ಸಂಕೀರ್ತನ ಯಾತ್ರೆ ಐಜಿ ರಸ್ತೆಯಲ್ಲಿ ಸಾಗಿ ರತ್ನಗಿರಿ ರಸ್ತೆಯ ಮೂಲಕ ಪಾಲಿಟೆಕ್ನಿಕ್ ತಲುಪಿ ಅಲ್ಲಿಂದ ಮಹಿಳೆಯರು ವಿವಿಧ ವಾಹನಗಳಲ್ಲಿ ದತ್ತ ಪೀಠಕ್ಕೆ ತೆರಳಿದರು. ಸಂಕೀರ್ತನಾ ಯಾತ್ರೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ದಕ್ಷಿಣ ಭಾರತದ ಮಾತೃ ಶಕ್ತಿ ಸಂಯೋಜಿಕೆ ಶುಭ, ವಿಶ್ವ ಹಿಂದೂ ಪರಿಷತ್ ಪ್ರಾಂತ ಕಾರ್ಯದರ್ಶಿ ಜಗನ್ನಾಥ ಶಾಸ್ತ್ರಿ, ಮಾಜಿ ಸಚಿವ ಸಿ ಟಿ ರವಿ ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿ ಮೊದಲಾದವರು ಭಾಗವಹಿಸಿದ್ದರು.
4
+ ಮಹಿಳೆಯರು ಕೊರಳಿಗೆ ಕೇಸರಿ ಶಲ್ಯ ಧರಿಸಿಕೊಂಡು ಅನುಸೂಯ ದೇವಿಯ ಚಿತ್ರಪಟ ಹಿಡಿದುಕೊಂಡು ಮೆರವಣಿಗೆಯಲ್ಲಿ ಸಾಗಿದರು. ವಿವಿಧ ಮಹಿಳಾ ಭಜನಾ ಮಂಡಳಿಗಳಿಂದ ಭಜನೆ ಆಡುತ್ತಾ ದತ್ತಾತ್ರೇಯ ನಾಮಸ್ಮರಣೆಯೊಂದಿಗೆ ಹೆಜ್ಜೆ ಹಾಕಿದರು. ಮೆರವಣಿಗೆಯಲ್ಲಿ ಶ್ರಿ ದತ್ತಾತ್ರೇಯರ ಅಡ್ಡಯನ್ನ ಒತ್ತು ದತ್ತಪೀಠಕ್ಕೆ ತೆರಳಲಾಯಿತು. ಸಂಕೀರ್ತನ ಯಾತ್ರೆ ತೆರಳುವ ಎಲ್ಲ ಮಾರ್ಗಗಳಲ್ಲಿಯೂ ಬಿಗಿ ಪೊಲೀಸ್ ಬಂದೂಬಸ್ತ್ ಏರ್ಪಡಿಸಲಾಗಿತ್ತು.
5
+ ವಿವಿಧ ವಾಹನಗಳಲ್ಲಿ ತೆರಳಿದ ಮಹಿಳೆಯರು ದತ್ತ ಪೀಠದಲ್ಲಿ ಜಿಲ್ಲಾಡಳಿತ ನಿರ್ಮಿಸಿರುವ ಬ್ಯಾರಿಕೆಟ್ ಮುಖಾಂತರ ಸರತಿ ಸಾಲಿನಲ್ಲಿ ನಿಂತು ಗುಹೆ ಪ್ರವೇಶಿಸಿ ದತ್ತಪಾದಿಕೆಗಳ ದರ್ಶನ ಪಡೆದರು. ಬಂದಂತಹ ಮಹಿಳೆಯರಿಗೆ ಮಹಿಳಾ ಮೂರ್ತಿದಾವತಿಯಿಂದ ಹಸಿರು ಬಳೆ ಹಾಗೂ ಅರಿಶಿಣ ಕುಂಕುಮಗಳನ್ನು ನೀಡಲಾಯಿತು ಹಾಗೂ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
6
+ ನಾನು ದೇಶದ್ರೋಹಿನೋ, ಪ್ರೇಮಿನೋ ಅನ್ನೋದನ್ನ ತಾಯಿ ತೀರ್ಮಾನ ಮಾಡುತ್ತಾಳೆ : ಪ್ರತಾಪ್ ಸಿಂಹ
7
+ ದತ್ತ ಗುಹೆಯ ಹೊರಬಾಗದ ಆವರಣದಲ್ಲಿ ಜಿಲ್ಲಾಡಳಿತ ನಿರ್ಮಿಸಿರುವ ತಾತ್ಕಾಲಿಕ ಶೆಡ್‍ನಲ್ಲಿ ಶ್ರೀ ದತ್ತಾತ್ರೇಯ ಚಿತ್ರಪಟವನ್ನು ಇಟ್ಟು ಪೂಜೆ ಹಾಗೂ ಗಣ ಹೋಮ, ಅನುಸೂಯ ಹೋಮ ಇತ್ಯಾದಿ ಧಾರ್ಮಿಕ ಕಾರ್ಯಗಳು ನಡೆದವು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅವರ ನೇತೃತ್ವದಲ್ಲಿ ಬಿಗಿ ಪೆಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.
8
+ ವಿಶ್ವ ಹಿಂದೂ ಪರಿಷತ್ತಿನ ಜಿಲ್ಲಾಧ್ಯಕ್ಷ ಶ್ರೀಕಾಂತ್ ಪೈ ಮಾತನಾಡಿ, ಶ್ರೀ ಗುರು ದತ್ತಾತ್ರೇಯ ಪೀಠದಲ್ಲಿ ನ್ಯಾಯಾಲಯದ ಆದೇಶದಂತೆ ಅರ್ಚಕರ ನೇಮಕಗೊಳಿಸಲಾಗಿದೆ. ನಮ್ಮ ಬೇಡಿಕೆ ಸಂಪೂರ್ಣ ದತ್ತ ಗುಹೆ ಹಿಂದುಗಳದ್ದೇ ಆಗಬೇಕು ಎಂಬುದಾಗಿದೆ. ಗುಹೆಯಲ್ಲಿರುವ ಹಸಿರು ಹೊದಿಕೆಗಳನ್ನ ತೆರುವು ಮಾಡಬೇಕು. ಪೀಠದಲ್ಲಿ ಹಿಂದ��� ಧಾರ್ಮಿಕ ಆಚರಣೆಗೆ ಮುಕ್ತ ಅವಕಾಶವನ್ನು ಸರ್ಕಾರ ಕೊಡಬೇಕು ಮತ್ತು ಸಂಪೂರ್ಣ ಪೀಠ ಹಿಂದುಗಳದ್ದಾಗಿರಬೇಕು ಶಾಶ್ವತ ಹಿಂದೂ ಅರ್ಚಕರ ನೇಮಕ ಹಾಗೂ ಗೋರಿಗಳ ಸ್ಥಳಾಂತರ ಬೇಡಿಕೆಗಳು ಈಡೇರಬೇಕಿದೆ ಎಂದರು.
9
+ ನಾಳೆ ಚಿಕ್ಕಮಗಳೂರು ನಗರದಲ್ಲಿ ಶೋಭಾ ಯಾತ್ರೆ ನಡೆಯಲಿದ್ದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಮತ್ತು ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಟಿ. ರಾಜಶೇಖರ್ ತಿಳಿಸಿದ್ದಾರೆ. ನಾಡಿದ್ದು ಮಂಗಳವಾರ ದತ್ತಪೀಠದಲ್ಲಿ ಮೂರನೇ ದಿನದ ದತ್ತ ಜಯಂತಿ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಈ ವರ್ಷದ ದತ್ತ ಜಯಂತಿ ಮುಕ್ತಾಯಗೊಳ್ಳಲಿದೆ.
eesanje/url_46_280_6.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ನಾನು ದೇಶದ್ರೋಹಿನೋ, ಪ್ರೇಮಿನೋ ಅನ್ನೋದನ್ನ ತಾಯಿ ತೀರ್ಮಾನ ಮಾಡುತ್ತಾಳೆ : ಪ್ರತಾಪ್ ಸಿಂಹ
2
+ ಮೈಸೂರು, ಡಿ.24- ನಾನು ಪ್ರತಾಪಸಿಂಹ ದೇಶದ್ರೋಹಿನೋ,? ದೇಶಪ್ರೇಮಿನೋ ? ಬೆಟ್ಟದಲ್ಲಿ ಕುಳಿತ ಚಾಮುಂಡಿ ತಾಯಿ, ಬ್ರಹ್ಮಗಿರಿಯಲ್ಲಿ ಕುಳಿತ ಕಾವೇರಮ್ಮ ತೀರ್ಮಾನ ಮಾಡುತ್ತಾಳೆ. ಕರ್ನಾಟಕದಲ್ಲಿ ನನ್ನ ಓದುಗರು ತೀರ್ಮಾನಿಸುತ್ತಾರೆ. ಕಳೆದ ಒಂಬತ್ತು ವರ್ಷದಿಂದ ನನ್ನ ಕೆಲಸ ನೋಡಿರುವ ಮೈಸೂರು, ಕೊಡಗು ಜನ ಉತ್ತರ ಕೊಡುತ್ತಾರೆ. 2024 ರ ಚುನಾವಣೆಯಲ್ಲಿ ಗೆಲ್ಲಿಸುವ ಮೂಲಕ ತೀರ್ಪು ನೀಡುತ್ತಾರೆ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿದರು.
3
+ ಸಂಸತ್ತಿನ ಭದ್ರತಾ ಲೋಪ ಪ್ರಕರಣದ ಬಳಿಕ ಮೈಸೂರುಅವರು ಇದೇ ಮೊದಲ ಬಾರಿಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಘಟನೆ ಸಂಬಂಧ ಪೊಲೀಸರು ಆರು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಅದನ್ನು ಬಿಟ್ಟು ಬೇರೆ ಏನಾದರೂ ಕೇಳಿ ಎಂದಿದ್ದಾರೆ.
4
+ ಪ್ರತಾಪ ಸಿಂಹ ದೇಶದ್ರೋಹಿಯೇ ಅಥವಾ ದೇಶಪ್ರೇಮಿಯೇ ಎನ್ನುವುದು ಬೆಟ್ಟದ ಚಾಮುಂಡಿ ತಾಯಿ ಹಾಗೂ ಕೊಡಗಿನ ಕಾವೇರಿ ತಾಯಿಗೆ ಗೊತ್ತು. ನನ್ನ ಲೇಖನಗಳನ್ನು ಓದಿದ ಓದುಗರಿಗೆ ಗೊತ್ತು. ಇದಕ್ಕೆಲ್ಲಾ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಜನರು ಮುಂಬರುವ ಚುನಾವಣೆಯಲ್ಲಿ ಉತ್ತರ ಕೊಡುತ್ತಾರೆ. ಈ ವಿಚಾರದಲ್ಲಿ ಇಷ್ಟು ಮಾತ್ರವೇ ಹೇಳುತ್ತೇನೆ. ಆ ಬಗ್ಗೆ ಇನ್ನೇನೂ ಕೇಳಬೇಡಿ ಎಂದು ಮನವಿ ಮಾಡಿದರು.
5
+ ಸಿದ್ದರಾಮಯ್ಯ ಐಷಾರಾಮಿ ಖಾಸಗಿ ವಿಮಾನದಲ್ಲಿ ಪ್ರಯಾಣಿಸಿದ್ದಕ್ಕೆ ಕೇಳಿದ ಪ್ರಶ್ನೆಗೆ, ತಮ್ಮನ್ನು ಸಮರ್ಥಿಸಿಕೊಳ್ಳಲು ಸಿಎಂ ಈ ವಿಚಾರದಲ್ಲಿ ಪ್ರಧಾನಿಯನ್ನು ಎಳೆದು ತಂದಿದ್ದಾರೆ. ಪ್ರಧಾನಿಯವರು ಸರ್ಕಾರದ ವಿಮಾನದಲ್ಲೇ ಓಡಾಡುತ್ತಾರೆ. ಖಾಸಗಿ ಜೆಟ್‍ನಲ್ಲಿ ತಮ್ಮ ಪಟಾಲಂ, ಛೇಲಾ, ದುಡ್ಡು ಕೊಡುವವರ ಜೊತೆ ಪ್ರಧಾನಿ ಓಡಾಡುವುದಿಲ್ಲ ಎಂದು ತಿರುಗೇಟು ನೀಡಿದರು.
6
+ ದೇಶಕ್ಕೆ ಒಬ್ಬರೇ ಪ್ರಧಾನಿ ಇರುವುದು. ದೇಶದಲ್ಲಿ 29 ಜನ ಮುಖ್ಯಮಂತ್ರಿಗಳಿದ್ದಾರೆ. ನೀವು ಸುಖಾ ಸುಮ್ಮನೆ ಪ್ರಧಾನಿಗೆ ನಿಮ್ಮನ್ನು ನೀವು ಹೋಲಿಕೆ ಮಾಡಿಕೊಳ್ಳಬೇಡಿ. ಈ ರೀತಿ ಹೋಲಿಕೆ ಮಾಡಿಕೊಳ್ಳುವುದನ್ನು ಮೊದಲು ಬಿಡಿ ಎಂದು ಕಿಡಿಕಾರಿದರು. ನಾನು 2000 ಕೊಟ್ಟೆ, ಕರೆಂಟ್ ಕೊಟ್ಟೆ ಅಂತೀರಿ ಬಿಲ್ ಇವರ ಮನೆಯಿಂದ ಕೊಟ್ರಾ? ನಾನ್ ಮಾಡಿದೆ ಮಾಡಿದೆ ಅಂತೀರಲ್ಲಾ ನಿಮ್ ಮನೆಯಿಂದ ದುಡ್ ತಂದ್ರಾ? ಅವರ ಮಾತಿಗೆ ಅರ್ಥವೇ ಇಲ್ಲ. ಅವರು ವಿವೇಚನಾರಹಿತವಾಗಿ ಮಾತನಾಡುತ್ತಾರೆ. ಪ್ರಧಾನಿ ಅವರು, ಏರ್ ಫೋರ್ಸ್ ಒಂದರಲ್ಲಿ ಅವರು ಓಡಾಡುತ್ತಾರೆ. ಸರ್ಕಾರದ ವಿಮಾನದಲ್ಲಿ ಅವರು ಓಡಾಡುತ್ತಾರೆ. ಪ್ರೈವೇಟ್ ಜೆಟ್ ಅಲ್ಲಿ ಚೇಲಾಗಳನ್ನ ಕೂರಿಸಿಕೊಂಡು ಓಡಾಡಲ್ಲ. ಅವರು ಸರ್ಕಾರದ ವಿಮಾನದಲ್ಲೇ ಓಡಾಡುವುದು.
7
+ ಗುಂಡಿಕ್ಕಿ ನಿವೃತ್ತ ಪೊಲೀಸ್ ಅಧಿಕಾರಿ ಹತ್ಯೆ ಮಾಡಿದ ಉಗ್ರರು
8
+ ಸಮವಸ್ತ್ರ ಸಂಹಿತೆ ತಂದಿದ್ದ ಉದ್ದೇಶ ಸಮಾನ ಮನಸ್ಥಿತಿಯಲ್ಲಿ ನಡೆಯಬೇಕು ಎನ್ನುವುದು ಬಡವ ಬಲ್ಲಿದ, ಮೇಲು ಕೀಳು, ಮುಸ್ಲಿಂ ಹಿಂದೂ ಬರಬಾರದು. ನಾವೆಲ್ಲ ಒಂದೇ ಎಂಬ ಭಾವ ಮೂಡಬೇಕು ಎಂಬ ಉದ್ದೇಶ. ಆದರೆ, ಅದನ್ನ ರಾಜಕಾರಣಕ್ಕೆ ಬಳಸುವುದು ಸರಿಯಲ್ಲ. ವಸ್ತ್ರ ಸಂಹಿತೆ ಎಲ್ಲರಲ್ಲೂ ಒಂದೇ ಎಂಬ ಭಾವ ಮೂಡಿಸುತ್ತದೆ ಎಂದು ಹಿಂಜಾಬ್ ನಿಷೇಧ ವಾಪಸ್ ಪಡೆಯುವುದರ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದರು.
9
+ ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರು ಚರ್ಚೆಗೆ ಬಗ್ಗೆ ಪ್ರತಿಕ್ರಿಯಿಸಿ, 2014ರಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತವಿತ್ತು. ಈ ವೇಳೆ ಅಲ್ಪ ಸಂಖ್ಯಾತರಿಗೆ ಶ್ರೀರಂಗಪಟ್ಟಣದಲ್ಲಿ ಟಿಪ್ಪು ಯೂನಿವರ್ಸಿಟಿ ನಿರ್ಮಾಣ ಮಾಡಲು ಮುಂದಾಗಿದ್ದರು. ದೇವರಾಜ ಮಾರ್ಕೆಟ್ ವಿಚಾರ ಬಂದಾಗ ಸಿದ್ದರಾಮಯ್ಯ ಮಹರಾಜ ಏನ್ ಅವನ ದೊಡ್ಡು ಕೊಟ್ಟು ತಂದಿದ್ನಾ ಅಂದಿದ್ದರು. ಸಿದ್ದರಾಮಯ್ಯ ಅವರಿಗೆ ಅಭಿಮಾನ ಇರುವುದು ಟಿಪ್ಪುಗೆ ಹೊರೆತು, ರಾಜ ಮನೆತನಕ್ಕಲ್ಲ ಎಂಬುದು ಗೊತ್ತು ಎಂದು ಕಿಡಿಕಾರಿದರು.
10
+ ನಮಗೂ ಕೂಡ ಆ ಮನವರಿಕೆ ಬಂದಿದೆ. ವಿಮಾನ ನಿಲ್ದಾಣ ಮೇಲ್ದರ್ಜೆಗೆ ಏರಿಸುವ ಸಂದರ್ಭದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ಪ್ರಸ್ತಾಪ ಮಾಡಲಾಗಿದೆ. ಕ್ಯಾಬಿನೇಟ್ ಅಲ್ಲಿ ಚರ್ಚಿಸಿ ಕೇಂದ್ರಕ್ಕೆ ಕಳುಹಿಸಲಾಗಿದೆ. ಆ ಹೆಸರನ್ನ ಎಂದಿಗೂ ಬದಲಿಸಲು ಸಾಧ್ಯವಿಲ್ಲ ಎಂದರು.
11
+ ಡಿಸೆಂಬರ್ 13 ರಂದು ಸಂದರ್ಶಕರ ಸೋಗಿನಲ್ಲಿ ಸಂಸತ್ತಿಗೆ ಬಂದಿದ್ದ ಇಬ್ಬರು ವ್ಯಕ್ತಿಗಳು ಏಕಾಏಕಿ ಲೋಕಸಭೆಯ ಹಾಲ್ಗೆ ಜಿಗಿದು ಸ್ಮೋಕ್ ಬಾಂಬ್ ಸಿಡಿಸಿದ್ದರು. ಈ ಆರೋಪಿಗಳಿಗೆ ಸಂಸದ ಪ್ರತಾಪ್ ಸಂದರ್ಶಕರ ಪಾಸ್ ನೀಡಿದ್ದರು. ಇದು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪ್ರತಾಪ್ ಸಿಂಹ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಬೇಕೆಂದು ಪ್ರತಿಪಕ್ಷಗಳು ಆಗ್ರಹಿಸಿವೆ. ಆದರೂ ಸಹ ಪ್ರತಾಪ್ ಸಿಂಹ ಇದುವರೆಗೂ ಈ ಬಗ್ಗೆ ಪ್ರತಿಕ್ರಿಯೆ ನೀಡಿರಲಿಲ್ಲ.
eesanje/url_46_280_7.txt ADDED
@@ -0,0 +1,6 @@
 
 
 
 
 
 
 
1
+ ಅಂಜನಾದ್ರಿಯಲ್ಲಿ ಹನುಮ ಜಯಂತಿ ಸಂಭ್ರಮ
2
+ ಕೊಪ್ಪಳ, ಡಿ.24-ಹನುಮಂತನ ಜನ್ಮಸ್ಥಳ ಎಂದು ಪ್ರಸಿದ್ದಿ ಪಡೆದಿರುವ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟದಲ್ಲಿ ಸಂಭ್ರಮ ಮನೆ ಮಾಡಿದೆ. ಹನುಮ ಜಯಂತಿ ಅಂಗವಾಗಿ ಹನುಮಮಾಲೆದಾರಿಗಳು ಇಂದು ವಿಸರ್ಜನೆ ಕಾರ್ಯ ವೇಳೆ ಶ್ರೀರಾಮ-ಆಂಜನೇಯನ ನಾಮ ಘೋಷ ಮೊಳಗಿದೆ ನೆರೆಯ ಆಂಧ್ರ, ತೆಲಂಗಾಣ ಸೇರಿದಂತೆ ದೇಶದ ವಿವಿಧೆಡೆಯಿಂದ ಲಕ್ಷಾಂತರ ಹನುಮ ಭಕ್ತರು ಆಗಮಿಸಿದ್ದಾರೆ.
3
+ ಜಿಲ್ಲಾಡಳಿತ ವತಿಯಿಂದ ಸೂಕ್ತ ವ್ಯವಸ್ಥೆ ಮಾಡಲಾಗಿದ್ದು ರಾತ್ರಿ ಅಂಜನಾದ್ರಿಬೆಟ್ಟಕ್ಕೆ ಅಳವಡಿಸಿದ್ದ ವಿದ್ಯುತ್ ದೀಪಗಳಿಂದ ಕಂಗೊಳಿಸಿತ್ತು. ಗದಗ ಮತ್ತು ಬೆಳಗಾವಿ ಜಿಲ್ಲೆಗಳಿಂದ ಬಂದಿದ್ದ ಭಕ್ತರು ಪ್ರಧಾನಿ ನರೇಂದ್ರ ಮೋದಿ, ಪುನೀತ್ ರಾಜ್‍ಕುಮಾರ್ ಭಾವಚಿತ್ರ ಹಿಡಿದು ಆಗಮಿಸಿ ಜೈ ಕಾರ ಕೂಗಿದರು.
4
+ ಅತಿಯಾದ ತುಷ್ಟೀಕರಣಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಚ್ಚರ : ಜೋಶಿ
5
+ ಚಾತುರ್ಮಾಸದಲ್ಲಿ ರಾವಣನ ವಿರುದ್ಧ ಯುದ್ದಕ್ಕೆ ಹೋಗಲು ಹನುಮ ಸಂಕಲ್ಪವನ್ನು ಮಾಡಿ ತಪಸ್ಸು ಮಾಡುತ್ತಾನೆ. ಇದೇ ಕಾರಣಕ್ಕೆ ಹನುಮನ ಭಕ್ತರು ಚಾತುರ್ಮಾಸದ ಸಮಯದಲ್ಲಿ ತಮ್ಮ ಇಷ್ಟಾರ್ಥಗಳ ಈಡೇರಿಕೆಗೆ ಸಂಕಲ್ಪ ಮಾಡಿ ಹನುಮ ಮಾಲೆಯನ್ನು ಧರಿಸುತ್ತಾರೆ.
6
+ ಇಂದು ವಿಸರ್ಜನೆಗಾಗಿ ಆಗಮಿಸಿ ಪೋಜೆ ಸಲ್ಲಿಸುತ್ತಿದ್ದಾರೆ.ಕೊಪ್ಪಳ ಜಿಲ್ಲಾಡಳಿತ ಮತ್ತು ಮುಜರಾಯಿ ಇಲಾಖೆ ಅಂಜನಾದ್ರಿ ಬೆಟ್ಟದಲ್ಲಿ ನೀರು,ಉಪಹಾರ ವ್ಯವಸ್ಥೆ ಮಾಡಿತ್ತು ಆದರೆ ಭಕ್ತರ ತಂಡವು ಪವಸಾದ ವಿನಿಯೋಗ ಮಾಡಿ ಹನುಮ ಜಯಂತಿಯನ್ನು ಸಂಭ್ರಮದಿಂದ ಆಚರಿಸಿದರು.
eesanje/url_46_280_8.txt ADDED
@@ -0,0 +1,5 @@
 
 
 
 
 
 
1
+ ಉದ್ಯಮಿಗಳೊಂದಿಗೆ ಸಿಎಂ ಸಭೆ
2
+ ಮೈಸೂರು,ಡಿ.23- ಸಾಂಸ್ಕøತಿಕ ನಗರಿ ಮೈಸೂರು ಹಾಗೂ ಸುತ್ತಮುತ್ತಲೂ ಸ್ಥಾಪಿಸಿರುವ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಕಡ್ಡಾಯವಾಗಿ ಉದ್ಯೋಗ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮೈಸೂರಿನಲ್ಲಿಂದು ನಡೆದ ವಿವಿಧ ಕಾರ್ಖಾನೆಗಳ ಮುಖ್ಯಸ್ಥರ ಸಭೆಯಲ್ಲಿ ಮಾತನಾಡಿದ ಸಿಎಂ, ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಸಿಗಬೇಕು ತಾಂತ್ರಿಕ ನೈಪುಣ್ಯ ಇರುವವರು ಇಲ್ಲಿ ಸಿಗದಿದ್ದಾಗ ಮಾತ್ರ ಹೊರಗಿನವರಿಗೆ ಅವಕಾಶ ಕೊಡಬೇಕು ಎಂದರು.
3
+ ಹೇರಳವಾದ ಮಾನವ ಸಂಪನ್ಮೂಲ ನಮ್ಮಲ್ಲಿ ಇದೆ. ವೃತ್ತಿ ನೈಪುಣ್ಯ ಇರುವವರೂ ನಮ್ಮಲ್ಲಿ ಇದ್ದಾರೆ. ಸುಳ್ಳು ಕಾರಣ ಕೊಟ್ಟು ಸ್ಥಳೀಯರಿಗೆ ಉದ್ಯೋಗ ಅವಕಾಶ ನಿರಾಕರಿಸಬಾರದು. ಕಾರ್ಖಾನೆಗಳು ಶಾಂತಿಯುತವಾಗಿ ನಡೆಯಬೇಕು. ನಮ್ಮ ಸರ್ಕಾರ ನಿರುದ್ಯೋಗಿ ಪದವೀಧರರಿಗಾಗಿ ಯುವ ನಿಧಿ ಯೋಜನೆ ಜಾರಿಗೆ ತರುತ್ತಿದೆ. ಯೋಜನೆ ಜನವರಿ 12ರಂದು ಉದ್ಘಾಟನೆಯಾಗಲಿದೆ.
4
+ ನಿಮಗೆ ಯಾವ ರೀತಿಯ ವೃತ್ತಿ ನೈಪುಣ್ಯತೆ ಇರುವವರು ಬೇಕು ಎಂಬುದನ್ನು ಮನಗಂಡು ಪದವೀಧರರಿಗೆ ಸರ್ಕಾರದ ವತಿಯಿಂದ ತರಬೇತಿ ನೀಡಲಾಗುವುದು. ಕಾರ್ಖಾನೆಗಳಿಂದ ರಾಜ್ಯದ ಅಭಿವೃದ್ಧಿ ಆಗುತ್ತದೆ. ಜಿಡಿಪಿ ಬೆಳವಣಿಗೆಗೂ ಇದು ಸಹಕಾರಿ. ಕಾರ್ಖಾನೆಗಳಿಗೆ ಜಮೀನು ನೀಡಿದ ಮಾಲೀಕರ ಕುಟುಂಬದವರಿಗೆ ಪ್ರಮುಖವಾಗಿ ಉದ್ಯೋಗ ನೀಡಬೇಕು. ಸ್ಥಳೀಯರಿಗೆ ಆದ್ಯತೆ ಸಿಗಲೇಬೇಕು. ಒಂದು ವೇಳೆ ವೃತ್ತಿ ನೈಪುಣ್ಯತೆ ಇಲ್ಲದಿದ್ದರೆ ತರಬೇತಿ ನೀಡಿ ನೇಮಕ ಮಾಡಿಕೊಳ್ಳುವುದು ಸೂಕ್ತ ಎಂದು ಹೇಳಿದರು.
5
+ ಸ್ಥಳೀಯರಿಗೆ ಉದ್ಯೋಗ ಸಿಗಬೇಕು ಎಂಬ ದೃಷ್ಟಿಯಿಂದ ಕಾರ್ಖಾನೆಗಳ ಪ್ರಾರಂಭಕ್ಕೆ ಅನುಮತಿ ನೀಡಲಾಗುತ್ತದೆ. ಉದ್ಯೋಗ ಸಿಗದಿದ್ದರೆ ಸರ್ಕಾರದ ಉದ್ದೇಶ ಈಡೇರುವುದಿಲ್ಲ. ನಮ್ಮ ಸರ್ಕಾರ ಕೈಗಾರಿಗಳಿಗೆ ಸೌಲಭ್ಯ ಒದಗಿಸಲು ಬದ್ಧವಾಗಿದೆ. ಅದೇ ರೀತಿ ಸೂಕ್ತ ರಿಯಾಯಿತಿ ನೀಡಲೂ ಸಿದ್ಧ. ನಮ್ಮ ಸರ್ಕಾರ ಕೈಗಾರಿಕೆಗಳ ವಿರುದ್ಧ ಇಲ್ಲ. ಸ್ಥಳೀಯರಿಗೆ ಉದ್ಯೋಗ ಸಿಗಬೇಕು ಎಂಬುದು ನಮ್ಮ ಆಶಯ ಎಂದು ತಿಳಿಸಿದರು. ಜಿಲ್ಲಾಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹಾದೇವಪ್ಪ, ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ, ಜಿಲ್ಲಾಡಳಿತದ ಅಧಿಕಾರಿಗಳು ಸಭೆಯಲ್ಲಿದ್ದರು.
eesanje/url_46_280_9.txt ADDED
@@ -0,0 +1,13 @@
 
 
 
 
 
 
 
 
 
 
 
 
 
 
1
+ ಅತಿಯಾದ ತುಷ್ಟೀಕರಣಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಚ್ಚರ : ಜೋಶಿ
2
+ ಬೆಂಗಳೂರು,ಸೆ.23- ಅತಿಯಾದ ತುಷ್ಟೀಕರಣ ಮಾಡಿದ್ದರಿಂದಲೇ 2018ರ ವಿಧಾನಸಭೆ ಚುನಾವಣೆಯಲ್ಲಿ ನೀವು ಸೋತಿದ್ದೀರಿ ಎಂಬುದನ್ನು ಮರೆಯಬಾರದು. ಈಗಲೂ ಅದು ಮುಂದುವರೆದರೆ ಜನ ಪಾಠ ಕಲಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಎಚ್ಚರಿಸಿದ್ದಾರೆ.
3
+ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2018ರಲ್ಲಿ ಇದೇ ರೀತಿ ಅತಿಯಾದ ತುಷ್ಟಿಕರಣ ನಡೆಸಿದ್ದರಿಂದ ಚಾಮುಂಡೇಶ್ವರಿಯಲ್ಲಿ ಏನಾಯಿತು ಎಂಬುದು ನಿಮಗೆ ಗೊತಿದ್ದರೆ ಸಾಕು. ಪುನಃ ಅದನ್ನು ಮುಂದುವರೆಸುತ್ತೇನೆ ಎಂದರೆ ರಾಜ್ಯದ ಜನತೆ ಸೂಕ್ತ ಕಾಲದಲ್ಲಿ ಸರಿಯಾದ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ. ಅತಿಯಾದ ಪರಾಕಷ್ಠೆ ಒಳ್ಳೆಯದಲ್ಲ ಎಂದು ಸಲಹೆ ಮಾಡಿದರು.
4
+ ಅಷ್ಟಕ್ಕೂ ಕರ್ನಾಟಕದಲ್ಲಿ ಹಿಜಾಬ್‍ನ್ನು ಯಾರು ನಿಷೇಧ ಮಾಡಿದ್ದಾರೆ? ನಾನು ಆದೇಶವನ್ನು ವಾಪಸ್ ಪಡೆಯುತ್ತೇನೆಂದು ಹೇಳಿದ್ದೀರಿ. ನಿಮಗೆ ಕಾನೂನಿನ ಅರಿವು ಇದೆಯೇ ಎಂದು ಪ್ರಶ್ನಿಸಿದರು. ಶಾಲಾಕಾಲೇಜಿನ ಕೊಠಡಿಗಳಲ್ಲಿ ಮಾತ್ರ ಹಿಜಾಬ್ ಧರಿಸಬಾರದೆಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿತು ಯಾರು ಎಲ್ಲಿ ಬೇಕಾದರೂ ತಮಗೆ ಇಷ್ಟವಾದ ಉಡುಗೆ ತೊಡುಗೆಗಳನ್ನು ಧರಿಸಲು ಅವಕಾಶವಿದೆ.
5
+ ಶಾಲಾಕಾಲೇಜುಗಳಲ್ಲಿ ಎಲ್ಲರೂ ಸಮಾನತೆ ಬರಲಿ ಎಂಬ ಕಾರಣಕ್ಕಾಗಿಯೇ ಸಂಹಿತೆಯನ್ನು ಜಾರಿಮಾಡಲಾಗಿದೆ. ಮುಸ್ಲಿಂ ವಿದ್ಯಾರ್ಥಿಗಳು ಹಿಜಾಬ್ ಧರಿಸಬಾರದೆಂದು ಬಿಜೆಪಿ ಸರ್ಕಾರ ಆದೇಶ ಹೊರಡಿಸಿತ್ತೆ? ಎಂದು ಪ್ರಶ್ನಿಸಿದರು. ಸರ್ಕಾರದ ಆದೇಶವನ್ನು ಹೈಕೋರ್ಟ್ ಕೂಡ ಎತ್ತಿ ಹಿಡಿದಿದೆ.
6
+ ಸುಪ್ರೀಂಕೋರ್ಟ್‍ನಲ್ಲಿ ವಿಚಾರಣಾ ಹಂತದಲ್ಲಿರುವಾಗ ಇಷ್ಟು ಆತುರವಾಗಿ ಹಿಜಾಬ್ ಬಗ್ಗೆ ಹೇಳಿಕೆ ಕೊಡುವ ಅಗತ್ಯವೇನಿತು? ನೀವು ಪ್ರತಿಯೊಂದನ್ನು ಬಣ್ಣದ ಮೂಲಕವೇ ಗುರುತಿಸಿಕೊಳ್ಳಲು ಹೊರಟಿದ್ದೀರಿ, ಇದಕ್ಕೆ ಜನತೆ ಕೂಡ ಸುಮ್ಮನಿರುವುದಿಲ್ಲ ಎಂದು ಎಚ್ಚರಿಕೆ ಕೊಟ್ಟರು. ಮುಸ್ಲಿಂ ವಿದ್ಯಾರ್ಥಿಗಳು ಹಿಜಾಬ್ ಹಾಕಿಕೊಂಡು ಬಂದರೆ ನಾಳೆ ಇನ್ಯಾರೊ ಕೇಸರಿ ಶಾಲು, ಉಳಿದವರು ಟೋಪಿ ಹಾಕಿಕೊಂಡು ಬರುತ್ತಾರೆ.
7
+ ಪೊಲೀಸ್ ಇಲ್ಲವೇ ಮಿಲ್ಟ್ರಿ ಪೆರೇಡ್‍ನಲ್ಲಿ ಹಿಜಾಬ್ ಹಾಕುತ್ತೇವೆ ಎಂದರೆ ನಾವೇನು ಮಾಡಲು ಸಾಧ್ಯ ಎಂದು ಪ್ರಶ್ನೆ ಮಾಡಿದರು.ಸಿದ್ದರಾಮಯ್ಯನವರೇನೂ ಮೂರ್ಖರಲ್ಲ. ಇದನ್ನು ಉದ್ದೇಶ ಪೂರ್ವಕವಾಗಿಯೇ ಹೇಳಿದ್ದಾರೆ. ಅವರಿಗೆ ಇದರ ಅರಿವಿಲ್ಲ ಎಂದು ಯಾರು ಭಾವಿಸಬಾರದು. ಜನತೆ ಕಾದು ನೋಡಿ ಉತ್ತರ ಕೊಡುತ್ತಾರೆ ಎಂದು ತಿಳಿಸಿದರು.
8
+ ಸೋಲಿನ ಸೇಡು:ಇತ್ತೀಚೆಗೆ ನಡೆದ ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋತು ನೆಲ ಕಚ್ಚಿದ್ದರಿಂದ ಸಂಸತ್‍ನ ಸದನಗಳಿಗೆ ಅಡ್ಡಿಪಡಿಸಿತು. ಕಲಾಪ ಸುಗಮವಾಗಿ ನಡೆಯಬಾರದು ಎಂಬುದು ಅವರ ಉದ್ದೇಶವಾಗಿತ್ತು ಎಂದು ಆರೋಪಿಸಿದರು. ಚುನಾವಣೆಯಲ್ಲಿ ಸೋತು ಜನರಿಂದ ಕಾಂಗ್ರೆಸ್ ತಿರಸ್ಕøತಗೊಂಡಿತ್ತು. ಬಿಜೆಪಿ ದೇಶಾದ್ಯಂತ ಮೇಲುಗೈ ಸಾಧಿಸಿರುವುದನ್ನು ಅವರಿಗೆ ಸಹಿಸಿಕೊಳ್ಳಲು ಆಗಲಿಲ್ಲ. ಹೀಗಾಗಿ ವಿಷಯಾಂತರ ಮಾಡಲು ಸಂಸತ್‍ನ ಉಭಯ ಸದನಗಳಲ್ಲಿ ಗದ್ದಲ ಎಬ್ಬಿಸಿತು. ಇದು ಕಾಂಗ್ರೆಸ್‍ನ ಅಜೆಂಡಾ ಕೂಡ ಹಾಗಿತ್ತು ಎಂದು ಆರೋಪಿಸಿದರು.
9
+ ರಾಜ್ಯದಲ್ಲಿ ಹಿಜಾಬ್ ನಿಷೇಧ ಆಗಿಯೇ ಇಲ್ಲ : ಮಾಜಿ ಸಿಎಂ ಬೊಮ್ಮಾಯಿ
10
+ ನೂತನ ಸಂಸತ್ ಭವನದಲ್ಲಿ ಭಿತ್ತಿಪತ್ರ ಕಾರ್ಡ್‍ಗಳನ್ನು ಯಾರೊಬ್ಬರು ಕೈಯಲ್ಲಿ ಹಿಡಿದುಕೊಂಡು ಬರಬಾರದೆಂದು ಎಲ್ಲ ಸದಸ್ಯರಿಗೆ ಮೊದಲೇ ಸೂಚನೆ ಕೊಡಲಾಗಿತ್ತು. ಸದನ ಸಲಹಾ ಸಮಿತಿ ಸಭೆಯಲ್ಲಿ ಇದಕ್ಕೆ ಕಾಂಗ್ರೆಸ್ ಸೇರಿದಂತೆ ಎಲ್ಲ ಸದಸ್ಯರು ಒಪ್ಪಿಕೊಂಡಿದ್ದರು. ಬಳಿಕ ಸದನದಲ್ಲಿ ಭಿತ್ತಿಪತ್ರಗಳನ್ನು ಹಿಡಿದಿದ್ದು ಏಕೆ ಎಂದು ಪ್ರಶ್ನೆ ಮಾಡಿದರು. ಸದನ ಸುಗಮವಾಗಿ ನಡೆದರೆ ಅದರ ಶ್ರೇಯಸ್ಸು ಬಿಜೆಪಿಗೆ ಸಲ್ಲುತ್ತದೆ ಎಂಬ ಕಾರಣಕ್ಕಾಗಿ ಇಲ್ಲದ ಸಲ್ಲದ ಕಾರಣಗಳನ್ನು ನೆಪವೊಡ್ಡಿ ಉಭಯ ಸದನಗಳಲ್ಲಿ ಗದ್ದಲ ಎಬ್ಬಿಸಿದರು. ಯಾವ ಪುರುಷಾರ್ಥಕ್ಕಾಗಿ ಕಲಾಪಕ್ಕೆ ಅಡ್ಡಿಪಡಿಸಬೇಕಾಯಿತು.ಇದರಿಂದ ನೀವು ಸಾಧಿಸಿದ್ದದಾರೂ ಏನು ಎಂದು ಕಿಡಿಕಾರಿದರು.
11
+ ಸಂಸತ್ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಈಗಾಗಲೇ ಸ್ಪೀಕರ್ ಅವರು ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಿದ್ದಾರೆ. ಯಾವುದೇ ಕಾರಣಕ್ಕೂ ನಮ್ಮ ಸರ್ಕಾರ ಇದನ್ನು ಮುಚ್ಚಿ ಹಾಕುವ ಪ್ರಶ್ನೆಯೇ ಇಲ್ಲ. ತನಿಖಾ ಹಂತದಲ್ಲಿ ಇರುವಾಗ ಗೃಹ ಸಚಿವರು ಸದನದಲ್ಲಿ ಹೇಳಿಕೆ ನೀಡುವುದು ಸರಿಯೇ ಎಂದು ಪ್ರಶ್ನಿಸಿದರು.
12
+ ಸಂಸತ್‍ನ ಭದ್ರತಾ ವ್ಯವಸ್ಥೆಯನ್ನು ಸಿಆರ್‍ಪಿಎಫ್‍ಗೆ ವಹಿಸುವ ಚಿಂತನೆ ನಡೆದಿದೆ. ಈಗಾಗಲೇ ಸ್ಪೀಕರ್ ಅವರು ಡಿಜಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಪ್ರಕರಣದ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ. ವಿಚಾರಣೆ ನಡೆಯುತ್ತಿರುವಾಗಲೇ ಹೇಳಿಕೆ ಕೊಡಿ ಎಂದು ಒತ್ತಾಯಿಸುವುದು ಸರಿಯಲ್ಲ. ತನಿಖೆ ಪೂರ್ಣಗೊಂಡ ಮೇಲೆ ಸಂಬಂಧಪಟ್ಟವರು ಹೇಳಿಕೆ ನೀಡುತ್ತಾರೆ ಎಂದು ಹೇಳಿದರು.
13
+ ಸದನದ ಸದಸ್ಯರನ್ನು ಅಮಾನತುಗೊಳಿಸಿದ್ದು ಇದೇ ಮೊದಲಲ್ಲ. 1979ರಲ್ಲೇ 69 ಸದಸ್ಯರನ್ನು ಅಮಾತುಪಡಿಸಲಾಗಿತ್ತು. ಮಹಾರಾಷ್ಟ್ರದಲ್ಲಿ ಒಂದು ವರ್ಷ ಸದಸ್ಯರನ್ನು ಅಮಾನತು ಪಡಿಸಲಾಗಿತ್ತು. ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲೂ ಇದೇ ಪ್ರಸಂಗ ನಡೆದಿದೆ. ಸದಸ್ಯರನ್ನು ಅಮಾತುಪಡಿಸುವುದು, ಬಿಡುವುದು ಸ್ಪೀಕರ್ ವಿವೇಚನೆಗೆ ಬಿಟ್ಟಿದ್ದು, ಇದರಲ್ಲಿ ಸರ್ಕಾರದ ಹಸ್ತಕ್ಷೇಪ ಇರುವುದಿಲ್ಲ ಎಂದು ಜೋಷಿ ಸ್ಪಷ್ಟಪಡಿಸಿದರು.
eesanje/url_46_281_1.txt ADDED
@@ -0,0 +1,8 @@
 
 
 
 
 
 
 
 
 
1
+ ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ
2
+ ಬೆಂಗಳೂರು,ಡಿ.23- ಧನುರ್ಮಾಸ ಶುಕ್ಲ ಪಕ್ಷದಲ್ಲಿ ಬರುವ ವೈಕುಂಠ ಏಕಾದಶಿಯಂದು ದೇವತೆಗಳು ಭೂ ಲೋಕಕ್ಕೆ ಬಂದು ಜಗದೊಡೆಯ ಶ್ರೀವಿಷ್ಣು ದೇವರನ್ನು ಪೂಜಿಸುತ್ತಾರೆ ಎಂದು ಪುರಾಣಗಳು ಹೇಳುತ್ತವೆ. ಆದುದರಿಂದಲೇ ಈ ದಿನದಂದು ದೇವಾಲಯದ ಉತ್ತರ ದ್ವಾರದ ಮೂಲಕ ವಿಷ್ಣುವಿನ ದರ್ಶನ ಮಾಡಿದರೆ ಸಕಲ ಪುಣ್ಯಗಳು ಪ್ರಾಪ್ತಿಯಾಗುತ್ತವೆ ಎಂಬುದು ನಂಬಿಕೆ ಇದ್ದು ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಹಬ್ಬದ ಸಂಭ್ರಮ ಮನೆ ಮಾಡಿದೆ.
3
+ ಶ್ರೀ ವೆಂಕಟೇಶ್ವರ ಗೊವಿಂದನ ದೇಗುಲಗಳಲ್ಲಿ ಅದ್ದೂರಿಯಾಗಿ ವೈಕುಂಠ ಏಕಾದಶಿಯನ್ನು ಆಚರಿಸಲಾಗುತ್ತಿದ್ದು, ದೇವಸ್ಥಾನವನ್ನು ಸಿಂಗರಿಸಿ ವುಂಜಾನೆ 4 ಗಂಟೆಗೆ ಸುಪ್ರಭಾತ ಸೇವೆ ವಿಶೇಷ ಪೂಜೆ ನಡೆದಿದ್ದು ಭಕ್ತರ ದಂಡೇ ಹರಿದುಬಂದಿದೆ.
4
+ ಅರಸೀಕೆರೆ ಮಲೇಕಲ್ಲು ಅಮರಗಿರಿ ತಿರುಪತಿ ದೇವಾಲಯ ,ಮಾಲೂರಿನ ಚಿಕ್ಕತಿರುಪತಿ, ಮೈಸೂರು ,ಬೆಳಗಾವಿ ಹುಬ್ಬಳ್ಳಿ ಚಿಕ್ಕಮಗಳೂರು ,ಹಾಸನ ,ಶೀರಂಗಪಟ್ಟಣದ ರಂಗನಾಥ ಸೇರಿದಂತೆ ರಾಜ್ಯಾದ್ಯಂತ ಸಾವಿರಾರು ದೇಗುಲದಲ್ಲಿ ಪಂಚಾಭಿಷೇಕ, ಪುಷ್ಪಭಿಷೇಕ ಸೇರಿದಂತೆ ವಿವಿಧ ಪೋಜೆ ನಡೆಸಿ ನಂತರ ವಿಶೇಷ ಅಲಂಕಾರ ಮಾಡಿ ಭಕ್ತದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.
5
+ ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ : ಬಿಜೆಪಿ
6
+ ಇನ್ನು ಬೆಮಗಳೂರಿನ ಮಲ್ಲೇಶ್ವರ ಹಾಗು ಜೆಪಿನಗರದ ಟಿಟಿಡಿ ದೇವಸ್ಥಾನದಲ್ಲಂತೂ ಸಂಭ್ರಮ ಮುಗಿಲುಮುಟ್ಟಿದೆ ವೈಕುಂಠ ಏಕಾದಶಿ ಪ್ರಯುಕ್ತವಾಗಿಯೇ ದೇವಸ್ಥಾನದ ಸುತ್ತಲೂ ದಕ್ಷಿಣ ಶೈಲಿಯ ಚಪ್ಪರ ಹಾಕಿ ಹೂವಿನಿಂದ ಅಲಾಂಕಾರ ಮಾಡಲಾಗಿದೆ. ಬೆಳಗ್ಗೆ 6 ಗಂಟೆಯಿಂದಲೇ ಭಕ್ತರು ಆಗಮಿಸಿ ವೆಂಕಟೇಶ್ವರನ ದರ್ಶನ ಪಡೆದಿದ್ದಾರೆ.
7
+ ದೇಗುಲಕ್ಕೆ ಬಂದ ಭಕ್ತರಿಗೆ ಪ್ರಸಾದ ವಿತರಣೆ ನಡೆಯುತ್ತಿದ್ದು, ಇಂದು ದೇವಸ್ಥಾನಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಜನರು ಬರುವ ನಿರೀಕ್ಷೆ ಇದ್ದು, ನೂಕು ನುಗ್ಗಲಾಗದಂತೆ ದೇವಸ್ಥಾನದ ಸುತ್ತಲೂ ಬ್ಯಾರೀಕೇಟ್ ಅಳವಡಿಸಲಾಗಿದೆ. ಇನ್ನು, ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆ ಕೆಲವೆಡೆ ಮಾಸ್ಕ್ ಹಾಕಿಕೊಂಡು ಭಕ್ತದಿಗಳು ದೇವಸ್ಥಾನಕ್ಕೆ ಬರಲು ಹೇಳಿ ಮಾಸ್ಕ ನೀಡಲಾಗಿದೆ. ದೇವಸ್ಥಾನದಲ್ಲಿ ಬೆಳಗ್ಗೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೂ ವಿಶೇಷ ಪೂಜೆ, ಹೊಮ, ಹವನಗಳು ನೆರವೇರಲಿದ್ದು, ಮಧ್ಯರಾತ್ರಿಯವರೆಗೂ ಭಕ್ತದಿಗಳು ದೇವಸ್ಥಾನಕ್ಕೆ ರಾಜಾಜಿನಗರದ ಭೂ-ಕೈಲಾಸ ವೈಕುಂಟ ದೇವಾಲಯ.
8
+ ಇಸ್ಕಾನ್ ದೇವಾಲಯ,ಮಹಾಲಕ್ಷ್ಮಿಲೇಔಟ್‍ನ ವೆಂಕಟೇಶ್ವರ ದೇವಾಲಯಕ್ಕೆ ಸಾವಿರಾರು ಭಕ್ತರು ಭೇಟಿ ನೀಡಿ ದೇವರ ದರ್ಶನ ಮಾಡಿದ್ದಾರೆ ಗೋವಿಂದ .ಗೋವಿಂದ ನಾಮ ಎಲ್ಲಡೆ ಪಸರಿಸಿದ್ದು ಸಂಭ್ರಮದಲ್ಲಿ ನಾಡಿನ ಜನತೆ ಮಿಂದಿದ್ದಾರೆ.
eesanje/url_46_281_10.txt ADDED
@@ -0,0 +1,8 @@
 
 
 
 
 
 
 
 
 
1
+ ಸರ್ಕಾರಿ ಆಸ್ಪತ್ರೆಗಳ ಮೇಲೆ ಲೋಕಾಯುಕ್ತ ದಾಳಿ
2
+ ಬೆಂಗಳೂರು,ಡಿ.22 – ಸರ್ಕಾರಿ ಆಸ್ಪತ್ರೆಗಳಲ್ಲಿ ಅವ್ಯವಹಾರ ಹಾಗೂ ಅಕ್ರಮಗಳ ಬಗ್ಗೆ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಇಂದು ಬೆಂಗಳೂರು ನಗರ ಹಾಗೂ ಗ್ರಾಮಾಂತರದ ಸರ್ಕಾರಿ ಆಸ್ಪತ್ರೆಗಳಿಗೆ ಲೋಕಾಯುಕ್ತರು ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ವೈದ್ಯರು ಹಾಗೂ ಆಡಳಿತ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
3
+ ಬೆಂಗಳೂರು ಗ್ರಾಮಾಂತರದ ನೆಲಮಂಗಲ ನಗರ ಪ್ರದೇಶದ ಯಲಹಂಕ, ಕೆಆರ್ ಪುರ, ಜಯನಗರ, ಕೆ.ಸಿ.ಜನರಲ್ ಆಸ್ಪತ್ರೆ, ಸಂಜಯನಗರ ಆಸ್ಪತ್ರೆ, ರಾಜೀವ್ ಗಾಂದಿ ಆಸ್ಪತ್ರೆ, ಗೌಸಿಯಾ ಆಸ್ಪತ್ರೆ, ವಾಣಿ ವಿಲಾಸ ಆಸ್ಪತ್ರೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ಪೋಲೀಸರು ಹಾಗೂ ಅಧಿಕಾರಿಗಳ ತಂಡ ಇಂದು ತಪಾಸಣಾ ಕಾರ್ಯ ಕೈಗೊಂಡಿದೆ.
4
+ ಲೋಕಾಯುಕ್ತ ನ್ಯಾಯ ಮೂರ್ತಿ ಬಿಎಸ್ ಪಾಟೀಲ್ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ಕೆಸಿ ಜನರಲ್ ಆಸ್ಪತ್ರೆ ಹಾಗೂ ಯಲಹಂಕ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಂದ ಮತ್ತು ಅವರ ಸಂಬಂದಿಕರಿಂದ ಅಹವಾಲುಗಳನ್ನು ಆಲಿಸಿದರು.
5
+ ಈ ವೇಳೆ ಇಲ್ಲಿ ಔಷಧಗಳನ್ನು ಬೇರೆಡೆಯಿಂದ ತರಲು ರಶೀದಿ ನೀಡುತ್ತಾರೆ ಮತ್ತು ಚಿಕಿತ್ಸೆಗಾಗಿ ಕೆಲವರು ಹಣ ಕೇಳುತ್ತಾರೆದು ದೂರುಗಳು ಕೇಳಿ ಬಂತು. ಸುಚಿತ್ವ ಕಾಪಾಡಿಕೊಳ್ಳದೇ ಮತ್ತು ಮೂಲಭೂತ ಸೌಕರ್ಯಗಳನ್ನು ಸರಿಯಾಗಿ ನಿರ್ವಹಿಸದಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಯ ಅದೀಕ್ಷಕರಿಗೆ ಕೂಡಲೇ ಇದನ್ನು ಸರಿ ಪಡಿಸುವಂತೆ ಸೂಚಿಸಿ ಗಡುವು ನೀಡಿದರು.
6
+ ರಾಜ್ಯದಲ್ಲಿ ಬರ, ಐಷಾರಾಮಿ ವಿಮಾನದಲ್ಲಿ ಸಿದ್ದು-ಜಮೀರ್‌ ಆಡಂಬರ : ಬಿಜೆಪಿ ಟೀಕೆ
7
+ ವಾಣಿ ವಿಲಾಸ ಹಾಗೂ ಸಂಜಯ್ ಗಾಂದಿ ಆಸ್ಪತ್ರೆಗಳಿಗೆ ಎಡಿಜಿಪಿ ಎ ಸುಬ್ರಮಣ್ಯ ರಾವ್ ಅವರ ನೇತೃತ್ವ ತಂಡ ದಿಡೀರ್ ಭೇಟಿ ನೀಡಿದ್ದಾಗ ಆಸತ್ರೆಯ ಸಿಬ್ಬಂದಿ ಗಾಬರಿಗೊಂಡರು. ಲೋಕಾಯುಕ್ತರು ಬಂದಿದ್ದಾರೆಂಬ ಮಾಹಿತಿ ಪಡೆದ ಅಲ್ಲಿಂದ ಸಾರ್ವಜನಿಕರು ವೈದ್ಯರ ಕೊರತೆ, ಸೂಕ್ತ ಚಿಕಿತ್ಸೆ ನೀಡುವಲ್ಲಿ ವಿಳಂಬ ಮತ್ತು ಲಂಚ ಕೇಳುವ ದೂರುಗಳನ್ನು ಹೇಳಿಕೊಂಡರು.
8
+ ಈ ವೇಳೆ ವೈದ್ಯರಿಗೆ ಕಠಿಣ ಎಚ್ಚರಿಕೆ ನೀಡಿ ಸರಿಯಾದ ಸಮಯಕ್ಕೆ ಬಂದು ಕೆಲಸ ಮಾಡಿ ಇದು ನಿಮಗೆ ಪವಿತ್ರವಾದ ಕೆಲಸ ಆರೋಗ್ಯ ಸೇವೆಯಲ್ಲಿ ಉದಾಸೀನ ಬೇಜಾವಬ್ದಾರಿತನ ಸರಿಯಲ್ಲಯೆಂದು ಎಚ್ಚರಿಕೆ ಕೂಡ ನೀಡಿದರು.
eesanje/url_46_281_11.txt ADDED
@@ -0,0 +1,7 @@
 
 
 
 
 
 
 
 
1
+ ಪೊಲೀಸರ ಸೋಗಿನಲ್ಲಿ ಉದ್ಯಮಿ ಮನೆ ಡಕಾಯಿತಿ, ಉಪ ಅರಣ್ಯಾಧಿಕಾರಿ ಸೇರಿ 11 ಮಂದಿ ಅರೆಸ್ಟ್
2
+ ಬೆಂಗಳೂರು,ಡಿ.22 -ಪೊಲೀಸರೆಂದು ಹೇಳಿಕೊಂಡು ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉದ್ಯಮಿ ಮನೆಗೆ ನುಗ್ಗಿ ಕುಟುಂಬದವರನ್ನು ಬೆದರಿಸಿ ಡಕಾಯಿತಿ ಮಾಡಿಕೊಂಡು ಪರಾರಿಯಾಗಿದ್ದ 11 ಮಂದಿ ಡಕಾಯಿತರ ಪೈಕಿ ಇಬ್ಬರು ರೌಡಿಗಳು, ಒಬ್ಬ ಉಪ ಅರಣ್ಯಾಧಿಕಾರಿ, ಕಾರು ಚಾಲಕ ಎಂಬುವುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ.
3
+ ಹೆಚ್.ಎಂ.ಟಿ.ಲೇಔಟ್‍ನಲ್ಲಿರುವ ಉದ್ಯಮಿ ಮಗ ಡಿ.4ರಂದು ಸಂಜೆ ಸುಮಾರು 6.30ರ ಸುಮಾರಿಗೆ ಪ್ಯಾಕ್ಟರಿಯಿಂದ ಬಂದು ಪತ್ನಿಯೊಂದಿಗೆ ಮನೆಯಲ್ಲಿದ್ದರು. ಅಂದು ರಾತ್ರಿ 7.30ರ ಸುಮಾರಿನಲ್ಲಿ ಡಕಾಯಿತರ ಗುಂಪು ಇವರ ಮನೆ ಬಂದಿದ್ದು, ಒಬ್ಬಾತ ಕಾಲಿಂಗ್ ಬೆಲೆ ಒತ್ತಿದ್ದಾನೆ. ಬಾಗಿಲು ತೆರೆಯುತ್ತಿದ್ದಂತೆ ಇಬ್ಬರು ಆರೋಪಿಗಳು ಪೊಲೀಸರೆಂದು ಹೇಳಿಕೊಂಡು ಮನೆಯೊಳಗೆ ನುಗ್ಗಿದ್ದಾರೆ. ನಂತರ ಹೊರಗಡೆ ಇದ್ದ ಉಳಿದ ಡಕಾಯಿತರು ಮನೆಯೊಳಗೆ ನುಗ್ಗಿ ಉದ್ಯಮಿಯ ಮಗ ಹಾಗೂ ಅವರ ಪತ್ನಿ ಮೇಲೆ ಹಲ್ಲೆ ಮಾಡಿ ಕೈಗಳನ್ನು ಕಟಿ ್ಟ ಹಾಕಿ, ಮನೆಯಲ್ಲಿದ್ದ ಚಿನ್ನಾಭರಣ, ಹಣ ಮತ್ತು ಉದ್ಯಮಿ ತಾಯಿಯ ಮೈಮೇಲಿದ್ದ ಚಿನ್ನಾಭರಣ, ಮೊಬೈಲ್ ಫೋನ್, ಲ್ಯಾಪ್‍ಟಾಪ್, ದೋಚಿಕೊಂಡು ಪರಾರಿಯಾಗಿದ್ದರು.
4
+ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಕೃತ್ಯ ನಡೆದ ಸ್ಥ ಳವನ್ನು ಪರಿಶೀಲಿಸಿದ್ದಾರೆ. ಹಿರಿಯ ಅಧಿಕಾರಿಗಳು ಈ ಪ್ರಕರಣವನ್ನು ಇನ್ಸ್‍ಪೆಕ್ಟ ರ್ ನೇತೃತ್ವದಲ್ಲಿ ಒಂದು ವಿಶೇಷ ತಂಡ ರಚಿಸಲಾಗಿತ್ತು. ಈ ತಂಡವು ತನಿಖೆ ಕೈ ಗೊಂಡು ಕೃತ್ಯ ನಡೆದ ಸ್ಥ ಳದ ಅಕ್ಕಪಕ್ಕ ರಸ್ತೆಯಲ್ಲಿನ ಸಿ.ಸಿ.ಕ್ಯಾಮರಾಗಳನ್ನು ಪರಿಶೀಲಿಸಿ, ಕೃತ್ಯ ತ್ಯವೆಸಗಿದ ವ್ಯಕ್ತಿಯ ಚಹರೆಯನ್ನು ತಂತ್ರಜ್ಞಾನ ಸಹಾಯದಿಂದ ಗುರುತು ಪತ್ತೆಹಚ್ಚಿ 11 ಮಂದಿಯನ್ನು ಬಂಧಿಸಿದೆ.
5
+ ವಜ್ರದುಡುಪಿನಲ್ಲಿ ಪಳಪಳ ಹೊಳೆದ ಊರ್ವಶಿ
6
+ ಆರೋಪಿಗಳಿಂದ 45.52 ಲಕ್ಷ ಬೆಲೆ ಬಾಳುವ 273 ಗ್ರಾಂ ಚಿನ್ನಾಭರಣಗಳು, 23,37,300 ರೂ. ನಗದು, 370 ಗ್ರಾಂ ಬೆಳಿ ್ಳ ಒಡವೆಗಳು 2 ಮೊಬೈಲ್ ಫೋನ್‍ಗಳು, ಕೃತ್ಯಕ್ಕೆ ಬಳಸಿದ್ದ 11 ಮೊಬೈಲ್ ಫೋನ್‍ಗಳು 3 ಲಾಂಗ್, ಡ್ರಾಗರ್, ರಾಡ್, ಕಾರು, ಹಾಗೂ 2 ದ್ವಿಚಕ ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಹೆಚಿ ್ಚನ ವಿಚಾರಣೆಗೊಳಪಡಿಸಿದಾಗ ಒಬ್ಬ ಕೆಜೆ ಹಳ್ಳಿ ಹಾಗೂ ಮತ್ತೊಬ್ಬ ಹೆಣ್ಣೂರು ಪೊಲೀಸ್ ಠಾಣೆಯ ರೌಡಿ ಶೀಟರ್ ಎಂಬುದು ಗೊತ್ತಾಗಿದೆ.
7
+ ಮತ್ತೊಬ್ಬ ಆರೋಪಿ ಉದ್ಯಮಿಯ ಕಂಪನಿಯಲ್ಲಿ ಈ ಹಿಂದೆ ಲಾರಿ ಚಾಲಕನಾಗಿ ಹಾಗೂ ಹಣ ಕಲೆಕ್ಷನ್ ಮಾಡುವ ಕೆಲಸವನ್ನೂ ಮಾಡಿಕೊಂಡಿದ್ದಾಗ ಅವರ ಹಣಕಾಸಿನ ವ್ಯವಹಾರವನ್ನು ತಿಳಿದುಕೊಂಡು ಹಣ ದೋಚಲು ಯೋಚಿಸಿ ಈ ಕೃತ್ಯ ನಡೆಸಿದ್ದಾನೆ. ಇದಲ್ಲದೆ ಕೃತ್ಯದ ಸಂದರ್ಭದಲ್ಲಿ ಪೊಲೀಸ್ ಎಂದು ಹೇಳಿಕೊಂಡವರು ಚಿಕ್ಕ ಮಗಳೂರು ಮೂಲದ ಚನ್ನಗಿರಿ ಅರಣ್ಯವಲಯದಲ್ಲಿನ ಉಪ ಅರಣ್ಯಾಧಿಕಾರಿಯಾಗಿರುವುದು ಪೊಲೀಸರ ವಿಚಾರಣೆಯಿಂದ ತಿಳಿದು ಬಂದಿದೆ.
eesanje/url_46_281_12.txt ADDED
@@ -0,0 +1,6 @@
 
 
 
 
 
 
 
1
+ ತಲೆ ಕೂದಲು ಒಣಗಿಸಲು ಹೋಗಿ ಫಜೀತಿಗೆ ಸಿಲುಕಿದ ಮಹಿಳಾ ಟೆಕ್ಕಿ
2
+ ಬೆಂಗಳೂರು,ಡಿ.22 – ಮಹಿಳೆಯರೇ ಹೇರ್‍ಡ್ರೈಯರ್ ಬಳಸುವ ಮುನ್ನ ಜಾಗ್ರತೆ ವಹಿಸಿ. ಇತ್ತೀಚಿನ ದಿನಗಳಲ್ಲಿ ತಲೆ ಕೂದಲನ್ನು ಒಣಗಿಸಲು ಹಾಗೂ ವಿವಿಧ ವಿನ್ಯಾಸ ಮಾಡಿಕೊಳ್ಳಲು ಹೇರ್ ಡ್ರೈಯರ್ ಮೊರೆ ಹೋಗುತ್ತಿದ್ದು, ಈ ಉಪಕರಣದಲ್ಲಿ ಅಧಿಕ ವಿದ್ಯುತ್ ಪಾಸ್ ಆಗಲಿದ್ದು, ಈ ಬಗ್ಗೆ ಎಚ್ಚರದಿಂದಿರಿ. ನಗರದಲ್ಲಿ ಮಹಿಳಾ ಸಾಫ್ಟ್‍ವೇರ್ ಎಂಜಿನಿಯರ್‍ರೊಬ್ಬರು ಹೇರ್ ಡ್ರೈಯರ್ ಬಳಸಿ ತಲೆಕೂದಲು ಒಣಗಿಸುತ್ತಿದ್ದಾಗ ಬೆಂಕಿ ಹೊತ್ತಿಕೊಂಡಿರುವುದು ವರದಿಯಾಗಿದೆ.
3
+ ನಾರ್ತ್ ಇಂಡಿಯಾದ ಟೆಕ್ಕಿಯೊಬ್ಬರು ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ ನೀಲಾದ್ರಿ ರಸ್ತೆಯ 15ನೇ ಕ್ರಾಸ್‍ನಲ್ಲಿನ ಪಿಜಿಯಲ್ಲಿ ನೆಲೆಸಿದ್ದು, ಮೊನ್ನೆ ರಾತ್ರಿ ಕೆಲಸ ಮುಗಿಸಿಕೊಂಡು ಪಿಜಿಗೆ ಬಂದಿದ್ದಾರೆ. ಸ್ನಾನದ ನಂತರ ಹೇರ್ ಡ್ರೈಯರ್‍ನಿಂದ ತಲೆಕೂದಲನ್ನು ಒಣಗಿಸುತ್ತಿದ್ದಾಗ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ.
4
+ ಗಾಬರಿಯಲ್ಲಿ ತಕ್ಷಣ ಅವರ ಹೇರಡ್ರೈಯರ್‍ನ್ನು ಹಾಸಿಗೆ ಮೇಲೆ ಬಿಸಾಕಿದ್ದರಿಂದ ಬೆಂಕಿ ಕಿಡಿ ಹಾಸಿಗೆಗೆ ಹೊತ್ತಿಕೊಂಡು ಅದರ ಮೇಲಿದ್ದ ವಸ್ತುಗಳನ್ನು ತಾಕಿದೆ.
5
+ 2023ರಲ್ಲಿ ವಿರಾಟ್‍ ಕೊಹ್ಲಿಯ ಶತಕಗಳ ದರ್ಬಾರ್
6
+ ತಕ್ಷಣ ಪಿಜಿಯಲ್ಲಿದ್ದ ಬೆಂಕಿ ನಂದಿಸುವ ಉಪಕರಣದಿಂದ ಬೆಂಕಿಯನ್ನು ನಂದಿಸಿದರಾದರೂ, ಹಲವು ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಶಾರ್ಟ್ ಸಕ್ಯೂರ್ಟ್‍ನಿಂದ ಹೇರ್ ಡ್ರೈಯರ್‍ನಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ.
eesanje/url_46_281_2.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ ರಾಜ್ಯದಲ್ಲಿ ಮತ್ತೆ ತಾರಕಕ್ಕೇರಿದ ಹಿಜಾಬ್ ಸಂಘರ್ಷ
2
+ ಬೆಂಗಳೂರು,ಡಿ.23- ಶಾಲಾಕಾಲೇಜುಗಳಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಲು ಅವಕಾಶ ನೀಡುವುದಾದರೆ ನಮಗೂ ಕೇಸರಿ ಶಾಲು ಹಾಕಲು ಅವಕಾಶ ನೀಡಿ ಎಂದು ಹಿಂದೂಪರ ಸಂಘಟನೆಗಳು ಸರ್ಕಾರದ ವಿರುದ್ಧ ಕಾನೂನು ಸಮರ ಸಾರಲು ಮುಂದಾಗಿದೆ.
3
+ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಸರ್ಕಾರ ಶಾಲಾ ಕೊಠಡಿಯೊಳಗೆ ನಿಷೇಧಿಸಿದ್ದ ಹಿಜಾಬ್ ಆದೇಶವನ್ನು ಹಿಂಪಡೆಯುವುದಾಗಿ ಹೇಳಿರುವುದು ಹಿಂದೂ ಸಂಘಟನೆಗಳನ್ನು ಕೆರಳುವಂತೆ ಮಾಡಿದೆ. ನೀವು ಮುಸ್ಲಿಂ ವಿದ್ಯಾರ್ಥಿನಿಯರು ಶಾಲಾ ಕೊಠಡಿಯೊಳಗೆ ಹಿಜಾಬ್ ಧರಿಸಲು ಅವಕಾಶ ಕೊಟ್ಟರೆ ನಮ್ಮದೇನು ಅಭ್ಯಂತರವಿಲ್ಲ. ಅದೇ ರೀತಿ ನಮಗೂ ಕೇಸರಿ ಶಾಲು ಹೊದಿಸಲು ಅವಕಾಶ ಕೊಡಿ ಎಂದು ಹಿಂದೂ ಸಂಘಟನೆಗಳು ಸರ್ಕಾರಕ್ಕೆ ಮನವಿ ಮಾಡಿವೆ.
4
+ ಶಾಲೆಗಳಲ್ಲಿ ಕರ್ನಾಟಕ ಶಿಕ್ಷಣ ಕಾಯ್ದೆ ಪ್ರಕಾರ ಸಮವಸ್ತ್ರ ನೀತಿಯನ್ನು ಹೈಕೋರ್ಟ್ ಎತ್ತಿ ಹಿಡಿದಿದ್ದು, ಸರ್ಕಾರ ಈಗ ಆದೇಶವನ್ನು ಹಿಂಪಡೆಯಲು ಮುಂದಾಗಿರುವುದಕ್ಕೆ ಹಿಂದೂಪರ ಸಂಘಟನೆಗಳು ಮತ್ತು ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ನಾವು ಯಾರ ಸಮವಸ್ತ್ರವನ್ನೂ ವಿರೋಸುವುದಿಲ್ಲ. ಪ್ರತಿಯೊಬ್ಬರಿಗೂ ಅವರವರ ಉಡುಗೆ-ತೊಡುಗೆ ಆಚಾರವಿಚಾರ ಅನುಸರಿಸಲು ಅವಕಾಶ ಇರುವಂತೆ ನಾವು ಕೇಸರಿ ಶಾಲು ಹಾಕಿದರೆ ತಪ್ಪೇನು ಎಂಬ ಪ್ರಶ್ನೆಯನ್ನು ಅನೇಕರು ಮುಂದಿಟ್ಟಿದ್ದಾರೆ.
5
+ ಯಾವುದೇ ವಿದ್ಯಾರ್ಥಿಗಳಲ್ಲಿ ಮೇಲುಕೀಳು ಬರಬಾರದು ಎಂಬ ಕಾರಣಕ್ಕೆ 1964ರಲ್ಲಿ ಸಮವಸ್ತ್ರದ ಕಾಯ್ದೆಯನ್ನು ಜಾರಿಗಳಿಸಲಾಗಿತ್ತು. ಮಕ್ಕಳಲ್ಲಿ ಬಡವ, ಬಲ್ಲಿದ ಹಿಂದೂ ಮುಸ್ಲಿಂ ಎಂಬ ಬೇಧ ಉಂಟಾಗಬಾರದು. ಎಲ್ಲರೂ ಸಮಾನರು ಎಂಬ ಭಾವನೆ ಮೂಡಿಸಲು ಈ ಕಾಯ್ದೆ ಜಾರಿಗೊಳಿಸಲಾಗಿತ್ತು. ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಶಾಲೆಗಳಿಗೆ ಬಂದರೆ ಬೇರೆ ವಿದ್ಯಾರ್ಥಿಗಳು ಕೇಸರಿ ಶಾಲು, ಹಳದಿ ಅಥವಾ ನೀಲಿ ಶಾಲು ಹೊದ್ದು ಬಂದರೆ ಸರ್ಕಾರ ನೇರ ಹೊಣೆಯಾಗುತ್ತದೆ ಎಂದು ಎಚ್ಚರಿಸಿದ್ದಾರೆ.
6
+ ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ : ಬಿಜೆಪಿ
7
+ ಸಮವಸ್ತ್ರದ ಮೂಲಕ ಯಾವುದೇ ವಿದ್ಯಾರ್ಥಿ ತನ್ನ ಐಡೆಂಟಿಟಿಯನ್ನು ಗುರುತಿಸಿಕೊಳ್ಳುವ ಅವಶ್ಯಕತೆ ಇಲ್ಲ. ಒಂದು ವೇಳೆ ಸರ್ಕಾರ ನಮಗೆ ಅವಕಾಶ ಕಲ್ಪಿಸದಿದ್ದರೆ ನಾವು ಹಿಂದೂ ವಿದ್ಯಾರ್ಥಿಗಳ ಪರವಾಗಿ ಕಾನೂನು ಹೋರಾಟ ಮಾಡುತ್ತೇವೆ ಎಂದು ಉಡುಪಿ ಶಾಸಕ ಯಶಪಾಲ್ ಸುವರ್ಣ ಹೇಳಿದ್ದಾರೆ.ಹೈಕೋರ್ಟ್ ತೀರ್ಪಿನ ಕುರಿತು ವಿಚಾರಣೆ ಈಗಲೂ ನಡೆಯುತ್ತಿದೆ. ಸರ್ಕಾರ ತೀರ್ಪು ಬರುವ ಮುನ್ನವೇ ಆದೇಶವನ್ನು ಹಿಂಪಡೆಯುತ್ತಿರುವುದು ಕೇವಲ ಒಂದು ಸಮುದಾಯದ ಮತ ಗಳಿಕೆಗಾಗಿ. ನೀವು ರಾಜಕಾರಣ ಮಾಡುವುದಾದರೆ ನಾವು ಕೂಡ ಅದನ್ನೇ ಮಾಡುತ್ತೇವೆ ಎಂದು ಹೇಳಿದ್ದಾರೆ.
8
+ ಬಿಜೆಪಿಗೆ ಹೊಸ ಅಸ್ತ್ರ:ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಈ ಸಂದರ್��ದಲ್ಲಿ ಕಾಂಗ್ರೆಸ್ ಪ್ರತಿಪಕ್ಷ ಬಿಜೆಪಿಗೆ ಅನಗತ್ಯವಾಗಿ ಅಸ್ತ್ರ ನೀಡಿದಂತಾಗಿದೆ. ಬರುವ ದಿನಗಳಲ್ಲಿ ಇದನ್ನು ರಾಜ್ಯಾದ್ಯಂತ ಕೊಂಡೊಯ್ಯಲು ಮುಂದಾಗಿರುವ ಬಿಜೆಪಿ, ಈ ಮೂಲಕ ಹಿಂದೂಗಳ ಮತ ಧ್ರುವೀಕರಣಕ್ಕೆ ಕೈ ಹಾಕಿದೆ. ಬಿಜೆಪಿ ಅವಧಿಯಲ್ಲಿ ಹಿಜಾಬ್ ನಿಷೇಧದ ಬಗ್ಗೆ ಭಾರೀ ಚರ್ಚೆಗಳು ನಡೆದಿದ್ದವು. ಹಲವು ಮುಸ್ಲಿಂ ವಿದ್ಯಾರ್ಥಿನಿಯರು ಶಿಕ್ಷಣವನ್ನು ತೊರೆದಿದ್ದರು. ಉಡುಪಿ ಜಿಲ್ಲೆಯಲ್ಲಿ ಆರಂಭವಾಗಿದ್ದ ಹಿಜಾಬ್ ಗಲಾಟೆ ರಾಜ್ಯಾಧ್ಯಂತ ವ್ಯಾಪಿಸಿತ್ತು. ಕಾಲೇಜು ಆವರಣಗಳಲ್ಲಿ ಪ್ರತಿಭಟನೆ ಹಾಗೂ ವಿದ್ಯಾರ್ಥಿಗಳ ನಡುವಿನ ಗಲಾಟೆಗೂ ಕಾರಣವಾಗಿತ್ತು.
9
+ ಈ ನಡುವೆ ರಾಜ್ಯ ಸರ್ಕಾರದ ತೀರ್ಮಾನವನ್ನು ಹೈಕೋರ್ಟ್ ಕೂಡ ಎತ್ತಿ ಹಿಡಿದಿತ್ತು. ಆದರೆ ಈ ತೀರ್ಪಿನ ಬೆನ್ನಲ್ಲೇ ಹಲವು ವಿದ್ಯಾರ್ಥಿನಿಯರು ಕಾಲೇಜು ತೊರೆದಿದ್ದರು. ವಿದ್ಯಾರ್ಥಿಗಳ ನಡುವೆಯೂ ಇದು ಕಂದಕ ಸೃಷ್ಟಿಗೆ ಕಾರಣವಾಗಿತ್ತು. ಹಿಜಾಬ್ ನಿಷೇಧದ ಅರ್ಜಿ ಸುಪ್ರಿಂಕೋರ್ಟ್‍ನಲ್ಲಿದೆ. 2022 ರಲ್ಲಿ ಸುಪ್ರೀಂ ಕೋರ್ಟ್ ಹಿಜಾಬ್ ನಿಷೇಧದ ಸಿಂಧುತ್ವದ ಬಗ್ಗೆ ಭಿನ್ನ ತೀರ್ಪು ನೀಡಿ, ಪ್ರಕರಣವನ್ನು ವಿಸ್ತ್ರತ ಪೀಠಕ್ಕೆ ವರ್ಗಾಯಿಸಿತ್ತು. ಈ ನಡುವೆ ಸಿಎಂ ಸಿದ್ದರಾಮಯ್ಯ ಅವರು ನಾವು ಹಿಜಾಬ್ ನಿಷೇಧದ ಆದೇಶವನ್ನು ವಾಪಸ್ ಪಡೆದುಕೊಳ್ಳುತ್ತೇವೆ. ಇನ್ನು ಮುಂದೆ ಹಿಜಾಬ್ ಧರಿಸಬಹುದು ಎಂದು ಹೇಳಿದ್ದರು. ಉಡುಪು ಆಹಾರ ಪದ್ಧತಿ ನಿಮ್ಮ ಆಯ್ಕೆ. ನಾನೇಕೆ ಇವುಗಳಿಗೆ ಅಡ್ಡಿಯಾಗಲಿ? ಎಂದು ಪ್ರಶ್ನಿಸಿದ್ದಾರೆ.
10
+ ನೀವು ಬಯಸಿದ ಉಡುಪನ್ನು ಧರಿಸಿ, ನಿಮಗೆ ಬೇಕಾದನ್ನು ತಿನ್ನಿ, ನನಗೆ ಬೇಕೆನಿಸಿದ್ದನ್ನು ನಾನು ತಿನ್ನುವೆ. ಉಡುಪು ಆಹಾರ ಅವರರವ ಇಷ್ಟ ಎಂದು ಹೇಳಿದ್ದರು. ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಡೆಯ ಹಿಂದೆ ರಾಜಕೀಯ ಉದ್ದೇಶವೂ ಇದೆ. ಕಳೆದ ಚುನಾವಣೆಯಲ್ಲಿ ಮುಸ್ಲಿಂ ಮತಗಳ ಕ್ರೋಢೀಕರಣದ ರೀತಿಯಲ್ಲಿ ಲೋಕಸಭೆ ಚುನಾವಣೆಯಲ್ಲೂ ಇದೇ ತಂತ್ರಗಾರಿಕೆಯನ್ನು ಪ್ರಯೋಗ ಮಾಡುವ ಉದ್ದೇಶ ಇದೆ ಎಂಬ ವ್ಯಾಖ್ಯಾನಗಳು ವ್ಯಕ್ತವಾಗುತ್ತಿದೆ. ಈ ಮೂಲಕ ಬಿಜೆಪಿಯ ಹಿಂದುತ್ವ ಪ್ರಯೋಗಕ್ಕೆ ಕಾಂಗ್ರೆಸ್ ಪ್ರತ್ಯಸ್ತ್ರ ಪ್ರಯೋಗ ಮಾಡಿದೆ. ಈ ಮೂಲಕ ಲೋಕಸಭೆ ಚುನಾವಣೆಗೆ ಹಿಜಾಬ್ ಕೂಡಾ ಒಂದು ಚುನಾವಣಾ ಅಸ್ತ್ರವಾಗಲಿದೆ.
11
+ 60 ಸಿಮ್‍ಕಾರ್ಡ್‍ಗಳೊಂದಿಗೆ ಸಿಕ್ಕಿಬಿದ್ದ ತೈವಾನ್ ಪ್ರಜೆ ವಿಚಾರಣೆ
12
+ ಕಳೆದ ಆರು ತಿಂಗಳಿಂದ ಕಾಂಗ್ರೆಸ್ ಸರಕಾರ ಗೊಂದಲದಲ್ಲಿದೆ. ತಮ್ಮ ವೈಫಲ್ಯವನ್ನು ಮರೆಮಾಚಲು ಸಿಎಂ ಇಂತಹ ಹೇಳಿಕೆ ನೀಡುತ್ತಿದ್ದಾರೆ. ರಾಜ್ಯ ಸರಕಾರ ಜನರ ಗಮನ ಬೇರೆಡೆ ಸೆಳೆಯಲು ಯತ್ನಿಸುತ್ತಿದೆ. ಸರಕಾರ ಹಿಜಾಬ್ ಹಿಂಪಡೆದರೆ ಜೇನುಗೂಡಿಗೆ ಕಲ್ಲು ಹೊಡೆದಂತೆ ಆಗುತ್ತದೆ. ಇದು ವಿದ್ಯಾರ್ಥಿಗಳಲ್ಲಿ ಧಾರ್ಮಿಕ ನೆಲೆಯಲ್ಲಿ ಬಿರುಕು ಮೂಡಿಸುತ್ತದೆ. ನಿರ್ಧಾರದ ವಿರುದ್ಧ ಕಾನೂನಾತ್ಮಕವಾಗಿ ಹೋರಾಡಲು ನಾವು ಸಿದ್ಧರಿದ್ದೇವೆ ಎಂದು ಶಾಸಕರು ಹೇಳಿದ್ದಾರೆ.
eesanje/url_46_281_3.txt ADDED
@@ -0,0 +1,9 @@
 
 
 
 
 
 
 
 
 
 
1
+ ರಾಜ್ಯದಲ್ಲಿ ಹಿಜಾಬ್ ನಿಷೇಧ ಆಗಿಯೇ ಇಲ್ಲ : ಮಾಜಿ ಸಿಎಂ ಬೊಮ್ಮಾಯಿ
2
+ ಬೆಂಗಳೂರು,ಡಿ.23- ರಾಜ್ಯದಲ್ಲಿ ಹಿಜಾಬ್ ನಿಷೇಧ ಆಗಿಯೇ ಇಲ್ಲ. ಎಲ್ಲಿ ಡ್ರೆಸ್ ಕೋಡ್ ಇದೆ ಅಲ್ಲಿ ಮಾತ್ರ ನಿಷೇಧವಿದೆ. ಮಹಿಳೆಯರು ಎಲ್ಲಿ ಬೇಕು ಅಲ್ಲಿ ಹಾಕಿಕೊಂಡು ಓಡಾಡುತ್ತಿದ್ದಾರೆ. ಹಿಜಾಬ್ ನಿಷೇಧ ಆಗಿಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
3
+ ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಮಾತನಾಡಿದ ಅವರು, 1984ರಲ್ಲಿ ಸಮಗ್ರ ಶಿಕ್ಷಣ ಕಾಯ್ದೆ ಅಡಿ ಡ್ರೆಸ್ ಕೊಡ್ ಮಾಡಲಾಗಿದ್ದು, ಅದನ್ನು ಹಿಂದೆ ಪಡೆಯುವ ಮಾತನಾಡಿದ್ದಾರೆ. ಈಗಾಗಲೇ ಕೊರ್ಟ್‍ನಲ್ಲಿ ಪ್ರಕರಣ ಇದೆ. ರಾಜಕೀಯ ಕಾರಣಕ್ಕೆ ಹಿಜಾಬ್ ಪ್ರಸ್ತಾಪ ಮಾಡಿದ್ದಾರೆ. ಇದನ್ನು ಖಂಡಿಸುತ್ತೇನೆ ಎಂದರು.
4
+ ಬೆಳಗಾವಿ ಅಧಿವೇಶನ ನಡೆಯುತ್ತಿರುವಾಗ ಹುಬ್ಬಳ್ಳಿಯಲ್ಲಿ ಅಲ್ಪ ಸಂಖ್ಯಾತರಿಗೆ 10 ಸಾವಿರ ಕೋಟಿ ಕೊಡುವುದಾಗಿ ಘೋಷಣೆ ಮಾಡಿದರು. ಅಭಿವೃದ್ಧಿಗೆ ಇವರ ಬಳಿ ಹಣ ಇಲ್ಲ. ಅವರ ಪಕ್ಷದ ಶಾಸಕರೆ ಬಹಿರಂಗವಾಗಿ ಹೇಳಿದ್ದಾರೆ. ಪತ್ರ ಕೂಡ ಬರೆದಿದ್ದಾರೆ.
5
+ ರಾಜ್ಯದಲ್ಲಿ ಬರ ಇದೆ. ಮಹಿಳೆಯರಿಗೆ ರಕ್ಷಣೆ ಇಲ್ಲ. ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ತೊಳೆಸುವ ಮಟ್ಟಕ್ಕೆ ಇಳಿದಿದೆ. ಬರ ಇದೆ ಇದೆಲ್ಲ ಮರೆತು ರಾಜದಯದ ಜನರ ದಾರಿ ತಪ್ಪಿಸಲು ಈ ರೀತಿಯ ಹೇಳಿಕೆ ಕೊಡುತ್ತಿದ್ದಾರೆ. ಐಟಿ ರೇಡ್ ಆಗಿ ಕಾಂಟ್ರಾಕ್ಟರ್ ಬಳಿ ಕೋಟ್ಯಂತರ ಹಣ ಸಿಕ್ಕಿತು ಆಗಲೂ ದಾರಿ ತಪ್ಪಿಸುವ ಕೆಲಸ ಮಾಡಿದರು. ಯಾವುದೇ ಅಭಿವೃದ್ದಿ ಮಾಡದ ಸರ್ಕಾರ ರಾಜ್ಯದಲ್ಲಿ ಬಂದಿದೆ ಎಂದು ದೂರಿದರು.
6
+ ಹಿಜಾಬ್ ವಿಚಾರದಲ್ಲಿ ಎಲ್ಲರಿಗೂ ಸ್ವಾತಂತ್ರ್ಯ ಸಿಗುವಂತೆ ನಿರ್ಧಾರ : ಸಚಿವ ಮಧು ಬಂಗಾರಪ್ಪ
7
+ ಶಾಲಾ ಮಕ್ಕಳಲ್ಲಿ ಒಡಕುಂಟು ಮಾಡುವ ಉದ್ದೇಶ ಇದರಲ್ಲಿದೆ. ಭವಿಷ್ಯದಲ್ಲಿ ಇದು ದೊಡ್ಡ ಮಟ್ಟದ ಪರಿಣಾಮ ಬೀರುತ್ತದೆ. ಮಕ್ಕಳಲ್ಲಿ ತಾವು ಯಾವ ಧರ್ಮಕ್ಕೆ ಸೇರಿದ್ದೇವೆ ಎಂದು ಬೀಜ ಬಿತ್ತುವ ಪ್ರಯತ್ನ ನಡೆಯುತ್ತಿದೆ. ಹಿಜಾಬ್ ವಿಚಾರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಇರಾಕ್ ಇರಾನ್‍ನಲ್ಲಿ ಮಹಿಳೆಯರು ಸ್ವಾತಂತ್ರ್ಯ ಕ್ಕಾಗಿ ಹೋರಾಟ ಮಾಡುತ್ತಾರೆ. ಸುಪ್ರಿಂಕೋರ್ಟ್‍ನಲ್ಲಿ ಪ್ರಕರಣ ಇದ್ದಾಗ ಈ ಬಗ್ಗೆ ಹೇಳಿಕೆ ನೀಡುವ ಅಗತ್ಯ ಏನಿತ್ತು. ಕೋರ್ಟ್ ಈ ಬಗ್ಗೆ ಗಮನ ಹರಿಸುತ್ತದೆ ಎಂಬ ವಿಶ್ವಾಸವಿದೆ ಎಂದರು.
8
+ ಹಿಂದುಳಿದ ವರ್ಗದ ಆಯೋಗ ಮಾಡಿರುವುದು ಜಾತಿ ಗಣತಿಯೇ ಅಲ್ಲ. ಎಲ್ಲ ಸಮುದಾಯಗಳ ಶೈಕ್ಷಣಿಕ ಮತ್ತು ಆರ್ಥಿಕ ಪರಿಸ್ಥಿತಿ ಹೇಗಿದೆ ಎಂದು ಅಧ್ಯಯನ ಮಾಡಿದೆ. ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ಮಾಡುವ ಅಧಿಕಾರ ಇಲ್ಲ. ಬೇರೆ ರಾಜ್ಯಗಳ ಜಾತಿಗಣತಿಗಳ ಬಗ್ಗೆಯೂ ಸುಪ್ರೀಂ ಕೋರ್ಟ್‍ನಲ್ಲಿ ಚರ್ಚೆ ನಡೆಯುತ್ತಿದೆ ಎಂದು ಹೇಳಿದರು. ಈಗಿರುವ ಹಿಂದುಳಿದ ವರ್ಗದ ಅಧ್ಯಕ್ಷರು ಈಗಾಗಲೇ ಸಿದ್ಧವಾಗಿರುವ ವರದಿಯನ್ನು ಏಕೆ ಇಟ್ಟುಕೊಂಡಿದ್ದಾರೆ.
9
+ ನಾವೂ ಸಾಮಾಜಿಕ ನ್ಯಾಯದ ಪರವಾಗಿದ್ದೇವೆ. ಸಾಮಾಜಿಕ ನ್ಯಾಯ ಯಾವುದೇ ಒಂದು ಪಕ್ಷದ ಸ್ವತ್ತಲ್ಲ. ಅವರಿಗೆ ಎಲ್ಲರಿಗೂ ನ್ಯಾಯ ಕೊಡಿಸಬೇಕೆಂದು ಇದ್ದರೆ ಅಕೃತ ಜಾತಿ ಗಣತಿ ಮಾಡಲಿ. ನಾವು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಹಿಂದುಳಿದ ವರ್ಗಗಳ ಅನೇಕ ಸಮುದಾಯಗಳಿಗೆ ನ್ಯಾಯ ಕೊಡಿಸಲು ಪ್ರಯತ್ನ ಮಾಡಿದ್ದೇವೆ. ಈ ವರದಿ ವೈಜ್ಞಾನಿಕವಾಗಿಲ್ಲ ಎಂಬ ಮಾತಿದೆ. ಈ ವರದಿ ಬರಲಿ ಏನು ಲೋಪ ಇದೆ ನೊಡೋಣ ಎಂದು ಸವಾಲು ಹಾಕಿದರು.
eesanje/url_46_281_4.txt ADDED
@@ -0,0 +1,12 @@
 
 
 
 
 
 
 
 
 
 
 
 
 
1
+ “ಶಿಕ್ಷಣ ಕ್ಷೇತ್ರವನ್ನು ಕಲುಷಿತಗೊಳಿಸುವ ಕೆಲಸಕ್ಕೆ ಸ್ವತಃ ಸಿಎಂ ಅವರೇ ಕೈ ಹಾಕಿರುವುದು ದುರದೃಷ್ಟ”
2
+ ನವದೆಹಲಿ,ಸೆ.23-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೆ ಹಿಜಾಬ್‍ಗೆ ಅವಕಾಶ ಮಾಡಿಕೊಡುವುದಾಗಿ ಹೇಳುವ ಮೂಲಕ ಶಿಕ್ಷಣ ಕ್ಷೇತ್ರವನ್ನು ಕಲುಷಿತಗೊಳಿಸುವ ಕೆಲಸಕ್ಕೆ ಸ್ವತಃ ಸಿಎಂ ಅವರೇ ಕೈ ಹಾಕಿರುವುದು ನಾಡಿನ ದುರದೃಷ್ಟ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
3
+ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಯವರಿಂದ ಇಂತಹ ಹೇಳಿಕೆಯನ್ನು ಯಾರೂ ನಿರೀಕ್ಷೆ ಮಾಡಿರಲಿಲ್ಲ. ಕನಿಷ್ಟಪಕ್ಷ ಶಾಲಾ-ಕಾಲೇಜುಗಳಿಗೆ ಹೋಗುವ ಮಕ್ಕಳನ್ನು ರಾಜಕೀಯದಿಂದ ದೂರ ಇಡುವ ಕೆಲಸ ಮಾಡಬೇಕಿತ್ತು ಎಂದು ಆಕ್ಷೇಪಿಸಿದರು.
4
+ ಒಂದೆಡೆ ಹಿಜಾಬ್‍ಗೆ ಅವಕಾಶ ಮಾಡಿಕೊಡುವುದಾಗಿ ಹೇಳುವ ಮುಖ್ಯಮಂತ್ರಿಗಳು, ಮತ್ತೊಂದು ಕಡೆ ಇದೇ ಕಾಂಗ್ರೆಸ್ ಸರಕಾರ ಅಕಾರದಲ್ಲಿ ಇದ್ದಾಗ ಪರೀಕ್ಷೆಗೆ ಹೋಗುವ ವಿದ್ಯಾರ್ಥಿ, ವಿದ್ಯಾರ್ಥಿನಿಯರ, ತಾಯಂದಿರ ತಾಳಿ, ಕಾಲುಂಗುರ ತೆಗೆದಿಟ್ಟು ಹೋಗಲು ತಿಳಿಸುತ್ತದೆ. ರಾಜ್ಯ ಸರಕಾರದ ಈ ನಡವಳಿಕೆ ನಿಜವಾಗಿಯೂ ತಲೆತಗ್ಗಿಸುವಂಥದ್ದು. ಬಿಜೆಪಿ, ಇದನ್ನು ಬಲವಾಗಿ ಖಂಡಿಸುತ್ತದೆ ಎಂದರು.
5
+ ಮಾತೆತ್ತಿದರೆ ಕಾಂಗ್ರೆಸ್ಸಿಗರು ಅಲ್ಪಸಂಖ್ಯಾತರ ಕುರಿತು ಮಾತ್ರ ಮಾತನಾಡುತ್ತಾರೆ. ಕಾಂಗ್ರೆಸ್ಸಿಗರು, ತುಷ್ಟೀಕರಣ ನೀತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದನ್ನು ಉಗ್ರವಾಗಿ ಖಂಡಿಸುತ್ತೇವೆ ಎಂದ ಅವರು, ಕಾಂಗ್ರೆಸ್ ಪಕ್ಷವು ಸ್ವಾತಂತ್ರ್ಯದ ನಂತರ 50ರಿಂದ 60 ವರ್ಷಗಳ ಕಾಲ ದೇಶ, ರಾಜ್ಯವನ್ನು ಆಳಿದೆ. ಆದರೂ, ಅಲ್ಪಸಂಖ್ಯಾತರಲ್ಲಿ ಶೇ.50ರಷ್ಟು ಜನರು ಶಿಕ್ಷಣದಿಂದ ವಂಚಿತರಾಗಿದ್ದಾರೆ ಎಂದರೆ ಅದಕ್ಕೆ ಯಾರು ಹೊಣೆಗಾರರು? ಮುಖ್ಯಮಂತ್ರಿಗಳು ಉತ್ತರ ಕೊಡಬೇಕು ಎಂದು ಆಗ್ರಹಿಸಿದರು.
6
+ ಇವತ್ತಿಗೂ ಕೂಡ ಶೇ 60ಕ್ಕಿಂತ ಹೆಚ್ಚು ಅಲ್ಪಸಂಖ್ಯಾತ ಬಂಧುಗಳು ರಾಜ್ಯ, ದೇಶದಲ್ಲಿ ಕೆಲಸ ಇಲ್ಲದೆ ಬೇಜಬಾಬ್ದಾರಿಯಿಂದ ಓಡಾಡುತ್ತಿದ್ದಾರೆ. ಅದಕ್ಕೆ ಹೊಣೆಗಾರರು ಕಾಂಗ್ರೆಸ್ ಪಕ್ಷದವರಲ್ಲವೇ? ಎಂದು ಪ್ರಶ್ನಿಸಿದರು. ಅಲ್ಪಸಂಖ್ಯಾತರನ್ನು ಮತಬ್ಯಾಂಕ್ ಆಗಿ ಕಾಂಗ್ರೆಸ್ ಪಕ್ಷ ದುರುಪಯೋಗಪಡಿಸಿಕೊಂಡಿದೆ. ಪ್ರಾಮಾಣಿಕವಾಗಿ ಅಲ್ಪಸಂಖ್ಯಾತರನ್ನು ಮೇಲೆತ್ತುವ ಕೆಲಸ ಮಾಡಲಿಲ್ಲ. ಅವರ ಶಿಕ್ಷಣಕ್ಕೆ ಒತ್ತು ಕೊಟ್ಟು ಆರ್ಥಿಕವಾಗಿ ಮೇಲೆತ್ತುವ ಕಾರ್ಯವನ್ನು ಕಾಂಗ್ರೆಸ್ ಮಾಡಲಿಲ್ಲ ಎಂದು ಟೀಕಿಸಿದರು.
7
+ ಈ ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಲ್ಪಸಂಖ್ಯಾತ ಮಹಿಳೆಯರನ್ನು ಕೂಡ ದೇಶದ ಜನತೆ ಗೌರವದಿಂದ ಕಾಣಬೇಕು. ಪ್ರತಿಯೊಬ್ಬ ಅಲ್ಪಸಂಖ್ಯಾತ ಮಹಿಳೆಯೂ ಗೌರವ, ಸ್ವಾಭಿಮಾನದಿಂದ ಬಾಳಿ ಬದುಕಬೇಕೆಂಬ ದೃಷ್ಟಿಕೋನದೊಂದಿಗೆ ತ್ರಿವಳಿ ತಲಾಖ್‍ನ್ನು ರದ್ದು ಮಾಡಿದ್ದಾರೆ. ನೀವೇನು ಮಾಡಿದ್ದೀರಿ? ಎಂದು ಪ್ರಶ್ನಿಸಿದರು.
8
+ ಜ.6 ರಿಂದ ಅಯೋ���್ಯೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕಾರ್ಯಾರಂಭ
9
+ ಅಲ್ಪಸಂಖ್ಯಾತರ ಕುರಿತು ಕೇವಲ ಭಾಷಣ ಮಾಡುತ್ತೀರಿ. ಅವರಿಗಾಗಿ ಯಾವುದಾದರೂ ಯೋಜನೆ ರೂಪಿಸುವ ಮೂಲಕ ಮೇಲೆತ್ತಿದ್ದೀರಾ? ಅಲ್ಪಸಂಖ್ಯಾತರು ನಿರುದ್ಯೋಗ ಸಮಸ್ಯೆ ಸೇರಿ ಅನೇಕ ಸಮಸ್ಯೆಗಳನ್ನು ಎದುರಿಸಲು ಕಾಂಗ್ರೆಸ್ಸೇ ಕಾರಣ ಎಂದು ಆರೋಪಿಸಿದರು.
10
+ ರಾಜ್ಯದಲ್ಲಿ ಇವತ್ತು ಭೀಕರ ಬರಗಾಲವಿದೆ. ರೈತರ ಸಂಕಷ್ಟಕ್ಕೆ ಸರಕಾರ ಸ್ಪಂದಿಸುತ್ತಿಲ್ಲ. ಆ ಜವಾಬ್ದಾರಿ ಮರೆತ ರಾಜ್ಯ ಸರಕಾರವು, ಬೇಜವಾಬ್ದಾರಿಯಿಂದ ಕೆಲಸ ಮಾಡುತ್ತಿದೆ ಎಂದು ಆಕ್ಷೇಪಿಸಿದರು. ಲೋಕಸಭಾ ಚುನಾವಣೆಯ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ 20 ಕ್ಷೇತ್ರ ಗೆಲ್ಲುವ ಕನಸು ಕಾಣುತ್ತಿದೆ. ಪಂಚರಾಜ್ಯಗಳ ಚುನಾವಣೆ ಫಲಿತಾಂಶದ ಮೂಲಕ ಈ ದೇಶದ ಪ್ರಜ್ಞಾವಂತ ಮತದಾರರು, ಕಾಂಗ್ರೆಸ್ ಪಕ್ಷದ ಬೂಟಾಟಿಕೆಯ ಗ್ಯಾರಂಟಿಯನ್ನು ನಂಬುವುದಿಲ್ಲ. ಅದರ ಬದಲು ಮೋದಿ ಗ್ಯಾರಂಟಿಯನ್ನು ನಂಬುವುದು ರುಜುವಾತಾಗಿದೆ ಎಂದರು.
11
+ ಕಾಂಗ್ರೆಸ್ ಪಕ್ಷ ಹತಾಶೆಯಿಂದ ಸಮಾಜ ಸಮಾಜದ ಮಧ್ಯೆ, ಧರ್ಮ ಧರ್ಮದ ನಡುವೆ ವಿಷಬೀಜ ಬಿತ್ತುವ ಕೆಲಸವನ್ನು ಮಾಡುತ್ತಿದೆ. ಸರಕಾರದ ಒಡೆದಾಳುವ ನೀತಿಯನ್ನು ಬಿಜೆಪಿ ಖಂಡಿಸುತ್ತದೆ. ಶಾಲಾ ಮಕ್ಕಳಿಂದ ಶೌಚಾಲಯ ಶುಚಿಗೊಳಿಸಿದ ಘಟನೆಯು ಕಾನೂನು ಸುವ್ಯವಸ್ಥೆ ಕುಸಿದುದರ ಸಂಕೇತ. ರಾಜ್ಯದಲ್ಲಿ ಸಿಎಂ ಇದ್ದಾರಾ? ಸಚಿವರು ಇದ್ದಾರಾ? ಎಂದು ಪ್ರಶ್ನಿಸುವಂತಾಗಿದೆ. ಬರಗಾಲವಿದ್ದರೂ ಸಚಿವರು ಅಕಾರಿಗಳ ಸಭೆ ನಡೆಸಿಲ್ಲ.
12
+ ಈ ಬೇಜಾವಾಬ್ದಾರಿ ನಡೆ ಒಂದು ಕಡೆ ಇದ್ದರೆ, ಇನ್ನೊಂದೆಡೆ ಹಿಜಾಬ್ ಅವಕಾಶ ಕೊಡುವುದಾಗಿ ಹೇಳಿದ್ದಾರೆ. ಹಿಂದೂ ಹೆಣ್ಮಕ್ಕಳ ತಾಳಿ, ಕಾಲುಂಗುರ ತೆಗೆಸುತ್ತಾರೆ. ನಿಮ್ಮ ಉದ್ದೇಶ ಏನು? ಎಂದು ಕೇಳಿದರು. ಒಡೆದಾಳುವ ನೀತಿಯನ್ನು ಕೈಬಿಡಿ ನೀವು ಆರೂವರೆ ಕೋಟಿ ಜನರ ಸಿಎಂ ಎಂಬುದನ್ನು ನೆನಪಿಡಿ ಎಂದು ಆಗ್ರಹಿಸಿದರು.
eesanje/url_46_281_5.txt ADDED
@@ -0,0 +1,11 @@
 
 
 
 
 
 
 
 
 
 
 
 
1
+ ಹಿಜಾಬ್ ವಿಚಾರದಲ್ಲಿ ಎಲ್ಲರಿಗೂ ಸ್ವಾತಂತ್ರ್ಯ ಸಿಗುವಂತೆ ನಿರ್ಧಾರ : ಸಚಿವ ಮಧು ಬಂಗಾರಪ್ಪ
2
+ ಬೆಂಗಳೂರು,ಡಿ.23- ಹಿಜಾಬ್ ವಿಚಾರದಲ್ಲಿ ಎಲ್ಲರಿಗೂ ಸ್ವಾತಂತ್ರ್ಯ ಸಿಗುವಂತೆ, ಯಾರಿಗೂ ತೊಂದರೆಯಾಗದಂತೆ ಕಾನೂನಿನ ಇತಿಮಿತಿಯಲ್ಲಿ ನಿರ್ಧಾರ ತೆಗೆದುಕೊಳ್ಳುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬಿಜೆಪಿಯವರಿಗೆ ಬರ ಮರೆತು ಹೋಗಿದೆ. ಈಗ ಹಿಜಾಬ್ ಹಿಂದೆ ಬಿದ್ದಿದ್ದಾರೆ ಎಂದು ಲೇವಡಿ ಮಾಡಿದರು.
3
+ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ರೀತಿಯ ಆಲೋಚನೆಗಳನ್ನು ಮಾಡಿಯೇ ಹೇಳಿಕೆ ನೀಡಿರುತ್ತಾರೆ. ನಾನು ಅವರೊಂದಿಗೆ ಚರ್ಚೆ ಮಾಡುತ್ತೇನೆ. ಮುಖ್ಯಮಂತ್ರಿಯವರ ಹೇಳಿಕೆ ಜೊತೆಯಲ್ಲೇ ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ಪ್ರಸ್ತಾಪಿಸಿದ್ದಾರೆ. ನಾನು ಪಂಚೆ ಹಾಕುತ್ತೇನೆ. ಉಡುಗೆ-ತೊಡುಗೆಗಳು ಭಿನ್ನವಾಗಿರುತ್ತವೆ.
4
+ ಆಹಾರ ಪದ್ಧತಿಯಲ್ಲೂ ಅದೇ ರೀತಿಯ ವಿಭಿನ್ನತೆ ಇರುತ್ತವೆ. ಅದು ಅವರ ಸ್ವಾತಂತ್ರ್ಯ. ಅದಕ್ಕೆ ಯಾರೂ ಅಡ್ಡಿಪಡಿಸಬಾರದು ಎಂದು ಮುಖ್ಯಮಂತ್ರಿಯವರೇ ಹೇಳಿದ್ದಾರೆ. ಅವರು ವಸ್ತ್ರ ಸಂಹಿತೆ ವಿಷಯವಾಗಿ ಸ್ಪಷ್ಟ ನಿಲುವು ಹೊಂದಿದ್ದರು. ಉಡುಗೆ ತೊಡುಗೆಗಳ ಬಗ್ಗೆ ಯಾವುದೇ ನಿರ್ಬಂಧಗಳಿರಬಾರದೆಂಬುದು ಸಿದ್ದರಾಮಯ್ಯನವರ ಹಾಗೂ ಕಾಂಗ್ರೆಸ್‍ನ ನಿಲುವು. ಚುನಾವಣೆ ಸಂದರ್ಭದಲ್ಲೂ ಈ ಬಗ್ಗೆ ಪ್ರಸ್ತಾಪ ಮಾಡಿದ್ದೆವು. ಜನ ಅದಕ್ಕಾಗಿಯೇ ನಮಗೆ ಮತ ಹಾಕಿದ್ದಾರೆ. ಅವರ ತೀರ್ಪಿನಂತೆ ನಡೆದುಕೊಳ್ಳುತ್ತೇವೆ ಎಂದರು.
5
+ ಈ ಹಿಂದೆ ಬಿಜೆಪಿ ಸರ್ಕಾರ ತೆಗೆದುಕೊಂಡಿದ್ದಂತಹ ನಿರ್ಧಾರ ನ್ಯಾಯಾಲಯದಲ್ಲಿ ಚರ್ಚೆಗೊಳಗಾಗಿತ್ತು. ಹಲವು ನಿರ್ಧಾರಗಳು ಹೊರಬಂದಿವೆ. ಈಗ ಎಸ್‍ಡಿಎಂಸಿಯವರು ಯಾವ ನಿರ್ಧಾರ ಬೇಕಾದರೂ ತೆಗೆದುಕೊಳ್ಳಿ ಎಂದು ಹೇಳುತ್ತಿದ್ದಾರೆ. ನಿನ್ನೆ ಬಹಿರಂಗ ಸಮಾವೇಶದಲ್ಲಿ ಸಾರ್ವಜನಿಕರು ಕೇಳಿದ್ದಕ್ಕಾಗಿ ಹಿಜಾಬ್ ವಿಷಯ ಕುರಿತಂತೆ ಮುಖ್ಯಮಂತ್ರಿ ಪ್ರಸ್ತಾಪಿಸಿದ್ದಾರೆ ಎಂದರು.
6
+ ಜ.6 ರಿಂದ ಅಯೋಧ್ಯೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕಾರ್ಯಾರಂಭ
7
+ ಇದು ಶಿಕ್ಷಣ ಇಲಾಖೆಗೆ ಮಾತ್ರ ಸೀಮಿತವಾಗಿಲ್ಲ. ನ್ಯಾಯಾಂಗ ಹಾಗೂ ಇತರ ವ್ಯವಸ್ಥೆಯಿಂದಲೂ ಅಭಿಪ್ರಾಯ ಸಂಗ್ರಹಿಸಿ ನಿರ್ಧಾರ ತೆಗೆದುಕೊಳ್ಳಬೇಕಿದೆ. ಹಾಗಾಗಿ ಮುಖ್ಯಮಂತ್ರಿಯವರ ಜೊತೆ ಚರ್ಚಿಸಿ ನಂತರ ಪ್ರತಿಕ್ರಿಯಿಸುವುದಾಗಿ ಹೇಳಿದರು. ಸಿದ್ದರಾಮಯ್ಯ ಅವರು ವಕೀಲರಾಗಿದ್ದರು. ಬಹಳ ತಿಳುವಳಿಕೆ ಹೊಂದಿದ್ದಾರೆ. ಅದನ್ನು ನಾವು ಪ್ರಶ್ನೆ ಮಾಡುವಂತೆಯೇ ಇಲ್ಲ. ನ್ಯಾಯಾಂಗ ನಿಂದನೆ ಸೇರಿದಂತೆ ಎಲ್ಲಾ ದೃಷ್ಟಿಕೋನದಿಂದಲೂ ಪರಿಶೀಲನೆ ನಡೆಸಿರುತ್ತಾರೆ ಎಂದರು.
8
+ ಈ ಹಿಂದೆ ಹಿಜಾಬ್ ನಿಷೇಧ ಹೇರಿದ್ದ ಬಿಜೆಪಿಯನ್ನು ಜನ ಸೋಲಿಸಿದ್ದಾರೆ. ನಮ್ಮನ್ನು ಗೆಲ್ಲಿಸಿದ್ದಾರೆ. ಜನಾಭಿಪ್ರಾಯಕ್ಕೆ ಮನ್ನಣೆ ನೀಡುವುದು ನಮ���ಮ ಕರ್ತವ್ಯ. ಇದು ಸೂಕ್ಷ್ಮ ವಿಚಾರ ಆಗಿರುವುದರಿಂದ ರಾಜಕೀಯ ಮಾಡುವ ಅಗತ್ಯವಿಲ್ಲ ಎಂದು ಹೇಳಿದರು. ಬಿಜೆಪಿಯವರಿಗೆ ಕೆಟ್ಟ ಬುದ್ದಿ ಇದೆ. ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಸರ್ವ ಜನಾಂಗದ ಶಾಂತಿಯ ತೋಟ ಮಾಡುತ್ತೇವೆ ಎಂದು ಭರವಸೆ ನೀಡಿದ್ದೆವು.
9
+ ಎಲ್ಲಾ ಧರ್ಮೀಯರಿಗೂ ಸಮಾನ ಅವಕಾಶ ನೀಡುವುದಾಗಿ ಹೇಳಲಾಗಿತ್ತು. ಒಂದು ವೇಳೆ ನಾವು ಅದನ್ನು ಪಾಲಿಸದೇ ಇದ್ದರೆ ಭರವಸೆಯನ್ನು ಈಡೇರಿಸಿಲ್ಲ ಎಂಬ ಟೀಕೆಗೆ ಗುರಿಯಾಗಬೇಕಾಗುತ್ತದೆ. ಶಾಂತಿಯ ತೋಟಕ್ಕೆ ರಾಜ್ಯದ ಜನ ಮತ ಹಾಕಿದ್ದಾರೆ. ದೇಶದಲ್ಲಿ ಕೋಮು ವಿಷಬೀಜ ಬಿತ್ತಿದ್ದು ಬಿಜೆಪಿಯವರು. ಅದಕ್ಕಾಗಿಯೇ ಅವರನ್ನು ಸೋಲಿಸಿ ವಿಷಬೀಜವನ್ನು ಕಿತ್ತೆಸೆಯುತ್ತಿದ್ದಾರೆ ಎಂದರು.
10
+ 24 ಗಂಟೆಯಲ್ಲಿ 752 ಹೊಸ ಕೋವಿಡ್ ಪ್ರಕರಣಗಳು, 4 ಸಾವು
11
+ ರಾಜ್ಯದಲ್ಲಿ ಬರ ಪರಿಸ್ಥಿತಿ ಗಂಭೀರವಾಗಿದೆ. ಅದನ್ನು ಬಿಜೆಪಿಯವರು ತಾಲೂಕು ಮತ್ತು ಜಿಲ್ಲಾ ಮಟ್ಟಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದರು. ಆ ವರದಿಯನ್ನು ಯಾರಿಗೆ ನೀಡಿದ್ದಾರೆ. ಪ್ರಧಾನಮಂತ್ರಿಯವರು 6 ತಿಂಗಳ ಬಳಿಕ ಮುಖ್ಯಮಂತ್ರಿಯವರ ಭೇಟಿಗೆ ಸಮಯ ನೀಡಿದ್ದಾರೆ. ಕೇಂದ್ರದಿಂದ ಬರಬೇಕಾದ ಪಾಲು ನಮಗೆ ಈವರೆಗೂ ಬಿಡುಗಡೆಯಾಗಿಲ್ಲ. ಅದನ್ನೆಲ್ಲಾ ಮರೆತು ಬಿಜೆಪಿಯವರು ಉಡುಗೆ ತೊಡುಗೆಗಳ ಹಿಂದೆ ಬಿದ್ದಿದ್ದಾರೆ ಎಂದು ಲೇವಡಿ ಮಾಡಿದರು.